Showing 20 of 21592 articles • Page 23 of 1080
ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ (ಕಡಿಯಾಳಿ) ವತಿಯಿಂದ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಕಾತ್ಯಾಯಿನಿ ಮಂಟಪದಲ್ಲಿ ಸೆ.14ರಿಂದ 20ರವರೆಗೆ 60ನೇ ಶ್ರೀಗಣೇಶೋತ್ಸವ (ವಜ್ರ ಮಹೋತ್ಸವ) ನಡೆಯಲಿದೆ ಎಂದು ಸಮಿತಿ ಗೌರವಾಧ್ಯಕ್ಷ ಹಾಗೂ ಶಾಸಕ ಯಶಪಾಲ್ ಎ. ಸುವರ್ಣ ತಿಳಿಸಿದರು.
ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯುವಲ್ಲಿ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜನರ ಬಳಿಗೆ ತೆರಳಿ ಸಮಸ್ಯೆ ಆಲಿಸಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸಿರುವುದು ಬಿಜೆಪಿಯ ಮನುಸ್ಮೃತಿ ಮನಸ್ಥಿತಿಗೆ ಸಾಕ್ಷಿ. ದಲಿತರ ಮೂಲಕ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಅಪಮಾನ ಮಾಡುವ ಕೆಲಸ ನಡೆಯುತ್ತಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಆರೋಪಿಸಿದರು.
ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಕಾಪು ತಾಲೂಕಿನ ಇನ್ನಂಜೆ ಗ್ರಾಮದಲ್ಲಿ ಬೆಳೆದಿರುವ ಕಪ್ಪು ಕಬ್ಬು ಕಟಾವಿಗೆ ಸಿದ್ಧವಾಗಿದ್ದು, ಹಬ್ಬದ ಪೂಜಾ ಮಂಟಪಗಳ ಅಲಂಕಾರಕ್ಕೆ ವಿಶೇಷ ಬೇಡಿಕೆ ಪಡೆದುಕೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಆಟೋರಿಕ್ಷಾ ಸಂಘಟನೆಗಳು ಕನಿಷ್ಠ ಪ್ರಯಾಣ ದರವನ್ನು ₹50ಕ್ಕೆ ಹಾಗೂ ಪ್ರತಿ ಕಿಲೋಮೀಟರ್ಗೆ ₹30ಕ್ಕೆ ಹೆಚ್ಚಿಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿವೆ. ಬೇಡಿಕೆಗಳನ್ನು ಈಡೇರಿಸದಿದ್ದರೆ ಜಿಲ್ಲಾದ್ಯಂತ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿವೆ.
ಇಲ್ಲಿನ ಭಾರತ್ ಮಂಟಪದಲ್ಲಿ ಆರಂಭವಾಗಿರುವ 18ನೇ ಬ್ರಿಕ್ಸ್ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬ್ರಿಕ್ಸ್ ಒಕ್ಕೂಟವು ಯಾವುದೇ ದೇಶದ ವಿರುದ್ಧ ಇರುವ ವೇದಿಕೆಯಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕರ್ನಾಟಕ ಸರ್ಕಾರದ ಆದೇಶವನ್ನು ಮೀರಿ ಚುನಾವಣೆ ನಡೆಸಲಾಗಿದೆ ಎಂದು ಆರೋಪಿಸಿರುವ NSUI, ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.
ಪಶ್ಚಿಮಘಟ್ಟ ಸಂರಕ್ಷಣೆ ನೆಪದಲ್ಲಿ ಕಸ್ತೂರಿರಂಗನ್ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಲು ಕೇಂದ್ರ ಸರ್ಕಾರ ಹೊರಟಿರುವುದು ಕರಾವಳಿ ಮತ್ತು ಮಲೆನಾಡು ಭಾಗದ ಜನರ ಅಭಿವೃದ್ಧಿಗೆ ಮಾರಕವಾಗಲಿದೆ.
ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಮೊಬೈಲ್ ಜಾಮರ್ ವ್ಯವಸ್ಥೆಯಿಂದ ಕಳೆದ ಎರಡು ವರ್ಷಗಳಿಂದ ಮಂಗಳೂರು ನ್ಯಾಯಾಲಯ, ಸುತ್ತಮುತ್ತಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಹೋಟೆಲ್ಗಳು, ವಸತಿ ವ್ಯವಸ್ಥೆಗಳು ಹಾಗೂ ವಿವಿಧ ವ್ಯಾಪಾರ-ವಾಣಿಜ್ಯ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗುತ್ತಿದೆ.
ಕಾರ್ಕಳ ತಾಲೂಕಿನ ಪುರಸಭಾ ವ್ಯಾಪ್ತಿಯ ಮನೆ ರಹಿತರಿಗೆ ಸರ್ಕಾರದ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಆಶ್ರಯ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸುವಲ್ಲಿ ಶಾಸಕ ವಿ. ಸುನಿಲ್ ಕುಮಾರ್ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು.
ಜಿಬಿಎ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 14ರಂದು ಮಾಂಸ ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಈ ಬಾರಿ ಮೈಸೂರು ದಸರಾದಲ್ಲಿ ಸ್ಯಾಂಡಲ್ವುಡ್ ಸ್ಟಾರ್ಗಳ ಕಳೆ ಕಾಣಲಿದ್ದು, ದಸರಾಕ್ಕೆ ಬೆಳ್ಳಿ ಪರದೆಯ ಮೆರುಗು ಬರಲಿದೆ.
ಶಿಕ್ಷಣವೆಂಬುದು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗಿಲ್ಲ.
ದೇವಿರಮ್ಮನಹಳ್ಳಿ ಕೆರೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮರುಜೀವ ಸಿಕ್ಕಿದೆ. ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ 949ನೇ ಕೆರೆಯಾಗಿ ಅಭಿವೃದ್ಧಿಪಡಿಸಿ ಗ್ರಾಮಸ್ಥರಿಗೆ ಹಸ್ತಾಂತರ ಮಾಡಲಾಗಿದೆ.
ಕಾಪು ವಿಧಾನಸಭಾ ಕ್ಷೇತ್ರದ ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ₹3.85 ಕೋಟಿ ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶುಕ್ರವಾರ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ ನೆರವೇರಿಸಿದರು.
ಪಿಕಪ್ ವಾಹನದ ಹಿಂಭಾಗದಲ್ಲಿ ಸುಮಾರು 8ರಿಂದ 10 ಮಕ್ಕಳನ್ನು ನಿಲ್ಲಿಸಿಕೊಂಡು ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸಿದ ಆರೋಪದ ಮೇಲೆ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೈಜ ಮತದಾರರಿಗೆ ವಾಸ್ತವ್ಯ ದೃಢೀಕರಣ ಪತ್ರ ಪಡೆಯುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಲಾಯಿತು.
ಮಣ್ಣಿನಿಂದ ನಿರ್ಮಿತ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಶ್ರದ್ಧಾಭಕ್ತಿಯಿಂದ ಪರಿಸರ ಸ್ನೇಹಿ ಗೌರಿ–ಗಣೇಶ ಹಬ್ಬ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಕರೆ ನೀಡಿದರು.
ಕಟಪಾಡಿ ಅಂಡರ್ಪಾಸ್ ಪ್ರದೇಶದಲ್ಲಿ ಮೀನಿನ ಲಾರಿಯೊಂದು ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.
ಯಾವುದೇ ಪರವಾನಗಿ ಪಡೆಯದೆ ಸರ್ಕಾರಿ ಜಮೀನಿನಲ್ಲಿ ಸ್ಫೋಟಕ ವಸ್ತು ಬಳಸಿ ಬಂಡೆ ಸ್ಫೋಟಿಸಿದ ಆರೋಪದ ಮೇಲೆ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.