Showing 20 of 21649 articles • Page 210 of 1083
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಪ್ರತಿಷ್ಠಿತ ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ನಾದಸ್ವರ ಕಲಾವಿದ ವಿದ್ವಾನ್ ನಾಗೇಶ್ ಎ. ಬಪ್ಪನಾಡು ಅವರಿಗೆ ಮಂಗಳೂರಿನಲ್ಲಿ ಸನ್ಮಾನ ನಡೆಯಲಿದೆ.
ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೂ ಮಹತ್ವದ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು ರೂ.8 ಕೋಟಿ 69 ಲಕ್ಷ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ.
ಎಂಡೋಮೆಟ್ರಿಯೊಸಿಸ್ ಜಾಗೃತಿ ಮಾಸದ ಅಂಗವಾಗಿ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಎಂಡೋಮೆಟ್ರಿಯೊಸಿಸ್ ಸಮಸ್ಯೆಯಿಂದ ಬಳಲುತ್ತಿದ್ದ ಇಬ್ಬರು ಮಹಿಳೆಯರಿಗೆ ಅಪರೂಪದ ಮಿನಿಮಲ್ ಇನ್ವೇಸಿವ್ (ಲ್ಯಾಪರೋಸ್ಕೋಪಿಕ್) ಸಂತಾನೋತ್ಪತ್ತಿ ಸಾಮರ್ಥ್ಯ ಉಳಿಸುವ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಆರ್ಟ್ಸ್ ಆಂಡ್ ಹುಮಾನಿಟಿಸ್ ನ ಮಾಧ್ಯಮ ಅಧ್ಯಯನ ವಿಭಾಗವು “ಶೂಟಿಂಗ್ ಸ್ಟಾರ್ಸ್ 2026” ಎಂಬ ರಾಷ್ಟ್ರೀಯ ಮಾಧ್ಯಮ ವಿಚಾರ ಸಂಕಿರಣ ಮತ್ತು ಚಲನಚಿತ್ರೋತ್ಸವವನ್ನು ಮಾರ್ಚ್ 12, 2026ರಂದು ಯಶಸ್ವಿಯಾಗಿ ಆಯೋಜಿಸಿತು.
ಯುದ್ಧ ಸನ್ನಿವೇಶದ ಹಿನ್ನೆಲೆ ಅನಿಲ ಕೊರತೆ ಉಂಟಾಗುತ್ತದೆ ಎಂದು ಸಾರ್ವಜನಿಕರು ಏಕಕಾಲದಲ್ಲಿ ಅನಿಲ ಸಂಪರ್ಕಕ್ಕೆ ಬುಕ್ಕಿಂಗ್ ಮಾಡುತ್ತಿದ್ದು, ಇದರಿಂದ ಬುಕ್ಕಿಂಗ್ ಕ್ರ್ಯಾಷ್ ಆಗುತ್ತಿದೆ. ಸಾರ್ವಜನಿಕ ಆಸ್ಪತ್ರೆಗಳು, ವಸತಿ ನಿಲಯಗಳು, ಗೃಹಬಳಕೆ, ಅತೀ ಅವಶ್ಯಕ ವಸ್ತುಗಳನ್ನು ಉತ್ಪಾದಿಸುವ ಕೈಗಾರಿಕಾ ಘಟಕಗಳು, ಸೇರಿದಂತೆ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಆದ್ಯತೆಯ ಮೇಲೆ ಅನಿಲ ಪೂರೈಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.
ಶಿಕ್ಷಣ, ಆರೋಗ್ಯ ಸೇವೆ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರವಹಿಸಿರುವ ತುಂಬೆ ಗ್ರೂಪ್ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ತನ್ನ 29ನೇ ವರ್ಷದ ಪಯಣವನ್ನು ಸಂಭ್ರಮದಿಂದ ಆಚರಿಸಿದೆ. ಸುಮಾರು ಮೂರು ದಶಕಗಳ ಅವಧಿಯಲ್ಲಿ ಹಲವು ಕ್ಷೇತ್ರಗಳಲ್ಲಿ ಸಂಸ್ಥೆ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿ ಸಮಾಜದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದೆ.
ನೀರಿನ ಸಂಪ್ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.
ಕಾಲೇಜು ಮುಗಿಸಿ ಗೇಟ್ನಿಂದ ಹೊರಬರುತ್ತಿದ್ದಂತೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಎಂಬಿಬಿಎಸ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ಮುಂಭಾಗದಲ್ಲಿ ನಡೆದಿದೆ.
ಪಿವಿಎಸ್ ಸಂಸ್ಥೆಯ ಆಡಳಿತವನ್ನು ತಾನು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ ಎಂದು ಪಿವಿಎಸ್ ಗ್ರೂಪ್ನ ಅಧ್ಯಕ್ಷೆ ಹಾಗೂ ಆಡಳಿತ ನಿರ್ದೇಶಕಿ ಸರೋಜಿನಿ ಎಂ. ಕುಶೆ ಹೇಳಿದ್ದಾರೆ.
ಇರಾಕ್ನ ಬಸ್ರಾ ಬಳಿ ಅಮೆರಿಕ ಸ್ವಾಮ್ಯದ ಕಚ್ಚಾ ತೈಲ ಟ್ಯಾಂಕರ್ ಸಫೇಸಿಯಾ ವಿಷ್ಣು ಮೇಲೆ ಇರಾನ್ ಸೂಸೈಡ್ ಬೋಟ್ ದಾಳಿ ನಡೆಸಿದೆ.
ಸೂರ್ಯನ ಶಾಖ ಜೋರಾಗಿದ್ದು, ಮಾ. 15ರಿಂದ 17ರವರೆಗೆ ರಾಜ್ಯದ ವಿವಿಧೆಡೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
2026 ರ ಐಸಿಸಿ ಟಿ20 ವಿಶ್ವಕಪ್ ಗೆದ್ದ ನಂತರ ಸಂಭ್ರಮಾಚರಣೆ ವೇಳೆ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ವಕೀಲರೊಬ್ಬರು ಮುಂಬೈನಲ್ಲಿ ದೂರು ದಾಖಲಿಸಿದ್ದಾರೆ.
ಮಾ.30 ರಂದು ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವದ ಅಂಗವಾಗಿ ನಂಜನಗೂಡಿನಲ್ಲಿ ಗರಳಪುರಿ ಉತ್ಸವವನ್ನು ಇದೆ ಮೊಟ್ಟ ಮೊದಲ ಬಾರಿಗೆ ಆಯೋಜಿಸಲಾಗಿದೆ.
ಬ್ಯಾಂಕ್ ಗಳಲ್ಲಿ ಖಾತೆದಾರರು ಉಳಿತಾಯ ಖಾತೆ ತೆರೆದಿದ್ದಾರೆ. ಆದರೆ, ಉಳಿತಾಯ ಮಾಡುತ್ತಿಲ್ಲ, ಇದರಿಂದ ಅವರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ಹುಟ್ಟಿದ ಒಂದು ತಿಂಗಳ ಮಗುವಿಗೂ ಬ್ಯಾಂಕ್ ಖಾತೆ ತೆರೆಯಲಾಗುತ್ತಿದೆ ಎಂದು ತಗಡೂರು ಭಾರತೀಯ ಸ್ಟೇಟ್ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಕೆ.ಆರ್ ಶ್ಯಾಮ್ ಸುಂದರ್ ತಿಳಿಸಿದರು.
ಮನೆಯಲ್ಲಿ ಎಂಡಿಎಂಎ ದಾಸ್ತಾನು ಮಾಡಿದ್ದ ನಾಲ್ವರು ಆರೋಪಿಗಳ ಸಹಿತ ಲಕ್ಷಾಂತರ ದೂ ಮೌಲ್ಯದ ಮಾದಕ ವಸ್ತುಗಳನ್ನು ವಿಟ್ಲ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡ ಘಟನೆ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಬಂಧಿತರಿಂದ ರೂ 1,79,700/- ಅಂದಾಜು ಮೌಲ್ಯದ 17.97 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.
ಮಂಡ್ಯದಲ್ಲಿ ನಡೆದ ಅರ್ಚಕನ ನಿಗೂಢ ಕೊಲೆ ಪ್ರಕರಣವನ್ನ ಶ್ರೀರಂಗಪಟ್ಟಣ ಠಾಣಾ ಪೊಲೀಸರು ಭೇದಿಸಿದ್ದಾರೆ. ಪತ್ನಿಯ ಅನೈತಿಕ ಸಂಬಂಧವೇ ಅರ್ಚಕನ ಕೊಲೆಗೆ ಕಾರಣವಾಗಿದೆ. ಪ್ರಿಯಕರನ ಮೂಲಕ ಪತಿ ಅರ್ಚಕನನ್ನು ಪತ್ನಿ ಹತ್ಯೆ ಮಾಡಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ಮಂಗಳೂರು ಸಹಿತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎಷ್ಟು ಐ.ಟಿ/ಬಿ.ಟಿ ಕಂಪನಿಗಳು, ಸ್ಟಾರ್ಟ್ ಅಪ್ಗಳು ಆರಂಭಗೊಂಡಿವೆ ಎಷ್ಟು ಒಡಂಬಡಿಕೆ ಆಗಿವೆ? ಎಷ್ಟು ಬಂಡವಾಳ ಹೂಡಿಕೆ ಮಾಡಲಾಗಿದೆ? ಎಂದು ಶಾಸಕ ವೇದವ್ಯಾಸ ಕಾಮತ್ ರವರು ಬಜೆಟ್ ಅಧಿವೇಶನದಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಯವರನ್ನು ಪ್ರಶ್ನಿಸಿದರು.
ಭಾರತ ಟಿ20 ಕ್ರಿಕೆಟ್ ತಂಡದ ನಾಯಕನಾಗಿ ಹೆಸರು ಮಾಡಿದ, ಇದೀಗ ತಮ್ಮ ನಾಯಕತ್ವದಲ್ಲಿ ಚೊಚ್ಚಲ ವಿಶ್ವಕಪ್ ಸಾಧನೆ ಮಾಡಿರುವ ಸೂರ್ಯಕುಮಾರ್ ಯಾದವ್ ಅವರಿಗೆ ಉಡುಪಿ ಜಿಲ್ಲೆಯೊಂದಿಗೆ ವಿಶೇಷ ನಂಟಿದೆ. ಅವರ ಪತ್ನಿ ದೇವಿಶಾ ಶೆಟ್ಟಿ ಮೂಲತಃ ಉಡುಪಿ ಜಿಲ್ಲೆಯ ಕಾಪು ತಾಲೂಕಿನವರು. ಹಾಗಾಗಿ ಸೂರ್ಯಕುಮಾರ್ ಯಾದವ್ ಉಡುಪಿಯ ಅಳಿಯ.
ಸ್ಕೂಟಿಗೆ ಡಿಕ್ಕಿ ಹೊಡೆದ ಕಾರು ಚಾಲಕನೊಬ್ಬ ಸ್ಕೂಟಿ ಸವಾರನಿಗೆ ಹಲ್ಲೆ ನಡೆಸಿದ್ದಲ್ಲದೆ, ಸವಾರನ ಪತ್ನಿಯ ಮೇಲೂ ಹಲ್ಲೆ ನಡೆಸಿದ ಘಟನೆ ಉಡುಪಿಯ ಚಿತ್ತರಂಜನ್ ಸರ್ಕಲ್ ಬಳಿ ಇಂದು ಬೆಳಿಗ್ಗೆ ನಡೆದಿದೆ.
ಶಾಸ್ತ್ರೀಯ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ರೋಮಾಂಚಕ ಆಚರಣೆಯಲ್ಲಿ, ಶ್ರೀ ನಾರಾಯಣಿ ಸಂಗೀತ ಕಲಾ ಕೇಂದ್ರ (ಎಬಿಜಿಎಂವಿ ಮುಂಬೈಗೆ ಸಂಯೋಜಿತ) ಸಹಯೋಗದೊಂದಿಗೆ, ಮಂಗಳೂರಿನ ದಿ ಗೌಡ್ ಸಾರಸ್ವತ ಬ್ರಾಹ್ಮಣ ಸೇವಾ ಸಂಘವು ಅಸಾಧಾರಣ ಯುವ ಕಲಾವಿದರ ಸಭೆಯಾದ ವಸಂತ ಸಂಗೀತೋತ್ಸವವನ್ನು ಆಯೋಜಿಸಲು ಹೆಮ್ಮೆಪಡುತ್ತದೆ.