Showing 20 of 21651 articles • Page 218 of 1083
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ಹೇರುವ ಕುರಿತು ರಾಜ್ಯ ಸರ್ಕಾರ ಡಿಜಿಟಲ್ ಪಾಲಿಸಿ ರೂಪಿಸಲು ಮುಂದಾಗಿರುವುದು ಸ್ವಾಗತಾರ್ಹ ಕ್ರಮ ಎಂದು ಖ್ಯಾತ ಮನೋವೈದ್ಯ ಡಾ. ಪಿ.ವಿ. ಭಂಡಾರಿ ಹೇಳಿದ್ದಾರೆ.
ಮಂಗಳೂರು: ಯೆನೆಪೊಯ ದಂತ ಮಹಾವಿದ್ಯಾಲಯದಲ್ಲಿ ಭಾರತೀಯ ದಂತ ವೈದ್ಯರ ಸಂಘ – ದಕ್ಷಿಣ ಕನ್ನಡ ಶಾಖೆಯ ಸಹಯೋಗದಲ್ಲಿ ರಸ್ತೆ ಸುರಕ್ಷತ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಉದ್ದೇಶ ಜವಾಬ್ದಾರಿಯುತ ರಸ್ತೆ ವರ್ತನೆ ಮತ್ತು ಸಂಚಾರ ಸುರಕ್ಷತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದಾಗಿತ್ತು. ಎಸಿಪಿ ಶ್ರೀಮತಿ ನಜ್ಮಾ ಫಾರೂಖಿ, ಟ್ರಾಫಿಕ್ ಉಪವಿಭಾಗ, ಮಂಗಳೂರುನಗರ, ಮುಖ್ಯ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಮ್ಮ ಭಾಷಣದಲ್ಲಿ ಅವರು ರಸ್ತೆ ಅಪಘಾತಗಳ ಹೆಚ್ಚುತ್ತಿರುವ ಸಮಸ್ಯೆಯನ್ನು ಉಲ್ಲೇಖಿಸಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ […]
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ವೈಭವ 2026ರ ಲಾಂಛನವನ್ನು ಶಾಸಕ ಯಶ್ಪಾಲ್ ಸುವರ್ಣ ದೇವಸ್ಥಾನದಲ್ಲಿ ಅನಾವರಣಗೊಳಿಸಿದರು.
ಕಾರ್ಕಳ ತಾಲೂಕಿನ ಸಾಣೂರು ಸೇಣರಬೆಟ್ಟು ಕೋಟಿಚೆನ್ನಯ ಜೋಡುಕರೆ ಕಂಬಳ ಸಮಿತಿಯ ಆಶ್ರಯದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ “ಕೋಟಿಚೆನ್ನಯ ಜೋಡುಕರೆ ಕಂಬಳ”ದ ನೂತನ ಕಂಬಳ ಕರೆ ನಿರ್ಮಾಣದ ಭೂಮಿಪೂಜೆ ಗುರುವಾರ ಸಾಣೂರು ಸೇಣರಬೆಟ್ಟು ಎಂಬಲ್ಲಿ ನಡೆಯಿತು.
ವಾರಾಹಿ ನದಿಯನ್ನು ಅವಲಂಬಿಸಿರುವ ರೈತರ ಹಕ್ಕುಗಳಿಗೆ ಆದ್ಯತೆ ನೀಡಬೇಕು. ವಾರಾಹಿ ಮೂಲ ಯೋಜನೆಯಂತೆ ನೀರಿನ ಹಂಚಿಕೆಯನ್ನು ಖಚಿತಪಡಿಸಬೇಕು ಎನ್ನುವ ಬೇಡಿಕೆ ಸೇರಿದಂತೆ ಒಟ್ಟು ಏಳು ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಕಂಡ್ಲೂರಿನಿಂದ ಸಿದ್ಧಾಪುರದವರೆಗೆ ಎರಡು ದಿನಗಳ ಕಾಲ ‘ನೀರಿಗಾಗಿ ನಮ್ಮ ನಡಿಗೆ’ ಪಾದಯಾತ್ರೆ ನಡೆಯಿತು.
ಯುಗಪುರುಷ, ಎಲ್ಲಾ ಯುಗಗಳ ಋಷಿ ಪೂಜ್ಯ ಗುರುದೇವ್ ಸ್ವಾಮಿ ಚಿನ್ಮಯಾನಂದ ಅವರ ನೇತೃತ್ವದಲ್ಲಿ, ಚಿನ್ಮಯ ಚಳುವಳಿಯು ಜಗತ್ತನ್ನು ವೇದಾಂತದ ಕಾಲಾತೀತ ಬೆಳಕಿಗೆ ಜಾಗೃತಗೊಳಿಸಿತು.
ಇರಾನ್- ಅಮೆರಿಕ, ಇಸ್ರೇಲ್ ಯುದ್ಧ ಮುಂದುವರಿಯುವ ಭೀತಿಯ ಹಿನ್ನೆಲೆಯಲ್ಲಿ ರಾಜ್ಯದ ಏಕೈಕ ತೈಲ ಸಂಸ್ಕರಣಾಗಾರ ಎಂಆರ್ಪಿಎಲ್ನಲ್ಲೂ ಸ್ವಲ್ಪ ಮಟ್ಟಿನ ಕಳವಳ ಉಂಟಾಗಿದೆ. ಯುದ್ಧ ಸನ್ನಿವೇಶ ಇನ್ನೂ ಒಂದು ತಿಂಗಳ ಕಾಲ ಇರಬಹುದು ಎಂದು ಅಮೆರಿಕದ ಅಧ್ಯಕ್ಷ ಟ್ರಂಪ್ ಹೇಳಿರುವುದು ಆತಂಕ ತಂದಿದೆ.
ಮೂಲ್ಕಿ ಟೂರಿಸ್ಟ್ ಕಾರು ಪಾರ್ಕಿಂಗ್ ಬಳಿ ನಡೆದಿದ್ದ ಕೊಲೆ ಪ್ರಕರಣ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು ತೀರ್ಪು ನೀಡಿದ್ದಾರೆ.
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಒಳಮೀಸಲಾತಿ ಪದ್ಧತಿಯಲ್ಲಿ ಆದಿದ್ರಾವಿಡ ಸಮುದಾಯಕ್ಕೆ ಅನ್ಯಾಯವಾಗುತ್ತಿದ್ದು, ಕೂಡಲೇ ಈ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಸಮುದಾಯವನ್ನು ಪ್ರತ್ಯೇಕವಾಗಿ ಗುರುತಿಸಬೇಕು ಎಂದು ಮುಖಂಡರಾದ ಅನಿಲ್ ಕುಮಾರ್ ಕಂಕನಾಡಿ ಆಗ್ರಹಿಸಿದರು.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಾರ್ಚ್ 5ರಂದು ಪುತ್ತೂರಿಗೆ ಭೇಟಿ ನೀಡಿದ್ದು, ಈ ವೇಳೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
ನಗರದ ಶೈಕ್ಷಣಿಕ ವಲಯ ಹಾಗೂ ಯುವ ಸಮೂಹವನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲದ ಮೇಲೆ ಮಂಗಳೂರು ದಕ್ಷಿಣ ಮತ್ತು ಉತ್ತರ ಪೊಲೀಸ್ ಠಾಣಾ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಅರು ಮಂದಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಜೆಟ್ ಮಂಡಿಸಿದ್ದು, ಕರಾವಳಿಗೆ ಹೆಚ್ಚು ಮಹತ್ವ ನೀಡಿದ್ದಾರೆ. ಬಜೆಟ್ ಆರಂಭದಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.
ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಅಸ್ಸಾಂನ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ತರಬೇತಿ ಕಾರ್ಯಾಚರಣೆಯ ಸಮಯದಲ್ಲಿ IAF Su-30MKI ಜೆಟ್ ಪತನಗೊಂಡ ನಂತರ ಇಬ್ಬರು ಭಾರತೀಯ ವಾಯುಪಡೆಯ (ಐಎಎಫ್) ಪೈಲಟ್ಗಳು ಸಾವನ್ನಪ್ಪಿದ್ದಾರೆ.
ಅರಣ್ಯಾಧಿಕಾರಿಯೋರ್ವರು ನೆಲೆಸಿದ್ದ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಸೇರಿದಂತೆ ಹತ್ತೂವರೆ ಲಕ್ಷ ರೂಪಾಯಿ ನಗದು, 181 ಗ್ರಾಂ ಚಿನ್ನ ಮತ್ತು ಬೆಳ್ಳಿಯನ್ನು ದೋಚಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಂಬಿಕಾರೋಡ್, ಕಾಪಿಕಾಡು ಎಂಬಲ್ಲಿ ನಡೆದಿದೆ.
ಸ್ಟೇಟ್ ಬ್ಯಾಂಕ್ ಪರಿಸರದ ಮೀನು ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವ ಮಹಿಳೆಯರ ಬದುಕು ದುಸ್ತರವಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಅವರು ಗುರುವಾರ ಮಧ್ಯಾಹ್ನ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರೇಮಮಯಿ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮಶತಮಾನೋತ್ಸವದ ಮೂಲಾಧಾರವಾದ ‘ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ’ ಹೆಸರಿನ ರಥಯಾತ್ರೆ ದೇಶಾದ್ಯಂತ ಸಂಚರಿಸುತ್ತಿದೆ.
ಮಂಗಳೂರು : ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆಯಲ್ಲಿರುವ ನೇತ್ರಾವತಿ ನದಿ ತಟದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್ಗಳು ಬಿದ್ದಿರುವುದನ್ನು ಕಂಡು ಸಾರ್ವಜನಿಕರು ಶಾಕ್ ಆಗಿದ್ದಾರೆ. ಆಧಾರ್ ಕಾರ್ಡ್ಗಳ ರಾಶಿ ಕಂಡ ಕೂಡಲೇ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
“ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಅವರ ನೇತೃತ್ವದಲ್ಲಿ ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿರುವ ಸರ್ವಧರ್ಮೀಯರ ಭಾವೈಕ್ಯತೆಯ ಹಬ್ಬಗಳ ಆಚರಣೆಯ ಅಂಗವಾಗಿ, ಈ ವರ್ಷ 11ನೇ ವರ್ಷದ ರಂಝಾನ್ ಇಫ್ತಾರ್ ಸೌಹಾರ್ದ ಕೂಟವನ್ನು ಮಾರ್ಚ್ 7ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಕಾರ್ಪೋರೇಟರ್ ಜೆ. ನಾಗೇಂದ್ರ ಕುಮಾರ್ ಅವರು ತಿಳಿಸಿದರು.
ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನು ಘೋಷಿಸುವ ಸಂದರ್ಭದಲ್ಲಿ ಅನುಸರಿಸಿರುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಸರಕಾರ ನೇಮಿಸಿರುವ ಸಮಿತಿಯು ತನ್ನ ವರದಿಯನ್ನು ಸರಕಾರಕ್ಕೆ ಸಲ್ಲಿಸಿದೆ.