Showing 20 of 21636 articles • Page 203 of 1082
ನಾಡಿನ ಸಮಸ್ತ ಜನರಿಗೆ ಸ್ಪೀಕರ್ ಯು ಟಿ ಖಾದರ್ ಅವರು ಈದುಲ್ ಫಿತ್ ಹಬ್ಬದ ಶುಭಾಶಯ ಕೋರಿದ್ದಾರೆ.
ಪವಿತ್ರ ರಮಝಾನ್ ವೃತಗಳನ್ನು ಅನುಷ್ಠಾನಗೊಳಿಸಿದ ಕರಾವಳಿಯ ಮುಸ್ಲಿಮರು ಇಂದು ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಫಿತ್’ ಆಚರಿಸಿದರು.
ಇತ್ತೀಚಿನ ದಿನಗಳಲ್ಲಿ ಸಂಭವಿಸುತ್ತಿರುವ ಬಹುತೇಕ ರಸ್ತೆ ಅಪಘಾತಗಳಿಗೆ ವಾಹನ ಸವಾರರ ಅತಿಯಾದ ವೇಗ ಮತ್ತು ಅಜಾಗರೂಕತೆಯೇ ಮುಖ್ಯ ಕಾರಣವಾಗಿದೆ. “ವೇಗಕ್ಕಿಂತ ಜೀವನ ಮುಖ್ಯ” ಎಂಬ ಮಾತನ್ನು ಮರೆತು, ಅತೀ ವೇಗವಾಗಿ ವಾಹನ ಚಲಾಯಿಸುವುದು ಕೇವಲ ಚಾಲಕನಿಗೆ ಮಾತ್ರವಲ್ಲದೆ ರಸ್ತೆಯಲ್ಲಿ ಸಾಗುವ ಇತರ ಪಾದಚಾರಿಗಳಿಗೂ ಪ್ರಾಣಾಪಾಯವನ್ನು ತಂದೊಡ್ಡುತ್ತಿದೆ.
ಕುಕಟ್ಪಲ್ಲಿಯ ಪ್ರತಿಷ್ಠಿತ ಚಿನ್ನದ ಮಳಿಗೆಗಳಲ್ಲಿ ಅಸಲಿ ಚಿನ್ನದ ಉಂಗುರಗಳನ್ನು ಬದಲಾಯಿಸಿ, ಅವುಗಳ ಜಾಗದಲ್ಲಿ ನಕಲಿ (Imitation) ಉಂಗುರಗಳನ್ನು ಇಟ್ಟು ಕಳವು ಮಾಡುತ್ತಿದ್ದ 30 ವರ್ಷದ ವ್ಯಕ್ತಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಶುಕ್ರವಾರ ಸಂಭ್ರಮ ಸಡಗರದಿಂದ ಆಚರಿಸಿದರು.
ಉಡುಪಿ: ಟಿಪ್ಪರ್ ಲಾರಿಯೊಂದು ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಗುರುವಾರ ಕಾರ್ಕಳದ ಪಳ್ಳಿ ಅಡಪಾಡಿ ಹತ್ತಿರ ನಡೆದಿದೆ. ಮೃತಪಟ್ಟ ಯುವಕನನ್ನು ಹಿರಿಯಡ್ಕ ಕುಜಂಬೈಲು ನಿವಾಸಿ ಗಣೇಶ್ ನಾಯಕ್ (27) ಎಂದು ಗುರುತಿಸಲಾಗಿದೆ. ಗಣೇಶ್ ನಾಯಕ್ ಅವರು ತನ್ನ ಬೈಕ್ನಲ್ಲಿ ಹಂಪನಕಟ್ಟೆ ಕಡೆಗೆ ಹೋಗುತ್ತಿರುವಾಗ ಆರೋಪಿ ತನ್ನ ಟಿಪ್ಪರ್ ಲಾರಿಯನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮೋಟಾರ್ ಸೈಕಲ್ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದು, ಇದರ […]
ಕರಾವಳಿಯಲ್ಲಿ ಇಂದು ಚಂದ್ರ ದರ್ಶನ ಆದ ಹಿನ್ನೆಲೆಯಲ್ಲಿ ಮಾರ್ಚ್ 20ರಂದು ಶುಕ್ರವಾರ ದ.ಕ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತರ್(ರಮಾಝಾನ್ ಹಬ್ಬ) ಹಬ್ಬವನ್ನು ಆಚರಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ.
ಚಂದ್ರ ದರ್ಶನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವು ಶುಕ್ರವಾರ ಆಚರಿಸುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20 ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.
ಹಣಕ್ಕಾಗಿ ಎಟಿಎಂ ಬಳಸುವ ಕಾಲ ಹೋಗಿ, ಈಗ ಗ್ಯಾಸ್ ಸಿಲಿಂಡರ್ಗಳಿಗೂ ಎಟಿಎಂ ಬಂದಿದೆ. ಭಾರತ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ತನ್ನ ‘ಭಾರತ ಗ್ಯಾಸ್’ ಗ್ರಾಹಕರಿಗಾಗಿ ದೇಶದ ಮೊದಲ ಎಲ್ಪಿಜಿ ಎಟಿಎಂ ಅನ್ನು ಲೋಕಾರ್ಪಣೆ ಮಾಡಿದೆ.
ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಸಿನಿಮಾ ಇಂದು ವಿಶ್ವದಾದ್ಯಂತ ರಿಲೀಸ್ ಆಗಿದೆ.
ನಗರದ ಕುದ್ರೋಳಿ ಕಂಡತ್ಪಳ್ಳಿ ಎಂಬಲ್ಲಿ ಗ್ಯಾಸ್ ಹಂಡೆಯಿಂದ ಇನ್ನೊಂದು ಗ್ಯಾಸ್ ಹಂಡೆಗೆ ಅಕ್ರಮವಾಗಿ ಗ್ಯಾಸ್ ಮರುಪೂರಣ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ಕುಟುಂಬವು ರೀಲ್ ವಿಡಿಯೋಗಾಗಿ ವೃದ್ಧ ತಂದೆಯನ್ನು ಗೋಣಿಚೀಲದಲ್ಲಿ ತುಂಬಿಸಿ, ನಗರದಿಂದ ಹೊರಗೆ “ಪಾರ್ಸೆಲ್ ಕಳುಹಿಸಲು” ಕೊರಿಯರ್ ಕಚೇರಿಗೆ ಕರೆದೊಯ್ದಿದೆ. ಕೊರಿಯರ್ ಸಿಬ್ಬಂದಿ ಪೊಲೀಸರಿಗೆ ಕರೆ ಮಾಡಿದ್ದಾರೆ.
ಚಂಡೀಗಢದ ಪ್ರತಿಷ್ಠಿತ ಸೆಕ್ಟರ್-9ರಲ್ಲಿ ಗುರುವಾರ ಹಾಡಹಗಲೇ ಗುಂಡಿನ ಸದ್ದು ಕೇಳಿಬಂದಿದೆ.
ಇಂದು ಬೆಳಿಗ್ಗೆ ಮಹಾರಾಷ್ಟ್ರದ ವಾಕೋದ್ ಚೌಫುಲಿ ಬಳಿ ಸಂಭವಿಸಿದ ಅಪಘಾತದಲ್ಲಿ ದೊಡ್ಡ ಮಟ್ಟದ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ.
ಜಾಲೋರ್ನ ರಾಷ್ಟ್ರೀಯ ಹೆದ್ದಾರಿ -48 ರಲ್ಲಿ ತೈಲ ಟ್ಯಾಂಕರ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದ್ದು, ಸುಮಾರು 200 ಮೀಟರ್ಗಳಷ್ಟು ಬೆಂಕಿ ಹರಡಿತು.
ಕಂಕನಾಡಿಯ ಶಾಪ್ ಬಳಿ ಆಘಾತಕಾರಿ ಘಟನೆಯೊಂದು ನಡೆದಿದೆ. ಅಂಗಡಿಯ ಹೊರಗಡೆ ಇಟ್ಟಿದ್ದ ಟೇಬಲ್ ಫ್ಯಾನ್ ನನ್ನು ವ್ಯಕ್ತಿ ಕದಿಯುತ್ತಿದ್ದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ನಮ್ಮ ಕರಾವಳಿಯ ಮಂಗಳೂರು ಪ್ರತಿಭೆಗಳ ಗಣಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಮಂಗಳೂರಿನ ಶಕ್ತಿನಗರದ ನಿವಾಸಿ ಆದಿ ಸ್ವರೂಪ ತನ್ನ ಅಸಾಧಾರಣ ಬರವಣಿಗೆಯ ಕೌಶಲದಿಂದ ಇಡೀ ದೇಶದ ಗಮನ ಸೆಳೆಯುತ್ತಿದ್ದಾಳೆ.
ನಾಡಿನಾದ್ಯಂತ ಚಂದ್ರಮಾನ ಯುಗಾದಿಯ ಸಡಗರ ಮನೆ ಮಾಡಿದ್ದು, ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ತಿರುಮಕೂಡಲು ನರಸೀಪುರದ ತ್ರಿವೇಣಿ ಸಂಗಮದಲ್ಲಿ ಸಾವಿರಾರು ಭಕ್ತರು ಪುಣ್ಯಸ್ನಾನ ಮಾಡುವ ಮೂಲಕ ಹೊಸ ವರ್ಷವನ್ನು ಭಕ್ತಿಭಾವದಿಂದ ಸ್ವಾಗತಿಸಿದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಜಂಕ್ ಫುಡ್ ಬಳಕೆಯಿಂದ ಉಂಟಾಗುತ್ತಿರುವ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಪರ್ಯಾಯವಾಗಿ ಪೌಷ್ಠಿಕಾಂಶಯುಕ್ತ ಸಿರಿಧಾನ್ಯಗಳನ್ನು ದಿನನಿತ್ಯದ ಆಹಾರದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಮಟ್ಟದ ‘ಸಿರಿಧಾನ್ಯ ಹಬ್ಬ’ ಭಾನುವಾರ ಮಣಿಪಾಲದ ರಜತಾದ್ರಿಯಲ್ಲಿ ಸಂಭ್ರಮದಿಂದ ಜರುಗಿತು.
ಮತ್ತೊಂದು ಯುಗಾದಿ ಬಂದಿದೆ. ಈ ಬಾರಿ ಪರಾಭವ ಸಂವತ್ಸರ. ಹಾಗಂತ ಗಾಬರಿಯಾಗಬೇಕಿಲ್ಲ. ಈ ಬಾರಿ ಶತ್ರುಗಳ ಪರಾಭವ ಎಂದು ಪುತ್ತಿಗೆ ಸುಗುಣೇಂದ್ರ ಶ್ರೀಗಳು ಯುಗಾದಿ ಶುಭಾಶಯ ಕೋರಿದ್ದಾರೆ.