Showing 20 of 21651 articles • Page 213 of 1083
ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಏರಿಳಿತದ ನಡುವೆಯೂ ಭಾರತ 5000 ಟನ್ ಡೀಸೆಲ್ ರಫ್ತು ಮಾಡುತ್ತಿದೆ. ಡೀಸೆಲ್ ಪೈಪ್ಲೈನ್ ಮೂಲಕ ಬಾಂಗ್ಲಾದೇಶವನ್ನು ತಲುಪಿ ಪರ್ಬತಿಪುರ ಗಡಿಯ ಮೂಲಕ ಪ್ರವೇಶಿಸಲಿದೆ.
ಇರಾನ್-ಇಸ್ರೇಲ್ ಅಮೆರಿಕದ ನಡುವೆ ಯುದ್ಧದ ತೀವ್ರತೆಯ ಬಿಸಿ ಭಾರತಕ್ಕೂ ತಟ್ಟಿದೆ. ದಿನನಿತ್ಯ ವಸ್ತುಗಳ ಬೆಲೆಯೂ ಹೆಚ್ಚುತ್ತಿದೆ. ಇದೀಗ ಆಟೋ ಗ್ಯಾಸ್ ದರ ಏಕಾಏಕಿ ಏರಿಕೆಯಾಗಿರುವುದರಿಂದ ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
2026ರ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ಭಾರತೀಯ ತಂಡಕ್ಕೆ 131 ಕೋಟಿ ರೂಪಾಯಿ ನಗದು ಬಹುಮಾನವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘೋಷಿಸಿದೆ.
ವಾಣಿಜ್ಯ ಎಲ್ಪಿಜಿ ಪೂರೈಕೆಯಲ್ಲಿನ ಅಡಚಣೆಯಿಂದಾಗಿ ಮುಂಬೈನಲ್ಲಿ ಸುಮಾರು 20% ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು ಬಂದ್ ಆಗಿವೆ ಎಂದು ನಗರದ ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘ AHAR ತಿಳಿಸಿದೆ.
ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಕೇಂದ್ರ ಸರ್ಕಾರ ಅಡುಗೆ ಸಿಲಿಂಡರ್ ಮತ್ತು ವಾಣಿಜ್ಯ ಸಿಲಿಂಡರ್ ಗಳ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಇವತ್ತು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಜಿಲ್ಲಾ ಕಾಂಗ್ರೆಸ್ ಭವನದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಬ್ರಹ್ಮಗಿರಿ ಸರ್ಕಲ್ ಗೆ ಸಾಗಿದ ಕಾರ್ಯಕರ್ತರು ಅಲ್ಲಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.
ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಯೊಬ್ಬರನ್ನು ಆಯುಧದಿಂದ ಇರಿದು ಕೊಲೆ ಮಾಡಿರುವ ಘಟನೆ ಮಣಿಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಗಮನ ಬೇರೆಡೆ ಸೆಳೆದು ವೃದ್ದೆಯ 40 ಗ್ರಾಂ ಮಾಂಗಲ್ಯ ಸರ ಲಪಟಾಯಿಸಿದ ಘಟನೆ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದೂರು ಅರ್ಜಿಗೆ ಸ್ಪಂದಿಸದ ಲೋಕಾಯುಕ್ತ ಅಧಿಕಾರಿಗಳ ವಿರುದ್ದ RTI ಕಾರ್ಯಕರ್ತರೊಬ್ಬರು ಗಂಧದ ಕಟ್ಟಿ ಪ್ಯಾಕೆಟ್ ಗಳನ್ನ ರವಾನೆ ಮಾಡಿ ಪೂಜೆ ಸಲ್ಲಿಸುವಂತೆ ವ್ಯಂಗ್ಯ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ ) ಇತ್ತೀಚೆಗೆ 8ನೇ ತರಗತಿಗೆ ಪರಿಚಯಿಸಿದ್ದ ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕವನ್ನು ವಾಪಸ್ ಪಡೆದುಕೊಂಡು ಬಹಿರಂಗವಾಗಿ ಕ್ಷಮೆಯಾಚಿಸಿದೆ.
ಟ್ರಾನ್ಸ್ಫಾರ್ಮರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಆತಂಕ ಸೃಷ್ಡಿಯಾದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಬಳಿಯ ವಿಜಯಕಾಳಿ ಮಠದ ಬಳಿ ನಡೆದಿದೆ.
ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯದ ಕೆ.ಆರ್.ಪೇಟೆ ಪಟ್ಟಣದ ಲಕ್ಷ್ಮಿ ವೆಂಕಟೇಶ್ವರ ಬಡಾವಣೆಯಲ್ಲಿ ನಡೆದಿದೆ.
ಮರಳಗಾಲ ಗ್ರಾಮದ ಅರ್ಚಕ ಸಿದ್ದಲಿಂಗಪ್ಪ(46) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮರಳಗಾಲ ಗ್ರಾಮದ ನಾಲೆಯಲ್ಲಿ ಸಿದ್ದಲಿಂಗಪ್ಪ ಶವ ಪತ್ತೆಯಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದ ಬಳಿ ಘಟನೆ ನಡೆದಿದೆ
ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾಗೆ ಕೋರ್ಟ್ ಶಾಕ್ ಕೊಟ್ಟಿದೆ. ಪೋಕ್ಸೋ ಕೇಸ್ನಲ್ಲಿ ಆರೋಪಿಯಾಗಿರುವ ಮಲ್ಲಿಕಾರ್ಜುನ್ ಮುತ್ಯಾ ಜಾಮೀನು ಅರ್ಜಿ ತಿರಸ್ಕಾರಗೊಂಡಿದೆ. ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಆರೋಪ ಎದುರಿಸುತ್ತಿರುವ ಮಲ್ಲಿಕಾರ್ಜುನ್ ಮುತ್ಯಾ ವಿರುದ್ಧ ಯಾದಗಿರಿಯ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು.
ಮೈಸೂರು: ಮುಡಾ ಇದೀಗ ಎಂಡಿಎ ಹಗರಣಗಳು ಸಾಕಷ್ಟು ಬಯಲಿಗೆ ಬಂದಿದೆ. ಹಗರಣಗಳಿಂದ ಬೇಸತ್ತ ಸರ್ಕಾರ ಮುಡಾ ಗೆ ಮೇಜರ್ ಸರ್ಜರಿ ಮಾಡಿ ಮೈಸೂರು ಅಭಿವೃದ್ದಿ ಪ್ರಾಧಿಕಾರ ಎಂದು ಬದಲಿಸಿದೆ. ಹೀಗಿದ್ದರೂ ಇನ್ನೂ ಅಧಿಕಾರಿಗಳಾಗಲಿ ಕಾನೂನು ಶಾಖೆಯಾಗಲಿ ಎಚ್ಚೆತ್ತುಕೊಂಡಿಲ್ಲ. ಭ್ರಷ್ಟ ಅಧಿಕಾರಿಯ ಪರ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಸರ್ಕಾರದ ಕೆಂಗಣ್ಣಿಗೂ ಗುರಿಯಾಗಿದೆ. ಅಮಾನತಿನಲ್ಲಿರುವ ವಿಶೇಷ ತಹಸೀಲ್ದಾರ್ ಪರ ನಿಂತ ಪ್ರಾಧಿಕಾರಕ್ಕೆ ಸರ್ಕಾರ ಚಾಟಿ ಬೀಸಿ ಬಿಸಿ ಮುಟ್ಟಿಸಿದೆ. ಭ್ರಷ್ಟ ಅಧಿಕಾರಿ ನಡೆಸಿದ ಅಕ್ರಮದ ಬಗ್ಗೆ ದಾಖಲೆಗಳ ಸಮೇತ […]
ಬೇಸಿಗೆ ಬೆನ್ನಲ್ಲೇ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ನೀರಿನ ಕೊರತೆಗೆ ಅವಕಾಶ ನೀಡಬಾರದೆಂದು ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದರೂ ಅಭಾವ ಶುರುವಾಗಿದೆ. ಕೆ.ಆರ್.ನಗರ ಪುರಸಭೆ 6 ನೇ ವಾರ್ಡ್ ಅರ್ಕೇಶ್ವರ ನಗರದಲ್ಲಿ ಕಳೆದ 6 ತಿಂಗಳಿಂದ ನೀರಿನ ಸಮಸ್ಯೆಗೆ ಪರಿಹಾರ ದೊರೆತಿಲ್ಲ.
ಕಳೆದ 10 ದಿನಗಳ ಹಿಂದೆ ನಗರದ ಬೇಕರಿಯೊಂದರಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರನೊಬ್ಬನನ್ನು ನಂಜನಗೂಡು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.
ಅಂತಾರಾಷ್ಟ್ರೀಯ ಕಚ್ಚಾ ತೈಲ ದರ ಬ್ಯಾರೆಲ್ಗೆ 100 ಡಾಲರ್ ದಾಟಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಸದ್ಯಕ್ಕೆ ಹೆಚ್ಚಿಸಲಾಗುವುದಿಲ್ಲ ಎಂದು ಸರಕಾರಿ ಮೂಲಗಳು ಸೋಮವಾರ ತಿಳಿಸಿವೆ. ದೇಶಾದ್ಯಂತ ನಿರಂತರ ಇಂಧನ ಪೂರೈಕೆ ಮಾರ್ಗಗಳನ್ನು ನಿರ್ವಹಿಸಲು ಅಧಿಕಾರಿಗಳು ಪ್ರಯತ್ನಗಳನ್ನು ಹೆಚ್ಚಿಸಿದ್ದಾರೆ.
ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುವ ವಿಮಾನಗಳ ಸಂಚಾರ ಇನ್ನೂ ಸರಿಯಾಗಿಲ್ಲ. ಮಾರ್ಚ್ 9ರ ಸೋಮವಾರವೂ ಹಲವು ಅಂತರಾಷ್ಟ್ರೀಯ ವಿಮಾನಗಳ ಸೇವೆಯನ್ನು ರದ್ದುಪಡಿಸಿತ್ತು. ಇದರಿಂದ ದುಬೈ ಜೆದ್ದಾ ಮತ್ತು ದಮಾಮ್ಗೆ ಪ್ರಯಾಣಿಸುವ ಪ್ರಯಾಣಿಕರಿಗೆ ತೀವ್ರ ತೊಂದರೆ ಉಂಟಾಗಿದೆ.
ನವದೆಹಲಿ: ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟಲು ಎಲ್ಪಿಜಿ ಸಿಲಿಂಡರ್ ಕನಿಷ್ಠ ಬುಕ್ಕಿಂಗ್ ಅವಧಿಯನ್ನು 21 ರಿಂದ 25 ದಿನಗಳಿಗೆ ಹೆಚ್ಚಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ 55 ದಿನಗಳಲ್ಲಿ ಎಲ್ಪಿಜಿ ಸಿಲಿಂಡರ್ಗಳನ್ನು ಬುಕ್ ಮಾಡುತ್ತಿದ್ದ ಜನರು ಇರಾನ್ ಯುದ್ಧದ ಬಳಿಕ 15 ದಿನಗಳಲ್ಲಿ ಸಿಲಿಂಡರ್ಗಳನ್ನು ಬುಕ್ಕಿಂಗ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಎಲ್ಪಿಜಿ ಉತ್ಪಾದನೆಯನ್ನು ಹೆಚ್ಚಿಸಲು ಸಂಸ್ಕರಣಾಗಾರಗಳಿಗೆ ಸೂಚಿಸಿದ ಕೇಂದ್ರ ಸರ್ಕಾರ ವಾಣಿಜ್ಯ ಸಂಪರ್ಕಗಳಿಗಿಂತ […]