Showing 20 of 21647 articles • Page 208 of 1083
ಇಸ್ರೇಲ್ ಇರಾನ್ ಯುದ್ಧದಿಂದಾಗಿ ಮಂಗಳೂರು ಮತ್ತು ಗಲ್ಫ್ ಬಹುತೇಕ ರಾಷ್ಟ್ರ ಗಳೊಂದಿಗೆ ವಿಮಾನ ಸಂಚಾರ ರದ್ದುಗೊಂಡಿದ್ದರೂ ಮಂಗಳೂರು ಮತ್ತು ಮಸ್ಕತ್ ನಡುವಿನ ವಿಮಾನ ಯಾನ ಮುಂದುವರಿದಿದೆ.
ಉನ್ನತ ಶಿಕ್ಷಣದ ವೆಚ್ಚಗಳು ನಿರಂತರವಾಗಿ ಏರುತ್ತಿರುವ ಸಂದರ್ಭದಲ್ಲಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉದ್ಯಮ-ಕೇಂದ್ರಿತ ಶಿಕ್ಷಣಕ್ಕೆ ಪ್ರವೇಶವು ಆರ್ಥಿಕವಾಗಿ ಸವಾಲಾಗಿ ಪರಿಣಮಿಸುತ್ತಿದೆ.
ಪದೇ ಪದೇ ಸಂಚಾರ ನಿಯಮಗಳನ್ನು ಗಾಳಿಗೆ ತೂರುತ್ತಿದ್ದ ಸವಾರನೊಬ್ಬನಿಗೆ ಸುಳ್ಯದ ನ್ಯಾಯಾಲಯವು ದಂಡದ ಜೊತೆಗೆ ಸಾರ್ವಜನಿಕವಾಗಿ ಸಂಚಾರ ನಿಯಮಗಳ ಅರಿವು ಮೂಡಿಸುವ ವಿಶಿಷ್ಟ ಶಿಕ್ಷೆಯನ್ನು ವಿಧಿಸಿದೆ.
ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಐಪಿಎಲ್ ನ ಆರ್ ಸಿಬಿ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಕೊನೆಗೂ ಗ್ರೀನ್ ಸಿಗ್ನಲ್ ನೀಡಿದೆ.
ಮುಂದಿನ ಮೂರ್ನಾಲ್ಕು ದಿನ ವಿವಿಧ ಭಾಗಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಕಟಪಾಡಿ ಬಳಿ ಮಂಗಳೂರು ಉಡುಪಿ ಮಾರ್ಗದಲ್ಲಿ ಇಂದು ಹಿಂದುಸ್ಥಾನ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮಧ್ಯ ರಸ್ತೆಯಲ್ಲಿ ಬಿದ್ದಿದ್ದು, ಸದ್ರಿ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನೆಲೆ, ಸದ್ರಿ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಇಂದು ರಾತ್ರಿ 8 ಗಂಟೆಯವರೆಗೆ ಈ ಕೆಳಕಂಡ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾ ದಂಡಧಿಕಾರಿಯು ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಆದೇಶಿಸಿರುತ್ತಾರೆ.
ಶ್ರೀಕ್ಷೇತ್ರ ಪೊಳಲಿಯ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್ (78) ನಿಧನರಾಗಿದ್ದಾರೆ. ಶ್ರೀ ಕ್ಷೇತ್ರದಲ್ಲಿ ಸುಮಾರು 50 ವರ್ಷಕ್ಕೂ ಮೇಲ್ಪಟ್ಟು ಅರ್ಚಕ ಸೇವೆ ಮಾಡಿದ್ದಾರೆ.
ಅಮೆರಿಕ-ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಸೋಮವಾರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಸ್ವಲ್ಪ ಇಳಿಕೆಯಾಗಿದೆ.
ಇರಾನ್ ಡ್ರೋನ್ ದಾಳಿಗೆ ದುಬೈ ವಿಮಾನ ನಿಲ್ದಾಣದ ಬಳಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ.
ತಾಲ್ಲೂಕಿನಲ್ಲಿ ಚಿರತೆ ಆತಂಕ ಹೆಚ್ಚಾಗಿದ್ದು, ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನ್ನೆಹುಂಡಿ ಕೂಡ್ಲುರು ರಸ್ತೆ ಬಳಿ ಚಿರತೆ ಪ್ರತ್ಯಕ್ಷವಾಗಿದೆ.
ಮಗುವಿಗೆ ಜನ್ಮ ನೀಡಿ ಮಗುವನ್ನು ನದಿಗೆ ಎಸೆದಿರುವ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ.
ಉಡುಪಿ ಸಮೀಪದ ಕಟಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಲ್ಪಿಜಿ ಗ್ಯಾಸ್ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಮಗುಚಿ ಬಿದ್ದ ಘಟನೆ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 169ಎ ಚತುಷ್ಪಥ ಕಾಮಗಾರಿ ಈಗಿರುವ ರಸ್ತೆಯನ್ನೇ ಅಗಲೀಕರಣಗೊಂಡು ಸಾಗಿದರೆ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ಗರ್ಭಗುಡಿ, ರಥಬೀದಿ, ವಾಸ್ತುವಿಗೆ ಸಮಸ್ಯೆಯಾಗುತ್ತದೆ.
ಈ ಬಾರಿಯ ಬಜೆಟ್ನಲ್ಲಿ ಉಡುಪಿ ಜಿಲ್ಲೆಗೆ ಅನುದಾನ ಒದಗಿಸದೇ ಮಲತಾಯಿ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ನಗರದ ಹಳೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು.
ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಒಮ್ಮತದಿಂದ ನಡೆಯಬೇಕು ಎಂಬುದು ನಮ್ಮ ಉದ್ದೇಶ. ನಮಗೆ ಹಾಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಲ್ಲದೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಇವರಿಬ್ಬರ ಸಹಕಾರ ಕೂಡಾ ನಮಗೆ ಅಗತ್ಯವಿದೆ. ರಾಜಕೀಯ ರಹಿತವಾಗಿ ದೇವಳದ ಜೀರ್ಣೋದ್ಧಾರ ನಡೆಯಬೇಕು ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಜ್ ಕುಮಾರ್ ಶೆಟ್ಟಿ ದೊಡ್ಮನೆ ತಿಳಿಸಿದ್ದಾರೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ 2026- 28 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ಎಸ್ ಡಿ ಎಮ್ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಸೌಹಾರ್ದ ಇಫ್ತಾರ್ ಕೂಟವು ಶನಿವಾರ ಸಂಜೆ ಪಾಣೆಮಂಗಳೂರು ಸಾಗರ್ ಅಡಿಟೋರಿಯಂನಲ್ಲಿ ನಡೆಯಿತು.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆ ದೇಶದಲ್ಲಿ ಗ್ಯಾಸ್ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಕೊರತೆ ಉಂಟಾಗಬಹುದು ಎಂಬ ಆತಂಕದ ನಡುವೆಯೇ, ದೇಶದಲ್ಲಿ ಎಲ್ಲಿಯೂ ಗ್ಯಾಸ್ ಅಥವಾ ಪೆಟ್ರೋಲಿಯಂ ಉತ್ಪನ್ನಗಳ ಕೊರತೆ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಅಡುಗೆ ಅನಿಲದ ಕೊರತೆ ಹೆಚ್ಚಾಗುತ್ತಿದ್ದಂತೆ ಸಮಸ್ಯೆ ಗಂಭೀರವಾಗಿದೆ. ಕೆಲವು ಮಧ್ಯವರ್ತಿಗಳು ಹೆಚ್ಚುವರಿ ಹಣ ನೀಡುವವರಿಗೆ ಮಾತ್ರ ಸಿಲಿಂಡರ್ ಒದಗಿಸುತ್ತಿರುವುದಾಗಿ ಆರೋಪ ಕೇಳಿಬಂದಿದೆ. ಬುಕ್ಕಿಂಗ್ ಪ್ರಕ್ರಿಯೆಯನ್ನು ತಡೆದು ಗ್ರಾಹಕರಿಗೆ ತೊಂದರೆ ನೀಡುತ್ತಿರುವ ಬಗ್ಗೆ ಏಜೆನ್ಸಿಗಳ ವಿರುದ್ಧ ದೂರುಗಳೂ ಬಂದಿವೆ. ಹೀಗಾಗಿ ಅಧಿಕಾರಿಗಳು ಅಕ್ರಮ ಸಂಗ್ರಹದ ವಿರುದ್ಧ ಕ್ರಮ ಆರಂಭಿಸಿದ್ದಾರೆ.
ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾದ ನೇತೃತ್ವದಲ್ಲಿ ಶಿವಾಜಿ ಸಂಗಮ ಕಾರ್ಯಕ್ರಮವನ್ನು ಮಾ.15ರಂದು ಸಂಜೆ 4.30ಕ್ಕೆ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ಅಧ್ಯಕ್ಷೆ ಸುಮಲತ ಹೇಳಿದ್ದಾರೆ.