Showing 20 of 20466 articles • Page 209 of 1024
ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ತೀರ್ಥಹಳ್ಳಿ ತಾಲೂಕು ಭಾರತಿಪುರದ ಬಳಿ ಮಂಗಳವಾರ ರಾತ್ರಿ 10 ಗಂಟೆಗೆ ಈ ಅಪಘಾತ ಸಂಭವಿಸಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ದೇಶದ ಎಲ್ಲಾ ನಾಗರಿಕರಿಗೆ ಶುಭಾಶಯಗಳನ್ನು ಕೋರಿದ್ದಾರೆ.
ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಸಾರ್ವಜನಿಕರು, ಪ್ರವಾಸಿಗರು ಮತ್ತು ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯ ಹಲವಾರು ಅರಣ್ಯ ಮತ್ತು ವನ್ಯಜೀವಿ ಪ್ರದೇಶಗಳಲ್ಲಿ ಚಾರಣವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಉಡುಪಿಯ ಮಲ್ಪೆ ಸಮೀಪದ ಕೊಡವೂರು ಶಂಕರನಾರಾಯಣ ದೇವಸ್ಥಾನದ ವತಿಯಿಂದ ಮಲ್ಪೆ ಮಾಲ್ತಿದ್ವೀಪದಲ್ಲಿ ಪ್ರತಿ ವರ್ಷ ಮಕರ ಸಂಕ್ರಾಂತಿಯಂದು ವಿಶೇಷ ಪೂಜೆ ನಡೆಯುತ್ತದೆ.
ರಾಜ್ಯದಲ್ಲಿ 18 ರಿಂದ 20 ಲಕ್ಷದಷ್ಟು ಇರುವ ಕುಲಾಲ/ಕುಂಬಾರರ ದೇಶದಲ್ಲಿ 9 ಕೋಟಿ ಹೆಚ್ಚು ಜನಸಂಖ್ಯೆ ಇರುವ ಕುಲಾಲ/ಕುಂಬಾರ ಜನಾಂಗಕ್ಕೆ ರಾಜ್ಯದಲ್ಲಿ ಇಲ್ಲಿಯವರೆಗೆ ಲಕ್ಷ್ಮೀಸಾಗರ ಒಬ್ಬರಿಗೆ ಬಿಟ್ಟರೆ ಬೇರೆ ಯಾರಿಗೂ ರಾಜಕೀಯ ಸ್ಥಾನಮಾನ ಸಿಕ್ಕಿಲ್ಲ.
ಪಾಂಡೇಶ್ವರದಲ್ಲಿರುವ ಫಿಝಾ ಬೈ ನೆಕ್ಸಸ್ ಮಾಲ್ (Fiza by Nexus Mall) ಮತ್ತು ಮಂಗಳೂರಿನ ಪ್ರಸಿದ್ಧ ತಿಂಡಿ (Try Tinidi) Instagram ಪೇಜ್ ಸಹ ಭಾಗಿತ್ವದಲ್ಲಿ ಇದೇ ಬರುವ ಜನವರಿ 16, 17 ಮತ್ತು 18, 2026 ರಂದು 3 ದಿನಗಳ ಐಸ್ ಕ್ರೀಮ್ ಪರ್ಬವನ್ನು ಆಯೋಜಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಘೋಷಿಸಲಾದ ಸರ್ಕಾರಿ ರಜೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಮತ್ತು ಜನವರಿ 15 ರಂದು ರಜೆಯನ್ನು ನೀಡಲಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಜೈ ಬಾಂಗ್ಲಾ ಎಂದು ಘೋಷಣೆ ಕೂಗಿದ್ದ ಮಹಿಳೆಯನ್ನ ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಎಂದಿಗೂ ಅಳಿಸಲಾಗದ ಇತಿಹಾಸ ನಿರ್ಮಿಸಿದ ಚಿತ್ರಗಳ ಪೈಕಿ ಓಂ ಸಿನಿಮಾ ಕೂಡ ಒಂದು. ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ ನಟಿಸಿದ್ದ ಈ ಸಿನಿಮಾ ಇಂದಿಗೂ ಅಷ್ಟೇ ಕ್ರೇಜ್ ಕಾಪಾಡಿಕೊಂಡಿರುವ ಚಿತ್ರ. ಕೇವಲ ಕನ್ನಡ ಮಾತ್ರವಲ್ಲದೇ ಭಾರತೀಯ ಚಿತ್ರರಂಗದಲ್ಲೇ ತನ್ನದೇ ಛಾಪು ಮೂಡಿಸಿದೆ.
ನಗರದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು, ಸೇಂಟ್ ಅಲೋಶಿಯಸ್ ಹಳೆಯ ವಿದ್ಯಾರ್ಥಿಗಳ ಸಂಘದ ಸಹಯೋಗದೊಂದಿಗೆ, 1974, 75 ಮತ್ತು 76 ಬ್ಯಾಚ್ಗಳ ಸುವರ್ಣ ಪುನರ್ಮಿಲನ ಮತ್ತು ಘಟಿಕೋತ್ಸವ ಸಮಾರಂಭವನ್ನು ಜನವರಿ 11, 2026 ರಂದು ರಾಬರ್ಟ್ ಸಿಕ್ವೇರಾ ಸಭಾಂಗಣದಲ್ಲಿ ಆಯೋಜಿಸಿತ್ತು.
ಪಟ್ಟಣದ ಹೊಸೂರು ದುಂದಾಸನಪುರ ರಸ್ತೆಯಲ್ಲಿರುವ ಸರ್ಕಾರಿ ಉಪಕರಣಗಾರ ಮತ್ತು ತರಭೇತಿ ಕೇಂದ್ರದಲ್ಲಿ ನಾಲ್ಕು ವರ್ಷದ ಡಿಪ್ಲೊಮಾ ಕೋರ್ಸ್ ಸಹಿತ ,ಅಲ್ಪಾವಧಿ ಮತ್ತು ಸರ್ಕಾರಿ ಪ್ರಾಯೋಜಿತ ಉಚಿತ ಅಲ್ಪಾವಧಿ ಕೋರ್ಸ್ಗಳು ಹಾಗೂ ಕೈಗಾರಿಕಾ ತರಬೇತಿ ಕೋರ್ಸ್ಗಳಿದ್ದು ಯುವ ಸಮುದಾಯ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಾಂಶುಪಾಲ ವಿನಯ್. ಎಸ್ . ಸಲಹೆ ನೀಡಿದರು.
ಕುಕಟ್ಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಜೀವ್ ಗಾಂಧಿ ನಗರದಲ್ಲಿರುವ ಗ್ಯಾಸ್ ರೀಫಿಲ್ಲಿಂಗ್ ಸೆಂಟರ್ನಲ್ಲಿ ಮಂಗಳವಾರ ಭಾರೀ ಅಗ್ನಿ ಅವಘಡದಿಂದ ಹಲವಾರು ಸ್ಫೋಟಗಳು ಸಂಭವಿಸಿವೆ.
ನಗರದ ಕೊಡಿಯಾಲಬೈಲ್ ಬಳಿ ಮಾದಕ ವಸ್ತು ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಇಬ್ಬರನ್ನು ಬರ್ಕೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಪ್ರಸಿದ್ಧ ಕೇರಳದ ಶಬರಿಮಲೆ ಯಲ್ಲಿ ಮಕರ ಜ್ಯೋತಿ ದರ್ಶನಕ್ಕೆ ಕ್ಷಣಗಣನೆ ಆರಂಭಗೊಂಡಿದೆ.
ಇರಾನ್ನಲ್ಲಿ ನಡೆದ ಪ್ರತಿಭಟನೆಗಳಲ್ಲಿ ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 2,000 ಜನರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ತಾಲ್ಲೂಕು ಕಛೇರಿಯಲ್ಲಿ ಅನಧಿಕೃತವಾಗಿ ಪ್ರತಿಭಟನೆ ನಡೆಸಿದವರ ವಿರುದ್ಧ ಸೂಕ್ತ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು.
ರಾಹುಲ್, ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ಮಂಡಕಳ್ಳಿ ವಿಮಾನ ನಿಲ್ದಾಣದ ರನ್ವೇ ನಲ್ಲಿ ಮಾತುಕತೆ ನಡೆಸಿದರು.
ಬಡ ರೈತರಿಗೆ ಸಾಗುವಳಿ ಪತ್ರವನ್ನು ತಾಲೂಕು ಆಡಳಿತ ನೀಡುತ್ತಿಲ್ಲ ಎಂದು ಆರೋಪಿಸಿ ರೈತ ಸಂಘ ಮತ್ತು ಹಸಿರು ಸೇನೆಯ ರೈತರು ನಂಜನಗೂಡಿನ ತಾಲ್ಲೂಕು ಕಛೇರಿಗೆ ಮುತ್ತಿಗೆ ಹಾಕಿ ನಿದ್ರಿಸುವ ಮೂಲಕ ಪ್ರತಿಭಟಿಸಿದರು.
ನಗರದ ಬೋಂದೆಲ್ ಬಳಿ ಖಾಸಗಿ ಬಸ್ ಪಾದಾಚಾರಿ ಮಹಿಳೆಗೆ ಢಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತಕ್ಕೆ ಅತಿವೇಗದ ಚಾಲನೆಯೇ ಕಾರಣ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ಧಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನಮಗೆ ಜೀವನದಲ್ಲಿ ಹಲವಾರು ಅವಕಾಶಗಳು ಸಿಗುತ್ತವೆ. ಅವುಗಳನ್ನು ನಾವು ಸದುಪಯೋಗಪಡಿಸಿಕೊಳ್ಳಬೇಕು. ಯುವತಿಯರು ತಮ್ಮ ವಿದ್ಯಾಭ್ಯಾಸವನ್ನು ಸಂಪೂರ್ಣಗೊಳಿಸಿದ ಬಳಿಕ ಉದ್ಯಮದ ಕಡೆಗೆ ಮುಖ ಮಾಡಬೇಕಾದ ಅಗತ್ಯವಿದೆ. ಮಹಿಳೆಯರಲ್ಲಿ ಅಂತರ್ಗತವಾದ ಕೌಶಲ್ಯವಿದೆ. ಅದನ್ನು ಸದುಪಯೋಗ ಪಡಿಸಿಕೊಳ್ಳುವ ಬಗ್ಗೆ ಪ್ರತಿಯೊಬ್ಬರು ಗಮನಹರಿಸಬೇಕು.