Showing 20 of 21592 articles • Page 24 of 1080
ವಾರದಲ್ಲಿ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಯನ್ನು ತಕ್ಷಣ ಜಾರಿಗೊಳಿಸಬೇಕು ಹಾಗೂ ಏಕಪಕ್ಷೀಯ ಮತ್ತು ತಾರತಮ್ಯದಿಂದ ಕೂಡಿದ ಪಿಎಲ್ಐ (ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹಧನ) ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಯುಎಫ್ಬಿಯು (UFBU) ಕರೆ ನೀಡಿದ್ದ ಅಖಿಲ ಭಾರತ ಮುಷ್ಕರದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಶುಕ್ರವಾರ ಬ್ಯಾಂಕ್ ನೌಕರರು ಬೃಹತ್ ಪ್ರತಿಭಟನೆ ನಡೆಸಿದರು.
ಐದು ವರ್ಷಗಳ ಹಿಂದೆ ತೌಕ್ತೆ ಚಂಡಮಾರುತದ ವೇಳೆ ಪಡುಬಿದ್ರಿ ಕಡಿಪಟ್ಣ ಕಡಲತೀರಕ್ಕೆ ಬಂದು ಸಿಲುಕಿದ್ದ ‘ಅಲಯನ್ಸ್’ ಟಗ್ ಇಂದಿಗೂ ಸಂಪೂರ್ಣವಾಗಿ ತೆರವಾಗದೆ ಉಳಿದಿರುವುದು ಸ್ಥಳೀಯರು ಹಾಗೂ ಮೀನುಗಾರರ ಆತಂಕಕ್ಕೆ ಕಾರಣವಾಗಿದೆ.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ವಿಭಾಗವು, ಸಭಾಂಗಣದಲ್ಲಿ ‘ಬದಲಾಗುತ್ತಿರುವ ಜಗತ್ತಿನಲ್ಲಿ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸುವುದು: ಉದಯೋನ್ಮುಖ ಸವಾಲುಗಳು ಮತ್ತು ಸುಸ್ಥಿರ ಪ್ರತಿಕ್ರಿಯೆಗಳು’ ಎಂಬ ವಿಷಯದಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಸೆಪ್ಟೆಂಬರ್ 16 ಮತ್ತು 17, 2026 ರಂದು ವಿಶ್ವವಿದ್ಯಾಲಯದ ಮಾಫೇ ಬ್ಲಾಕ್ನಲ್ಲಿರುವ ಎರಿಕ್ ಮಥಾಯಸ್ ಸಭಾಂಗಣದಲ್ಲಿ ಆಯೋಜಿಸಿದೆ.
ಗಣೇಶ ಹಬ್ಬದ ಹಿನ್ನಲೆ ಉಳ್ಳಾಲ PI ಹಾಗೂ ಸಿಬ್ಬಂದಿ ವರ್ಗ ಹಾಗೂ SAF ನಿಂದ ಪಥ ಸಂಚಲನ ನಡೆಸಿದರು.
ಡ್ರಗ್ಸ್ ಮುಕ್ತ ಮಂಗಳೂರು ಹಿನ್ನಲೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಲೋಹ ಮಿಶ್ರಿತ ಹಾಗೂ ರಾಸಾಯನಿಕ ಬಣ್ಣ ಬಳಸಿ ತಯಾರಿಸಿದ ಗಣಪತಿ ವಿಗ್ರಹಗಳನ್ನು ಜಲಮೂಲಗಳಲ್ಲಿ ವಿಸರ್ಜಿಸುವುದರಿಂದ ಜಲಚರ
ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಡಿ ಚುನಾವಣಾ ಆಯೋಗದಿಂದ ನೋಟಿಸ್ ಜಾರಿಯಾಗಿದೆ.
ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ನಡೆಯುವ ರಾಷ್ಟ್ರೀಯ ಯುವಜನೋತ್ಸವವನ್ನು ‘ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್’ ಹೆಸರಿನಲ್ಲಿ ಆಯೋಜಿಸಲಾಗುತ್ತಿದ್ದು, 15ರಿಂದ 29 ವರ್ಷದ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮೈ ಭಾರತ್ ಜಿಲ್ಲಾ ಡೆಪ್ಯೂಟಿ ಡೈರೆಕ್ಟರ್ ಉಲ್ಲಾಸ್ ಮನವಿ ಮಾಡಿದರು.
ನಗರದ ಎ.ಜೆ. ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ನೂತನ ಎ.ಜೆ. ಆಡಿಟೋರಿಯಂ ಉದ್ಘಾಟನೆ ಹಾಗೂ ಪದವಿ ಪ್ರದಾನ ಸಮಾರಂಭ ಸೆ. 12ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಸಂಸ್ಥೆಯ ಕ್ಯಾಂಪಸ್ ನಿರ್ದೇಶಕ ಡಾ. ಟಿ. ಜಯಪ್ರಕಾಶ್ ರಾವ್ ತಿಳಿಸಿದ್ದಾರೆ.
ಮುಲ್ಕಿ ಕಿಲ್ಪಾಡಿ ಗ್ರಾಮದ ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಕುಖ್ಯಾತ ಅಂತರ್ ಜಿಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 17.20 ಲಕ್ಷ ರೂ. ಮೌಲ್ಯದ ಸ್ವತ್ತು ವಶ ಪಡಿಸಿಕೊಳ್ಳಲಾಗಿದೆ.
ದೇಶದಲ್ಲಿ ಗೋಹತ್ಯೆಯನ್ನು ಸಂಪೂರ್ಣ ನಿಷೇಧಿಸಲು ಕೇಂದ್ರ ಸರ್ಕಾರ ಕಾನೂನು ಜಾರಿಗೆ ತರಬೇಕು ಹಾಗೂ ಗೋವನ್ನು ರಾಷ್ಟ್ರಮಾತೆಯಾಗಿ ಘೋಷಿಸಬೇಕು ಎಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಲಕ್ಷಕ್ಕೂ ಅಧಿಕ ಸಹಿ ಸಂಗ್ರಹಿಸುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಂಚಾಲಕ ಶರಣ್ ಪಂಪವೆಲ್ ತಿಳಿಸಿದ್ದಾರೆ.
ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ (MAHE) ಅಂಗಸಂಸ್ಥೆಯಾದ ಕಸ್ತೂರ್ಬಾ ವೈದ್ಯಕೀಯ ಕಾಲೇಜು (KMC), ಮಂಗಳೂರಿನ ಲೈಟ್ಹೌಸ್ ಹಿಲ್ ರೋಡ್ ಕ್ಯಾಂಪಸ್ನಲ್ಲಿ ಸೆ.14 ಮತ್ತು 15ರಂದು 70ನೇ ವರ್ಷದ ಗಣೇಶ ಚತುರ್ಥಿ ಉತ್ಸವವನ್ನು ಆಚರಿಸಲು ಸಜ್ಜಾಗಿದೆ ಎಂದು ಕೆಎಂಸಿ ಮಂಗಳೂರು ಡೀನ್ ಡಾ. ಬಿ. ಉಣ್ಣಿಕೃಷ್ಣನ್ ತಿಳಿಸಿದ್ದಾರೆ.
ಕಕ್ಷಿದಾರರ ಹಿತರಕ್ಷಣೆಯೂ ಕೋರ್ಟಿನ ಹೊಣೆ’ ಎಂಬ ಕಾಳಜಿ ವ್ಯಕ್ತಪಡಿಸಿರುವ ಹೈಕೋರ್ಟ್, ‘ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಯಾವುದೇ ಕಿರುಕುಳ ಇಲ್ಲದೆ ಸೌಹಾರ್ದಯುತವಾಗಿ ಮತ್ತು ವಿಳಂಬಗೊಳ್ಳದೆ ಮುಗಿಯಬೇಕು. ತಾಂತ್ರಿಕ ಕಾರಣಗಳಿಂದ ಸಾಕ್ಷಿಗಳ ವಿಚಾರಣೆ ತಡವಾಗಬಾರದು’ ಎಂದರು.
ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕ್ರೈಸ್ತ ಜಗದ್ಗುರು ಲಿಯೋ XIV ಅವರನ್ನು ವ್ಯಾಟಿಕನ್ ನಗರದಲ್ಲಿ ಗುರುವಾರ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.
ಕಾಪುವಿನಿಂದ ಉಡುಪಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗೂಡ್ಸ್ ಟೆಂಪೋ ವಾಹನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳನ್ನು ಕರೆದೊಯ್ಯುತ್ತಿರುವ ದೃಶ್ಯ ಕಟಪಾಡಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನ್ಯಾಯಾಲಯದಲ್ಲಿ ಆರೋಪಿಯೊಬ್ಬನಿಗೆ ಜಾಮೀನು ನೀಡುವ ಸಂದರ್ಭದಲ್ಲಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ, ಅದನ್ನು ನೈಜ ದಾಖಲೆ ಎಂಬಂತೆ ಹಾಜರುಪಡಿಸಿ ವಂಚನೆಗೆ ಯತ್ನಿಸಿದ ಆರೋಪದಡಿ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಮಂಗಳೂರು, ಸಂಸ್ಥೆಯ ಕ್ರೀಡಾಪಟುಗಳು ಮತ್ತೊಮ್ಮೆ ಗಮನರ್ಹ ಸಾಧನೆ ಮಾಡಿದ್ದಾರೆ.
ಇಂದು(ಸೆ.11) ಚಂದನವನದ ತೆರೆಗಳಲ್ಲಿ ನಾಲ್ಕು ಸಿನಿಮಾಗಳು ತೆರೆಕಾಣುತ್ತಿವೆ.
ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಸೂಕ್ತ ಕೈಗನ್ನಡಿಯಾಗಿದೆ ಎಂಬುದಾಗಿ ಶಾಲಾ ಹಂತದ ಪ್ರತಿಭಾ ಕಾರಂಜಿ “ಅಲೋ ಸ್ಪಾರ್ಕ್ – 2026” ಸ್ಪರ್ಧಿಗಳನ್ನು ಉದ್ಘಾಟಿಸುತ್ತಾ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ ಉರ್ವಾ ಇಲ್ಲಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಂ. ಗುರು ಡೆನ್ಸಿಲ್ ರೊಡ್ರಿಗಸ್ ತಿಳಿಸಿದರು.
ಇದುವರೆಗೆ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಕಾಡುಕೋಣಗಳು ಇದೀಗ ಪುತ್ತೂರು ಪೇಟೆಯತ್ತಲೂ ಲಗ್ಗೆ ಇಡತೊಡಗಿವೆ.