Showing 20 of 21651 articles • Page 215 of 1083
ಎಂಸಿಸಿ ಬ್ಯಾಂಕ್ – ಬೈಂದೂರು ಶಾಖೆಯು ಪ್ರಾರಂಭವಾದ ಕೇವಲ ಆರು ತಿಂಗಳೊಳಗೆ ರೂ.10 ಕೋಟಿ ವ್ಯವಹಾರ ವಹಿವಾಟು ದಾಟಿದ ಗಮನಾರ್ಹ ಸಾಧನೆಯ ಸ್ಮರಣಾರ್ಥವಾಗಿ, ಮಾರ್ಚ್ 8, 2026 ರಂದು ಬೈಂದೂರು ಶಾಖೆಯ ಆವರಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಉಚಿತ ವೈದ್ಯಕೀಯ ಆರೋಗ್ಯ ಶಿಬಿರದೊಂದಿಗೆ ಭವ್ಯ ಆಚರಣೆಯನ್ನು ಆಯೋಜಿಸಲಾಗಿತ್ತು.
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಅನಿಶ್ಚಿತತೆಯ ವಾತಾವರಣ ಮುಂದುವರೆದಿರುವ ಹಿನ್ನೆಲೆಯಲ್ಲಿ ಮಂಗಳೂರು – ಜಿದ್ದಾ, ಮಂಗಳೂರು- ದುಬೈ ವಿಮಾನಗಳ ಮಾ.9ರ ಯಾನ ರದ್ದಾಗಿದೆ.
ನಗರದ ಸಮೀಪದ 34 ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ (56) ಎಂಬವರು ಸಾವನ್ನಪ್ಪಿದ ಘಟನೆ ರವಿವಾರ ಸಂಭವಿಸಿದೆ.
ಸಮಾಜದಲ್ಲಿ ಕಷ್ಟದಲ್ಲಿರುವ ವ್ಯಕ್ತಿಗಳ ನೋವಿಗೆ ದನಿಯಾದವರ ಕಷ್ಟಕ್ಕೆ ಸ್ಪಂದನೆ ತೋರುವುದು ಮಾನವೀಯತೆಯಾಗಿದೆ. ಅಂತಹ ಮಾನವೀಯ ಸೇವೆಯನ್ನು ದೇವರು ಕೂಡ ಮೆಚ್ಚುತ್ತಾರೆ ಎಂದು ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರುಗಳಾದ ವಂ|ಡೆನಿಸ್ ಡೆಸಾ ಹೇಳಿದರು.
ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಭಾನುವಾರ ಡ್ರೆಸ್ಸಿಂಗ್ ರೂಮ್ನಲ್ಲಿರುವ ಜನರಿಗೆ ಮಾತ್ರ ಜವಾಬ್ದಾರನಾಗಿರುತ್ತೇನೆ ಎಂದು ಹೇಳಿದ್ದಾರೆ ಮತ್ತು ಭಾರತದ ಯಶಸ್ವಿ ಟಿ20 ವಿಶ್ವಕಪ್ ಟೈಲ್ ಡಿಫೆನ್ಸ್ ಅನ್ನು ದಿಗ್ಗಜರಾದ ರಾಹುಲ್ ದ್ರಾವಿಡ್ ಮತ್ತು ವಿವಿಎಸ್ ಲಕ್ಷ್ಮಣ್ಗೆ ಅರ್ಪಿಸಿದ್ದಾರೆ.
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಝಿಲೆಂಡ್ ಸೋಲಿಸಿ ಮೂರನೇ ಬಾರಿಗೆ ಟಿ20 ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ.
ಕ್ರೈಸ್ತ ವಂಶಾವಳಿ ತಿಳಿಯಲು ಚರ್ಚ್ ದಾಖಲೆ ನೋಡಿದರೆ ಸಾಕು ಆದರೆ ಅದೊಂದು ಕುತೂಹಲ ತಣಿಸುವ ಕೆಲಸ ಬಿಟ್ಟರೆ ಬೇರೆ ಹೆಚ್ಚಿನ ಉಪಯೋಗ ಕಾಣಿಸುವುದಿಲ್ಲ, ಎಂದು ವಂಶಾವಳಿಗಳು ಹುಡುಕಿ ಹತ್ತುಸಾವಿರ ಪುಟಗಳ ಪುಸ್ತಕ ಬರೆದು ಪ್ರಕಟ ಮಾಡಿದ ಮತ್ತು ಅದಕ್ಕಾಗಿ ವಿದೇಶಿ ವಿಶ್ವವಿದ್ಯಾಲಯ ಡಾಕ್ಟರೇಟ್ ಪಡೆದ ವಂಶಾವಳಿ ತಜ್ಞ ಡಾ ಮೈಕಲ್ ಲೋಬೊ ಹೇಳಿದರು.
ನಗರದ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದ ಸಮೀಪವಿರುವ ಹೆಜ್ಜಿಗೆ ಗ್ರಾಮದ ಬಳಿಯ ಕಪಿಲಾ ನದಿ ತೀರದಲ್ಲಿ ದಶಕಗಳಿಂದ ಬೆಳೆದ ನಿಂತಿದ್ದ ಬೃಹತ್ ಮರಗಳನ್ನು ಕಡಿದು ಹಾಕುತ್ತಿದ್ದರೂ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದು, ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ನವಮಂಗಳೂರು ಬಂದರು ಪ್ರಾಧಿಕಾರವು ಇಂದು ಪ್ರಸ್ತುತ ಕ್ರೂಸ್ ಋತುವಿನ ಮೂರನೇ ಕ್ರೂಸ್ ಹಡಗು ಎಂಎಸ್ ಸಿರೆನಾವನ್ನು ಸ್ವಾಗತಿಸಿತು, ಇದು ಈ ಪ್ರದೇಶದಲ್ಲಿ ಕ್ರೂಸ್ ಪ್ರವಾಸೋದ್ಯಮವನ್ನು ಉತ್ತೇಜಿಸುವಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಗುರುತಿಸಿದೆ.
ನಗರದ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಲಾಡ್ಜ್ಗಳಲ್ಲಿ ಕಳವು ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು ₹32.86 ಲಕ್ಷ ಮೌಲ್ಯದ ವಿವಿಧ ಸ್ವತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
‘ಶರಣಾಗದಿದ್ದರೆ ಇರಾನ್ ಮೇಲಿನ ಸೇನಾ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸುತ್ತೇವೆ. ಇದರ ಪರಿಣಾಮ ಘೋರವಾಗಿರುತ್ತದೆ. ಇರಾನ್ನ ಹೊಸ ನೆಲೆಗಳನ್ನು ಕೇಂದ್ರೀಕರಿಸಿ ದಾಳಿ ನಡೆಯಲಿದೆ’ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಗುಡುಗಿದ್ದಾರೆ.
ಇರಾನ್–ಇಸ್ರೇಲ್ ಸಂಘರ್ಷ ಹಿನ್ನಲೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರ ವ್ಯತ್ಯಯವಾಗಿದ್ದು, 24 ವಿಮಾನಗಳ ಹಾರಾಟ ರದ್ದಾಗಿದೆ.
ಆರೋಗ್ಯ ಇಲಾಖೆ ನೌಕರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ಮುಂಜಾನೆ ನಡೆದಿದೆ.
ದಕ್ಷಿಣ ಟೆಹ್ರಾನ್ನಲ್ಲಿರುವ ಇರಾನ್ನ ತೈಲ ಸಂಗ್ರಹಣಾ ವ್ಯವಸ್ಥೆ ಗುರಿಯಾಗಿಸಿಕೊಂಡು ಅಮೆರಿಕ ದಾಳಿ ಮಾಡಿದೆ.
ಕೂಡಿಬೈಲು ಕಂಬಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾಜಿ ಸಚಿವ ಬಿ. ರಮಾನಾಥ್ ರೈ ಅವರ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ವಿಶೇಷವಾಗಿ ಶ್ಲಾಘಿಸಿದರು.
ಮಧ್ಯಪ್ರಾಚ್ಯ ಪ್ರದೇಶದಲ್ಲಿ, ವಿಶೇಷವಾಗಿ ಇರಾನ್ ಹಾಗೂ ನೆರೆಯ ರಾಷ್ಟ್ರಗಳನ್ನು ಒಳಗೊಂಡ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಬಿಷಪರ ಮಂಡಳಿ ನೀಡದಂತೆ ಉಡುಪಿ ಧರ್ಮಪ್ರಾಂತ್ಯದ ಎಲ್ಲಾ ಚರ್ಚುಗಳಲ್ಲಿ ಭಾನುವಾರ ಶಾಂತಿಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.
ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ ರಾವ್(55)ಅಲ್ಪ ಕಾಲದ ಅನಾರೋಗ್ಯದಿಂದ ಮಾ.7 ರಂದು ರಾತ್ರಿ ನಿಧನ ಹೊಂದಿದರು.
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲವೇ ಕ್ಷಣಗಳಲ್ಲಿ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
9ನೇ ತರಗತಿ ವಿದ್ಯಾರ್ಥಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ಇತರ ವಿದ್ಯಾರ್ಥಿಗಳು ಮತ್ತು ವಾರ್ಡನ್ ಮೇಲೆ ರಾಡ್ನಿಂದ ಹಲ್ಲೆ ನಡೆಸಿರುವ ಘಟನೆ ಬಳ್ಳಾರಿಯ ಗುರುಕುಲ ವಸತಿ ಶಾಲೆಯಲ್ಲಿ ನಡೆದಿದೆ. ಭೀಕರ ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದು ವ್ಯಕ್ತಿಯೊಬ್ಬ ತನ್ನ ಪ್ರೇಯಸಿ ಹಾಗೂ ಆಕೆಯ ತಂದೆ ಮತ್ತು ತಾಯಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ತರಬನಹಳ್ಳಿಯಲ್ಲಿ ನಡೆದಿದೆ.