Showing 20 of 21651 articles • Page 226 of 1083
ಮಹಾನಗರ ಪಾಲಿಕೆ ವ್ಯಾಪ್ತಿಯ ಮರೋಳಿ ಸೂರ್ಯ ನಾರಾಯಣ ದೇವಸ್ಥಾನ ಸಮೀಪದ 37ನೇ ವಾರ್ಡಿನ ಶಾಂತಿನಗರ ರುಕ್ಕಯ್ಯ ದೇವಾಡಿಗ ಮನೆ ಪರಿಸರದ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ್ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು.
ಮಂಗಳೂರು ಧರ್ಮಪ್ರಾಂತ್ಯದ ಕಾರಿಸ್ಮಾತಿಕ್ ಸರ್ವಿಸ್ ಕಮ್ಯುನಿಯನ್ ಹಾಗೂ ಧರ್ಮಪ್ರಾಂತ್ಯದ ಬೈಬಲ್ ಆಯೋಗದ ಜಂಟಿ ಆಶ್ರಯದಲ್ಲಿ ಕುಲಶೇಕರದ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್ ಬಯಲು ಮೈದಾನದಲ್ಲಿ ಆಯೋಜಿಸಲಾದ ನಾಲ್ಕು ದಿನಗಳ ‘ಬೃಹತ್ ಬೈಬಲ್ ಅಧಿವೇಶನ 2026’ ಕ್ಕೆ ಗುರುವಾರ (ಫೆ. 26) ಭಕ್ತಿಪೂರ್ವಕವಾಗಿ ಚಾಲನೆ ನೀಡಲಾಯಿತು. ಈ ಅಧಿವೇಶನವು “ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ನೆಲಸಿದೆ” (ಕೊಲೊ. 3:16) ಎಂಬ ಪ್ರಮುಖ ಧ್ಯೇಯವಾಕ್ಯದೊಂದಿಗೆ ನಡೆಯುತ್ತಿದೆ.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಫೆಬ್ರವರಿ 28, 2026 ರ ಶನಿವಾರ ಮಧ್ಯಾಹ್ನ 2.00 ಗಂಟೆಗೆ ಸಹ್ಯಾದ್ರಿ ಕ್ಯಾಂಪಸ್ನ ನೇತ್ರಾವತಿ ಸಭಾಂಗಣದಲ್ಲಿ ತನ್ನ ಸ್ನಾತಕೋತ್ತರ ಕಾರ್ಯಕ್ರಮದ 15 ನೇ ಪದವಿ ಪ್ರದಾನ ಸಮಾರಂಭವನ್ನು ಆಚರಿಸಲಿದೆ.
ವಿದ್ಯೆ ಎಂದರೆ ಅದು ವಿಮರ್ಶಾತೀತವಲ್ಲ. ವಿದ್ಯೆಯನ್ನೂ ವಿಶ್ಲೇಷಣೆಗೆ ಒಳಪಡಿಸಬೇಕು.
ಮಹಾರಾಷ್ಟ್ರದ ರತ್ನಗಿರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಡಿಪು ಬಳಿಯ ಬೋಳಿಯಾರ್ನ 28 ವರ್ಷದ ವಿವಾಹಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ನಗರದ ಮಂಗಳಾದೇವಿ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಮಠದಲ್ಲಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರ ಮಾರ್ಗದರ್ಶನದಲ್ಲಿ ನಡೆಯುವ [ಫೆಬ್ರವರಿ ತಿಂಗಳ 2026] ಎರಡು ವಾರಗಳ ಕಾಲ ಜರುಗಿದ ಯೋಗ ಶಿಬಿರ ಸಮರೋಪಗೊಂಡಿತು.
ನಂಜನಗೂಡು ತಾಲ್ಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ವರ್ಷಗಳೇ ಉರುಳಿದರೂ ಚರಂಡಿಗಳು ಮಾತ್ರ ಸ್ವಚ್ಛತೆ ಕಾಣದೆ, ಗಬ್ಬೆದ್ದು ನಾರುತ್ತಿರುವ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ನಿಮ್ಮ ನ್ಯೂಸ್ ಕರ್ನಾಟಕ ಸುದ್ದಿ ವಾಹಿನಿಯಲ್ಲಿ ವರದಿಯನ್ನು ಪ್ರಸಾರ ಮಾಡಲಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ನವಿಲೂರು ಗ್ರಾಮ ಪಂಚಾಯಿತಿ ಆಡಳಿತ ಚರಂಡಿಗಳನ್ನು ಸ್ವಚ್ಛತೆಗೊಳಿಸಿದ್ದಾರೆ.
ದಲಿತ ಮಹಿಳೆಗೆ ದೇವಾಲಯ ಪ್ರವೇಶ ಹಾಗೂ ಪೂಜೆ ಮಾಡಲು ನಿರಾಕರಿಸಿದ ಆರೋಪದಡಿ ಅರ್ಚಕನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ತಿಗಳರಪಾಳ್ಯದಲ್ಲಿ ನಡೆದಿದೆ.
ಮಾಜಿ ಭಾರತೀಯ ಕ್ರಿಕೆಟಿಗ ಶಿಖರ್ ಧವನ್, ಮಾಜಿ ಪತ್ನಿಗೆ ಆಸ್ಟ್ರೇಲಿಯಾದ ಆಸ್ತಿ ಇತ್ಯರ್ಥದಿಂದ ಪಡೆದ 5.7 ಕೋಟಿ ರೂ. ಹಿಂದಿರುಗಿಸುವಂತೆ ಆದೇಶ!
ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ದಕ್ಕೆಯಲ್ಲಿ ಇರುವ ಇಲಾಖೆಯ ನಿರ್ಲಕ್ಷದಿಂದ ಇರುವ ಅವ್ಯವಸ್ಥೆಯ ಬಗ್ಗೆ ಮತ್ತು ವಿದ್ಯುತ್ ಕಂಬ ಬಿದ್ದು ನಿಧನ ಹೊಂದಿದ ಸುಮಾರು 12 ವರ್ಷದಿಂದ ಕೆಲಸ ಮಾಡುತ್ತಿದ್ದ ತಮಿಳುನಾಡು ನಿವಾಸಿ ಮುರುಗನ್ ಅವರ ಕುಟುಂಬಕ್ಕೆ ತುರ್ತಾಗಿ ಪರಿಹಾರ ಘೋಷಿಸಬೇಕೆಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು. ಟಿ. ಖಾದರ್ ಅವರು ಭೋವಿ ಸಮಾಜದ ಮುಖಂಡ ಪವನ್ ಕುಮಾರ್ ಶಿರ್ವ ಮನವಿ ಸಲ್ಲಿಸಿದರು.
‘ಕಿಸಾನ್ ಸಭಾ’ ಸಭಾಂಗಣದ ಉದ್ಘಾಟನೆ ಹಾಗೂ ಕುಕ್ಕುಂದೂರಿನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ಸಂಭ್ರಮೋತ್ಸವದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಕಳಕ್ಕೆ ಆಗಮಿಸಿದರು.
ಧನ್ವೀರ್ ಗೌಡ ಅಭಿನಯದ ಹಯಗ್ರೀವ ಫೆಬ್ರವರಿ 27ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಬಹು ನಿರೀಕ್ಷಿತ ವನಿತಾ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಜೂ.12ರಿಂದ ಜು.5ರವರೆಗೆ ಇಂಗ್ಲೆಂಡ್ನಲ್ಲಿ ಟೂರ್ನಿ ನಡೆಯಲಿದೆ. ಒಟ್ಟು 12 ತಂಡಗಳು ಟ್ರೋಫಿಗಾಗಿ ಸೆಣಸಾಡಲಿದ್ದು, ಲಂಡನ್ನಲ್ಲಿ ಫೈನಲ್ ಸಮರ ಸಾಗಲಿದೆ.
ಕೊಲೆ ಆರೋಪಿ ಸಂತೋಷ್ ನಿಂದ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಮಂಗಳೂರು ರೈಲ್ವೆ ಟ್ರ್ಯಾಕ್ ನಲ್ಲಿ ಕುಳಿತ ಜೋಡಿಗೆ ಹಲ್ಲೆ ನಡೆಸಲಾಗಿದೆ.
ಶ್ರೀ ಜನಾರ್ದನ ಕಂಬಳ ವತಿಯಿಂದ ದಾನಿಗಳ ಸಹಕಾರದೊಂದಿಗೆ ಪ್ರಥಮ ವರ್ಷದ ಹೊನಲು ಬೆಳಕಿನ “ಎರ್ಮಾಳು ತೆಂಕ- ಬಡಾ ಜೋಡುಕರೆ ಕಂಬಳ” ಇದೇ ಫೆ. 28ರಂದು ಎರ್ಮಾಳು ಬಡಕೊಟ್ಟು ಬಾಕುಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ತಿಳಿಸಿದರು.
ನಗರದ ಕದ್ರಿ ದೇವಸ್ಥಾನ ಬಳಿಯ ಡಾಕ್ಟರ್ಸ್ ಕಾಲನಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ. ಫೆ.23ರ ಸೋಮವಾರ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಚಿರತೆ ಬಂದಿದ್ದು ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.
ನಗರದ ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಫ್ಯಾನ್ಸಿ ಸ್ಟೋರ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ವಿದೇಶಿ ಕಾಯ್ದೆ ಉಲ್ಲಂಘನೆ ಸೇರಿದಂತೆ ವಿವಿಧ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ 12 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಉಡುಪಿಯಲ್ಲಿ ಬಂಧಿಸಿದ್ದಾರೆ.
ಮಹಾನರ ಪಾಲಿಕೆಯಲ್ಲಿ ಜನಪ್ರತಿನಿಧಿಗಳ ಆಡಳಿತ ಪೂರ್ಣಗೊಂಡು ಫೆ. 27ಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿದೆ. ಸದ್ಯಕ್ಕೆ ಚುನಾವಣೆ ನಡೆಯುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ.