Showing 20 of 21651 articles • Page 229 of 1083
ಹಾಡಹಗಲೇ ಚಿನ್ನದಂಗಡಿ ದರೋಡೆ ಮಾಡಿದ ಘಟನೆ ತುಮಕೂರು ಜಿಲ್ಲೆಯ ಶಿರಾದಲ್ಲಿ ನಡೆದಿದೆ.
ಮಹಾಕಾಳಿಪಡ್ಡು ರೈಲ್ವೇ ಅಂಡರ್ಪಾಸ್ ಮೂಲಕ ವಾಹನ ಸಂಚಾರ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಇದರ ಜತೆಗೆ ಪಂಪ್ವೆಲ್- ಕಂಕ ನಾಡಿ ರಸ್ತೆ ಕಾಮಗಾರಿಯಿಂದಾಗಿ ಮಹಾ ಕಾಳಿಪಡ್ಪು ಅಂಡರ್ಪಾಸ್ ರಸ್ತೆಯನ್ನು ಬಳಕೆ ಮಾಡುವವರ ಸಂಖ್ಯೆ ಅಧಿಕವಾಗಿದೆ. ಪರಿಣಾಮವಾಗಿ ಪಾಂಡೇಶ್ವರ ರೈಲ್ವೇ ಲೆವೆಲ್ ಕ್ರಾಸಿಂಗ್ ಬಳಿ ಸಂಚಾರ ಸಂಕಷ್ಟ ಇದೀಗ ಗಣನೀಯವಾಗಿ ಕಿರಿಕಿರಿ ಸೃಷ್ಟಿಸುತ್ತಿದೆ.
ಫೆ.26 ರಂದು ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಸಪ್ತಪದಿ ತುಳಿಯಲಿದ್ದು, ಮದುವೆ ಆಮಂತ್ರಣವನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ.
ಮೊಬೈಲ್ ನಂಬರ್ ಕೊಡು ಇಲ್ಲಾಂದ್ರೆ ನಿನ್ನ ಗಂಡನ್ನ ಕೊಲೆ ಮಾಡ್ತೀನಿ ಎಂದು ಬೆದರಿಕೆ ಒಡ್ಡಿದ ರೋಮಿಯೋ ವಿರುದ್ದ ವಿಜಯನಗರ ಠಾಣೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಹಿನಕಲ್ ನ ದೇವರಾಜು ಎಂಬಾತನ ವಿರುದ್ದ ನೊಂದ ಗೃಹಿಣಿ ಪ್ರಕರಣ ದಾಖಲಿಸಿದ್ದಾರೆ.
ಅಸುರಕ್ಷಿತ ಹಂಪ್ ಕಾರಣದಿಂದ ಬೈಕ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ ಪರಿಣಾಮ ಇಬ್ಬರು ಯುವತಿಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಖಾಸಗಿ ವ್ಯಕ್ತಿ ಓಡಾಡುವ ರಸ್ತೆ ಒತ್ತುವರಿ ಮಾಡಿಕೊಂಡ ಪರಿಣಾಮ 25 ಕ್ಕೂ ಹೆಚ್ಚು ಕುಟುಂಬ ಅತಂತ್ರಕ್ಕೆ ಸಿಲುಕಿದೆ. ರಸ್ತೆ ಒತ್ತುವರಿ ತೆರುವುಗೊಳಿಸುವಂತೆ ನ್ಯಾಯಾಲಯ ಹಾಗೂ ತಹಶೀಲ್ದಾರ್ ಆದೇಶಿಸಿದ್ದರೂ ಸಡ್ಡು ಹೊಡೆದ ವ್ಯಕ್ತಿ ಬಂದ್ ಮಾಡುವ ಮೂಲಕ ನಿವಾಸಿಗಳಿಗೆ ಕಿರುಕುಳ ನೀಡುತ್ತಿರುವ ಪ್ರಕರಣವೊಂದು ನಂಜನಗೂಡಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಒಳಮೀಸಲಾತಿ ಪದ್ಧತಿಯು ಬಲಗೈ ಸಮುದಾಯದ ಮರಣ ಶಾಸನವಾಗಿದ್ದು ಇದನ್ನ ತಕ್ಷಣವೇ ಹಿಂಪಡೆಯಬೇಕು ಎಂದು ಡಾ.ನವೀನ್ ಮೌರ್ಯ ಒತ್ತಾಯಿಸಿದರು.
ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಹುಚ್ಚಾಟ ಮೆರೆದ ಯುವಕನನ್ನು ರಕ್ಷಣೆ ಮಾಡಿರುವ ಘಟನೆ ಉಡುಪಿ ಕಲ್ಸಂಕ ಜಂಕ್ಷನ್ ನಲ್ಲಿ ನಡೆದಿದೆ.
ಭಾರತೀಯ ವಾಯುಪಡೆಯ ಮತ್ತೊಂದು ತೇಜಸ್ ಲಘು ಯುದ್ಧ ವಿಮಾನ ಅಪಘಾತದಲ್ಲಿ ಪತನವಾಗಿದೆ.
ಸಿಗರೇಟ್ ನ ದುಡ್ಡು ಕೇಳಿದ್ದಕ್ಕೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಪ್ರಕರಣವನ್ನು ಖಂಡಿಸಿ ಕಾಫಿನಾಡಲ್ಲಿ ಜನಾಕ್ರೋಶ ತೀವ್ರಗೊಂಡಿದೆ. ನಿನ್ನೆ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ ಸೋಮವಾರ ಶೃಂಗೇರಿ ವಿಧಾನಸಭಾ ಕ್ಷೇತ್ರ ಬಂದ್ ಮಾಡಲಾಯಿತು.
ಪ್ರಯಾಣಿಕರ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಪರಿಣಾಮ 18 ಮಂದಿ ಮೃತಪಟ್ಟಿರುವ ಘಟನೆ ಸೋಮವಾರ ಮುಂಜಾನೆ ದಕ್ಷಿಣ ಏಷ್ಯಾದ ನೇಪಾಳದಲ್ಲಿ ನಡೆದಿದೆ.
ಸುಗಂಧ ದ್ರವ್ಯಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರು ಹೊರವಲಯದಲ್ಲಿನ ನೆಲಮಂಗಲ ತಾಲೂಕಿನ ಮಾಕಳಿ ಬಳಿ ನಡೆದಿದೆ.
ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ ಆಕ್ರೋಷ ವ್ಯಕ್ತಪಡಿಸಿದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಚುಂಚಗಹಳ್ಳಿಯಲ್ಲಿ ನಡೆದಿದೆ.
ಮಾಜಿ ಶಾಸಕರ ಕಾರು ಅಪಘಾತವಾಗಿದ್ದು, ಸುರೇಶ್ಗೌಡರ ಎಡಗೈ ಮುರಿತವಾಗಿದೆ. ಬಸರಾಳು-ಕೊಪ್ಪ ಮಾರ್ಗ ಮಧ್ಯೆ ಆಕ್ಸಿಡೆಂಟ್ ನಡೆದಿದೆ.
ಮಹಿಳೆಯರ ಮುಂದೆ ಮೂತ್ರ ವಿಸರ್ಜನೆ ಮಾಡುತ್ತಿದ್ದ ಶಿಕ್ಷಕನನ್ನು ಪ್ರಶ್ನೆ ಮಾಡಿದ ವ್ಯಕ್ತಿಯ ಜೊತೆ ಗಲಾಟೆ ನಡೆದು ಚಾಕುವಿನಿಂದ ಇರಿದ ಘಟನೆ ಸಾಲಿಗ್ರಾಮ ತಾಲ್ಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗಬ್ಬೆದ್ದು ನಾರುತ್ತಿರುವ ಚರಂಡಿ ವ್ಯವಸ್ಥೆಗೆ ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ. ವರ್ಷಗಳೇ ಉರುಳಿದರೂ ಚರಂಡಿಗಳು ಮಾತ್ರ ಸ್ವಚ್ಛತೆ ಕಾಣದೆ ದುರ್ನಾತ ಬೀರುತ್ತಿವೆ. ಗ್ರಾಮ ಪಂಚಾಯಿತಿ ಆಡಳಿತಕ್ಕೆ ಗ್ರಾಮಸ್ಥರು ಇಡೀ ಶಾಪ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂಜನಗೂಡು ತಾಲ್ಲೂಕಿನ ನವಿಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಳಾರಹುಂಡಿ ಗ್ರಾಮದಲ್ಲಿ ಗ್ರಾಮಸ್ಥರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಕರ್ನಕಟ್ಟೆ, ಮಂಗಳೂರಿನ ಇನ್ಫಂಟ್ ಜೀಸಸ್ ಶ್ರೈನ್ನಲ್ಲಿ ಫೆಬ್ರವರಿ 21, 2026 ರಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರಾರ್ಥನಾ ವಿಧಿಯನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮತ್ತು ಭವಿಷ್ಯಕ್ಕಾಗಿ ದೇವರ ಆಶೀರ್ವಾದವನ್ನು ಬೇಡುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಸಲಾಯಿತು.
ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ವಿರಾಜಪೇಟೆ ಪೊಲೀಸರು ಬಂಧಿಸಿದ್ದು, ಅವರಿಂದ 1 ಕೆಜಿ 60 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಲಂಚ ಸ್ವೀಕರಿಸುವಾಗ ಲೋಕಾಯುಕ್ತಕ್ಕೆ ಟ್ರ್ಯಾಪ್ ಆದ ಪ್ರಕರಣದಲ್ಲಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರಿಗೆ ಮಾ.2ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.