Showing 20 of 21651 articles • Page 227 of 1083
ಬೆನ್ನ ಹಿಂದೆ ನಿಂತು ಬೆನ್ನೆಲುಬಾಗಬೇಕಿದ್ದ ಉದ್ಯೋಗಿಯೇ, ಬೆನ್ನಿಗೆ ಚೂರಿ ಹಾಕುವ ‘ಬ್ರೂಟಸ್’ ಆಗಿ ಬದಲಾದ ಕಥೆಯಿದು. ಈ ಕತೆಯ ವಿಲನ್ ಹೆಸರು ಅಭಿಷೇಕ್ ಸುರೇಂದ್ರ ಪೂಜಾರಿ. ಮೂಲತಃ ಉಡುಪಿಯ ಕಾಪು ನಿವಾಸಿ, ಮಂಗಳೂರಿನ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಅನ್ನ ಹಾಕಿ ಆಶ್ರಯ ಕೊಟ್ಟ ಮಾಲೀಕರಿಗೇ ಸ್ಕೆಚ್ ಹಾಕಿದ್ದಾರೆ.
ಕರ್ನಾಟಕದ 11 ಜಿಲ್ಲೆಗಳಲ್ಲಿ ದಿಢೀರ್ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಡುಗು, ಸಿಡಿಲು ಸಹಿತ ಲಘು ಮಳೆಯಾಗಲಿದ್ದು, ಬಿರುಗಾಳಿಯೂ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬಾಡಿ ಬಿಲ್ಡರ್ ಮಯಾಂಕ್ ಪವಾರ್ (37) ಹಠಾತ್ ಮೃತಪಟ್ಟಿದ್ದಾರೆ. ಸ್ಪ್ಲಿಟ್ಸ್ವಿಲ್ಲಾ 7ನೇ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ಮೂಲಕ ಪವಾರ್ ಭಾರಿ ಜನಪ್ರಿಯತೆ ಪಡೆದಿದ್ದರು.
ಇಲೆಕ್ಟ್ರಿಕ್ ಸ್ಕೂಟರ್ಗೆ ಬೆಂಕಿ ತಗುಲಿದ ಘಟನೆ ಕಾಸರಗೋಡು ಹೊರವಲಯದ ಅಣಂಗೂರಿನಲ್ಲಿ ನಡೆದಿದೆ.
ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿಬಿ-ರಾಮ್-ಜಿ ಕಾಯ್ದೆ ರದ್ದು ಮಾಡುವುದು ಮಾತ್ರವಲ್ಲದೆ, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ(ಮನರೇಗಾ) ಯೋಜನೆಯನ್ನು ಮರು ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿ ನಂಜನಗೂಡಿನಲ್ಲಿ ಬೃಹತ್ ಪಾದಯಾತ್ರೆ ಮಾಡಲಾಯಿತು.
ದೇಶದಲ್ಲಿರುವ ಟೋಲ್ ಪ್ಲಾಜಾಗಳನ್ನು ಡಿಜಿಟಲೀಕರಣ ಮಾಡುವ ಉದ್ದೇಶದಿಂದ ಏಪ್ರಿಲ್ 1 ನೇ ತಾರೀಖಿನಿಂದ ನಗದು ಪಾವತಿ ಸೇವೆಯನ್ನು ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ 80 ಬಡಗುಬೆಟ್ಟು ಗ್ರಾಮದ ರಾಹುಲ್ನಗರದ ವೀರ ಮಾರುತಿ ಭಜನಾ ಮಂದಿರ ಬಳಿ ಪಾರ್ಕ್ ಮಾಡಿದ್ದ ಪಲ್ಸರ್ ಬೈಕ್ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಕ್ಷೀಪ್ರ ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸರು ಕೇವಲ 11ಗಂಟೆಗಳಲ್ಲಿ ಇಬ್ಬರು ಕುಖ್ಯಾತ ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಡೂರು ಪೇಟೆಯಲ್ಲಿ ಕಟಿಂಗ್ ಶಾಪ್ನಲ್ಲಿ ನಡೆದ ಘಟನೆಯನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಪ್ರಚೋದನೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಆದಿಮ ಕಲಾ ಟ್ರಸ್ಟ್ (ರಿ.), ಉಡುಪಿ, ತನ್ನ ಮೊದಲ ವಾರ್ಷಿಕೋತ್ಸವದ ಸವಿನೆನಪಿಗಾಗಿ ಪ್ರಖ್ಯಾತ ಭಾರತೀಯ ಪುರಾತತ್ವ ವಿದ್ವಾಂಸ ಡಾ. ರವೀಂದ್ರ ಕೋರಿಸೆಟ್ಟರ್ ರವರಿಗೆ, ಆದಿಮ ಕಲಾ ರತ್ನ ಎಂಬ ರಾಷ್ಟ್ರೀಯ ಪ್ರಶಸ್ತಿಯನ್ನು ಅತ್ಯಂತ ಸಂತೋಷ ಮತ್ತು ಸಂಭ್ರಮದಿಂದ ಕೊಡಮಾಡುತ್ತಿದೆ. ಈ ಪ್ರಶಸ್ತಿಯು ರೂ.25.000/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.
ಉತ್ಪಾದನೆ ಕೊರತೆ ಎದುರಿಸುತ್ತಿರುವ ರಬ್ಬರ್ ಬೆಳೆಯ ಧಾರಣೆ ದಿನದಿಂದ ದಿನಕ್ಕೆ ಏರಿಕೆ ಕಂಡಿದೆ. ರಬ್ಬರ್ ಖರೀದಿ ಸಂಸ್ಥೆಗಳು ಧಾರಣೆ ಏರಿಕೆ ಖರೀದಿಗೆ ಮುಂದಾಗುತ್ತಿದ್ದರೂ ಪೂರೈಕೆ ಮಾತ್ರ ಇಳಿಕೆ ಹಾದಿಯಲ್ಲೇ ಸಾಗಿದೆ.
ಭಾರತ ಸರ್ಕಾರದ ವಾರ್ತಾ ಶಾಖೆ, ಬೆಂಗಳೂರು (ಪಿಐಬಿ) ವತಿಯಿಂದ ಇಂದು ಉಡುಪಿಯಲ್ಲಿ ವಿಕಸಿತ ಭಾರತ ಜಿ ರಾಮ್ ಜಿ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಆಯೋಜಿಸಿದ್ದ ‘ವಾರ್ತಾಲಾಪ’ ಕಾರ್ಯಾಗಾರವನ್ನು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಿದರು.
ಕಾಪು ತಾಲೂಕು ಕಟಪಾಡಿ ಏಣಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ನಗರದ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಮೂಲತಃ ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ದೀಪ ಸುರೇಶ ಲಮಾಣಿ (20) ಎನ್ನುವ ಯುವತಿಯು ಫೆಬ್ರವರಿ 20 ರಂದು ಕಾಲೇಜಿಗೆ ರಜೆ ಮಾಡಿ ಮನೆಯಿಂದ ಹೊರ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಮಕ್ಕಳ ಹಾಗೂ ಯುವಜನರ ಕಲಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಆಯೋಜಿಸಿದ್ದ 2025-26ನೇ ಸಾಲಿನ ‘ಕಲಾಪ್ರತಿಭೋತ್ಸವ’ದಲ್ಲಿ ಧಾರವಾಡದ ಸಾನ್ವಿ ಯರಗೊಪ್ಪ ರಾಜ್ಯಮಟ್ಟದ ಪ್ರಥಮ ಸ್ಥಾನ ಗಳಿಸಿದ್ದಾರೆ.
ಕೇರಳವನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಬಹುನಿರೀಕ್ಷಿತ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಪರಿಗಣಿಸಲು ಸಜ್ಜಾಗಿದ್ದು, ರಾಜ್ಯದ ಸಾಂವಿಧಾನಿಕ ಹೆಸರನ್ನು ಅದರ ಸಾಂಪ್ರದಾಯಿಕ ಮಲಯಾಳಂ ಉಚ್ಚಾರಣೆ ಮತ್ತು ಸಾಂಸ್ಕೃತಿಕ ಗುರುತಿಗೆ ಅನುಗುಣವಾಗಿ ಬದಲಾಯಿಸಲು ಮುಂದಾಗಿದೆ.
ಯೆನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯ ಅಧೀನದ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಇಎನ್ಟಿ, ಹೆಡ್ ಅಂಡ್ ನೆಕ್, ಕಾಕ್ಲಿಯರ್ ಇಂಪ್ಲಾಂಟ್ ಮತ್ತು ಸ್ಕಲ್ ಬೇಸ್ ಸರ್ಜರಿ ವಿಭಾಗವು ಏಕಕಾಲಿಕ ದ್ವಿಪಾಶ್ವೀಯ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯನ್ನು SmartNav(SmartNavigation) ಇಂಟ್ರಾಒಪರೇಟಿವ್ ತಂತ್ರಜ್ಞಾನ ಬಳಸಿ ಜನ್ಮಜಾತವಾಗಿ ಉಭಯ ಕಿವಿಗಳಲ್ಲೂ ಶ್ರವಣ ನಷ್ಟ ಹೊಂದಿದ್ದ ಮೂರು ವರ್ಷ ಪ್ರಾಯದ ಮಗುವಿಗೆ ಯಶಸ್ವಿಯಾಗಿ ನೆರವೇರಿಸಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ ಯೋಜನೆ)ಯ ಹೆಸರು ಬದಲಾವಣೆ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಶಾಲಾ ಮಕ್ಕಳಿಗೆ ಸಂವಹನ ಕೌಶಲ ತರಬೇತಿ ನೀಡುವ ನಗರದ ಸಂಸ್ಥೆಯೊಂದರ ಮುಖ್ಯಸ್ಥರನ್ನು ಅದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಯೊಬ್ಬ ಖಾಸಗಿ ವೀಡಿಯೋ ಇದೆ ಎಂದು ಬ್ಲ್ಯಾಕ್ ಮೇಲ್ ಮಾಡಿ ಈಗ ಬಂಧಿತನಾಗಿದ್ದಾನೆ. ಆರೋಪಿ ಉಡುಪಿ ಕಾಪುವಿನ ಅಭಿಷೇಕ್ ಸುರೇಂದ್ರ ಪೂಜಾರಿ ಬಂಧಿತ.
ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಕಾರಿನಲ್ಲಿದ್ದವರು ಪವಾಡ ಸದೃಶವಾಗಿ ಯಾವುದೇ ಗಾಯಗಳಿಲ್ಲದೆ ಪಾರಾಗಿರುವ ಘಟನೆ ಸುಳ್ಯ-ಬೆಳ್ಳಾರೆ ರಸ್ತೆಯ ಬೆಂಗಮಲೆಯಲ್ಲಿ ಸೋಮವಾರ ಸಂಭವಿಸಿದೆ.
ಶಿರಾ ತಾಲ್ಲೂಕಿನ ಬೆಂಚೆ ಗೇಟ್ ಬಳಿ ಚಿನ್ನದಂಗಡಿ ದೋಚಿ ಪರಾರಿಯಾಗುತ್ತಿದ್ದ ದರೋಡೆಕೋರರನ್ನು ಪೊಲೀಸರು 12 ಗಂಟೆಯಲ್ಲಿ ಬಂಧಿಸಿ, ₹26 ಲಕ್ಷ ಮೌಲ್ಯದ ಚಿನ್ನ– ಬೆಳ್ಳಿ ಆಭರಣ ಜಪ್ತಿ ಮಾಡಿದ್ದಾರೆ.
ಮ್ಯಾಟ್ರಿಮೋನಿಯಲ್ನಲ್ಲಿ ಪರಿಚಯವಾದ ಯುವತಿಯೊಬ್ಬಳು ಕ್ರಿಪ್ಟೋ ಹೂಡಿಕೆ ನೆಪದಲ್ಲಿ ಯುವಕನಿಗೆ 21.11 ಲಕ್ಷ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.