Showing 20 of 21639 articles • Page 205 of 1082
ನೇಪಾಳದ ಖೋಟಾಂಗ್ ಜಿಲ್ಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಕುಟುಂಬ ಸದಸ್ಯರನ್ನು ಕರೆದೊಯ್ಯುತ್ತಿದ್ದಾಗ ಏರ್ ಡೈನಾಸ್ಟಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ದ.ಕ. ಜಿಲ್ಲೆಯಲ್ಲಿ ಆಟೋರಿಕ್ಷಾ ಚಾಲಕರಿಗೆ ಆಗುತ್ತಿರುವ ಸಮಸ್ಯೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಪ್ರಗತಿಪರ ಆಟೋ ರಿಕ್ಷಾ, ಟೂರಿಸ್ಟ್, ಭಾರೀ ವಾಹನ ಚಾಲಕರ ಸಂಘ (ಎಐಸಿಸಿಟಿಯು) ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ರಿಕ್ಷಾ ಚಾಲಕರು ಪ್ರತಿಭಟನೆ ನಡೆಯಿತು.
“ಕಳೆದ ಮಾರ್ಚ್ 13 ರಂದು ಸುದ್ದಿಗೋಷ್ಠಿ ನಡೆಸಿದ್ದ ಡಾ.ರತಿ ಅವರು ಕರಾವಳಿಯಲ್ಲಿ ದೈವ ನರ್ತನ ಸೇವೆಯನ್ನು ಪಂಬದ, ಪಾಣಾರ ಸುಮಾರು 16 ಜಾತಿಗಳವರು ಮಾಡಬೇಕು ಆದರೆ ಮಂಗಳೂರಿನ ಬೋಳೂರಿನಲ್ಲಿ ಜಾರಂದಾಯ ದೈವಸ್ಥಾನದ ಬಂಟ ದೈವಕ್ಕೆ ಕ್ರಿಶ್ಚಿಯನ್ ಮಹಿಳೆಗೆ ಹುಟ್ಟಿದ ಯುವಕನಿಂದ ನರ್ತನ ಸೇವೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ತಿರುವನಂತಪುಂ ನಾರ್ತ್-ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ವೀಕ್ಲಿ ಸ್ಪೆಷಲ್ ಅಂತ್ಯೋದಯ ಎಕ್ಸ್ಪ್ರೆಸ್ ರೈಲಿನ ಸೇವೆಯನ್ನು ಖಾಯಂಗೊಳಿಸಲಾಗಿದೆ.
ಗಾಯಗೊಂಡು ಅಸಹಾಯಕ ಸ್ಥಿತಿಯಲ್ಲಿದ್ದ ಕಾಡುಬೆಕ್ಕುನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ. ಗಸ್ತು ಅರಣ್ಯಪಾಲಕ ಕಾಡುಬೆಕ್ಕನ್ನು ಚಿಕಿತ್ಸೆಗೆ ಒಳಪಡಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಳೆದ ಬಾರಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದ ಉಡುಪಿ ಜಿಲ್ಲೆ ಈ ಬಾರಿ ಮತ್ತೆ ಅಗ್ರಸ್ಥಾನ ಪಡೆಯುವ ನಿರೀಕ್ಷೆಯೊಂದಿಗೆ ಪರೀಕ್ಷೆ ಎದುರಿಸಲು ಸಕಲ ಸಿದ್ಥತೆ ನಡೆಸಿದೆ.
ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ಕ್ರೈಸ್ತ ಸಮುದಾಯದವರಿಗೆ ಮಾಡಿರುವ ಭಕ್ತಿ ಸಂಜೀವನ ಕೂಟವಾಗಿದೆ ಎಂದು ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷರಾದ ಪ್ರಶಾಂತ್ ಜತ್ತನ್ನ ಸ್ಪಷ್ಟಪಡಿಸಿದ್ದಾರೆ.
ಮನು ಬಹ್ರೇನ್ ಎಂಬ ಕಾವ್ಯನಾಮದಿಂದ ಪೂಜಿಸಲ್ಪಡುತ್ತಿದ್ದ, ಹಿರಿಯ ಕೊಂಕಣಿ ಬರಹಗಾರ ಸ್ಟ್ಯಾನಿ ವಿಲಿಯಂ ಲೋಬೊ (78) ನಿಧನರಾದರು.
ವಾರಣಾಸಿಯ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ ಇಫ್ತಾರ್ ಕೂಟ ನಡೆಸುತ್ತಿರುವ ಜನರ ಗುಂಪೊಂದು ತೋರಿಸುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ದೂರು ದಾಖಲಿಸಿದ್ದು, 14 ಜನರನ್ನು ಬಂಧಿಸಲಾಗಿದೆ.
ಅಮೇರಿಕ-ಇಸ್ರೇಲ್ ಹಾಗು ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧದಿಂದ ಯುಎಇಯಲ್ಲಿ ಸಂಕಷ್ಟಕ್ಕೀಡಾಗಿದ್ದ ಪ್ರವಾಸಿ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕಳುಹಿಸುವ ಜೊತೆಗೆ ವಿಸಿಟ್ ವೀಸಾ ಮೂಲಕ ಉದ್ಯೋಗವನ್ನು ಹರಸಿಬಂದ ಜನರಿಗೆ ವಸತಿ, ಊಟದ ವ್ಯವಸ್ಥೆ ಮಾಡುವ ಮೂಲಕ ‘ಕನ್ನಡಿಗಾಸ್ ಹೆಲ್ಪ್ ಲೈನ್’ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದೆ.
ಭೂ ವ್ಯವಹಾರದ ವ್ಯಾಜ್ಯದ ಕೋಪದಿಂದ ಕಾರಿನಲ್ಲಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊ ತೆದು ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ಮಂಗಳವಾರ (ಮಾ.17) ನಡೆದಿದೆ.
ದೈವ ಪಾತ್ರಿ ಸುಶಾಂತ್ ಬಂಗೇರ ಅವರ ಧರ್ಮದ ಕುರಿತು ಸಂಶೋಧಕಿ ರತಿ ಮಾಡಿರುವ ಆರೋಪಕ್ಕೆ ಈಗ ಸುಶಾಂತ್ ಅವರ ತಾಯಿ ಸವಿತಾ ಅವರು ಖಡಕ್ ಉತ್ತರ ನೀಡಿದ್ದಾರೆ.
ಕರಾವಳಿಯ ದೈವಾರಾಧನಾ ಪರಂಪರೆಯಲ್ಲಿ ಜಾತೀಯತೆ ಮತ್ತು ಧರ್ಮದ ಕುರಿತಾದ ಹೊಸ ವಿವಾದವೊಂದು ಸೃಷ್ಟಿಯಾಗಿದೆ. ದೈವ ಪಾತ್ರಿ ಸುಶಾಂತ್ ಬಂಗೇರ ಅವರು ಕ್ರೈಸ್ತ ಸಮುದಾಯಕ್ಕೆ ಸೇರಿದವರು ಮತ್ತು ಅವರಿಂದ ದೈವ ನರ್ತನ ಸೇವೆ ನಡೆಸಿರುವುದು ದೈವಾರಾಧನಾ ಪರಂಪರೆಗೆ ಮಾಡಿದ ಘೋರ ಅಪಚಾರ ಎಂದು ಸಂಶೋಧಕಿ ರತಿ ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು.
ಇರಾನ್ನ ಪ್ರಭಾವಿ ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿಯ ಮುಖ್ಯಸ್ಥ ಅಲಿ ಲಾರಿಜಾನಿ, ಟೆಹ್ರಾನ್ ಬಳಿಯ ತಮ್ಮ ಮಗಳ ಮನೆಯ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಅಧಿಕಾರಿಗಳು ಮಂಗಳವಾರ ದೃಢಪಡಿಸಿದ್ದಾರೆ.
ನಿಯಮಗಳನ್ನು ಮೀರಿ ಎಲ್ಲೆಂದರಲ್ಲಿ ಪೊಲೀಸ್ ಚೌಕಿಗಳನ್ನು ನಿರ್ಮಿಸಿ ಸಾರ್ವಜನಿಕರಿಗೆ ತೊಂದರೆ ಕೊಡುವುದು ಎಷ್ಟು ಸರಿ? ಎಂದು ಶಾಸಕ ವೇದವ್ಯಾಸ ಕಾಮತ್ ಅಧಿವೇಶನದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಮುಂದಿನ 2 ದಿನಗಳವರೆಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಾಗುವ ಮುನ್ಸೂಚನೆ ಇದೆ. ಕೆಲವೆಡೆ ಆಲಿಕಲ್ಲು ಸಹಿತ ಮಳೆಯ ಅಬ್ಬರ ನಗರದ ಹಲವೆಡೆ ಮಂಗಳವಾರ ತಡರಾತ್ರಿವರೆಗೆ ಮಳೆ ಸುರಿದಿದೆ.
ಮಂಗಳೂರು: ಸಂತ ಅಲೋಶಿಯಸ್ ಪರಿಗಣಿತ ವಿವಿಯ ಸ್ಕೂಲ್ ಆಫ್ ಆರ್ಟ್ಸ್ ಆಂಡ್ ಹ್ಯೂಮ್ಯನಿಟಿಸ್, ಸ್ಕೂಲ್ ಆಫ್ ಇಂಜಿನಿಯರಿಂಗ್, ಸ್ಕೂಲ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ ಹಾಗೂ ಕೇರಳದ ಕುತ್ತಿಕ್ಕಾಣಂನ ಮಾರ್ ಬಸೆಲಿಯೊಸ್ ಕ್ರಿಶ್ಚಿಯನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯ ಸಹಯೋಗದಲ್ಲಿ “ವಲಯಾಕಾರದ ಆರ್ಥಿಕತೆ: ನವೀನತೆ, ನೀತಿ ಮತ್ತು ಕಾರ್ಯಯೋಜಿತ ಬಹುಪ್ರಾಂತ್ಯ ದೃಷ್ಟಿಕೋನಗಳು” ಎಂಬ ವಿಷಯದ ಮೇಲೆ ಎರಡು ದಿನಗಳ ಅಂತರ್ ವಿಭಾಗೀಯ ಅಂತರರಾಷ್ಟ್ರೀಯ ಸಮ್ಮೇಳನ (IDIC 2026) ಎಲ್ಸಿಆರ್ಐ ಸಭಾಂಗಣದಲ್ಲಿ ಉದ್ಘಾಟಿಸಲಾಯಿತು. ಮುಖ್ಯ ಅತಿಥಿಯಾಗಿ ಇನ್ಸ್ಟಿಟ್ಯೂಟ್ ಫಾರ್ […]
“ವಸಾಹತು ಮನೋಭಾವದಿಂದ ಭಾರತೀಯತೆಯೆಡೆಗೆ ಒಂದು ಚಿಂತನೆ”ಎಂಬ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮವು ಮಾ.20 ರಂದು ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ ಅಜಾದ್ ಭವನದಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ತಿಳಿಸಿದ್ದಾರೆ.
ನವೀನ ವಿಚಾರಗಳನ್ನು ಕ್ರಿಯಾತ್ಮಕ ಮೂಲ ಮಾದರಿಗಳಾಗಿ ಪರಿವರ್ತಿಸುವ ಗುರಿಯನ್ನು ಹೊಂದಿರುವ 24 ಗಂಟೆಗಳ ಹ್ಯಾಕಥಾನ್ ಪ್ರೋಟೋಥಾನ್ 2026 ಅನ್ನು ಮಾರ್ಚ್ 13 ಮತ್ತು 14, 2026 ರಂದು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ನಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.
ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸಿದ ಎಸಿಪಿ ವರದಿ ಸಲ್ಲಿಸಿದ್ದಾರೆ. ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.