Showing 20 of 21629 articles • Page 192 of 1082
ವಿದೇಶಗಳಿಂದ ಅಕ್ರಮವಾಗಿ ನಕಲಿ ಸಿಗರೇಟ್ ಸಾಗಾಣಿಕೆ ಮಾಡುತ್ತಿದ್ದ ಜಾಲವನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಪತ್ತೆಹಚ್ಚಿ ತಂದೆ, ಮಗ ಸೇರಿ ಐವರನ್ನು ಬಂಧಿಸಿದ್ದಾರೆ.
ಕಬಕ – ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರೂ. ಮೊತ್ತದ ಅಭಿವೃದ್ದಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಆರ್ಸಿಬಿ ಮತ್ತು ಎಸ್ಆರ್ಎಚ್ ತಂಡಗಳ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದ ವೇಳೆ 20ಕ್ಕೂ ಹೆಚ್ಚು ಮೊಬೈಲ್ ಕಳ್ಳತನವಾಗಿದೆ. ಈ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂಗಡಿಯಲ್ಲಿ ಕ್ಯಾಂಡಿ ಕದ್ದಿದ್ದಕ್ಕೆ ಮಗಳನ್ನು ಕೋಲಿನಿಂದ ಹೊಡೆದು ತಂದೆ ಹತ್ಯೆ ಮಾಡಿರುವ ದಾರುಣ ಘಟನೆ ಉತ್ತರ ಪ್ರದೇಶದ ರತನ್ಪುರದಲ್ಲಿ ನಡೆದಿದೆ.
ಹಜ್ ಭವನಕ್ಕೆ ಜಾಗವಿದೆ, ಅನುದಾನವೂ ಇದೆ; ಆದರೂ ವಿಳಂಬ ಯಾಕೆ? ಮಂಗಳೂರಿನಲ್ಲಿ ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಹಜ್ ಭವನವನ್ನು ಕೂಡಲೇ ನಿರ್ಮಿಸಬೇಕು ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಕಲ್ಪಿಸಬೇಕು ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಒತ್ತಾಯಿಸಿದ್ದಾರೆ.
ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿಧಾನ ಪರಿಷತ್ (MLC) ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.
ದಾವಣಗೆರೆಯಿಂದ ಭದ್ರಾವತಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಸೇತುವೆಯಿಂದ ಉರುಳಿಬಿದ್ದ ಘಟನೆ ಭದ್ರಾವತಿ ತಾಲೂಕಿನ ವೀರಾಪುರ ಸಮೀಪದ ಕಾಗೆಹಳ್ಳ ಎಂಬಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ಅನೇಕ ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಜಿಲ್ಲೆಯ ಸಿರವಾರ ತಾಲೂಕಿನ ಹಾಲಾಪುರದಿಂದ ಅಂದಾಜು 8 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯನ್ನ ಪೊಲೀಸರು ಜಪ್ತಿ ಮಾಡಿದ್ದಾರೆ.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ನಗರ, ಲಯನ್ಸ್ ಕ್ಲಬ್ ಪರ್ಕಳ (317 ಸಿ) ಹಾಗೂ ದಿವ್ಯಾಂಗ ರಕ್ಷಣ ಸಮಿತಿ ಉಡುಪಿ ಜಿಲ್ಲೆ ಇದರ ಸಹಯೋಗದಲ್ಲಿ ಉಚಿತ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಹಾಗೂ ವಿತರಣೆ ಕಾರ್ಯಕ್ರಮ ಎಪ್ರಿಲ್ 1ರಂದು ಬೆಳಿಗ್ಗೆ 10ರಿಂದ 5ಗಂಟೆಯವರೆಗೆ ಮಲ್ಪೆ ಸಭಾಭವನದಲ್ಲಿ ನಡೆಯಲಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಉಡುಪಿ ಜಿಲ್ಲಾಧ್ಯಕ್ಷ ವಿಜಯಕೊಡವೂರು ತಿಳಿಸಿದರು.
ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡಗಳನ್ನು ಪಾಲಿಸದ ಪಾನೀಯಗಳಿಗೆ ‘ORS’ ಎಂಬ ಹೆಸರನ್ನು ಬಳಸಬಾರದು ಎಂದು FSSAI ನೀಡಿದ್ದ ಆದೇಶವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರತಿ ವರ್ಷ ಕೊಂಕಣಿ ಸಾಹಿತ್ಯ, ಕಲೆ, ಜಾನಪದ ಈ ಮೂರು ಕ್ಷೇತ್ರಗಳಲ್ಲಿ ಸಾಧನೆಗೈದ ಕೊಂಕಣಿ ಮಹನೀಯರನ್ನು ಗೌರವಿಸಲಾಗುತ್ತಿದ್ದು, ಪ್ರಸ್ತುತ ಸಾಲಿನಲ್ಲಿ 2025 ನೇ ಸಾಲಿನ ಗೌರವ ಪ್ರಶಸ್ತಿಗಾಗಿ ಹಾಗೂ ಪುಸ್ತಕ ಪುರಸ್ಕಾರಕ್ಕಾಗಿ ಈ ಕೆಳಗಿನ ಮಹನೀಯರನ್ನು ಆಯ್ಕೆ ಮಾಡಲಾಗಿದೆ.
ದಕ್ಷಿಣ ಕಾಶಿ ಖ್ಯಾತಿಯ ಶ್ರೀಕಂಠೇಶ್ವರ ಸ್ವಾಮಿ ದೊಡ್ಡ ಜಾತ್ರೆಯನ್ನು ವೀಕ್ಷಿಸಲು ಬಂದಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ದಾಸವಾಳ ಹೂ ನುಂಗಿ ಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕು ದೊಡ್ಡ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.
ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್ ಕೊಲೆ ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವರ್ಗಾಯಿಸಲಾಗಿದೆ.
ತಿಂಗಳ ಹಿಂದಷ್ಟೇ ರಿಜಿಸ್ಟರ್ ಕಚೇರಿಯಲ್ಲಿ ಮದುವೆಯಾಗಿದ್ದ ಯುವ ಉದ್ಯಮಿಯೊಬ್ಬ ಇತ್ತೀಚೆಗೆ ತಿಂಡಿಯ ಜೊತೆಗೆ ವಿಷ ಸೇವಿಸಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಸಂತೆಕಟ್ಟೆ ಮೇಲ್ಸೇತುವೆ ಲೋಕಾರ್ಪಣೆಗೊಂಡಿದ್ದು, ಸಾರ್ವಜನಿಕ ಬಳಕೆಗೆ ಇಂದಿನಿಂದ ಮುಕ್ತ ಎಂದು ಸಂಸದ ಕೋಟ ಅವರು ಘೋಷಣೆ ಮಾಡಿದ್ದಾರೆ.
ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದು, ಆತನ ಅರ್ಜಿಯನ್ನು ಎನ್ಐಎ ವಿಶೇಷ ನ್ಯಾಯಾಲಯವು ಅಂಗೀಕರಿಸಿದೆ.
ಚಿನ್ಮಯ ಮಿಷನ್, ಮಂಗಳೂರು ಇವರು 2026ರ ಏಪ್ರಿಲ್ 3ರಿಂದ ಏಪ್ರಿಲ್ 12ರವರೆಗೆ ಚಿನ್ಮಯ ಮಿಷನ್, ಶಾರದ ಸನ್ನಿಧಿ, ರೊಸಾರಿಯೋ ಚರ್ಚ್ ರೋಡ್, ಹೊಯ್ಗೆ ಬಜಾರ್ ನಲ್ಲಿ ಮಹಾಭಾರತದ ಕಥೆಗಳು ಈ ವಿಷಯದ ಕುರಿತು ಬೇಸಿಗೆ ಶಿಬಿರವನ್ನು ಆಯೋಜಿಸುತ್ತಿದೆ
ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಕುವೈತ್ನ ವಿದ್ಯುತ್ ಸ್ಥಾವರದ ಮೇಲೆ ಇರಾನ್ ದಾಳಿ ನಡೆಸಿದ್ದು, ಒಬ್ಬ ಭಾರತೀಯ ಕಾರ್ಮಿಕ ಸಾವನ್ನಪ್ಪಿದ್ದು, ಸ್ಥಳದಲ್ಲಿ ಒಂದು ಕಟ್ಟಡಕ್ಕೆ ಹಾನಿಯಾಗಿದೆ ಎಂದು ಗಲ್ಫ್ ರಾಜ್ಯದ ವಿದ್ಯುತ್ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.