Showing 20 of 21651 articles • Page 233 of 1083
ಭಾರತದ ಕಾರ್ಬನ್ ನ್ಯೂಟ್ರಲ್ ಭವಿಷ್ಯದ ನಗರಗಳ ನಿರ್ಮಾಣಕ್ಕೆ ದಿಟ್ಟ ಹೆಜ್ಜೆಯಾಗಿ MIR ನೆಟ್ ಝೀರೋ ಶೃಂಗಸಭೆ ಉದ್ಘಾಟನೆ ನಗರದ ಟಿಎಂಎ ಪೈ ಸಭಾಂಗಣದಲ್ಲಿ ಉದ್ಘಾಟನೆ ಗೊಂಡಿತು.
ಸಂತ ಅಲೋಶಿಯಸ್ ಕಾಲೇಜು ಹಳೆವಿದ್ಯಾರ್ಥಿಗಳ ಸಂಘದ ವತಿಯಿಂದ, ವೈವಿಧ್ಯಮಯ ಕ್ಷೇತ್ರಗಳಲ್ಲಿ ಗುರುತಿಸಿಕೊಂಡ ಯುವ ಸಾಧಕರನ್ನು ಗುರುತಿಸಿ, ಅವರ ಅನುಕರಣೀಯ ಪ್ರಯಾಣದ ಮೂಲಕ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ನೀಡಲಾಗುವ “ಅಲೋಶಿಯಸ್ ಯುವ ಐಕಾನ್” ಪ್ರಶಸ್ತಿ ಪ್ರದಾನ ಸಮಾರಂಭವು 16 ಫೆಬ್ರವರಿ 2026 ರಂದು ಅಲೋಶಿಯಸ್ ವಿವಿಯ ಎಲ್ ಎಫ್ ರಸ್ಕೀನ್ಹಾ ಹಾಲ್ನಲ್ಲಿ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ರೋಬೋಟಿಕ್ ಟೆಲಿಸರ್ಜರಿಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಸುಧಾರಿತ ಆರೋಗ್ಯ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದೆ.
ಶಿವಾಜಿ ಮಹಾರಾಜರು ಜನಿಸಿ 396 ವರ್ಷಗಳಾದರೂ ಅವರ ಜೀವನ ಸಾಧನೆಗಳು ಇಂದಿಗೂ ಪ್ರೇರಣೆಯಾಗಿ ಉಳಿದಿವೆ.
ರಾಕಿಂಗ್ ಸ್ಟಾರ್ ಯಶ್ ನಟಿಸಿ, ನಿರ್ಮಿಸಿರುವ ಟಾಕ್ಸಿಕ್ ಸಿನಿಮಾ ಮತ್ತೊಂದು ರಣರೋಚಕ ಟೀಸರ್ ರಿಲೀಸ್ ಆಗಿದೆ. `ರಾಯ’ ಪಾತ್ರದ ಅನಾವರಣ ಮಾಡಿದ್ದ ಟೀಸರ್ ಬಳಿಕ ಮತ್ತೊಂದು ಆಕರ್ಷಕ ಟೀಸರ್ ರಿಲೀಸ್ ಇಂದು ಆಗಿದೆ.
ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಅಕ್ರಮವಾಗಿ ಎಮ್ ಡಿಎಂಎ ಮಾದಕವಸ್ತು ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ಫೆ.18 ರಂದು ತಡೆದು ಪರಿಶೀಲಿಸಿ ಆರೋಪಿಗಳಾದ ಮುಹಮ್ಮದ್ ಅಜ್ಮಲ್ ಸಿ @ ಅಜ್ಜು (30) ಕೋಝಿಕೋಡ್, ಕೇರಳ, ಇಸ್ಮಾಯಿಲ್ (28) ವಯನಾಡ್ ಜಿಲ್ಲೆ, ಕೇರಳ , ಸಂಶೀರ್ (27)ಕೊಝಿಕೋಡ್, ಕೇರಳ. ಎಂಬವರುಗಳು ವಾಹನದಲ್ಲಿ ಮಾರಾಕಾಯುಧವಾದ ತಲವಾರನ್ನು ಇಟ್ಟುಕೊಂಡು, ಸುಮಾರು 5,38,800 ಮೌಲ್ಯದ 53.58 ಗ್ರಾಂ MDMA ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡಲು ವಶದಲ್ಲಿಟ್ಟುಕೊಂಡಿರುವುದು ಪತ್ತೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ 29,397 ಮಂದಿ ವಿದ್ಯಾರ್ಥಿಗಳು ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 37,337 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು ಪ್ರೌಢ ಮತ್ತು ಪ.ಪೂ. ಶಿಕ್ಷಣ ಇಲಾಖೆಗಳು ಸಿದ್ಧತೆ ನಡೆಸಿವೆ.
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಮಿನಿ ಟೆಂಪೋವೊಂದು ಬುಧವಾರ ಮುಂಜಾನೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದ್ದು ಟೆಂಪೋ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಘಟನೆಯಿಂದ ಸೇತುವೆಗೆ ಅರವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಅಳವಡಿಸಲಾಗಿದ್ದ ಕಬ್ಬಿಣದ ತಡೆಬೇಲಿಗೆ ತೀವ್ರ ಹಾನಿಯಾಗಿದೆ.
ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಕ್ಕಳ ಕೈಗೆ ಸಿಕ್ಕ ಪ್ಲಾಸ್ಟಿಕ್ ಚೆಂಡಿನಂಥ ವಸ್ತು ಆಕಸ್ಮಿಕವಾಗಿ ಸ್ಫೋಟಗೊಂಡ ಪರಿಣಾಮ ಬಾಲಕನೊಬ್ಬ ಗಾಯಗೊಂಡಿರುವ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಹೆಚ್ಚುವರಿ ಆರು ಮಂದಿ ವಿದ್ಯಾರ್ಥಿಗಳು ಇಂಜಿನಿಯರಿಂಗ್ಗೆ ಸಂಬಂಧಿಸಿದ ರಾಷ್ಟ್ರೀಯ ಸ್ಪರ್ಧಾತ್ಮಕ ಪರೀಕ್ಷೆ ಜಿಇಇಯಲ್ಲಿ ಅರ್ಹತೆ ಪಡೆದುಕೊಂಡಿದ್ದಾರೆ.
ಯುವಕನೊಬ್ಬ ತನ್ನ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ, ಬಳಿಕ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕದ್ರಿ ಶಿವಭಾಗ್ ಬಳಿಯ ಅಪಾರ್ಟೆಂಟ್ ಒಂದರಲ್ಲಿ ನಡೆದಿದೆ. ಯುವಕನೊಬ್ಬ ತನ್ನ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ, ಬಳಿಕ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಂಗಳೂರಿನ ಖ್ಯಾತ ಉದ್ಯಮಿ ಹಾಗೂ ಶ್ರೀನಿವಾಸ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿ.ಎ. ಎ. ರಾಘವೇಂದ್ರ ರಾವ್ ಅವರ ನಿಧನಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸುಡುವ ಬಿಸಿಲಿನ ನಡುವೆ ಅಲ್ಲಲ್ಲಿ ಭಾರಿ ಮಳೆಯಾಗಿರುವ ಘಟನೆ ಫೆ.18ರ ಮಧ್ಯಾಹ್ನ ಪುತ್ತೂರಿನ ಗ್ರಾಮಾಂತರ ಭಾಗದಲ್ಲಿ ನಡೆದಿದೆ.
ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ದೇವಸ್ಥಾನದ ಅರ್ಚಕರ ನೇತೃತ್ವದಲ್ಲಿ ಗಣಹೋಮ, ನವಕ ಪ್ರಧಾನ ಹೋಮ, ಮಹಾಪೂಜೆ ನೆರವೇರಿತು. ಮಧ್ಯಾಹ್ನ ರಥೋತ್ಸವ ನಡೆದ ಬಳಿಕ ಮಹಾಅನ್ನಸಂತರ್ಪಣೆ ನಡೆಯಿತು. ಸಾವಿರಾರು ಭಕ್ತರು ಭೋಜನ ಪ್ರಸಾದ ಸ್ವೀಕರಿಸಿದರು.
ನಗರದ ಸಿಎಫ್ಎಎಲ್ (CFAL – Centre for Advanced Learning) ಸಂಸ್ಥೆಯ ಐದು ವಿದ್ಯಾರ್ಥಿಗಳು ಜೆಇಇ ಮೇನ್ 2026ರಲ್ಲಿ 99.8 ಪರ್ಸೆಂಟೈಲ್ಗಿಂತ ಹೆಚ್ಚು ಅಂಕಗಳನ್ನು ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ. ಇವರ ಸರಾಸರಿ ಪರ್ಸೆಂಟೈಲ್ 99.91.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರತಿ ವರ್ಷದಂತೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲೂ ಇಂಜಿನಿಯರಿಂಗ್ಗೆ ಸಂಬಂಧಿಸಿದ ರಾಷ್ಟ್ರೀಯ ಸ್ಪರ್ಧಾತ್ಮಕ ಪರೀಕ್ಷೆ ಜೆಇಇಯಲ್ಲಿ ಉತ್ತಮ ಸಾಧನೆಗೈದಿದ್ದು, 29 ವಿದ್ಯಾರ್ಥಿಗಳು 85 ಪರ್ಸಂಟೈಲ್ಗಿಂತ ಹೆಚ್ಚು ಅಂಕಗಳನ್ನು ಪಡೆದಿರುತ್ತಾರೆ. ತನ್ಮೂಲಕ ತಾಲೂಕಿನಲ್ಲೇ ಜೆಇಇ ಪರೀಕ್ಷೆಯಲ್ಲಿ ಅತ್ಯಧಿಕ ವಿದ್ಯಾರ್ಥಿಗಳು ಅರ್ಹತೆ ಹೊಂದಿದ ಸಂಸ್ಥೆಯಾಗಿ ಅಂಬಿಕಾ ಹೊರಹೊಮ್ಮಿದೆ.
ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕ್ರೈನ್ ಹರಿದ ಘಟನೆ ಉಡುಪಿ ಪೆರಂಪಳ್ಳಿಯ ಹೆರ್ಗ ಸೊಸೈಟಿಯ ಮುಂಭಾಗದಲ್ಲಿ ನಡೆದಿದೆ.
ಅಸ್ಸಾಂ ರಾಜ್ಯದ ಗುವಾಹಟಿಗೆ ಪ್ರವಾಸಕ್ಕೆ ತೆರಳಿದ್ದ ಉಡುಪಿಯ ತಂಡದಲ್ಲಿದ್ದ ಓರ್ವ ಯುವಕ ಅನಾರೋಗ್ಯದಿಂದ ಮೃತಪಟ್ಟ ಘಟನೆ ವರದಿಯಾಗಿದೆ.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ನೇತೃತ್ವದಲ್ಲಿ ವಿವಿಧ ಬಿಲ್ಲವ ಸಂಘಟನೆಗಳ ಸಹಯೋಗದಲ್ಲಿ “ಕುದ್ರೋಳಿ ತೀರ್ಥಾಟನೆ” ನಮ್ಮ ನಡಿಗೆ ಶ್ರೀ ಗುರುವಿನೆಡೆಗೆ ಪಾದಯಾತ್ರೆಯು ಫೆ. 21ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಕ್ಷೇತ್ರದ ಪ್ರತಿನಿಧಿ ಜಯಾನಂದ್ ತಿಳಿಸಿದ್ದಾರೆ.
ಹಾಡಹಗಲೇ ಹುಲಿ ದಾಳಿಗೆ ಹಸು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಾದಪಟ್ಟಣ ಗ್ರಾಮದಲ್ಲಿ ನಡೆದಿದೆ.