Showing 20 of 21651 articles • Page 217 of 1083
ಕೊಟ್ಟಾರ ಚೌಕಿ ಬಳಿ ರಸ್ತೆ ಬದಿಯಲ್ಲಿ ಗಾಂಜಾ ಬೆರೆಸಿದ ಸಿಗರೇಟು ಸೇದುತ್ತಿದ್ದ ಆರೋಪದಡಿ ಕೊಡಿಯಾಲಬೈಲು ನಿವಾಸಿ ರೋಶನ್ ಎಂಬಾತನನ್ನು ಉರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಕ್ರಮ ಬಾಂಗ್ಲಾವಲಸಿಗರು ಹಾಗೂ ವೀಸಾ ಅವಧಿ ಮುಕ್ತಾಯಗೊಂಡವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುತ್ತಿರುವ ನಗರ ಪೊಲೀಸರು, ಮಾ.6ರಂದು 124 ಮಂದಿ ಅಕ್ರಮ ಬಾಂಗ್ಲಾವಲಸಿಗರನ್ನು ಬಂಧಿಸಿದ್ದಾರೆ.
ಉತ್ತರ ಕೋಲ್ಕತ್ತಾದ ಪೈಕ್ಪಾರಾದ ಪಾಳುಬಿದ್ದ ಕ್ಲಬ್ನ ಬೀಗ ಹಾಕಿದ ಕೋಣೆಯೊಳಗೆ ಕಚ್ಚಾ ಬಾಂಬ್ಗಳು ಶನಿವಾರ ಮುಂಜಾನೆ ಸ್ಫೋಟಗೊಂಡ ನಂತರ ಭೀತಿ ಆವರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಮುಂಜಾನೆ ಇರಾನ್ ರಾಜಧಾನಿಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯ ನಂತರ ಇದೀಗ ಟೆಹ್ರಾನ್ನ ಮೆಹ್ರಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ದೊಡ್ಡ ಸ್ಫೋಟಗಳು ಮತ್ತು ಬೆಂಕಿ ಕಾಣಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಟೊಮೆಟೊ ಬೆಲೆ ತೀವ್ರವಾಗಿ ಕುಸಿದಿದ್ದು, ಪಟ್ಟ ಶ್ರಮಕ್ಕೆ ಸೂಕ್ತ ಬೆಲೆ ಸಿಗದೆ ರೈತರು ಕಂಗಾಲಾಗಿದ್ದಾರೆ.
ಇಸ್ರೇಲ್ ಮತ್ತು ಅಮೆರಿಕದೊಂದಿಗಿನ ಯುದ್ಧದ ಸಮಯದಲ್ಲಿ ನೆರೆಯ ರಾಷ್ಟ್ರಗಳ ಮೇಲೆ ನಡೆಸಿದ ದಾಳಿಗಳಿಗೆ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಕ್ಷಮೆಯಾಚಿಸಿದ್ದಾರೆ.
ಇರಾನ್ ಮತ್ತು ಇಸ್ರೇಲ್ ನಡುವಿನ ಉಲ್ಬಣಗೊಳ್ಳುತ್ತಿರುವ ಸಂಘರ್ಷಕ್ಕೆ ಸಂಬಂಧಿಸಿದ ಪಶ್ಚಿಮ ಏಷ್ಯಾದ ವಾಯುಪ್ರದೇಶದಲ್ಲಿ ನಡೆಯುತ್ತಿರುವ ಅಡೆತಡೆಗಳನ್ನು ಉಲ್ಲೇಖಿಸಿ ಮಾರ್ಚ್ 7 ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತನ್ನ ಎಲ್ಲಾ ನಿಗದಿತ ಅಂತರರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ.
ಬೆಂಗಳೂರಿನ ದಿವ್ಯ ಚೇತನ ಚಾರಿಟೇಬಲ್ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಜಂಟಿ ಆಶ್ರಯದಲ್ಲಿ ನಡೆಯುವ 2026 ನೇ ಸಾಲಿನ ಪ್ರತಿಷ್ಠಿತ ʼಸಮಾಜ ಸೇವಾ ರತ್ನʼ ಪ್ರಶಸ್ತಿಗೆ ಸಾಹಿತ್ಯ, ಪತ್ರಿಕೋದ್ಯಮ, ಸಮಾಜ ಸೇವೆಗಾಗಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆಯಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಮಾರ್ಚ್ 11ರಂದು ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಆಂಧ್ರಪ್ರದೇಶ ಸರ್ಕಾರ 13 ವರ್ಷದ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಿಸಿ ಘೋಷಣೆ ಮಾಡಿದೆ.
ಆದಿತ್ಯ ಧರ್ ನಿರ್ದೇಶನ, ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ ಸಿನಿಮಾದ ಟ್ರೇಲರ್ ಇಂದು (ಮಾರ್ಚ್ 7) ಬಿಡುಗಡೆಯಾಗಿದೆ. ಟ್ರೇಲರ್ ಬಿಡುಗಡೆ ಬಗ್ಗೆ ನಟ ರಣವೀರ್ ಸಿಂಗ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಮಾರ್ಚ್ 19ರಂದು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ
ಮಲ್ಪೆ ಬಂದರಿನ ದಕ್ಕೆಯ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ವರುಣನ ಸಿಂಚನದ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಸ್ಯಾಂಡಲ್ವುಡ್ನ ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಹಾಗೂ ಸಂಕಲನಕಾರ ನರಹಳ್ಳಿ ಜ್ಞಾನೇಶ್ (48) ಅವರು ಶುಕ್ರವಾರ ಹೃದಯಾಘಾತದಿಂದ ಹಠಾತ್ ನಿಧನರಾಗಿದ್ದಾರೆ.
ಬೆದರಿಕೆ ಹಾಗೂ ನಿಂದನೆ ಆರೋಪದಡಿ ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ವಿರುದ್ಧ ಕೆ.ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ದೇಶೀಯ ಮತ್ತು ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಗಳನ್ನು ಹೆಚ್ಚಿಸಲಾಗಿದ್ದು, ಇಂದಿನಿಂದ ಜಾರಿಗೆ ಬರಲಿದೆ. ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಹೆಚ್ಚುತ್ತಿರುವ ಇಂಧನ ವೆಚ್ಚಗಳ ಮಧ್ಯೆ ಇದು ಬಂದಿದೆ.
ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಮಾಧ್ಯಮಗಳ ವರ್ತನೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು, ಸುದ್ದಿ ದೂರದರ್ಶನ ವಾಹಿನಿಗಳಿಗೆ ಟೆಲಿವಿಷನ್ ರೇಟಿಂಗ್ ಪಾಯಿಂಟ್ಗಳ (ಟಿಆರ್ಪಿ) ಪ್ರಕಟಣೆಯನ್ನು ನಾಲ್ಕು ವಾರಗಳ ಅವಧಿಗೆ ಸ್ಥಗಿತಗೊಳಿಸುವಂತೆ ಪ್ರಸಾರ ಪ್ರೇಕ್ಷಕರ ಸಂಶೋಧನಾ ಮಂಡಳಿ (ಬಿಎಆರ್ಸಿ)ಗೆ ನಿರ್ದೇಶನ ನೀಡಿದೆ.
ವಿಶ್ವ ಶ್ರವಣ ದಿನದ ಸಂದರ್ಭದಲ್ಲಿ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶ್ರವಣ ಮತ್ತು ವಾಕ್ ಭಾಷಾ ರೋಗಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಕಿವಿ ಮೂಗು ಮತ್ತು ಗಂಟಲು ಚಿಕಿತ್ಸಾ ವಿಭಾಗವು 4ನೇ ಮಾರ್ಚ್ 2026 ರಂದು ಆಸ್ಪತ್ರೆಯ ಆವರಣದಲ್ಲಿ ವಿಶ್ವ ಶ್ರವಣ ದಿನವನ್ನು ಆಚರಿಸಿತು.
ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದು ತುಂಬಾನೇ ಉತ್ತಮ. ಎಳನೀರಿನಲ್ಲಿ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ನಂತಹ ನೈಸರ್ಗಿಕ ಎಲೆಕ್ಟ್ರೋಲೈಟ್ಗಳಿರುವುದರಿಂದ ಇದು ದೇಹವನ್ನು ತ್ವರಿತವಾಗಿ ರೀಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ. ಬೆಳಿಗ್ಗೆ ಎದುರಾಗುವ ಆಯಾಸ ಮತ್ತು ಬಾಯಿ ಒಣಗುವಿಕೆಯನ್ನು ಇದು ಪರಿಣಾಮಕಾರಿಯಾಗಿ ಕಡಿಮೆ ಮಾಡುತ್ತದೆ.
ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಖದೀಮರನ್ನು ಕವಲಂದೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳವು ಮಾಡಿದ್ದ 2.28 ಲಕ್ಷ ನಗದು ಹಾಗೂ 22 ಗ್ರಾಂ ಚಿನ್ನದ ಒಡವೆಗಳನ್ನು ವಶಪಡಿಸಿಕೊಂಡಿದ್ದಾರೆ.
ಸುರಕ್ಷತಾ ಪರಿಕರಗಳನ್ನ ಧರಿಸದೆ ಪೌರಕಾರ್ಮಿಕರು ಸ್ವಚ್ಛತಾ ಕಾರ್ಯ ಮಾಡುವಂತಿಲ್ಲ. ಪೌರಕಾರ್ಮಿಕರ ಸುರಕ್ಷತೆಗಾಗಿ ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನ ಜಾರಿಗೊಳಿಸಿದೆ. ಆದ್ರೆ ನಂಜನಗೂಡಿನಲ್ಲಿ ಪೌರಕಾರ್ಮಿಕರಿಗೆ ಇರುವ ಸುರಕ್ಷತಾ ಕ್ರಮ ಮಾಯವಾಗಿದೆ.