Showing 20 of 21651 articles • Page 232 of 1083
ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಿದ ಬೆನ್ನಿಗೇ ಈ ಹಿಂದೆ ಬಳಕೆಯಲ್ಲಿದ್ದ ರೈಲ್ವೇ ಕ್ರಾಸಿಂಗನ್ನು ರೈಲ್ವೇ ಇಲಾಖೆ ಶಾಶ್ವತವಾಗಿ ಬಂದ್ ಮಾಡಿದೆ.
ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯು ಆಯೋಜಿಸಿರುವ 14ನೇ ವರ್ಷದ ನಾಟಕೋತ್ಸವ ‘ರಂಗಹಬ್ಬ–14’ ಫೆಬ್ರವರಿ 22ರಿಂದ 28ರವರೆಗೆ ಉಡುಪಿಯ ಭುಜಂಗ ಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.
ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ವತಿಯಿಂದ 300ನೇ ರಕ್ತದಾನ ಶಿಬಿರ “ಹೆಗ್ಗುರುತು- 300” ಅನ್ನು ಇದೇ ಫೆ. 22ರಂದು ಬೆಳಿಗ್ಗೆ 8.30ರಿಂದ 1ಗಂಟೆಯವರೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯ ಡಾ.ಟಿಎಂಎ ಪೈ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲ್ಯಾನ್ ತಿಳಿಸಿದರು.
ವಿದುಷಿ ಶ್ರೀಯಾ ರಾವ್ ಸಣ್ಣಯ್ಯ ಇವರ ಭರತನಾಟ್ಯ ರಂಗಪ್ರವೇಶವು ಫೆ.22 ರಂದುಸಂಜೆ 5 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ನೃತ್ಯ ಸುಧಾ (ರಿ) ಸಂಸ್ಥೆಯ ಸ್ಥಾಪಕಿ ಮತ್ತು ಶ್ರೀಯಾ ತಾಯಿ ವಿದುಷಿ ಸೌಮ್ಯ ಸುಧೀಂದ್ರ ರಾವ್ ತಿಳಿಸಿದ್ದಾರೆ.
ಬೆಂಗಳೂರಿನ ಗಾರ್ಡನ್ ಸಿಟಿ ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಔಷಧೀಯ ಸಸ್ಯ ಮಂಡಳಿ, ಆಯುಷ್ ಸಚಿವಾಲಯ (National Medicinal Plants Board, Ministry of AYUSH) , ಭಾರತ ಸರ್ಕಾರ, ನವದೆಹಲಿ ಇವರಿಂದ “Species Specific Campaign on Shatavari – For Better Health” ಅಭಿಯಾನದಡಿ ಪ್ರತಿಷ್ಠಿತ ಶತಾವರಿ ಯೋಜನೆ ಮಂಜೂರಾಗಿದೆ.
ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟಿವಿ ಚಾನಲ್ ಗಳಲ್ಲಿ ಕಾರ್ಯ ನಿರ್ವಹಿಸಿದ್ದ ಹಿರಿಯ ಪತ್ರಕರ್ತ ಸುಂದರ ಕಬಕ ಅವರು ಮಂಗಳೂರಿನಲ್ಲಿ ನಿಧನರಾಗಿದ್ದಾರೆ.
ಪೆರ್ಡೂರು ಗ್ರಾಮದಲ್ಲಿ ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.
ಟಯರ್ ಸ್ಫೋಟಗೊಂಡು ಲಾರಿಯೊಂದು ಸೇತುವೆ ಮೇಲೆ ಹೊತ್ತಿ ಉರಿದ ಘಟನೆ ಗುರುವಾರ ಮಧ್ಯರಾತ್ರಿ ಬೈಂದೂರಿನ ಉಪ್ಪುಂದ-ಬಿಜೂರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸಂಭವಿಸಿದೆ.
ಮನೆಯಲ್ಲಿ ಕುಳಿತಿದ್ದ ಯುವಕನೋರ್ವ ದಿಢೀರ್ ಆಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಫೆ. 19ರಂದು ಕಾರ್ಕಳ ತಾಲೂಕಿನ ಎರ್ಲಪಾಡಿಯಲ್ಲಿ ನಡೆದಿದೆ.
ಶ್ರೀ ಕೃಷ್ಣಮಠ ಪರಿಸರದ ರಥಬೀದಿಯಲ್ಲಿರುವ ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವ ಸಂಪನ್ನಗೊಂಡಿತು.
ಮಂಜನಾಡಿಯ ಮೊಂಟೆಪದವು ಎಂಬಲ್ಲಿ 2025ರ ಮೇ 30ರಂದು ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ಸಿಲುಕಿ ತನ್ನೆರಡೂ ಕಾಲುಗಳನ್ನು ಕಳೆದುಕೊಂಡ ಅಶ್ವಿನಿ ಎಂಬವರು ತನ್ನ ತಾಯಿ ಪುಷ್ಪಾವತಿ ಜತೆ ಮಾನವ ಹಕ್ಕುಗಳ ಆಯೋಗದೆದುರು ನ್ಯಾಯಕ್ಕಾಗಿ ಕಣ್ಣೀರಿಟ್ಟ ಘಟನೆ ನಡೆಯಿತು.
ಒಂಟಿ ಕೋತಿ ಮರಿಗೆ ಒಂದು ಗೊಂಬೆಯೇ ತನ್ನ ಕುಟುಂಬ. ಆದರೆ ಅಲ್ಲಿರುವ ಬೇರೆ ಕೋತಿಗಳು ಆ ಕೋತಿಯನ್ನು ನೆಮ್ಮದಿಯಾಗಿರಲು ಬಿಡುತ್ತಿಲ್ಲ. ಜಪಾನ್ನ ಇಚಿಕಾವಾ ಸಿಟಿ ಮೃಗಾಲಯದ ವಿಡಿಯೋ ಇದೀಗ ವೈರಲ್ ಆಗಿದೆ.
ಕೆಎಂಸಿ ಆಸ್ಪತ್ರೆ ಅತ್ತಾವರದ ವೈದ್ಯರು ಅತ್ಯಂತ ಅಪಾಯಕಾರಿ ಗರ್ಭಾವಸ್ಥೆಯನ್ನು ಯಶಸ್ವಿಯಾಗಿ ನಿರ್ವಹಿಸಿ, ಸುಮಾರು ಎರಡೂವರೆ ತಿಂಗಳ ಆಸ್ಪತ್ರೆಯ ಆರೈಕೆಯ ನಂತರ ತಾಯಿ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿ ಮನೆಗೆ ಮರಳಲು ಸಹಾಯ ಮಾಡಿದ್ದಾರೆ.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಭಾಷಾ ಮತ್ತು ಸಾಂಸ್ಕೃತಿಕ ಅಧ್ಯಯನ ಶಾಲೆಯ ಹಿಂದಿ ವಿಭಾಗ ಮತ್ತು ಹಿಂದಿ ಸಂಘವು ‘ದೇಸಿ ಕಲಾಕರ್’ ಎಂಬ ವಿಷಯದ ಮೇಲೆ ಹಿಂದಿ ಸಾಂಸ್ಕೃತಿಕ ಉತ್ಸವ ‘ಪ್ರೇರಣಾ – 2026’ ಅನ್ನು ಫೆಬ್ರವರಿ 18, 2026 ರಂದು ಕ್ಯಾಂಪಸ್ನಲ್ಲಿ ಆಯೋಜಿಸಿತ್ತು.
: ದಕ್ಷಿಣಕನ್ನಡ ಜಿಲ್ಲೆಯ ಕಡಬ ಮೂಲದ ಯುವಕನೊಬ್ಬ ಐರ್ಲೆಂಡ್ ನಲ್ಲಿ ನಿಗೂಢವಾಗಿ ಸಾವನಪ್ಪಿದ ಘಟನೆ ನಡೆದಿದೆ.
ನಕ್ಸಲ್ ಕರಪತ್ರ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಕ್ಸಲ್ ಜಾನ್@ ಜಯಣ್ಣ@ಮಹೇಶ್ (49) ಎಂಬಾತನನ್ನು ಕೇರಳದ ತ್ರೀಶೂರ್ ಜೈಲಿನಿಂದ ಬಿಗಿ ಭದ್ರತೆಯಲ್ಲಿ ಕೇರಳ ವಿಶೇಷ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನಗರದ ಕೊಟ್ಟಾರ ಬಳಿಯ ಕಾಲ್ಬಾವಿ ರಸ್ತೆಯ ಸಾಗರ್ ಕೋರ್ಟ್ಸ್ ಬಳಿ ಮನೆಯೊಂದು ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಘಟನೆ ನಡೆದಿದೆ.
ಉಡುಪಿ ಶ್ರೀಕೃಷ್ಣಮಠಕ್ಕೆ ಖ್ಯಾತ ಚಿತ್ರನಟಿ ಭಾರತಿ ವಿಷ್ಣುವರ್ಧನ್ ಅವರು ಭೇಟಿ ನೀಡಿ ದೇವರ ದರ್ಶನ ಮಾಡಿದರು. ಬಳಿಕ ಪರ್ಯಾಯ ಶೀರೂರು ಮಠದ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಫಲ ಮಂತ್ರಾಕ್ಷತೆಯನ್ನು ಪಡೆದುಕೊಂಡರು.
ಕರ್ನಾಟಕ ಮತ್ತು ಗೋವಾ ನಡುವಿನ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸುವ ಒಂದು ಕ್ರಮದಲ್ಲಿ, ರೈಲ್ವೆ ಸಚಿವಾಲಯವು ಯಶವಂತಪುರ ರೈಲು ನಿಲ್ದಾಣ ಮತ್ತು ಮಡಗಾಂವ್ ರೈಲು ನಿಲ್ದಾಣದ ನಡುವೆ ಕರಾವಳಿ ರೈಲ್ವೆ ಪ್ರದೇಶದ ಮೂಲಕ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ಸೇವೆಯನ್ನು ಪ್ರಸ್ತಾಪಿಸಿದೆ.
ನಾಯಕತ್ವ ಸಾಮರ್ಥ್ಯಗಳನ್ನು ಬಲಪಡಿಸುವ ಮತ್ತು ಸಾಂಸ್ಥಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಂ.ಸಿ.ಸಿ. ಬ್ಯಾಂಕ್ ಮಂಗಳೂರಿನಲ್ಲಿರುವ ತನ್ನ ಪ್ರಧಾನ ಕಚೇರಿಯಲ್ಲಿ ದಿನಾಂಕ 19.02.2026ರಂದು “Speak, Lead and Connect”ಎಂಬ ಶೀರ್ಷಿಕೆಯಡಿ ನಾಯಕತ್ವ ಅಧಿವೇಶನವನ್ನು ಆಯೋಜಿಸಿತ್ತು.