Showing 20 of 21651 articles • Page 220 of 1083
ರಂಗಭೂಮಿ ಉಡುಪಿ ಸಂಸ್ಥೆಯ ಈ ವರ್ಷದ ರಂಗಭೂಮಿ ರಂಗೋತ್ಸವ ಇದೇ ಮಾ.4ರಿಂದ 8ರ ವರೆಗೆ ನಗರದ ಎಂಜಿಎಂ ಕಾಲೇಜಿನ ಮುದ್ದಣ ಬಯಲು ರಂಗಮಂದಿರದಲ್ಲಿ ನಡೆಯಲಿದ್ದು, ಮೊದಲನೆಯ ದಿನ ಮಾ. 4ರಂದು ಸಂಜೆ 6ಗಂಟೆಗೆ ಹಿರಿಯ ರಂಗಕರ್ಮಿ, ನಾಟಕಕಾರ ಪ್ರಸನ್ನ ಅವರಿಗೆ ರಂಗಭೂಮಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು.
ಜೈನ ಧರ್ಮವು ಧಾರ್ಮಿಕ ಸಹಿಷ್ಣುತೆ, ಆತ್ಮಶುದ್ಧಿ ಮತ್ತು ತಪಸ್ಸಿನ ಮೂಲಕ ಮೋಕ್ಷಪ್ರಾಪ್ತಿಯ ಮಾರ್ಗವನ್ನು ತೋರಿಸುತ್ತದೆ. ಅಹಿಂಸೆಯ ಪರಮತತ್ವವು ಭಾರತೀಯ ಸಂಸ್ಕೃತಿಯ ನೈತಿಕ ಮೌಲ್ಯಗಳನ್ನು ಗಟ್ಟಿಗೊಳಿಸಿದೆ.
ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬೆನ್ನಲ್ಲೆ ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮಹತ್ವದ ಕೆಲಸಕ್ಕೆ ಮುಂದಾಗಿದ್ದಾರೆ. ತೆಲುಗಿನ 44 ಸರ್ಕಾರಿ ಶಾಲೆಗಳ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡುವುದಾಗಿ ಘೋಷಿಸಿದ್ದಾರೆ.
ಅಮೆರಿಕ ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಸಾವು ವಿಚಾರವಾಗಿ ಮೈಸೂರು ಪಿರಿಯಾಪಟ್ಟಣದಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಶಿಯಾ ಮುಸ್ಲಿಂ ಸಮುದಾಯದಿಂದ ಮೇಣದಬತ್ತಿ ಬೆಳಗಿ ಮೌನ ಪ್ರತಿಭಟನೆ ನಡೆಸಲಾಯಿತು.
ಕೋಟ್ಯಂತರ ರೂಪಾಯಿಗಳ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯವು (ಇಡಿ) ಮಂಗಳೂರಿನ ಪಿಎಂಎಲ್ಎ (ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ) ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ರೋಷನ್ ಸಲ್ಡಾನಾ, ಡಾಫ್ನಿ ಡಿಸೋಜಾ ಮತ್ತು ಇತರರ ವಿರುದ್ಧ ಅಂತಿಮ ವರದಿ (ಪ್ರಾಸಿಕ್ಯೂಷನ್ ಕಂಪ್ಲೇಂಟ್) ಸಲ್ಲಿಸಿದೆ.
ವಿದೇಶದಲ್ಲಿ ಉದ್ಯೋಗದಲ್ಲಿದ್ದ ಉಳ್ಳಾಲ ಸೋಮೇಶ್ವರದ ಯುವಕನೊಬ್ಬ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಚಂದ್ರ ಗ್ರಹಣ ಹಿನ್ನೆಲೆ ಶ್ರೀಕ್ಷೇತ್ರ ಧರ್ಮಸ್ಥಳದ ಬಾಗಿಲು ಬಂದ್ ಮಾಡಲಾಗಿದೆ. ಮಂಜುನಾಥ ಸ್ವಾಮಿಗೆ ಮಹಾಪೂಜೆ ಬಳಿಕ ದೇವರ ದರ್ಶನ ಬಂದ್ ಮಾಡಲಾಗಿದೆ. ಮಧ್ಯಾಹ್ನ 1.30ರವರೆಗಷ್ಟೇ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಕಾರ್ ಸ್ಟ್ರೀಟ್ನ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಎಂ. ಸತೀಶ್ ಪ್ರಭು ಅವರು ಇಂದು ನಿಧನರಾದರು
ಇಸ್ರೇಲ್-ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಮಂಗಳೂರು ಮತ್ತು ಗಲ್ಫ್ ರಾಷ್ಟ್ರಗಳ ನಡುವಣ ವಿಮಾನ ಸಂಚಾರವನ್ನು ಮಾ. 4ರ ವರೆಗೆ ರದ್ದು ಮಾಡಲಾಗಿದೆ.
ವೈದ್ಯೆಯೊಬ್ಬರು ನೀಡಿದ ಚಿಕಿತ್ಸೆ ಫಲಕಾರಿಯಾಗದೆ ಸಮಸ್ಯೆ ಉಲ್ಭಣವಾಗಿ ರೋಗಿ ICU ದಾಖಲಾದ ಆರೋಪ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ. ಚಿಕಿತ್ಸೆ ನೀಡಿದ ಬಗ್ಗೆ ಮಾಹಿತಿ ನೀಡದೆ ಉಡಾಫೆ ವರ್ತನೆ ತೋರಿದ ವೈದ್ಯೆ ವಿರುದ್ದ ಕ್ರಮ ಕೈಗೊಳ್ಳುವಂತೆ ರೋಗಿ ಆರೋಗ್ಯಾಧಿಕಾರಿಗೆ ದೂರು ನೀಡಿದ್ದಾರೆ.
ನಗರದ ಕೂಳೂರಿನ ಕಿಟ್ಟ ಮೊಗೇರ ವೇದಿಕೆಯಲ್ಲಿ ಫೆಬ್ರವರಿ 14 ಮತ್ತು 15 ರಂದು ನಡೆದ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ್ ಪವರ್ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಮಂಗಳೂರಿನ ಶ್ರೀ ವಿನೋದ ಕುಮಾರ್ ಎಂ. ಅವರು ಅಮೋಘ ಸಾಧನೆ ಮಾಡಿದ್ದಾರೆ.
ಸಂಸದ ಸುನಿಲ್ ಬೋಸ್ ರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಮಾಡಲಾಯಿತು. ಟಿ ನರಸೀಪುರ ವಿಧಾನಸಭಾ ಕ್ಷೇತ್ರದ ಚೌಹಳ್ಳಿ ಮಾದಾಪುರ ಸೇರಿದಂತೆ ವಿವಿಧ ಗ್ರಾಮಗಳಿಗೆ ಸಂಸದ ಸುನಿಲ್ ಬೋಸ್ ಭೇಟಿ ನೀಡಿದರು.
ಇಂದು ವರ್ಷದ ಮೊದಲ ಚಂದ್ರಗ್ರಹಣ ಹಿನ್ನೆಲೆ ಜಿಲ್ಲೆಯ ಬಹುತೇಕ ದೇಗುಲಗಳ ದರ್ಶನ ಸಮಯ ಬದಲಾವಣೆ ಮಾಡಲಾಗಿದೆ.
ಚಂದ್ರ ಗ್ರಹಣ ಹಿನ್ನೆಲೆ ಮೈಸೂರಿನ ಚಾಮುಂಡೇಶ್ವರಿ ದೇವರ ದರ್ಶನದಲ್ಲಿ ಬದಲಾವಣೆ ಮಾಡಲಾಗಿದೆ. ಗ್ರಹಣ ಹಿನ್ನೆಲೆ ಮಧ್ಯಾಹ್ನ 2 ಗಂಟೆಗೆ ದೇವಾಲಯ ಬಂದ್ ಮಾಡಲಾಗಿದೆ.
10 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ಕೇರಳ ಮೂಲದ ಇಬ್ಬರನ್ನ ಸಿಸಿಬಿ ನಾರ್ಕೊಟಿಕ್ಸ್ ತಂಡ ಬಂಧಿಸಿದ ಘಟನೆ ಬಾಗಲೂರಿನ ಪ್ರೆಸ್ಟೀಜ್ ಫೈನ್ ಬೇಕರಿ ಪಾರ್ಕ್ನ ಫ್ಲಾಟ್ವೊಂದರಲ್ಲಿ ನಡೆದಿದೆ.
ಅಕ್ರಮವಾಗಿ ಲಾರಿಯಲ್ಲಿ ತುಂಬಿಕೊಂಡು ಕಸಾಯಿಖಾನೆಗೆ ಸಾಗಿಸುತ್ತಿದ್ದ 19 ಜಾನುವಾರುಗಳನ್ನು ಇಲ್ಲಿನ ಪೊಲೀಸರು ದಾಳಿ ನಡೆಸಿ ರಕ್ಷಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ.
ಬಜ್ಪೆಯಲ್ಲಿ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಫೋಟೋ ಇರುವ ಇನ್ಸ್ಟಾಗ್ರಾಮ್ ಪೇಜ್ನಲ್ಲಿ, ಉಳ್ಳಾಲದ ಮಸೀದಿಯ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಕಾಮೆಂಟ್ ಹಾಕಿದ್ದ ದುಷ್ಕರ್ಮಿಯ ವಿರುದ್ಧ ಉಳ್ಳಾಲ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇರಾನ್ ವಿರುದ್ಧ ಸೇನಾ ಕಾರ್ಯಾಚರಣೆಯು ಹಲವು ವಾರಗಳ ಕಾಲ ನಡೆಯುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ಇಸ್ರೇಲ್-ಇರಾನ್ ಯುದ್ಧದಿಂದಾಗಿ ರದ್ದಾಗಿದ್ದ ವಿಮಾನಯಾನ ಸೇವೆ ಇಂದಿನಿಂದ ಆರಂಭವಾಗಿದ್ದು, ಸಾಕಷ್ಟು ಕನ್ನಡಿಗರು ತಾಯ್ನಾಡಿಗೆ ಮರಳಿದ್ದಾರೆ.
ದುಷ್ಕರ್ಮಿಯೊಬ್ಬ ಅಮಾಯಕರ ಮೇಲೆ ಮನಬಂದಂತೆ ಗುಂಡು ಹಾರಿಸಿ ಇಬ್ಬರು ವಿದ್ಯಾರ್ಥಿಗಳನ್ನು ಹತ್ಯೆ ಮಾಡಿರುವ ಘಟನೆ ಟೆಕ್ಸಾಸ್ನ ಆಸ್ಟಿನ್ನಲ್ಲಿ ನಡೆದಿದೆ. ಮೃತಪಟ್ಟವರ ಪೈಕಿ ಒಬ್ಬ ವಿದ್ಯಾರ್ಥಿನಿ ಭಾರತೀಯ ಮೂಲದವಳಾಗಿದ್ದಾಳೆ ಎಂಬ ಮಾಹಿತಿ ತಿಳಿದು ಬಂದಿದೆ.