Showing 20 of 21636 articles • Page 202 of 1082
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಒಟ್ಟು ₹8 ಲಕ್ಷ 42 ಸಾವಿರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ತೆಂಕುತಿಟ್ಟು ಯಕ್ಷಗಾನ ರಂಗದ ಮೇರು ಕಲಾವಿದ, ಆಟ-ಕೂಟಗಳ ಸರದಾರ, ಯಕ್ಷರಂಗದ ಸವ್ಯಸಾಚಿ ಸೂರಿಕುಮೇರು ಗೋವಿಂದ ಭಟ್ (88) ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ತೀರ್ಥಹಳ್ಳಿಯ ತಮ್ಮ ಹಿರಿಯ ಪುತ್ರನ ನಿವಾಸದಲ್ಲಿ ನಿಧನಹೊಂದಿದರು. ಅವರು ಮೂವರು ಪುತ್ರರನ್ನು ಅಗಲಿದ್ದಾರೆ.
ಸಂಗೀತ ಕ್ಷೇತ್ರದಲ್ಲಿನ ಅಸಾಧಾರಣ ಪ್ರತಿಭೆ ಮತ್ತು ಸಾಧನೆಗಳನ್ನು ಗುರುತಿಸಿ ರಿಶಾಲ್ ಮೆಲ್ಬಾ ಕ್ರಾಸ್ತಾ ಅವರನ್ನು 2026 ರ ಪ್ರತಿಷ್ಠಿತ ಫುಡಾರ್ ಪ್ರತಿಷ್ಠಾನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮಂಗಳೂರು : ಮೂಡುಬಿದಿರೆ ಪೊಲೀಸ್ ಇನ್ಸೆಕ್ಟರ್ ಸಂದೇಶ್ ಅವರು ನನಗೆ, ನನ್ನ ಅಕ್ಕನ ಮಗ ಹಾಗೂ ನನ್ನ ಮಗನಿಗೆ ಮಾನಸಿಕ ಹಿಂಸೆ, ಜೀವಹಾನಿ ಬೆದರಿಕೆ, ಮಾನ ‘ಹಾನಿ ಹ ಹಾಗೂ ಲೈಂಗಿಕ ಕಿರುಕುಳ ನೀಡಿದ್ದಾರೆ. ಸದ್ಯ ಅಮಾನತ್ತಿನಲ್ಲಿರುವ ಇನ್ನೆಕ್ಟರ್ ಸಂದೇಶ್ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಕಾರ್ಕಳದ ಸುಮತಿ ನಾಯಕ್ ಒತ್ತಾಯಿಸಿದ್ದಾರೆ. ನಗರದ ಪ್ರೆಸ್ ಕ್ಲಬ್ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಸಹೋದರಿ ಪ್ರಫುಲ್ಲ ಅವರ ಸಹಕಾರದಿಂದ ನಮ್ಮವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದರು. […]
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆಗೈದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಶುಕ್ರವಾರ ಸಂಭವಿಸಿದೆ.
ಯೋಗ, ಧ್ಯಾನ ಮಾಡುವುದು ಆರೋಗ್ಯಕರ ಜೀವನವನ್ನು ರೂಪಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ನಂಜನಗೂಡು ಬಿ.ವಿ ಪಂಡಿತ್ ಧನ್ವಂತರಿ ಆರೋಗ್ಯಾಶ್ರಮದ ಆಯುರ್ವೇದ ವೈದ್ಯೆ ಡಾ. ಎನ್.ಆರ್ ಸುಷ್ಮಿತಾ ಕಿವಿಮಾತು ಹೇಳಿದರು.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು. ಆ ಮೂಲಕ ಯುಗಾದಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು.
ರೀಲ್ಸ್ ವಿಡಿಯೋಗಾಗಿ ಕಾರಿನಲ್ಲಿ ಸ್ಟಂಟ್ ಮಾಡಲು ಹೋಗಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಅವರ 15 ವರ್ಷದ ಪುತ್ರ ಸಾವನ್ನಪ್ಪಿದ ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಸಾಫ್ಟ್ ಡ್ರಿಂಕ್ಸ್ (ತಂಪು ಪಾನೀಯ) ತುಂಬಿದ್ದ ಲಾರಿಯೊಂದು ಅಪಘಾತಕ್ಕೀಡಾದಾಗ, ಅಲ್ಲಿ ನೆರೆದಿದ್ದ ಜನತೆ ಎಂತಹ ಕೀಳು ಮಟ್ಟದ ವರ್ತನೆ ತೋರಿದ್ದಾರೆ ಎಂದರೆ ಅದನ್ನು ವಿವರಿಸಲು ಪದಗಳಿಲ್ಲ.
“ಧುರಂಧರ್ 2 ” ಸಿನಿಮಾ ಬಗ್ಗೆ ಅಭಿಮಾನಿಗಳಿಂದ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ ಸಿನಿಮಾದಲ್ಲಿ ತೋರಿಸಲಾಗಿರುವ ಅತಿಯಾದ ಹಿಂಸೆಯ ಬಗ್ಗೆ ಕನ್ನಡದ ಖ್ಯಾತ ನಟಿ, ಮಾಜಿ ಸಂಸದೆ ರಮ್ಯಾ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ಭಾರತದ ಮೇಲೂ ಪರಿಣಾಮ ಬೀರಿದೆ. ಕಚ್ಚಾತೈಲ, ಗ್ಯಾಸ್ ಸಮಸ್ಯೆ ಬಳಿಕ ಷೇರುಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಠಿಯಾಗುತ್ತಿದ್ದು, ರೂಪಾಯಿ ಮೌಲ್ಯವೂ ಕುಸಿಯುತ್ತಿದೆ. ಈ ನಡುವೆ ಬ್ಲ್ಯಾಕ್ ಮಾರ್ಕೆಟ್ ಮೇಲೆ ನಿಗಾ ವಹಿಸಲು ಸರ್ಕಾರ ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಜಾರಿ ಮಾಡಿದೆ.
ಮಹಿಳೆಯರಲ್ಲಿ ಉದ್ಯಮಶೀಲತೆಯನ್ನು ಅಭಿವೃದ್ಧಿಪಡಿಸುವ ತರಬೇತಿ ಕಾರ್ಯಕ್ರಮಕ್ಕೆ ಇಲ್ಲಿನ ಮದನಾಯಕನಹಳ್ಳಿ ಗ್ರಾಮದ ಬಸವೇಶ್ವರ ಲೇಔಟ್ನಲ್ಲಿ ಚಾಲನೆ ನೀಡಲಾಯಿತು.
ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟಿದ್ದಾರೆ.
ಸಿಹಿ ಗೆಣಸಿನಲ್ಲಿ ವಿಟಮಿನ್ ಎ ಹಾಗೂ ಸಿ, ಫೈಬರ್ ಹಾಗೂ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವುದರಿಂದ ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು, ಜೀರ್ಣಕ್ರಿಯೆಯನ್ನು ಸುಧಾರಿಸಲು ಹಾಗೂ ಕ್ಯಾನ್ಸರ್, ಹೃದ್ರೋಗವನ್ನು ತಡೆಯಲು ಸಹಾಯ ಮಾಡುತ್ತದೆ.
ಬೆಂಗಳೂರು: ಆರ್ಸಿಬಿ ಅಭಿಮಾನಿಗಳಿಗೆ ಗುಡ್ನ್ಯೂಸ್ ಸಿಕ್ಕಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಗಳ ಟಿಕೆಟ್ ಹೊಂದಿರುವವರಿಗೆ ಉಚಿತ ಮೆಟ್ರೋ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಈ ಸಂಬಂಧ ಆರ್ಸಿಬಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ. ಇದೇ ಮಾರ್ಚ್ 28 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಸ್ಆರ್ಹೆಚ್ ವಿರುದ್ಧ ಆರ್ಸಿಬಿ ಉದ್ಘಾಟನಾ ಪಂದ್ಯವನ್ನು ಆಡಲಿದೆ. ಅಲ್ಲದೇ, ಏಪ್ರಿಲ್ 5 ರಂದು ಸಿಎಸ್ಕೆ ವಿರುದ್ಧ ಇದೇ ಕ್ರೀಡಾಂಗಣದಲ್ಲಿ ಸೆಣಸಲಿದೆ. ತವರಿನಲ್ಲಿ ಎರಡು ಪಂದ್ಯಗಳನ್ನು ಆರ್ಸಿಬಿ ಆಡಲಿದೆ. ಪಂದ್ಯದ ಟಿಕೆಟ್ ತೋರಿಸುವ […]
ಜೆಪ್ಟೋ ಮೂಲಕ ಡೆಲಿವರಿ ಮಾಡಲಾದ ಆಮುಲ್ ಹಾಲಿನ ಪ್ಯಾಕೆಟ್ ಅಸಹಜವಾಗಿ ಉಬ್ಬಿರುವುದು ಇತ್ತೀಚೆಗೆ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಕಂಡುಬಂದಿದೆ.
ಬಾಲಿವುಡ್ ಹೀರೋ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2: ದಿ ರಿವೆಂಜ್’ ಚಿತ್ರವು ಭಾರತೀಯ ಬಾಕ್ಸ್ ಆಫೀಸ್ನಲ್ಲಿ ಐತಿಹಾಸಿಕ ಆರಂಭವನ್ನು ಪಡೆದಿದ್ದು, ಮೊದಲ ದಿನ ಬರೋಬ್ಬರಿ ₹145.55 ಕೋಟಿ ಗಳಿಸಿದೆ. ಕೇವಲ ಮೊದಲ ದಿನದ (ಶುಕ್ರವಾರ) ಕಲೆಕ್ಷನ್ ₹102.55 ಕೋಟಿ ಆಗಿದೆ.
ನೈಸಿಯಾ ವಿಶ್ವಾಸದ ಘೋಷಣೆ ಕ್ರೈಸ್ತ ಬಂಧುಗಳಿಗೆ ವಿಶ್ವಾಸದ ಅಡಿಪಾಯವಾಗಿದೆ. ಯಾವುದೇ ಸಭೆಗಳಿಗೂ ಸೇರಿದ್ದರೂ ಕೂಡ ಒಂದೇ ವಿಶ್ವಾಸದ ಘೋಷಣೆ ಮಾಡುವಾಗ ಐಕ್ಯತೆಯನ್ನು ಪ್ರಚುರಪಡಿಸಿದಂತಾಗುತ್ತದೆ ಎಂದು ಉಡುಪಿ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತದಾರರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
ಇಸ್ರೇಲ್ ಹಾಗೂ ಇರಾನ್ ಯುದ್ಧದಿಂದ ಬೆಂಗಳೂರು ಸೇರಿದಂತೆ ಎಲ್ಲೆಡೆ ಗ್ಯಾಸ್ ಸಮಸ್ಯೆ ಎದುರಾದ ಬೆನ್ನಲ್ಲೇ ಇದೀಗ ಪೆಟ್ರೋಲ್ ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 2 ರೂ ಏರಿಕೆಯಾಗಿದೆ. ಲೀಟರ್ಗೆ 106 ರೂಪಾಯಿ ಇದ್ದ ಪೆಟ್ರೋಲ್ ದರ 108.50 ರೂಪಾಯಿಗೆ ಏರಿಕೆಯಾಗಿದೆ. ಇನ್ನು 91 ರೂಪಾಯಿ ಇದ್ದ ಡೀಸೆಲ್ ದರ ಇದೀಗ 93.50 ರೂಪಾಯಿ ಏರಿಕೆ ಮಾಡಲಾಗಿದೆ.
ಪೆರ್ಡೂರು ಶ್ರೀಅನಂತಪದ್ಮನಾಭ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ಕಾರ್ಯದಲ್ಲಿ ನಾವೆಲ್ಲರೂ ಕಟಿಬದ್ಧರಾಗಿ ಪಾಲ್ಗೊಳ್ಳಬೇಕು. ದೇವಸ್ಥಾನದ ಭೂಮಿ ಹಾಗೂ ಅಸ್ಥಿತ್ವಕ್ಕೆ ಧಕ್ಕೆ ಆಗದಂತೆ ರಸ್ತೆ ನಿರ್ಮಾಣ ಕಾಮಗಾರಿ ನಡೆಯಬೇಕು ಎಂದು ದೇವಸ್ಥಾನದ ತಂತ್ರಿ ವಿದ್ವಾನ್ ಕೆ.ಪಿ. ಕುಮಾರ ಗುರು ಕರೆನೀಡಿದರು.