Showing 20 of 21651 articles • Page 228 of 1083
ಫೆ.26ಕ್ಕೆ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭಾರತಕ್ಕೆ ಆಗಮಿಸಲಿದ್ದಾರೆ.
ಅಮೆರಿಕದಲ್ಲಿ ಭಾರಿ ಹಿಮಪಾತವಾಗಿದ್ದು 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ವ್ಯಕ್ತಿಯೋರ್ವನನ್ನು ಕಾರಿನಲ್ಲಿ ಬಲವಂತವಾಗಿ ಅಪಹರಿಸಿದ ಘಟನೆ ಮಂಜೇಶ್ವರದ ಪಾವೂರುನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಪಟ್ಟಂತೆ ನಾಲ್ವರನ್ನು ಮಂಜೇಶ್ವರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗಷ್ಟೇ ಕರಾವಳಿಯ ಅತ್ಯಂತ ಹಿಂದುಳಿದ ಸಮುದಾಯವಾದ ಕೊರಗ ಸಮುದಾಯದ ಮನೆಯಲ್ಲಿ ವಾಸ್ತವ್ಯ ಹೂಡಿ, ಕೊರಗ ಬಂಧುಗಳೊಂದಿಗೆ ಊಟೋಪಚಾರ, ಸಂವಾದ ನಡೆಸಿ ಸುದ್ದಿಯಾಗಿದ್ದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಇದೀಗ ಎಸ್ಸಿ ಕಾಲನಿಯಲ್ಲಿ ಸಹಭೋಜನ ನಡೆಸಿದ್ದಾರೆ.
ಸುಳಗೋಡು ಶಾಲೆಯಲ್ಲಿ ನಡೆಯುತ್ತಿರುವ ಎನ್ಎಸ್ಎಸ್ ಶಿಬಿರಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಕಾಲೇಜು ಬಸ್, ಹಳ್ಳಿಹೊಳೆ ಗ್ರಾಮದ ಶೆಟ್ಟಿಪಾಲು ಬಳಿ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಅಪಘಾತ ಸಂಭವಿಸಿದೆ.
ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ ನಡೆಸಿ ಕೆಲವೊಂದು ನಿಷೇಧಿತ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಐದಾರು ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸರು ಎಂಟು ಜನ ಅನ್ಯಕೋಮಿ ಯುವಕರನ್ನು ವಶಕ್ಕೆ ಪಡೆದಿದ್ದಾರೆ.
ಎಮ್ ಡಿ ಎಮ್ ಎ ಪೂರೈಸುತ್ತಿದ್ದ ಪೆಡ್ಲರ್ ಗಳನ್ನು ಮೈಸೂರಲ್ಲಿ ಬಂಧಿಸಲಾಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಐವರು ಮಕ್ಕಳು ಮತ್ತು ಒಬ್ಬ ಮಹಿಳೆ ಸೇರಿದಂತೆ ಆರು ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮೀರತ್ ನ ಕಿದ್ವಾಯಿ ನಗರದಲ್ಲಿ ನಡೆದಿದೆ.
ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ನಡೆದಿದೆ.
ರಾಜ್ಯದಲ್ಲಿ ಪವರ್ ಶೇರಿಂಗ್ ವಿವಾದ ವಿಚಾರವಾಗಿ ಮಾಜಿ ಸಿಎಂ ಎಂ ವೀರಪ್ಪ ಮೊಯ್ಲಿ ಹೇಳಿಕೆ ನೀಡಿದರು. ಜನರಿಗೆ ಒಳ್ಳೆಯ ಸರಕಾರ ಬೇಕು. ಭ್ರಷ್ಟಾಚಾರ ರಹಿತ ಸದೃಢ ಸರಕಾರ ಬೇಕು. ಗ್ಯಾರಂಟಿ ಕಾರ್ಯಕ್ರಮಗಳಿಂದ ಬಡವರಿಗೆ ಅನುಕೂಲವಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನರ ಹಸಿವು ಮುಕ್ತ ಮಾಡಿದೆ ಎಂದರು.
ಕಿಸಾನ್ ಸಭಾ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ‘ಕಿಸಾನ್ ಸಭಾ’ ಸಭಾಂಗಣದ ಉದ್ಘಾಟನೆ ಹಾಗೂ ಕುಕ್ಕುಂದೂರಿನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ಸಂಭ್ರಮೋತ್ಸವ ಇದೇ ಫೆ. 25ರಂದು ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ ತಿಳಿಸಿದರು.
ಮಂಗಳೂರು ಧರ್ಮಪ್ರಾಂತ್ಯದ ಕಾರಿಸ್ಮಾತಿಕ್ ಸರ್ವಿಸ್ ಕಮ್ಯುನಿಯನ್ ಮತ್ತು ಧರ್ಮಪ್ರಾಂತ್ಯದ ಬೈಬಲ್ ಆಯೋಗದ ಸಹಯೋಗದೊಂದಿಗೆ, ಕುಲಶೇಕರದ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್ ಮೈದಾನದಲ್ಲಿ ಫೆಬ್ರವರಿ 26 ರಿಂದ ಮಾರ್ಚ್ 01, 2026 ರವರೆಗೆ ನಾಲ್ಕು ದಿನಗಳ ಕಾಲ ‘ಬೃಹತ್ ಬೈಬಲ್ ಅಧಿವೇಶನ 2026’ ಅನ್ನು ಆಯೋಜಿಸಲಾಗಿದೆ. ಈ ಆಧ್ಯಾತ್ಮಿಕ ಕಾರ್ಯಕ್ರಮವು ಪ್ರತಿದಿನ ಸಂಜೆ 4:00 ರಿಂದ 8:30 ರವರೆಗೆ ನಡೆಯಲಿದೆ.
ನಕಲಿ ಹುಲಿ ಉಗುರುಗಳನ್ನು ಅಸಲಿ ಎಂದು ನಂಬಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಉಡುಪಿ ಅರಣ್ಯ ಇಲಾಖೆಯವರು ವಶಕ್ಕೆ ಪಡೆದಿದ್ದಾರೆ.
ರಾಜ್ಯದಲ್ಲಿ ಈ ವರ್ಷ ಬೇಸಿಗೆಯು ನಿರೀಕ್ಷೆಗಿಂತ ಮೊದಲೇ ಆರಂಭವಾಗಿದ್ದು, ಫೆಬ್ರವರಿಯಲ್ಲೇ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಹೀಗಿರುವಾಗ ತಾಪಮಾನ ಇನ್ನಷ್ಟು ಏರಿಕೆಯಾಗುವ ಮತ್ತು ಈ ವರ್ಷ ರಾಜ್ಯದಲ್ಲಿ ಸಾಮಾನ್ಯಕ್ಕಿಂತ ಅಧಿಕ ತಾಪಮಾನ ಇರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಹೆಸರಘಟ್ಟ ಹೋಬಳಿಯ ಬ್ಯಾತಾ-ಸೀರೇಸಂದ್ರ ಗ್ರಾಮದಲ್ಲಿ ಭಾನುವಾರ ಗ್ರಾಮದಲ್ಲಿ ನಡೆದಿದೆ.
ಕರಾವಳಿ ಭಾಗದಲ್ಲಿ ಬೆಳೆಯುವ ಬಾಳೆ ಎಲೆಗಳಿಗೆ ನೆರೆಯ ಕೇರಳ ರಾಜ್ಯದಲ್ಲಿ ಭಾರೀ ಬೇಡಿಕೆ ವ್ಯಕ್ತವಾಗಿದೆ. ವಿಶೇಷವಾಗಿ ಹಬ್ಬ -ಜಾತ್ರೆ, ಮದುವೆ ಸಮಾರಂಭ ಮತ್ತು ದೇವಸ್ಥಾನಗಳ ಅನ್ನಸಂತರ್ಪಣೆ ಕಾರ್ಯಕ್ರಮ ಗಳ ಸಂದರ್ಭಗಳಲ್ಲಿ ಕೇರಳದ ವ್ಯಾಪಾರಿಗಳು ಕರಾವಳಿಯತ್ತ ಮುಖ ಮಾಡುತ್ತಿದ್ದಾರೆ.
ನೂತನ ವಸ್ತ್ರಮಳಿಗೆಯೊಂದನ್ನು ತೆರೆಯುವ ಸಂಭ್ರಮದಲ್ಲಿದ್ದ ಯುವಕನೋರ್ವ ಅದೇ ಮಳಿಗೆಯಲ್ಲಿ ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ತೊಕ್ಕೊಟ್ಟುವಿನ ಹೃದಯಭಾಗದಲ್ಲಿ ನಡೆದಿದೆ.
ಲವ್ ಮ್ಯಾಟರ್ ಹಿನ್ನಲೆ ಧ್ವೇಷ ಬೆಳೆಸಿಕೊಂಡ ಯುವಕನ ಕೊಲೆಗೆ ಮಾರಕಾಸ್ತ್ರಗಳ ಸಮೇತ ಬಂದಿದ್ದ ಗ್ಯಾಂಗ್ ಸ್ಕೆಚ್ ವಿಫಲವಾಗಿದೆ. ಪರಾರಿಯಾದ ಕೆಲವೇ ಗಂಟೆಗಳಲ್ಲಿ ಆಲನಹಳ್ಳಿ ಪೊಲೀಸರು ಆರೋಪಿಗಳ ಹೆಡೆಮುರಿಕಟ್ಟಿ ಕಂಬಿ ಎಣಿಸಲು ಕಳಿಸಿದ್ದಾರೆ.
ಇಇಪಿಎ ಅಡಿಯಲ್ಲಿ ಟ್ರಂಪ್ ವಿಧಿಸಿರುವ ಸುಂಕಗಳು ಕಾನೂನುಬಾಹಿರವೆಂದು ಸುಪ್ರೀಂ ಕೋರ್ಟ್ ಹೇಳಿತ್ತು. ಸುಂಕಗಳನ್ನು ಸಂಗ್ರಹಿಸುವುದನ್ನು ನಾಳೆಯಿಂದ ಯುಎಸ್ ಕಸ್ಟಮ್ಸ್ ನಿಲ್ಲಿಸಲಿದೆ.