Showing 20 of 21634 articles • Page 200 of 1082
ಮಹಿಳೆಯರ ಮೇಲೆ ಮೂಡುಬಿದಿರೆ ಪೊಲೀಸ್ ಇನ್ ಸ್ಪೆಕ್ಟರ್ ಸಂದೇಶ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ನಿವೃತ್ತಿ ಹೊಂದುವ ಮುನ್ನ ತಮ್ಮ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಅಧಿಕಾರಿಯೊಬ್ಬರು ತಮ್ಮ ಸಾವಿಗೆ ಮುನ್ನ ವೀಡಿಯೊ ರೆಕಾರ್ಡ್ ಮಾಡಿದ್ದು, ಹಿರಿಯ ಅಧಿಕಾರಿಯೊಬ್ಬರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಮೃತರನ್ನು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಎಂದು ಗುರುತಿಸಲಾಗಿದೆ.
ಗುಜರಾತ್ ನೋಂದಣಿಯ ಟೊಯೋಟಾ ಫಾರ್ಚೂನರ್ ಕಾರು ವಾಗೇಟರ್ ಬೀಚ್ನಲ್ಲಿ ಚಾಲನೆ ಮಾಡುತ್ತಿದ್ದಾಗ, ಏರುತ್ತಿರುವ ಅಲೆಗಳು ವಾಹನವನ್ನು ಭಾಗಶಃ ಹೊಡೆದುರುಳಿಸಿದವು.
ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಟೋ ರಿಕ್ಷಾದಲ್ಲಿ ಪಂಪವೆಲ್-ಎಕ್ಕೂರು ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಆದಿತ್ಯವಾರದಂದು ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆಟೋ ರಿಕ್ಷಾವನ್ನು ಪತ್ತೆ ಹಚ್ಚಿದ್ದಾರೆ.
ಟೆಂಪೋ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಆತ್ರಾಡಿ ಕಬ್ಯಾಡಿಯ ಅರ್ಮನ್ ರಟ್ ಫ್ಯಾಕ್ಟರಿ ಬಳಿ ಇಂದು ಮಧ್ಯಾಹ್ನ ಸಂಭವಿಸಿದೆ.
ದೇವನಹಳ್ಳಿಯ ಹೊರವಲಯದ ರಾಣಿ ಕ್ರಾಸ್ ಬಳಿ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ, ವೇಗವಾಗಿ ಬಂದ ಲಾರಿಯೊಂದು ಪ್ರವಾಸಿ ಟೆಂಪೋ ಟ್ರಾವೆಲರ್ (ಟಿಟಿ) ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೃಹತ್ ಮರ ಧರೆಗೆ ಉರುಳಿದ್ದು, ಮರದ ಕೆಳಗಿದ್ದ ಒಂದು ಕಾರ್, ಆಟೋ ಜಖಂ ಆಗಿರುವ ಘಟನೆ ಮೈಸೂರಿನ ಹಾರ್ಡಿಂಗ್ ವೃತ್ತದ ಬಳಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಬಿಟಿಎಂ ರಸ್ತೆಯಲ್ಲಿ ಟ್ರಿಪಲ್ ರೈಡಿಂಗ್ ಕಂಡುಬಂದಿದ್ದು, ಕೆಲವರು ಹೆಲ್ಮೆಟ್ ಧರಿಸಿಲ್ಲ. ಆಘಾತಕಾರಿ ಸಂಗತಿಯೆಂದರೆ, ಒಬ್ಬ ವ್ಯಕ್ತಿ ಬಿಯರ್ ಬಾಟಲಿಯನ್ನು ಹಿಡಿದುಕೊಂಡು ಬೈಕ್ ಚಲಾಯಿಸುತ್ತಿದ್ದ, ಮತ್ತು ಹಿಂಬದಿ ಸವಾರ ಬಹಿರಂಗವಾಗಿ ಮದ್ಯಪಾನ ಮಾಡುತ್ತಿದ್ದ, ಯಾವುದೇ ಭಯ ಅಥವಾ ಜವಾಬ್ದಾರಿಯಿಲ್ಲದೆ ಸಾರ್ವಜನಿಕವಾಗಿ ಅಜಾಗರೂಕ ಕೈ ಸನ್ನೆಗಳನ್ನು ಮಾಡುತ್ತಿದ್ದಾನೆ.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಕಳೆದ ಎರಡು ವರ್ಷಗಳಿಂದ ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ಆದೇಶ ನೀಡದೆ ಸತಾಯಿಸುತ್ತಿದೆ ಎಂದು ಆರೋಪಿಸಿ ಮಾಜಿ ಶಾಸಕ ರಘುಪತಿ ಭಟ್ ಇಂದಿನಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಪ್ರಾಧಿಕಾರದ ಕಚೇರಿ ಮುಂದೆ ಆರಂಭಿಸಿದ್ದಾರೆ.
ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ಯುಗಾದಿ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ಅಂಗವಾಗಿ ಅಪ್ಪು ಉತ್ಸವ ಮತ್ತು ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಮಾರ್ಚ್ 15ರ ಭಾನುವಾರದಂದು ರಾಮಮೂರ್ತಿ ನಗರದ ನಾಟ್ಯ ಪ್ರಿಯ ಆಡಿಟೋರಿಯಂ ನಲ್ಲಿ ಬೆಳಗ್ಗೆ 9 ಗಂಟೆಯಿಂದ ರಾತ್ರಿ 9:00ವರೆಗೆ ನಿರಂತರವಾಗಿ ಅದ್ದೂರಿಯಾಗಿ ನಡೆಸಲಾಯಿತು.
ಹೆಜಮಾಡಿ ಟೋಲ್ ಬಳಿ ಟಯರ್ ಪಂಕ್ಚರ್ ಅಂಗಡಿಯಲ್ಲಿ ಬೆಂಕಿ ಅವಘಡ ಉಂಟಾದ ಘಟನೆ ಭಾನುವಾರ ಸಂಭವಿಸಿದೆ.
ನಿಗೂಢ ಕಾರಣಕ್ಕೆ ಯುವ ಉದ್ಯಮಿಯೊಬ್ಬ ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯ ತಾಲೂಕಿನ ಗೂನಡ್ಕದಲ್ಲಿ ನಡೆದಿದೆ.
ತಾಲೂಕಿನ ಚಾರ್ಮಾಡಿ ಘಾಟ್ನಲ್ಲಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಟಿಟಿ ವಾಹನ ಪಲ್ಟಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದವರಲ್ಲಿ ಓರ್ವ ವೃದ್ಧ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶೇಖರಪ್ಪ (59) ಎಂದು ಗುರುತಿಸಲಾಗಿದೆ.
ಕೊಲೆಯತ್ನ, ದರೋಡೆ ಸೇರಿದಂತೆ ಹತ್ತಕ್ಕೂ ಹೆಚ್ಚು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಫರಾಜ್ ಅಲಿಯಾಸ್ ಮೊಹಮ್ಮದ್ ಫರಾಜ್ (32) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಿಧಾನಸೌಧದ ಮುಖ್ಯ ದ್ವಾರವನ್ನು ಮಾರ್ಚ್ 25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.
ಬಡನಿಡಿಯೂರಿನ ಸಮುದ್ರ ತೀರದಲ್ಲಿ ರೆಸಾರ್ಟ್ ನಿರ್ಮಿಸಲು ಕಾನೂನಿನಲ್ಲಿ ಯಾವುದೇ ತೊಡಕಿಲ್ಲದೇ ಇದ್ದರೂ ವೈಯಕ್ತಿಕ ದ್ವೇಷದಿಂದ ಶಾಸಕ ಯಶ್ವಾಲ್ ಸುವರ್ಣ ಅವರು ರೆಸಾರ್ಟ್ ನಿರ್ಮಾಣಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ.
ISO ಪ್ರಮಾಣೀಕರಣ ಹೊಂದಿರುವ ಮತ್ತು 163 ವರ್ಷಗಳ ವಿಶ್ವಾಸಾರ್ಹ ಸಂಪ್ರದಾಯ ಹೊಂದಿರುವ ಆಭರಣ ಸಮೂಹ ಬಾಬಿ ಚೆಮ್ಮನೂರು ಇಂಟರ್ನ್ಯಾಷನಲ್ ಜ್ಯುವೆಲ್ಲರ್ಸ್, ಕರ್ನಾಟಕದ ಮಂಗಳೂರಿನಲ್ಲಿ ತನ್ನ ಹೊಸ ಶೋರೂಮ್ ಅನ್ನು ತೆರೆಯುತ್ತಿದೆ. ಈ ಶೋರೂಮ್ ಅನ್ನು ಮಾರ್ಚ್ 22 ರ ಭಾನುವಾರ ಸಂಜೆ 5 ಗಂಟೆಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ.
ಡೇಜಿಯಾನ್ನ ಮುನ್ಪ್ಯೋಂಗ್-ಡಾಂಗ್ನಲ್ಲಿರುವ ಕಾರು ಬಿಡಿಭಾಗಗಳ ತಯಾರಿಕಾ ಕಾರ್ಖಾನೆಯಲ್ಲಿ ಶುಕ್ರವಾರ ತಡರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.
ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ಸ್ಥಳಗಳಲ್ಲಿ ಒಂದಾದ ಮದೀನಾದ ಪ್ರವಾದಿ ಮಸೀದಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ.
ಮುಂದಿನ ವರ್ಷದಿಂದ ಗರಳಪುರಿ ಉತ್ಸವವನ್ನು ಇನ್ನು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಅದ್ದೂರಿಯಾಗಿ ಮಾಡಲಾಗುತ್ತದೆ. ತಾಲ್ಲೂಕಿನಲ್ಲಿರುವ ಕಲಾವಿದರನ್ನು ಗುರುತಿಸಲು ವೇದಿಕೆಯನ್ನು ಕಲ್ಪಿಸಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು.