Showing 20 of 21651 articles • Page 221 of 1083
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 10ರಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶ ಕಲ್ಪಿಸುವುದನ್ನು ವಿರೋಧಿಸಿ ದೇವಸ್ಥಾನದ ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿದೆ.
ಗಲ್ಫ್ ವಲಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಾರ್ಚ್ 3 ರಂದು ದುಬೈ, ದೋಹಾ, ದಮ್ಮಾಮ್, ಕತಾರ್ ಮತ್ತು ಅಬುಧಾಬಿಗೆ ತೆರಳಬೇಕಿದ್ದ ವಿಮಾನ ಸೇವೆಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಇರಾನ್ ಪರಮೋಚ್ಚ ನಾಯಕ ಖಮೇನಿ ಅವರ ಹತ್ಯೆಯಿಂದ ಭಾರತದ ಹಲವು ಕಡೆ ಪ್ರತಿಭಟನೆಗಳು ನಡೆದಿದ್ದು, ಜಮ್ಮ ಮತ್ತು ಕಾಶ್ಮೀರದಲ್ಲಿ ಭುಗಿಲೆದ್ದಿದ್ದವು.
ಮಾರ್ಚ್ 06 ರಂದು ಬಜೆಟ್ ಮಂಡನೆ ಆಗುತ್ತಿದ್ದು, ನಮ್ಮ ನಂಜನಗೂಡು ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅನುದಾನವನ್ನು ನೀಡುತ್ತಾರೆ ಎಂಬ ಭರವಸೆ ನನಗಿದೆ ಎಂದು ಶಾಸಕ ದರ್ಶನ್ ಧ್ರುವ ನಾರಾಯಣ್ ತಿಳಿಸಿದರು.
ಇರಾನ್-ಇಸ್ರೇಲ್ ಯುದ್ಧ ಸನ್ನಿವೇಶದಲ್ಲಿ ಸಂಕಷ್ಟದಲ್ಲಿ ಸಿಲುಕಿದ ಎಲ್ಲಾ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸನ್ನದ್ಧವಾಗಿದೆ. ಅಲ್ಲಿನ ರಾಯಭಾರಿ ಕಚೇರಿಯ ಉನ್ನತ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಮಾರ್ಚ್ 03 ರಂದು ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಯ ದೇವಾಲಯದಲ್ಲಿ ಗ್ರಹಣ ದಿನದಂದು ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಭಕ್ತರು ಎಂದಿನಂತೆ ದೇವಾಲಯಕ್ಕೆ ಬಂದು ದೇವರ ದರ್ಶನ ಪಡೆಯಬಹುದಾಗಿದೆ.
ಒಳ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ ಬಲಗೈ ಸಂಬಂಧಿತ ಜಾತಿಗಳಿಗೆ ಆಗಿರುವ ಅನ್ಯಾಯವನ್ನು ಖಂಡಿಸಿ ಬಲಗೈ ಜಾತಿ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇಸ್ರೇಲ್ -ಇರಾನ್ ನಡುವಿನ ಯುದ್ಧದಲ್ಲಿ ಕನ್ನಡಿಗರ ರಕ್ಷಣೆ ವಿಚಾರವಾಗಿ ಮೈಸೂರಿನಲ್ಲಿ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಹೇಳಿಕೆ ನೀಡಿದರು. ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ. ರಾಜ್ಯ ಸರ್ಕಾರ ಕನ್ನಡಿಗರ ರಕ್ಷಣೆಗೆ ಕ್ರಮ ತೆಗೆದುಕೊಳ್ಳುತ್ತಿದೆ ಎಂದರು.
ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ ಕೆಲವರು ಗೊಂದಲ ಸೃಷ್ಟಿಸಿದ್ದಾರೆ. ರೇಷ್ಮೆ ಮಾರುಕಟ್ಟೆಗೆ ಉಪಯೋಗಿಸಲ್ಪಟ್ಟ ಒಂದೂವರೆ ಎಕರೆ ಜಾಗವನ್ನು ಉದ್ಯಾನವನ ಬಳಸಲು ತೀರ್ಮಾನ ಮಾಡಿದ್ದೆವು. ಈಗ ಮತ್ತೆ ಆ ಆದೇಶವನ್ನ ಮರು ಪರಿಶೀಲನೆ ಮಾಡಿದ್ದೇವೆ ಎಂದು ಮೈಸೂರಿನಲ್ಲಿ ಡಾ. ಹೆಚ್ ಸಿ ಮಹದೇವಪ್ಪ ಹೇಳಿಕೆ ನೀಡಿದ್ದರು.
ತಂಬಾಕು ಮಂಡಳಿಯ ವತಿಯಿಂದ ಜನಪ್ರತಿನಿಧಿಗಳು ಮತ್ತು ತಂಬಾಕು ವರ್ತಕರೊಂದಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದಲ್ಲಿ ಸಭೆ ನಡೆಸಲಾಯಿತು.
ಕಾಪು ಕ್ಷೇತ್ರದ ಅಭಿವೃದ್ಧಿ, ಜನಪರ ಕಾರ್ಯಕ್ಕೆ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅಡ್ಡಿಪಡಿಸಿ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ. ಸಂಘರ್ಷದ ರಾಜಕೀಯ ಮುಂದುವರಿಸಿದರೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸುತ್ತೇವೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುಡುಗಿದ್ದಾರೆ.
ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆಯೊಡ್ಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕಿಡಿಕೇಡಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಭಾಧ್ಯಕ್ಷ ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ.
ಹಳೇ ದ್ವೇಷ ಹಿನ್ನಲೆ ದ್ವಿತೀಯ ಪಿಯು ವಿದ್ಯಾರ್ಥಿನಿ ಭವಿಷ್ಯಕ್ಕೆ ಕುಟುಂಬವೊಂದು ತಣ್ಣೀರೆರೆಚಲು ಹುನ್ನಾರ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಒಳ ಮೀಸಲಾತಿ ಗೊಂದಲ ವಿಚಾರವಾಗಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಪ್ರತಿಕ್ರಿಯೆ ನೀಡಿದರು.
ತೆಂಗಿನ ಗರಿಯೇ ಇವರಿಗೆ ಮೇಲ್ಚಾವಣಿ, ಕುಸಿದು ಬಿದ್ದಿರುವ ಮನೆ, ಬಿರುಕು ಬಿಟ್ಟ ಮಣ್ಣಿನ ಗೋಡೆಗಳು, ರಕ್ಷಣೆಗೆ ಮನೆ ಮೇಲೆ ಪ್ಲಾಸ್ಟಿಕ್ ಟಾರ್ಪಲ್ ಆಸರೆ, ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವ ಬದುಕುತ್ತಿರುವ ಕುಟುಂಬಸ್ಥರ ಗೋಳು ಕೇಳುವವರೇ ಇಲ್ಲ.
ಒಂದನೇ ತರಗತಿಗೆ ದಾಖಲಾಗುವ 6 ವರ್ಷ ವಯಸ್ಸಿನ ಮಿತಿಯನ್ನ ಈ ವರ್ಷವೂ ಸಡಿಲ ಮಾಡಬೇಕು ಎಂದು ಮತ್ತೆ ಪೋಷಕರು ಸರ್ಕಾರವನ್ನ ಒತ್ತಾಯಿಸಿದ್ದಾರೆ.
ನೇತ್ರಾವತಿ ಸೇತುವೆಯಲ್ಲಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆತನನ್ನು ನದಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರು ರಕ್ಷಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.
ಬಳ್ಳಾರಿಯಿಂದ ಕಬ್ಬಿಣದ ಪೈಪುಗಳನ್ನು ಹೇರಿಕೊಂಡು ಬರುತ್ತಿದ್ದ ಲಾರಿಯು ನಿಯಂತ್ರಣ ತಪ್ಪಿ ಮಾಳ ಘಾಟಿಯಲ್ಲಿ ಅಡ್ಡ ಬಿದ್ದು ಅಪಘಾತ ಸಂಭವಿಸಿದೆ.
ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ಮುಂದುವರಿದ ಹಿನ್ನೆಲೆ ಇಂದು ಬೆಂಗಳೂರಿನಿಂದ ಹೊರಡಬೇಕಿದ್ದ 10 ವಿಮಾನಗಳು ರದ್ದುಗೊಂಡಿದೆ.
ಅಮೆರಿಕ ಹಾಗೂ ಇಸ್ರೇಲ್ ತನ್ನ ಮೇಲೆ ನಡೆಸುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ಭಾನುವಾರ ದಾಳಿ ನಡೆಸಿದೆ. ಇಸ್ರೇಲ್ ಕೇಂದ್ರ ಭಾಗದ ನಗರ ಬೆಟ್ ಶೆಮೆಷ್ ಮೇಲೆ ಇರಾನ್ ನಡೆಸಿದ ಕ್ಷಿಪಣಿಗಳ ದಾಳಿಯಲ್ಲಿ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.