Showing 20 of 21651 articles • Page 214 of 1083
ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ, ದೇರಳಕಟ್ಟೆ, ಮಂಗಳೂರಿನಲ್ಲಿಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 9, 2026 ರಂದು ಯೆಂಡ್ಯೂರನ್ಸ್ ಸಭಾಂಗಣದಲ್ಲಿ ಜೆಂಡರ್ ಸೆನ್ಸಿಟೈಸೇಶನ್ ಸೆಲ್(ಲಿಂಗ ಸಂವೇದನಾ ಘಟಕ) ವತಿಯಿಂದ ಆಚರಿಸಲಾಯಿತು. ಈ ವರ್ಷದ ವಿಷಯ“ಗಿವ್ ಟು ಗೇನ್ (ಸಹಕಾರದಿಂದ ಅಭಿವೃದ್ಧಿ)” ಆಗಿತ್ತು.
2025-26ನೇ ಸಾಲಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಬಜೆಟ್ ಜಿಲ್ಲಾಧಿಕಾರಿ, ಮೂಡ ಅಧ್ಯಕ್ಷ ಲಕ್ಷ್ಮಿಕಾಂತ ರೆಡ್ಡಿ ನೇತೃತ್ವದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ಮಂಡನೆ ಮಾಡಲಾಯಿತು.
ವಾತ್ಸಲ್ಯ ಯೋಜನೆಯಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಲ್ಲಿ ನಿರ್ಗತಿಕ ಮಹಿಳೆಗೆ ಸೂರು ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ .
ಒಡಿಶಾದ ಪುರಿ ಜಗನ್ನಾಥ ದೇವಾಲಯದ ಪವಿತ್ರ ‘ಪತಿತಪಾವನ ಬಾನಾ’ (ಧ್ವಜ) ಮತ್ತು ನೀಲಚಕ್ರದ ಮೇಲೆ ಹದ್ದೊಂದು ಕುಳಿತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಎಸ್ಟೇಟ್ ವೊಂದರಲ್ಲಿ ಮರ ಕಟಾವು ಮಾಡುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ನೆರಡಿ ಗ್ರಾಮದಲ್ಲಿ ನಡೆದಿದೆ.
8 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳದ ರಾಶಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾದ ಘಟನೆ ಹಾವೇರಿ ತಾಲೂಕಿನ ಕಾಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
‘ತುಳಸಿ’ ಎಲೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಒತ್ತಡವನ್ನು ಕಡಿಮೆ ಮಾಡುವ ಗುಣ ಹೊಂದಿರುವ ತುಳಸಿ, ದೇಹದ ಚಯಾಪಚಯ ಕ್ರಿಯೆಗಳ ಮೇಲೂ ಸಕಾರಾತ್ಮಕ ಪರಿಣಾಮ ಬೀರುತ್ತದೆ.
ನಕಲಿ ದಾಖಲೆಗಳ ಜೊತೆಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಬೈಕ್ ಅನ್ನು ಚಲಾಯಿಸುತ್ತಿದ್ದ ಸವಾರನನ್ನು ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪತ್ತೆ ಹಚ್ಚಿದ್ದು, ಹೆಚ್ಚಿನ ತನಿಖೆಗಾಗಿ ಈ ಪ್ರಕರಣವನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.
ಇಸ್ರೇಲ್, ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ಇಂದು 10ನೇ ದಿನಕ್ಕೆ ಕಾಲಿಟ್ಟಿದೆ. ಇಸ್ರೇಲ್ ನ ಸೇನಾಪಡೆ ಇರಾನ್ ನ ಪ್ರಮುಖ ಸ್ಥಳಗಳನ್ನು ಗುರಿಯಾಗಿರಿಸಿಕೊಂಡು ವೈಮಾನಿಕ ಸೇರಿದಂತೆ ಪ್ರಬಲ ಕ್ಷಿಪಣಿ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಇರಾನ್ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿರಿಸಿಕೊಂಡು ಮಿಸೈಲ್ಸ್ ಮತ್ತು ಡ್ರೋನ್ ದಾಳಿ ನಡೆಸಿತ್ತು.
ರಾಜಧಾನಿ ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅನಾಹುತ ಸಂಭವಿಸಿದ್ದು, ಸ್ಕ್ರಾಪ್ ಗೋದಾಮಿಗೆ ಬೆಂಕಿ ಬಿದ್ದ ಘಟನೆ ಚಿಕ್ಕಪೇಟೆಯಲ್ಲಿ ನಡೆದಿದ್ದು, ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದಾಗಿ ಇಡೀ ಗೋದಾಮು ಸಂಪೂರ್ಣ ಸುಟ್ಟು ಕರಕಲಾಗಿದೆ.
ಹಾಡಹಗಲೇ ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಳೆಗುಂಡಿ ಗಿರಿಜನ ಹಾಡಿಯಲ್ಲಿ ನಡೆದಿದೆ.
ಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಪ್ರತಿಭಟಿಸಿ ಕಣಿವೆಯಲ್ಲಿ ಕಳೆದ ಒಂದು ವಾರದಿಂದ ಹೇರಲಾಗಿದ್ದ ಬಂದ್ ಅಂತ್ಯಗೊಂಡಿದೆ. ಸೋಮವಾರದಿಂದ ಕಾಶ್ಮೀರದಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳು ಅಧಿಕೃತವಾಗಿ ಆರಂಭಗೊಂಡಿದೆ.
ಗೋಕರ್ಣದ ಸುತ್ತಮುತ್ತ ಅಕ್ರಮ ರೆಸಾರ್ಟ್ ಹಾವಳಿ ಹೆಚ್ಚಾಗಿದೆ. ಉತ್ತರ ಕನ್ನಡದ ಗೋಕರ್ಣ ಸಮೀಪ ದುಬ್ಬನಸಶಿ ಗ್ರಾಮದಲ್ಲಿ ಕರಾವಳಿ ನಿಯಂತ್ರಣ ವಲಯ ರೂಲ್ಸ್ ಉಲ್ಲಂಘಿಸಿದ 44 ಅನಧಿಕೃತ ರೆಸಾರ್ಟ್ಗಳನ್ನು ತೆರವುಗೊಳಿಸಲು ಕುಮಟಾ ತಹಶೀಲ್ದಾರ್ ಆದೇಶಿಸಿದ್ದಾರೆ.
ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಉಲ್ಬಣಗೊಂಡಿದ್ದು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧವು 11ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮವಾಗಿ ಕಚ್ಚಾ ತೈಲ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ.
ಡಾರ್ಲಿಂಗ್ ಕೃಷ್ಣ ನಿರ್ದೇಶನ ಮಾಡಿ ನಟಿಸಿರುವ ಚಿತ್ರ ಲವ್ ಮಾಕ್ಟೇಲ್ 3 ಮಾರ್ಚ್ 19ರಂದು ಬಿಡುಗಡೆಗೊಳ್ಳಲಿರುವ ಈ ಚಿತ್ರದ ಟ್ರೈಲರ್ ಇದೀಗ ಬಿಡುಗಡೆಗೊಂಡಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಮೌಲಾನಾ ಅಬ್ದುಲ್ಲಾ ಸಲೀಂ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಈ ಸಂಬಂಧ 83 ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದ್ದು, ಹಿಂದೂ ಸಂಘಟನೆಗಳು ತಕ್ಷಣದ ಬಂಧನಕ್ಕೆ ಆಗ್ರಹಿಸಿವೆ.
ʼಅಪ್ಪು ಉತ್ಸವʼ ಇದು ನಿಮ್ಮ ವಾಹಿನಿ ಕಲಾ ವೇದಿಕೆ (ರಿ) ವತಿಯಿಂದ ಆಯೋಜಿಸಲಾಗಿದ್ದು, ರಾಯಭಾರಿಯಾಗಿ ನೆನಪಿರಲಿ ಪ್ರೇಮ್ ಆಯ್ಕೆಯಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರೇಮ್ ಮಾತನಾಡಿ 21ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮದಲ್ಲಿ ಭರತನಾಟ್ಯ ಕಲಾವಿದರಿಗೆ ಸಾಧಕರಿಗೆ ಸನ್ಮಾನ ಮಾಡುತ್ತಿರುವುದು ಖುಷಿ ತಂದಿದೆ ಎಂದು ತಿಳಿಸಿದರು. ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಕೆ.ವಿ. ಭಾಗವಹಿಸಿದ್ದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಉದ್ಯೋಗ ಆಕಾಂಕ್ಷಿಗಳನ್ನು ವಂಚಿಸಿದ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ಇಬ್ಬರು ವ್ಯಕ್ತಿಗಳ ವಿರುದ್ಧ FIR ದಾಖಲಿಸಿದ್ದಾರೆ.
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಾಸ್ ಆಗಿದ್ದಕ್ಕೆ ಮನನೊಂದು ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಹೆಬ್ಬಾಳದಲ್ಲಿ ನಡೆದಿದೆ.
ಮಾದಕ ವಸ್ತು ಅಕ್ರಮ ಸಾಗಾಟಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಶಿರ್ವ ಪೊಲೀಸರು ಪಾದೂರು ಗ್ರಾಮದ ಚಂದ್ರನಗರ ಜನತಾ ಕಾಲೋನಿ ಎಂಬಲ್ಲಿ ಬಂಧಿಸಿದ್ದಾರೆ.