Showing 20 of 21639 articles • Page 204 of 1082
ನಾಡಿನಾದ್ಯಂತ ಚಂದ್ರಮಾನ ಯುಗಾದಿಯ ಸಡಗರ ಮನೆ ಮಾಡಿದ್ದು, ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ತಿರುಮಕೂಡಲು ನರಸೀಪುರದ ತ್ರಿವೇಣಿ ಸಂಗಮದಲ್ಲಿ ಸಾವಿರಾರು ಭಕ್ತರು ಪುಣ್ಯಸ್ನಾನ ಮಾಡುವ ಮೂಲಕ ಹೊಸ ವರ್ಷವನ್ನು ಭಕ್ತಿಭಾವದಿಂದ ಸ್ವಾಗತಿಸಿದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಜಂಕ್ ಫುಡ್ ಬಳಕೆಯಿಂದ ಉಂಟಾಗುತ್ತಿರುವ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಪರ್ಯಾಯವಾಗಿ ಪೌಷ್ಠಿಕಾಂಶಯುಕ್ತ ಸಿರಿಧಾನ್ಯಗಳನ್ನು ದಿನನಿತ್ಯದ ಆಹಾರದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಮಟ್ಟದ ‘ಸಿರಿಧಾನ್ಯ ಹಬ್ಬ’ ಭಾನುವಾರ ಮಣಿಪಾಲದ ರಜತಾದ್ರಿಯಲ್ಲಿ ಸಂಭ್ರಮದಿಂದ ಜರುಗಿತು.
ಮತ್ತೊಂದು ಯುಗಾದಿ ಬಂದಿದೆ. ಈ ಬಾರಿ ಪರಾಭವ ಸಂವತ್ಸರ. ಹಾಗಂತ ಗಾಬರಿಯಾಗಬೇಕಿಲ್ಲ. ಈ ಬಾರಿ ಶತ್ರುಗಳ ಪರಾಭವ ಎಂದು ಪುತ್ತಿಗೆ ಸುಗುಣೇಂದ್ರ ಶ್ರೀಗಳು ಯುಗಾದಿ ಶುಭಾಶಯ ಕೋರಿದ್ದಾರೆ.
ಅಕ್ರಮ ಕೋಳಿ ಅಂಕದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದು, ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಬಿದರೆಯಲ್ಲಿ ನಡೆದಿದೆ.
ಮಹಾನಗರ ಪಾಲಿಕೆ ದುರಾಡಳಿತದಿಂದ ಕೂಡಿದ್ದು, ಭ್ರಷ್ಟಾಚಾರ ಮಿತಿ ಮೀರಿದ್ದು, ಜನವಿರೋಧಿ ನೀತಿ ಜಾರಿಯಲ್ಲಿದೆ. ಆಡಳಿತ ಸಂಪೂರ್ಣ ವೈಫಲ್ಯ ಅನುಭವಿಸಿದ್ದು, ಮಂಗಳೂರು ಮಹಾನಗರಪಾಲಿಕೆಯ ದುರಾಡಳಿತ ಕೊನೆಯಾಗಬೇಕು ಎಂದು ಆಗ್ರಹಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮತ್ತು ಉತ್ತರ ಮಂಡಲದ ನೇತೃತ್ವದಲ್ಲಿ ಬುಧವಾರ ಮಂಗಳೂರು ಮಹಾನಗರ ಪಾಲಿಕೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಹಠಾತ್ ನಡೆಯಲ್ಲಿ, HDFC ಬ್ಯಾಂಕಿನ ಅರೆಕಾಲಿಕ ಅಧ್ಯಕ್ಷ ಮತ್ತು ಸ್ವತಂತ್ರ ನಿರ್ದೇಶಕ ಅತನು ಚಕ್ರವರ್ತಿ ಬುಧವಾರ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡಿದ್ದಾರೆ.
ರಾಸ್ ಲಫಾನ್ ಅನಿಲ ಘಟಕದ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು, ಇದು ಮಧ್ಯಪ್ರಾಚ್ಯದಲ್ಲಿ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡಿದೆ.
ಸ್ಯಾಂಡಲ್ವುಡ್ನ ‘ಕೆಡಿ’ ಚಿತ್ರದ ‘ಸರ್ಸೆ ಸೆರಗ ಸರ್ಸೆ’ ಹಾಡಿನ ಸಾಹಿತ್ಯದ ಸುತ್ತ ಎದ್ದಿದ್ದ ವಿವಾದಕ್ಕೆ ನಿರ್ದೇಶಕ ಪ್ರೇಮ್ ಇದೀಗ ಬ್ರೇಕ್ ಹಾಕಿದ್ದಾರೆ. ಕಳೆದ ಎರಡು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಈ ಹಾಡಿನ ಬಗ್ಗೆ ಸ್ಪಷ್ಟನೆ ನೀಡಿರುವ ಜೋಗಿ ಪ್ರೇಮ್, ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಲ್ಲದೆ ಹಾಡನ್ನು ಮರು ರಚಿಸುವುದಾಗಿ ಘೋಷಿಸಿದ್ದಾರೆ.
ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಭೂತನಹೊಸೂರು ಗ್ರಾಮದ ರೈತರ ಜಮೀನೊಂದರಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿವೆ. ತಾಯಿ ಚಿರತೆ ನಾಪತ್ತೆಯಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ.ಕಳೆದ ಒಂದು ವಾರದಿಂದ ಗ್ರಾಮದಲ್ಲಿ 2 ಕುರಿ ಚಿರತೆಗೆ ಬಲಿಯಾಗಿವೆ.
ಯುಗಾದಿ ಸಂಭ್ರಮದಲ್ಲಿ ಇಸ್ಪೀಟ್ ಆಟಕ್ಕೆ ಬನ್ನೂರು ಪೊಲೀಸರು ಬ್ರೇಕ್ ಹಾಕಿದ್ದಾರೆ.
ಮಾ.30 ರಂದು ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಯ ದೊಡ್ಡಜಾತ್ರಾ ಮಹೋತ್ಸವ ಅಂಗವಾಗಿ ನಂಜನಗೂಡಿನಲ್ಲಿ ಇಂದಿನಿಂದ ಗುರಳಾಪುರಿ ಉತ್ಸವವನ್ನು ಏರ್ಪಡಿಸಲಾಗಿದೆ.
ಬುಧವಾರ ಮುಂಜಾನೆ 4:30ರ ಸುಮಾರಿಗೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗ ಎಡಪದವು ಗ್ರಾಮದ ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಬಳಿ ಅಕ್ರಮ ಗೋ ಸಾಗಾಟವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ನಗರದ ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಸಂತಸದ ವಾತಾವರಣ ಮನೆಮಾಡಿದೆ. ಇಲ್ಲಿನ ‘ಗೀತಾ’ ಎಂಬ ಹೆಸರಿನ ಭಾರತೀಯ ತೋಳ (Indian Wolf) ಒಂದೇ ಬಾರಿಗೆ ಏಳು ಮರಿಗಳಿಗೆ ಜನ್ಮ ನೀಡುವ ಮೂಲಕ ಗಮನ ಸೆಳೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಅರಸಮಜಲು ಎಂಬಲ್ಲಿ ಬುಧವಾರ ಸಂಜೆ ಭೀಕರ ದುರಂತವೊಂದು ಸಂಭವಿಸಿದೆ.
ಚೀನಾದತ್ತ ಮುಖ ಮಾಡಿದ್ದ ರಷ್ಯಾದ ಕಚ್ಚಾ ತೈಲ ಹೊತ್ತ ಬೃಹತ್ ನೌಕೆಗಳು ದಕ್ಷಿಣ ಚೀನಾ ಸಮುದ್ರದಲ್ಲಿ ಇದ್ದಕ್ಕಿದ್ದಂತೆ ಯು ಟರ್ನ್ ಪಡೆದು ಈಗ ಭಾರತದತ್ತ ಧಾವಿಸುತ್ತಿವೆ.
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಪಕ್ಷದ ಪಾಲಿಗೆ ಪ್ರತಿಷ್ಠೆಯಾಗಿದೆ. ನಮಗೆ ಗೆಲುವೇ ಮಾನದಂಡ ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ವಾಣಿಜ್ಯ ಬಳಕೆಯ ಸಿಲಿಂಡರ್ ಅಭಾವದಿಂದಾಗಿ ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಹೊಟೇಲ್ ಗಳು ಬಂದ್ ಆಗಿವೆ.ಪ್ರತಿನಿತ್ಯ ಕೃಷ್ಣನಗರಿ ಉಡುಪಿಗೆ ಬೇರೆ ಬೇರೆ ಕಡೆಗಳಿಂದ ಸುಮಾರು 600 ರಷ್ಟು ಬಸ್ ಗಳು ಬರುತ್ತವೆ.ಹಾಗೆ ಬರುವ ಸಾವಿರಾರು ಪ್ರವಾಸಿಗರಿಗೆ ಊಟ ತಿಂಡಿ ಸಿದ್ದಪಡಿಸಬೇಕಿದೆ.ಆದರೆ ಗ್ಯಾಸ್ ಅಭಾವದಿಂದಾಗಿ ಅದು ಸಾಧ್ಯವಾಗುತ್ತಿಲ್ಲ.
ಗ್ಯಾಸ್ ಅಭಾವವನ್ನೇ ಸೈಬರ್ ವಂಚಕರು ಬಂಡವಾಳ ಮಾಡಿಕೊಂಡಿದ್ದಾರೆ ಎಂದು ಉಡುಪಿ ಎಸ್ಪಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕಾರೊಂದು ಇನ್ನೊಂದು ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ ಗೆ ಡಿಕ್ಕಿಯಾದ ಘಟನೆ ಸಂತೆಕಟ್ಟೆಯ ಓವರ್ ಬ್ರಿಡ್ಜ್ ಬಳಿ ಇಂದು ಮಧ್ಯಾಹ್ನ ವೇಳೆ ಸಂಭವಿಸಿದೆ.