Showing 20 of 21651 articles • Page 230 of 1083
ಮದುವೆಗೂ ಮುನ್ನಾ ದಿನವೇ ಇಬ್ಬರು ಸಹೋದರಿಯರು ವಿಷಕಾರಿ ವಸ್ತು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೋಧ್ಪುರದ ಮನೈ ಗ್ರಾಮದಲ್ಲಿ ನಡೆದಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಏರಿಕೆಯಾಗಿದೆ. ಈ ವಾರಾಂತ್ಯದಲ್ಲಿ ಚಿನ್ನ
ಕಾರ್ಮಿಕ ಮಹಿಳೆಯನ್ನು ಸಾಯಿಸಿದ ಕಾಡಾನೆಯನ್ನು ಕೆಲವೇ ಗಂಟೆಯಲ್ಲಿ ಸೆರೆ ಹಿಡಿದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬೆರಣಗೋಡು ಸಮೀಪದ ಕೆರೆಮನೆ ಬಳಿ ನಡೆದಿದೆ.
ಓವರ್ ಡೋಸ್ ಇಂಜೆಕ್ಷನ್ ಚುಚ್ಚಿಕೊಂಡು ವೈದ್ಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವುದು ದಾವಣಗೆರೆ ನಗರದ ಖಾಸಗಿ ವೈದ್ಯಕೀಯ ಕಾಲೇಜ್ ಹಾಸ್ಟೆಲ್ನಲ್ಲಿ ನಡೆದಿದೆ.
16 ವರ್ಷದೊಳಗಿನ ಮಕ್ಕಳಿಗೆ ಶಾಲೆ ಹಾಗೂ ಕಾಲೇಜು ಕ್ಯಾಂಪಸ್ನಲ್ಲಿ ಮೊಬೈಲ್ ಫೋನ್ ನಿಷೇಧ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಲೈಟ್ ಕಂಬವೊಂದು ಮುರಿದು ಮೈಮೇಲೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಗರದ ದಕ್ಕೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಅರಣ್ಯ ಇಲಾಖೆ ಇರಿಸಿದ ಬೋನಿಯಲ್ಲಿ ಚಿರತೆಯೊಂದು ಸೆರೆಯಾದ ಘಟನೆ ಭಾನುವಾರ ಬೆಳಗ್ಗಿನ ಜಾವ ಮಣಿಪುರ ಗ್ರಾಮದ ಕುಂತಲನಗರದ ದೇವಳಗುಜ್ಜಿ ಎಂಬಲ್ಲಿ ನಡೆದಿದೆ.
ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಮಗು ಮೃತಪಟ್ಟು, ದಂಪತಿ ಗಾಯಗೊಂಡಿರುವ ಘಟನೆ ಅಂಪಾರು ಗ್ರಾಮದ ಬಾಲ್ಕಟ್ ಎಂಬಲ್ಲಿ ಫೆ.21ರಂದು ಸಂಜೆ ವೇಳೆ ನಡೆದಿರುವುದು ವರದಿಯಾಗಿದೆ.
ಗೋದಾಮು ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಧಗಧಗ ಹೊತ್ತಿ ಉರಿದಿರುವ ಘಟನೆ ನೆಲಮಂಗಲ ರಸ್ತೆಯ ಮಾಕಳಿ ಬಳಿ ನಡೆದಿದೆ.
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್ ಶೆಟ್ಟಿ ದಂಪತಿ ಭೇಟಿ ನೀಡಿ, ಹನುಮನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ.
1848 ರಲ್ಲಿ ಕಾರ್ಲ್ ಮಾರ್ಕ್ಸ್ ಹಾಗೂ ಫೆಡ್ರಿಕ್ ಎಂಗೆಲ್ಸ್ ಅವರ ಕಮ್ಯುನಿಸ್ಟ್ ಪ್ರಣಾಳಿಕೆ ಬಿಡುಗಡೆಯ ನೆನಪಿನಲ್ಲಿ ಜಗತ್ತಿನಾದ್ಯಂತ ಕೆಂಪು ಪುಸ್ತಕ ದಿನಾಚರಣೆ ನಡೆಸಲಾಗುತ್ತಿದೆ. ಇದು ಜಗತ್ತಿನಲ್ಲಿ ಬೈಬಲ್ ನಂತರದಲ್ಲಿ ಅತೀ ಹೆಚ್ಚು ಮುದ್ರಣ ಕಂಡು ಜಗತ್ತಿನ ವಿವಿಧ ಭಾಷೆಗಳಲ್ಲಿ ಮುದ್ರಿಸಿ ದಾಖಲೆ ಮಾಡಿದ ಮೇರುಕೃತಿ ಆಗಿದೆ ಎಂದು ಪ್ರಗತಿಪರ ಚಿಂತಕರಾದ ಫಣಿರಾಜ್ ಅವರು ಹೇಳಿದರು.
ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಖಂಡಿಸಿ ಕರ್ನಾಟಕ ದಕ್ಷಿಣ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ನಗರದ ಜೋಡುಕಟ್ಟೆಯ ಬಳಿ ಪ್ರತಿಭಟನೆ ನಡೆಸಿ ಬಳಿಕ ರಸ್ತೆತಡೆ ನಡೆಸಲಾಯಿತು.
ವರ್ಕ್ ಫ್ರಮ್ ಹೋಮ್ ಉದ್ಯೋಗದ ಆಫರ್ನಲ್ಲಿದ್ದ ಲಾಭದ ಆಸೆಗೆ ಮರುಳಾಗಿ, ಬೆಂಗಳೂರಿನ 55 ವರ್ಷದ ಮಹಿಳೆಯೊಬ್ಬರು ಬರೋಬ್ಬರಿ 11.3 ಲಕ್ಷ ಕಳೆದುಕೊಂಡಿರುವ ಘಟನೆ ನಡೆದಿದೆ.
ಲೂಡೊ ಕಾಯಿನ್ ನುಂಗಿ ಬಾಲಕಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತೊಕ್ಕಟ್ಟು ಬಳಿ ಕೊಲ್ಯ ಗ್ರಾಮದಲ್ಲಿ ನಡೆದಿದೆ.
ಬಿಸಿಲಿನಿಂದ ಕಂಗಾಲಾಗಿರೋ ಜನರಿಗೆ ಮಳೆ ಸಿಂಚನ ಆಗಲಿದೆ. ಕೆಲ ಪ್ರದೇಶಗಳಲ್ಲಿ ಮಳೆರಾಯನ ಆಗಮನವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ 5 ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್ ಸೂಚಿಸಿದೆ.
ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ 17 ನಾಗರಿಕರು ಸಾವನ್ನಪ್ಪಿದ್ದಾರೆ.
ಒತ್ತುವರಿಯಾಗಿರುವ ರಸ್ತೆ ತೆರುವುಗೊಳಿಸುವಂತೆ ಕುಟುಂಬವೊಂದು ಕಳೆದ ಮೂರು ವರ್ಷಗಳಿಂದ ತಾಲ್ಲೂಕು ಕಛೇರಿಗೆ ಅಲೆದಾಡುತ್ತಿರುವ ಪ್ರಕರಣ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ.
ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಗೆ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ಕೊಟ್ಟಿದ್ದಾರೆ.
ಅಕ್ರಮ ಗೋ ಸಾಗಾಟ ಪತ್ತೆಯಾದ ಘಟನೆ ಮಂಗಳೂರು ಪದವು ಹೈವೇ ಬಳಿ ನಡೆದಿದೆ.
ಕುರ್ಕಾಲು ಗ್ರಾಮದ ಶಂಕರಪುರ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದ ಮಹಿಳೆಯ ಚಿನ್ನದ ಸರ ಸುಲಿಗೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೇವಲ ಮೂರು ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.