Showing 20 of 21629 articles • Page 196 of 1082
ಹೆಚ್ ಡಿ ಕೋಟೆ ತಾಲೂಕಿನ ಹ್ಯಾಂಡ್ ಪೋಸ್ಟ್ ಜಕ್ಕಳ್ಳಿ ಸಮೀಪ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ ಗೆ ಬೆಂಕಿ ತಗಲಿ, ಲಕ್ಷಾಂತರ ರೂಪಾಯಿ ವೆಚ್ಚದ ಗುಜುರಿ ಸಾಮಾನುಗಳು ಬೆಂಕಿಯ ಕೆನ್ನಾಲಿಗೆಯಿಂದ ನಾಶವಾಗಿದೆ.
ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವ ಮಾ.30-2026 ರಂದು ನಡೆಯಲಿದೆ.
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಮುಂಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ಮಾರ್ಪಡಿಸಿ ಸರಕಾರ ಆದೇಶ ಹೊರಡಿಸಿದೆ.
ಬೆಳೆಯುತ್ತಿರುವ ನಗರ ಪ್ರದೇಶದಲ್ಲಿ ಸದ್ಯ ಅತಿ ದೊಡ್ಡದಾಗಿ ಕಾಣುತ್ತಿರುವ ಸಮಸ್ಯೆ ಎಂದರೆ ಅದು ತ್ಯಾಜ್ಯ ವಿಲೇವಾರಿ ಸಮಸ್ಯೆ. ಸದ್ಯ ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಸದ್ಯ ತ್ಯಾಜ್ಯ ವಿಲೇವಾರಿ ವಿಚಾರದಲ್ಲಿ ಮತ್ತೆ ಎರಡನೇ ಬಾರಿ ಜನರ ಆಕ್ರೋಶಕ್ಕೆ ಗುರಿಯಾಗಿದೆ.
ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳರಿಬ್ಬರು ಕ್ಯಾಶ್ ಟೇಬಲ್ ನಲ್ಲಿದ್ದ ಮಾಲೀಕನ ಮೊಬೈಲ್ ಎಗರಿಸಿಕೊಂಡು ಪರಾರಿಯಾದ ಘಟನೆ ಕೊಡಂಕೂರು ಮಹಾಲಕ್ಷ್ಮೀ ಹೋಟೆಲ್ ನಲ್ಲಿ ನಡೆದಿದೆ. ಖದೀಮರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಪಾದಚಾರಿ ಮಹಿಳೆಗೆ ಕ್ರೇನ್ ಡಿಕ್ಕಿ ಹೊಡೆದು ಅವರು ಮೃತಪಟ್ಟ ಘಟನೆ ಸಂಭವಿಸಿದೆ.
ಕುಟುಂಬ ಕಲಹದ ಹಿನ್ನೆಲೆಯಲ್ಲಿ 28 ವರ್ಷದ ಮಹಿಳೆ ತನ್ನ 11 ವರ್ಷದ ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ಕಾಪು ತಾಲೂಕಿನ ಬೆಳಪು ಗ್ರಾಮದ ಪುಂಚಲಕಾಡು ಪ್ರದೇಶದಲ್ಲಿ ನಡೆದಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಗರದಲ್ಲಿ ಕಳೆದ ವರ್ಷ ಸುಹಾಸ್ ಶೆಟ್ಟಿ ಕೊಲೆಯ ನಂತರದ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್ ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದ್ದು ಕಂಕನಾಡಿ ಪೊಲೀಸರು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಲದ ಯುವಕನನ್ನು ಬಂಧಿಸಿದ್ದಾರೆ.
ಮಂಗಳೂರಿನ ಪಾಲ್ದನೆ ಸಮೀಪದ ನೆಕ್ಕರೆ ಹಾಗೂ ಆಸುಪಾಸಿನಲ್ಲಿ ಕಳೆದ ಕೆಲವು ದಿನಗಳಿಂದ ಓಡಾಡುತ್ತಿದ್ದ ಬೃಹತ್ ಗಾತ್ರದ ಚಿರತೆಯನ್ನು ಕೆಲರಾಯ್ ಕ್ರಾಸ್ ನೆಕ್ಕರೆ ಪದವು ಎಂಬಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಬೋನು ಇರಿಸಿ ಸೆರೆ ಹಿಡಿದಿದ್ದಾರೆ.
ಜಂಕ್ಷನ್-ಸೂರತ್ ಸಂಚರಿಸುತ್ತಿದ್ದ ವಿಶೇಷ ರೈಲನ್ನು ಖಾಯಂಗೊಳಿಸಲು ರೈಲ್ವೇ ಸಚಿವಾಲಯ ಒಪ್ಪಿಗೆ ನೀಡಿದೆ. ರೈಲಿನ ಸಂಖ್ಯೆಯೂ ಬದಲಾಗಲಿದ್ದು, ನಂ. 19057 ಸೂರತ್ ಮಂಗಳೂರು ಎಕ್ಸ್ ಪ್ರೆಸ್ ಬುಧವಾರ, ರವಿವಾರ ರಾತ್ರಿ 7.35ಕ್ಕೆ ಸೂರತ್ನಿಂದ ಹೊರಡಲಿದ್ದು, ಗುರುವಾರ, ಸೋಮವಾರ ಮಂಗಳೂರು ತಲಪಲಿದೆ.
ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಓರ್ವನಿಗೆ ಜಾಮೀನು ಮಂಜೂರಾಗಿದೆ. ರಿಯಾಜ್ ಎಚ್ ವೈ ಎಂಬ ವ್ಯಕ್ತಿಗೆ ಜಾಮೀನು ಮಂಜೂರಾಗಿದೆ.
ದಕ್ಷಿಣ ಕನ್ನಡ ಮೋಟಾರ್ ಸ್ಪೋರ್ಟ್ಸ್ ಇತಿಹಾಸದಲ್ಲೇ ಮಹತ್ವದ ಕ್ಷಣಕ್ಕೆ ವೇದಿಕೆ ಸಜ್ಜಾಗಿದೆ. ಐಎಂಎಸ್ಸಿ. ಮೋಟಾರ್ ಸ್ಪೋರ್ಟ್ಸ್ನ 25ನೇ ವರ್ಷದ ಸಂಭ್ರಮದ ಅಂಗವಾಗಿ 400ನೇ ಸ್ಪರ್ಧೆಯಾಗಿ ಪ್ರತಿಷ್ಠಿತ ಐಎಂಎನ್ಸಿ ಆಫ್ ರೋಡ್ ಟ್ರೋಪಿ 2020ನ್ನು ಮಾ.28, 29ರಂದು ಮಂಗಳೂರು ಸಮೀಪದ ಒಡ್ದುರು ಫಾರ್ಮ್ಸ್ನಲ್ಲಿ ಆಯೋಜಿಸಿದೆ.
ಬೆಳ್ಳಂಬೆಳಿಗ್ಗೆ ರೌಡಿಶೀಟರ್ ನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಫ್ಲೈ ಓವರ್ ಬ್ರಿಜ್ ಮೇಲೆ ನಡೆದಿದೆ.
ಇಂಧನ ಭದ್ರತೆಗೆ ಹೆಚ್ಚಿನ ಬಲ ತುಂಬಲು, ಗುಜರಾತ್ನಿಂದ ಹೊರಟಿದ್ದ ‘ಅಪೋಲೊ ಓಷಿಯನ್’ (Apollo Ocean) ಎಂಬ ಬೃಹತ್ ಎಲ್ಪಿಜಿ ಟ್ಯಾಂಕರ್ ಬುಧವಾರ ರಾತ್ರಿ ನವ ಮಂಗಳೂರು ಬಂದರನ್ನು ತಲುಪಿದೆ.
ಶ್ರೀ ಅಖಿಲ ಹವ್ಯಕ ಮಹಾಸಭೆಯು ನೀಡುವ ವಾರ್ಷಿಕ ವಿಶೇಷ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದ್ದು, ಮಾರ್ಚ್ 26 ಭಾನುವಾರದಂದು ಮಲ್ಲೇಶ್ವರದಲ್ಲಿರುವ ಹವ್ಯಕ ಭವನದಲ್ಲಿ ನಡೆಯುವ 83ನೇಯ ವರ್ಷದ ಹವ್ಯಕ ಸಂಸ್ಥಾಪನೋತ್ಸವ ಕಾರ್ಯಕ್ರಮದಲ್ಲಿ 2025-26 ನೇಯ ಸಾಲಿನ ಪ್ರಶಸ್ತಿ ಪ್ರದಾನ ನಡೆಯಲಿದೆ.
ಯುಎಇ ನಲ್ಲಿ ಕಳೆದ 23 ವರ್ಷಗಳಿಂದ ಕನ್ನಡ ಪರಸೇವೆಗಳನ್ನು ಮಾಡುತ್ತಾ ವಿಶೇಷ ಮತ್ತು ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಅನಿವಾಸಿ ಕನ್ನಡಿಗರಿಗೆ ಆಯೋಜನೆ ಮಾಡುವ ಹೆಮ್ಮಯ ಸಂಸ್ಥೆ ಕರ್ನಾಟಕ ಸಂಘ ಶಾರ್ಜಾ.
ಹಾರ್ಮುಜ್ ಜಲಸಂಧಿಯ ಬಿಕ್ಕಟ್ಟು ಪೂರ್ಣಪ್ರಮಾಣದಲ್ಲಿ ಇನ್ನೂ ಬಗೆಹರಿಯದ ಹಿನ್ನೆಲೆ ಭಾರತ, ರಷ್ಯಾದಿಂದ ತೈಲ ಖರೀದಿಯನ್ನ ಮುಂದುವರಿಸಿದೆ.
ಭಾರತದ ಆರೋಗ್ಯ ರಕ್ಷಣಾ ಕ್ಷೇತ್ರದಲ್ಲಿ ಹಿಂದೆಂದೂ ಕಂಡಿರದ ಅತಿದೊಡ್ಡ ಐಪಿಒ (Initial Public Offering) ಗೆ ಮಣಿಪಾಲ್ ಹಾಸ್ಪಿಟಲ್ಸ್ ಸಜ್ಜಾಗಿದೆ. ಸಿಂಗಾಪುರದ ಹೂಡಿಕೆ ಸಂಸ್ಥೆ ಟೆಮಾಸೆಕ್ ಮತ್ತು ಡಾ. ರಂಜನ್ ಪೈ ಬೆಂಬಲಿತ ಮಣಿಪಾಲ್ ಹಾಸ್ಪಿಟಲ್ಸ್, ಬಿಲಿಯನ್ ಡಾಲರ್ಗೂ ಅಧಿಕ ಮೊತ್ತದ ಐಪಿಒಗಾಗಿ ಸೆಬಿಗೆ (Sebi) ಡ್ರಾಫ್ಟ್ ಪೇಪರ್ಗಳನ್ನು ಸಲ್ಲಿಸಿದೆ.