Showing 20 of 21651 articles • Page 224 of 1083
ದಕ್ಷಿಣ ಕಾಶಿಯೆಂದೇ ಖ್ಯಾತಿಗಳಿಸಿರುವ ನಂಜುಂಡೇಶ್ವರಿಗೆ, ಒಂದೇ ತಿಂಗಳಿನಲ್ಲಿ 82 ಲಕ್ಷ ರೂ., ಕಾಣಿಕೆ ಬಂದಿದೆ.
ನಟ ಮತ್ತು ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಪತ್ನಿ ಸಂಗೀತಾ ಸೊರ್ನಲಿಂಗಂ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆ ಮೂಲಕ ನಟನ ಜೊತೆಗಿನ 27 ವರ್ಷಗಳ ದಾಂಪತ್ಯವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ. 1999 ರ ಆಗಸ್ಟ್ನಲ್ಲಿ ವಿವಾಹವಾದ ಈ ದಂಪತಿಗೆ ಜೇಸನ್ ಸಂಜಯ್ ಮತ್ತು ದಿವ್ಯಾ ಶಶಾ ಎಂಬ ಇಬ್ಬರು ಮಕ್ಕಳಿದ್ದಾರೆ. ವಿಜಯ್ ಅವರು ನಟಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಪತ್ನಿ ಆರೋಪಿಸಿದ್ದಾರೆ. ಈ ಸಂಬಂಧ ನಿಲ್ಲಿಸುತ್ತೇನೆ ಅಂತ ವಿಜಯ್ ಭರವಸೆ ಕೊಟ್ಟಿದ್ದರು. ಆದರೆ, ಅದು ಹಾಗೆಯೇ […]
ಕಾಂಗ್ರೆಸ್ ಹಾಗೂ ಬಿಜೆಪಿಯ ರಾಜಕೀಯ ಕಚ್ಚಾಟದ ಮಧ್ಯೆಯೇ ಉಡುಪಿ ಕಂಬಳದ ಶಂಕುಸ್ಥಾಪನೆ ಮಣಿಪಾಲ ಸಮೀಪದ 80 ಬಡಗುಬೆಟ್ಟುವಿನಲ್ಲಿರುವ ಕಂಬಳದ ಕರೆ ಇಂದು ನೆರವೇರಿತು.
ಬ್ರಹ್ಮಾವರ ತಾಲೂಕಿನ ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ಅವರು ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾದರು.
ತಾಲ್ಲೂಕಿನ ಬೊಕ್ಕಹಳ್ಳಿ ಗ್ರಾಮದಲ್ಲಿ ಮೈಸೂರು ಮಹಾರಾಜ ಕಾಲೇಜು ಮತ್ತು ವಿಶ್ವವಿದ್ಯಾನಿಲಯ ಸಂಜೆ ಕಾಲೇಜು ವತಿಯಿಂದ ಏಳು ದಿನಗಳ ಕಾಲ ಆಯೋಜಿಸಿರುವ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದಲ್ಲಿ ಬೊಕ್ಕಹಳ್ಳಿ ಮತ್ತು ಬೊಕ್ಕಹಳ್ಳಿ ಹೊಸೂರು ಗ್ರಾಮಸ್ಥರಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿಯಿಂದ ನೀಡುವ ಹಸಿ ಕಸ ಮತ್ತು ಒಣ ಕಸ ಹಾಕುವ ಬಕೆಟ್ ಗಳನ್ನು ವಿತರಿಸಿದರು.
ಶಾಲಾ ಮಕ್ಕಳಂತೆ ತಮ್ಮ ಕುತ್ತಿಗೆಗೆ ಟೈ ಧರಿಸಿಕೊಂಡು ಶಾಸಕ ದರ್ಶನ್ ಧ್ರುವನಾರಾಯಣ್ ಖುಷಿ ಪಟ್ಟಿದ್ದಾರೆ.
ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತಿನಿತ್ಯ ಪೌಷ್ಟಿಕ ಆಹಾರ ತಯಾರಿಸಿ ಬಿಸಿಯೂಟ ನೀಡುವ ಅಕ್ಷರ ದಾಸೋಹ ಕಾರ್ಯಕ್ರಮ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಾರ್ಥಕ ಕಾರ್ಯಕ್ರಮವಾಗಿದೆ ಎಂದು ಅಕ್ಷರದಾಸೋಹ ಸಹಾಯಕ ನಿರ್ದೇಶಕ ಬಿ.ಸೋಮಶೇಖರ್ ಹೇಳಿದರು.
ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದಲ್ಲಿ 6.30 ಎಕರೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಮೀನಿನಲ್ಲಿ ಉಡುಪಿ ಕಂಬಳ ಆಯೋಜನೆ ಸಂಬಂಧ ಫೆ.28ರ ಬೆಳಗ್ಗೆ 10 ಗಂಟೆಗೆ ಶಂಕುಸ್ಥಾಪನೆ ಮಾಡಲು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮುಂದಾಗಿದ್ದರು.
ಮಂಗಳೂರು ಧರ್ಮಕ್ಷೇತ್ರದ ಕಾರಿಸ್ಮಾತಿಕ್ ಸರ್ವಿಸ್ ಕಮ್ಯುನಿಯನ್ ಹಾಗೂ ಬೈಬಲ್ ಆಯೋಗದ ಜಂಟಿ ಆಶ್ರಯದಲ್ಲಿ ಕುಲಶೇಕರದ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್ ಮೈದಾನದಲ್ಲಿ ನಡೆಯುತ್ತಿರುವ ‘ಬೃಹತ್ ಬೈಬಲ್ ಅಧಿವೇಶನ 2026’ರ ಎರಡನೇ ದಿನವಾದ ಶುಕ್ರವಾರ (ಫೆ. 27) ಸಹಸ್ರಾರು ವಿಶ್ವಾಸಿಗಳು ಭಕ್ತಿಪೂರ್ವಕವಾಗಿ ಪಾಲ್ಗೊಂಡರು.
ದಕ್ಷಿಣ ಕನ್ನಡ, ಉಡುಪಿ ಹಾಗೂ ನೆರೆಯ ಕೇರಳ ರಾಜ್ಯದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ ಬಹುಕಾಲದ ಬೇಡಿಕೆಯಂತೆ ಮಂಗಳೂರು ಮತ್ತು ಮಸ್ಕತ್ ನಡುವಿನ ನೇರ ವಿಮಾನಯಾನ ಸೇವೆಯು ಮಾರ್ಚ್ 1 ರಿಂದ ಅಧಿಕೃತವಾಗಿ ಪುನರಾರಂಭಗೊಳ್ಳಲಿದೆ.
AJ Hospital and Research Centre ನಲ್ಲಿ ಮೇಲ್ಶ್ವಾಸಮಾರ್ಗ/ಆಹಾರನಾಳದಲ್ಲಿ ಸಿಲುಕಿಕೊಂಡಿದ್ದ ವಿದೇಶಿ ವಸ್ತು (Foreign Body) ನುಂಗಿದ ಹಿನ್ನೆಲೆಯೊಂದಿಗೆ ರವಾನೆಯಾಗಿದ್ದ 8 ತಿಂಗಳ ಶಿಶುವಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ.
ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕಚೇರಿಗಳ ಭೇಟಿ ಮಾಡಿ ನನಗೆ ಬಹಳ ನೋವಾಗಿದೆ. ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಗಲೀಜು ಹಾಕಲು ಓಪನ್ ಡ್ರಮ್ ಇಟ್ಟಿದ್ದಾರೆ. ಪ್ರತ್ಯೇಕ ಡಸ್ಟ್ ಬಿನ್ ಇರಿಸಲು ಸೂಚಿಸಲಾಗಿದೆ. ತಾಲೂಕು ಕಚೇರಿಯಲ್ಲಿ ತುಂಬಾ ಕೇಸುಗಳು ಪೆಂಡಿಂಗ್ ಇದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಹೇಳಿಕೆ ನೀಡಿದ್ದಾರೆ.
ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ 80 ಬಡಗಬೆಟ್ಟು ಇಲ್ಲಿ ನಡೆಯಲಿರುವ ಉಡುಪಿ ಕಂಬಳದ ಶಂಕುಸ್ಥಾಪನೆಯನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಮಾರ್ಚ್ 4 ರಂದು ನೆರವೇರಿಸಲಿದ್ದಾರೆ.
ನಗರದ ಕುಂಟಿಕಾನ ಪರಿಸರದಲ್ಲಿ ಶಾಲಾ ಮಕ್ಕಳ ಅಪಹರಣ ನಡೆಯುತ್ತಿದೆ ಎಂಬ ಆಧಾರರಹಿತ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ.
ನಗರದ ಕದ್ರಿ, ಶಕ್ತಿನಗರ, ಭಾಗಗಳಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡರು.
ಸ್ನೇಹಿತನ ಬ್ಯಾಂಕ್ ಖಾತೆಯನ್ನು ಪಡೆದು ಸೈಬರ್ ವಂಚನೆ ಪ್ರಕರಣಕ್ಕೆ ಬಳಸಿ ಬಳಿಕ ಮೋಸ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸೈಬರ್ ಅಪರಾಧ ಠಾಣೆಯ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಎಂಬಲ್ಲಿ ಮನೆಯ ಆವರಣದಲ್ಲಿ ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿರುವುದು ಪತ್ತೆಯಾಗಿದ್ದು ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದಾಗ ಆರೋಪಿಗಳು ಪರಾರಿಯಾಗಿದ್ದಾರೆ. ಸದ್ರಿ ಮನೆಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಸಚಿವರಾದ ಸಂತೋಷ್ ಲಾಡ್ ಗೆ, ಕಾರ್ಮಿಕರ ಬಗ್ಗೆ ವಿಶೇಷ ಕಾಳಜಿ ಇದೆ, ಆ ಕಾರಣದಿಂದ ಈ ರೀತಿಯ ಅತ್ಯುತ್ತಮ ಕಾರ್ಯಕ್ರಮಗಳು ನಡೆಯುತ್ತಿದೆ ಎಂದು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ದಿ ಮಂಡಳಿ ಬೆಂಗಳೂರು ಇದರ ಅಧ್ಯಕ್ಷೆ ಶಾಲೆಟ್ ಪಿಂಟೋ ಹೇಳಿದರು.
ಶ್ರೀ ರಾಮಚಂದ್ರಾಪುರ ಮಠಕ್ಕೆ ಶಿಷ್ಯರೇ ಸಂಪತ್ತಾಗಿದ್ದು, ಪ್ರಧಾನ ಮಠದ ಶಿಲಾನ್ಯಾಸದ ಮೂಲಕ ಶರಾವತಿ ನದಿ ತೀರದಲ್ಲಿ ಸಹಸ್ರಮಾನದ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.