Showing 20 of 20466 articles • Page 206 of 1024
ಎ. ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಹೆಮ್ಮೆಯಿಂದ ತಿಳಿಸುವುದೇನೆಂದರೆ, ಯುನೈಟೆಡ್ ಕಿಂಗ್ಡಮ್ನ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್ ಅಂಡ್ ಸರ್ಜನ್ಸ್ ಆಫ್ ಗ್ಲಾಸ್ಗೋ ಸಂಸ್ಥೆಯು ಹೃದಯರೋಗ ಕ್ಷೇತ್ರದಲ್ಲಿ ಅವರ ವಿಶಿಷ್ಟ ವೈದ್ಯಕೀಯ ಮತ್ತು ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ, ಕಾರ್ಡಿಯಾಲಜಿ ವಿಭಾಗದ ಪ್ರಾಧ್ಯಾಪಕರಾಗಿಯೂ ಮುಖ್ಯಸ್ಥರಾಗಿರುವ ಹಾಗೂ ಮುಖ್ಯ ಇಂಟರ್ವೆನ್ಶನಲ್ ಕಾರ್ಡಿಯಾಲಜಿಸ್ಟ್ ಆಗಿರುವ ಡಾ. ಬಿ. ವಿ. ಮಂಜುನಾಥ್ ಅವರಿಗೆ ಅತ್ಯಂತ ಗೌರವಾನ್ವಿತ “ಆನರರಿ FRCP” (ಫೆಲೋ ಆಫ್ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್) ಪ್ರಶಸ್ತಿಯನ್ನು ಪ್ರದಾನಿಸಿದೆ.
ಸಂತ ಅಲೋಶಿಯಸ್ ಕಾಲೇಜು ಶಿಕ್ಷಕರ ಸಹಕಾರಿ ಕ್ರೆಡಿಟ್ (SACTCC) ಸೊಸೈಟಿಯು, ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ವಾಣಿಜ್ಯ, ಹಣಕಾಸು ಮತ್ತು ಲೆಕ್ಕಶಾಸ್ತ್ರ ಶಾಲೆಯ ಸಹಯೋಗದೊಂದಿಗೆ, ಜನವರಿ 16, 2026 ರಂದು ವಿಶ್ವವಿದ್ಯಾಲಯದ ಆವರಣದಲ್ಲಿ “ಸುಸ್ಥಿರ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳ ಶಕ್ತಿ” ಎಂಬ ಅಂತರರಾಷ್ಟ್ರೀಯ ಸಮ್ಮೇಳನವನ್ನು ಎರಿಕ್ ಮಥಾಯಸ್ ಸಭಾಂಗಣದಲ್ಲಿ ಆಯೋಜಿಸಿತು. SACTCC ಸೊಸೈಟಿಯ ಸುವರ್ಣ ಮಹೋತ್ಸವ ಆಚರಣೆಯ ಭಾಗವಾಗಿ ಈ ಸಮ್ಮೇಳನವನ್ನು ನಡೆಸಲಾಯಿತು.
ಮಡಿಕೇರಿ ಕಡೆಯಿಂದ ಆಗಮಿಸುತ್ತಿದ್ದ ವಾಹನವನ್ನು ಅರಣ್ಯ ಇಲಾಖೆ ಅಧಿಕಾರಿಗಳು ತಪಾಸಣೆ ಮಾಡುವಾಗ ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಬೀಟಿ (ತೇಗ) ಮರ ಸಾಗಣೆ ಮಾಡುವುದನ್ನು ಪತ್ತೆ ಮಾಡಿದ್ದಾರೆ.
ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ.
ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸೈಲೆನ್ಸರ್, ಗಾಜು, ಬಣ್ಣ, ಲೈಟ್ ಮಾರ್ಪಾಡು ಮಾಡಿದ್ದ ಕಾರಿಗೆ ಯಲಹಂಕ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು ₹1,11,500 ದಂಡ ವಿಧಿಸಿದ್ದಾರೆ. ಕಾರು ಸುಮಾರು 17 ವರ್ಷಗಳಷ್ಟು ಹಳೆಯದಾಗಿದ್ದು ₹70 ಸಾವಿರ ಮೌಲ್ಯ ಎಂದು ಅಂದಾಜಿಸಲಾಗಿದೆ.
ಗಂಡನ ವರ್ತನೆಗೆ ಬೇಸತ್ತ ಹೆಂಡತಿಯೊಬ್ಬಳು ತನ್ನ ಮಗಳನ್ನು ಬೆಂಕಿಹಚ್ಚಿ ಹತ್ಯೆಗೈದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಇಲ್ಲಿನ ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹೊಸಬರ ’ಸುಖೀಭವ’ ಚಿತ್ರದ ಟೀಸರ್ ಮತ್ತು ಹಾಡುಗಳ ಬಿಡುಗಡೆ ಕಾರ್ಯಕ್ರಮ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ದಂಪತಿಗಳಾದ ಸಂತೋಷ್ ಕುಮಾರ್-ಭಾರ್ಗವಿ ಸಂತೋಷ್, ಮಗನ ಹೆಸರಾದ ವೇದ್ ಆರ್ಯನ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬಂಡವಾಳ ಹೂಡಿದ್ದಾರೆ. ಯೋಗರಾಜ್ ಭಟ್ ಸೇರಿದಂತೆ ಅನೇಕರ ಬಳಿ ಸಹಾಯಕರಾಗಿ ಗುರುತಿಸಿಕೊಂಡಿದ್ದ ಮೈಸೂರು ಮೂಲದ ಎನ್.ಕೆ.ರಾಜೇಶ್ ನಾಯ್ಡು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಸುಖೀಭವ ಹೆಸರಿನಂತೆ ಪ್ರಾರಂಭದಿಂದಲೂ ಯಾವುದೇ ಅಡೆತಡೆ ಇಲ್ಲದೆ ಎಲ್ಲಾ ಕೆಲಸಗಳು ಸುಗಮವಾಗಿ ಮುಗಿದಿದೆ. ಗೆಳಯ, […]
ಭಾರತದಲ್ಲಿ ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ನಡೆಯುತ್ತಿದೆ.
ನಗರದಲ್ಲಿ ಹುಡುಗರ ರೀತಿ ಡ್ರೆಸ್ ಮಾಡಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಹುಡುಗಿಯರನ್ನು ಪೊಲೀಸರು ಬಂಧಿಸಿದ್ದಾರೆ.
ನಂಜನಗೂಡು ತಾಲ್ಲೂಕಿನ ಹೆಮ್ಮರಗಾಲ ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ಹೆಮ್ಮರಗಾಲ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣದಲ್ಲಿ ಭಾರೀ ಅಕ್ರಮ ನಡೆದಿದ್ದು, ತನಿಖೆ ನಡೆಸುವಂತೆ ಯುವ ಮುಖಂಡ ಕುಂಬ್ರಹಳ್ಳಿ ಶಶಿಕುಮಾರ್ ಆಗ್ರಹಿಸಿದ್ದಾರೆ.
ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಕೋ ಕ್ಲಬ್ ವತಿಯಿಂದ ಪರಿಸರ ಸಂರಕ್ಷಣೆಯ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.
ಶೀರೂರು ಮಠಾಧೀಶರಾದ ಪರಮ ಪೂಜ್ಯ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಸರ್ವ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು,
ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ವತಿಯಿಂದ ಶೀರೂರು ಪರ್ಯಾಯ ಮಹೋತ್ಸವದ ಪ್ರಯುಕ್ತ ಜನವರಿ 17 ರಂದು ಬೆಳಿಗ್ಗೆಯಿಂದ ರಾತ್ರಿಯ ತನಕ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಬಳಗದ ಅಧ್ಯಕ್ಷರಾದ ಯತೀಶ್ ಕರ್ಕೇರಾ ಹೇಳಿದರು.
ಶಿರಸಿ ತಾಲೂಕಿನ ಬಳಗೇರಿ ಸರಗುಪ್ಪಾದಲ್ಲಿ ಜ.09 ರಂದು 18-00 ಗಂಟೆಯಿಂದ ಜ.10 ರಂದು ಬೆಳಿಗ್ಗೆ 06-00 ಗಂಟೆಯ ನಡುವಿನ ಅವಧಿಯಲ್ಲಿ ಬಳಗೇರಿ ಗ್ರಾಮದ ನಿವಾಸಿ ರಾಮಚಂದ್ರ ತಂದೆ ನರಸಿಂಹ ಗೌಡ ಮತ್ತು ಅವರ ಸಹೋದರರ ಹೊಲದಲ್ಲಿರುವ ಕೊಟ್ಟಿಗೆಗಳಲ್ಲಿ ಕಟ್ಟಿದ್ದ ನಾಲ್ಕು ಎತ್ತುಗಳು ಮತ್ತು ಮೂರು ಹೊರಿಗಳನ್ನು ಕಳ್ಳತನ ಮಾಡಲಾಗಿದೆ.
ಗೋಕರ್ಣ ಪ್ಯಾರಡೈಸ್ ಬೀಚ್ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಬೋಟಿಂಗ್ಗೆ ತೆರಳಿದ್ದಾಗ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದೆ. ಸಿಲ್ಹೆಟ್ ಜಿಲ್ಲೆಯ ಗೋವೈನ್ಘಾಟ್ ಉಪಜಿಲ್ಲಾದಲ್ಲಿ ಹಿಂದೂ ಶಿಕ್ಷಕರೊಬ್ಬರ ಮನೆಗೆ ಬೆಂಕಿ ಹಚ್ಚಲಾಗಿದೆ.
ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾಗಿ ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ನಡೆದಿದೆ.
ಮೈಸೂರು ಭಾಗದ ಆಧ್ಯಾತ್ಮಿಕ ಶಕ್ತಿ ಕೇಂದ್ರ ಸುತ್ತೂರಲ್ಲಿ ಜಾತ್ರೆ ಸಂಭ್ರಮ ಮೇಳೈಸಿದೆ. ಸುತ್ತೂರು ಜಾತ್ರಾ ಮಹೋತ್ಸವ ಸಂಭ್ರಮ ಕಳೆಗಟ್ಟಿದ್ದು, ಜಾತ್ರಾ ಮಹೋತ್ಸವದ 2ನೇ ದಿನ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರವೇರಿದೆ.
ತಾಲೂಕಿನ ಪುತ್ತಿಗೆ ಗ್ರಾಮದ ಬಂಗ್ಲೆ ಎಂಬಲ್ಲಿ ಬುಧವಾ ರಾತ್ರಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸುರಂಗದೊಳಗೆ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಅತ್ಯಂತ ಸಾಹಸಮಯವಾಗಿ ರಕ್ಷಿಸಿದ್ದಾರೆ.