Showing 20 of 21634 articles • Page 201 of 1082
ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಬೊಗೋಡಿ ಎಂಬಲ್ಲಿರುವ ಗ್ಯಾಸ್ ಪಂಪ್ ಏಜೆನ್ಸಿಯೊಂದರಲ್ಲಿ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಕಚೇರಿಯ ಸೊತ್ತುಗಳನ್ನು ಧ್ವಂಸಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಆಟೋ ರಿಕ್ಷಾ ಚಾಲಕನೊಬ್ಬನ ವಿರುದ್ಧ ಬಂಟ್ವಾಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಅಡ್ರೆಸ್ ಇಲ್ಲದ ರಸ್ತೆ, ಅಡಿಗಡಿಗೂ ಗುಂಡಿಯಾಗಿರುವ ಘಟನೆ ಹುಣಸೂರು ತಾಲ್ಲೂಕಿನ ಹಲವು ಗ್ರಾಮಗಳ ರಸ್ತೆಯಾಗಿದೆ. ರಸ್ತೆ ಗುಂಡಿ ಮುಚ್ಚುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಲಾಯಿತು.
ಕಬಿನಿ ಕಾಡಿನಲ್ಲಿ ಹುಲಿ ಮರಿಗಳ ಕಲರವ ಕಂಡುಬಂದಿದ್ದು, ನಾಗರಹೊಳೆ ಅಭಯಾರಣ್ಯದಲ್ಲಿ ಹುಲಿ ಮರಿಗಳ ಅಪರೂಪದ ದೃಶ್ಯ ಸೆರೆಯಾಗಿದೆ. ಕಾಡಿನ ಮಣ್ಣಿನ ಸುವಾಸನೆ ಸವಿದು ಪುಟ್ಟ ಹುಲಿ ಮರಿಗಳು ಮೈಮರೆತಿದೆ.
ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಬಲಿ ಪಡೆದಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದಲ್ಲಿ ನಡೆದಿದೆ.
ಪುರಾತತ್ವ ಇಲಾಖೆಯ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ನಂಜನಗೂಡಿನ ಕಲ್ಲು ಮಂಟಪಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಹೊತ್ತಿ ಉರಿದಿದೆ. ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಹಿಂಭಾಗದಲ್ಲಿರುವ ಕಲ್ಲು ಮಂಟಪದಲ್ಲಿ ಸಂಜೆ ಬೆಂಕಿ ಕಾಣಿಸಿಕೊಂಡಿದೆ.
ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ರಾಮೋತ್ಸವವನ್ನು ಅತ್ಯಂತ ಅದ್ಧೂರಿಯಿಂದ ಆಚರಿಸಲಾಗುತ್ತಿದೆ. ಈ ಸಂಬಂಧ ಪುತ್ತಿಗೆ ಮಠದ ಉಭಯ ಶ್ರೀಪಾದರ ಉಪಸ್ಥಿತಿಯಲ್ಲಿ ಪ್ರಾರ್ಥನೆಯನ್ನು ಮಾಡಿ, ಸೀತಾ ಲಕ್ಷ್ಮಣ ಸಹಿತ ಶ್ರೀ ರಾಮ ದೇವರಿಗೆ ವಿಶೇಷ ಪೂಜೆಯನ್ನು ಮಾಡಿ, ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ, ಅನುಗ್ರಹ ಸಂದೇಶ ನೀಡಿದರು.
ಭುವನೇಶ್ವರದಿಂದ ನಬರಂಗ್ಪುರಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ನ ಹಿಂಭಾಗದ ಟೈರ್ ಸ್ಫೋಟಗೊಂಡ ನಂತರ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.
ಬದ್ಲಾಪುರದಿಂದ ಸಿಯಾನ್ ಆಸ್ಪತ್ರೆಗೆ ಪ್ರಯಾಣಿಸುತ್ತಿದ್ದಾಗ, ಒಂದು ಕುಟುಂಬದ ಆಂಬ್ಯುಲೆನ್ಸ್ ಮುಂಬೈನ ಬೆಳಗಿನ ಟ್ರಾಫಿಕ್ನಲ್ಲಿ ಸಿಲುಕಿಕೊಂಡಿತು, ಅಪರಿಚಿತ ಬೈಕ್ ಸವಾರನೊಬ್ಬ ಬಂದು ದಾರಿ ತೆರವುಗೊಳಿಸಿ ಮಾನವೀಯತೆ ಮೆರೆದಿದ್ದಾನೆ.
ಕರಾವಳಿ ಪ್ರದೇಶದ ಜನರ ಬದುಕು ಸಮುದ್ರದ ಜೊತೆ ಬಹುತೇಕ ಹೊಂದಿಕೊಂಡಿದೆ. ಮಳೆಗಾಲದ ಅವಧಿಯಲ್ಲಿ ಸಮುದ್ರ ಅಲೆಗಳು ಭಾರೀ ಆಗಿರುವುದರಿಂದ ಹಾಗೂ ಸರ್ಕಾರದ ಮೀನುಗಾರಿಕೆ ನಿಷೇಧವೂ ಇರುವುದರಿಂದ ಈ ಅವಧಿಯಲ್ಲಿ ಮೀನುಗಾರಿಕೆ ಚಟುವಟಿಕೆಗಳು ಬಹುತೇಕ ನಿಲ್ಲುತ್ತವೆ.
ಹೆಚ್.ಬಿ.ಆರ್ ಬಡಾವಣೆಯಲ್ಲಿರುವ ಕಂಪ್ಯೂಟರ್ ಹಾರ್ಡ್ವೇರ್ ಮಳಿಗೆಯೊಂದಕ್ಕೆ ಬುರ್ಖಾ ಧರಿಸಿ ನುಗ್ಗಿದ ತಂದೆ-ಮಗನ ಜೋಡಿ ಸುಮಾರು 80 ಲಕ್ಷ ರೂಪಾಯಿ ಮೌಲ್ಯದ ಬಿಡಿಭಾಗಗಳನ್ನು ಕಳ್ಳತನ ಮಾಡಿದ್ದಾರೆ.
ಜಾಗತಿಕ ಭಯೋತ್ಪಾದನೆ ಕಡಿಮೆಯಾಗಿದ್ದರೂ, ಪಾಕಿಸ್ತಾನ ಭಯೋತ್ಪಾದನೆ ಸಂಬಂಧಿತ ಸಾವುಗಳಲ್ಲಿ ಶೇ.6 ರಷ್ಟು ಏರಿಕೆ ದಾಖಲಿಸಿದ್ದು, ಇತ್ತೀಚಿನ ಜಾಗತಿಕ ಭಯೋತ್ಪಾದನಾ ಸೂಚ್ಯಂಕದಲ್ಲಿ ಅಗ್ರಸ್ಥಾನದಲ್ಲಿದೆ.
ಬಿ.ಹೆಚ್. ರಸ್ತೆಯ ಉಷಾ ನರ್ಸಿಂಗ್ ಹೋಮ್ ಬಳಿ ಸಂಭವಿಸಿದ ರಸ್ತೆ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ವೇಗವಾಗಿ ಬಂದ ಮಾರುತಿ ಬ್ರೀಝಾ ಕಾರು ಅಂಬ್ಯೂಲೆನ್ಸ್ಗೆ ಡಿಕ್ಕಿ ಹೊಡೆದ ರಭಸಕ್ಕೆ, ಬ್ರೀಝಾ ಕಾರು ರಸ್ತೆಯಲ್ಲೇ ಪಲ್ಟಿ ಹೊಡೆದಿದೆ.
ಪ್ರಸಿದ್ಧ ಸಾಹಿತ್ಯಕರ್ತ ಶ್ರೀ ರೇಮಂಡ್ ಡಿ’ಕುನಾ ತಾಕೊಡೆ ಅವರಿಗೆ ಹುಟ್ಟೂರ ಸನ್ಮಾನ ಹಾಗೂ ಅವರ ತುಳು ಲಿಪಿಯ ಕೃತಿ ‘ನಾಲೋದಿ ಬೊಳ್ಳಿಲು’ ಪುಸ್ತಕ ಬಿಡುಗಡೆ ಸಮಾರಂಭವು ಮಾರ್ಚ್ 22, 2026 ಭಾನುವಾರ ಬೆಳಗ್ಗೆ 10:00 ಗಂಟೆಗೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ.
ಇಂದ್ರಾಳಿ ರೈಲ್ವೆ ನಿಲ್ದಾಣದ ಆಟೋ ಸ್ಟ್ಯಾಂಡ್ ಹತ್ತಿರ ಬೃಹತ್ ಗಾತ್ರದ ಹೆಬ್ಬಾವೊಂದನ್ನು ರಕ್ಷಿಸಲಾಗಿದೆ. ರೈಲ್ವೆ ಪ್ರಯಾಣಿಕರ ಸಂಚಾರ ಇರುವ ಸ್ಥಳದಲ್ಲಿ ಹೆಬ್ಬಾವಿನ ಚಲನವಲನವನ್ನು ಗಮನಿಸಿದ ಆಟೋ ಚಾಲಕ ಪ್ರಶಾಂತ್ ಅವರು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದರು.
ಕ್ರೀಡೆ ಎಂದರೆ ಕೇವಲ ಸ್ಪರ್ಧೆಯಲ್ಲ, ಅದು ವ್ಯಕ್ತಿತ್ವ, ಶಿಸ್ತು ಮತ್ತು ಐಕ್ಯತೆಯ ಪ್ರತಿಬಿಂಬವಾಗಿದ್ದು, ಸವಾಲುಗಳನ್ನು ಎದುರಿಸುವ ಧೈರ್ಯ ಹಾಗೂ ಜಯದಲ್ಲಿ ವಿನಯವನ್ನು ಕಲಿಸುತ್ತದೆ ಎಂದು ಉಡುಪಿ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
ಸಮಾಧಾನ ಮಹೋತ್ಸವದ ವಿರುದ್ಧ ಪ್ರತಿಭಟನೆ ನಡೆಸಿ, ಬಳಿಕ ಮೈದಾನಕ್ಕೆ ತೆರಳಲು ಯತ್ನಿಸಿದ ಹಿಂದೂ ಜಾಗರಣಾ ವೇದಿಕೆಯ ಮುಖಂಡ ಶ್ರೀಕಾಂತ್ ಶೆಟ್ಟಿ ಸಹಿತ 38 ಮಂದಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿದೆ.
ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಮಾ.20ರಿಂದ 22ರವರೆಗೆ ಮೂರು ದಿನ ಕಾಲ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮವನ್ನು ವಿರೋಧಿಸಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಉಡುಪಿ ಗೋವಿಂದ ಕಲ್ಯಾಣ ಮಂಟಪದಲ್ಲಿ ಪ್ರತಿಭಟನೆ ನಡೆಸಿದರು.
ಪಣಂಬೂರು ಪೊಲೀಸರಿಂದ 18.03.2020ರಂದು ಮಹತ್ವದ ದಾಳಿ ನಡೆಸಿದ್ದು, 9 ಗೋವಿನ ರಕ್ಷಣೆ ಮತ್ತು ನೂರಾರು ಕೆಜಿ ಗೋಮಾಂಸ ವಶಕ್ಕೆ ಪಡೆದಿದ್ದಾರೆ.
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಒಟ್ಟು ₹8 ಲಕ್ಷ 42 ಸಾವಿರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ತೆಂಕುತಿಟ್ಟು ಯಕ್ಷಗಾನ ರಂಗದ ಮೇರು ಕಲಾವಿದ, ಆಟ-ಕೂಟಗಳ ಸರದಾರ, ಯಕ್ಷರಂಗದ ಸವ್ಯಸಾಚಿ ಸೂರಿಕುಮೇರು ಗೋವಿಂದ ಭಟ್ (88) ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ತೀರ್ಥಹಳ್ಳಿಯ ತಮ್ಮ ಹಿರಿಯ ಪುತ್ರನ ನಿವಾಸದಲ್ಲಿ ನಿಧನಹೊಂದಿದರು. ಅವರು ಮೂವರು ಪುತ್ರರನ್ನು ಅಗಲಿದ್ದಾರೆ.