Showing 20 of 21651 articles • Page 247 of 1083
ಕೆಟಿಗ, ಕ್ಯಾನ್ಸರನ್ನು ಗೆದ್ದ ಮತ್ತು ಸಮಾಜಸೇವಕ ಯುವರಾಜ್ ಸಿಂಗ್ ಅವರ YouWeCan ಫೌಂಡೇಶನ್, ಶಓಮಿ ಇಂಡಿಯಾದ ಬೆಂಬಲದೊಂದಿಗೆ, ಸ್ತನ ಕ್ಯಾನ್ಸರ್ ಗಾಗಿ 10,000 ಮಹಿಳೆಯರನ್ನು ಸ್ಕ್ರೀನಿಂಗ್ಗೆ ಒಳಪಡಿಸಿ ಮತ್ತು ಕರ್ನಾಟಕದ ಸೇವಾವಂಚಿತ ಪ್ರದೇಶಗಳಲ್ಲಿ ಮಹಿಳೆಯರಿಗಾಗಿ ಆರಂಭಿಕ ಪತ್ತೆಹಚ್ಚುವಿಕೆ ಮತ್ತು ಶುಶ್ರೂಷೆಗೆ ಪ್ರವೇಶಾವಕಾಶವನ್ನು ಬಲಪಡಿಸುವ ಮೂಲಕ ಸ್ವಸ್ಥ ಮಹಿಳಾ ಸ್ವಸ್ಥ ಭಾರತ ತಡೆಯಾತ್ಮಕ ಆರೋಗ್ಯಶುಶ್ರೂಷಾ ಕಾರ್ಯಕ್ರಮದ 1ನೆ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.
ಮಹಿಳೆಯರ ಪ್ರೀಮಿಯರ್ ಲೀಗ್ ಸೀಸನ್ 4 ರ ಫೈನಲ್ ಪಂದ್ಯದಲ್ಲಿ ಆರ್ ಸಿಬಿ ತಂಡವು 6 ವಿಕೆಟ್ ಗಳ ಭರ್ಜರಿ ಜಯ ಗಳಿಸುವ ಮೂಲಕ ಎರಡನೇ ಬಾರಿಗೆ ಡಬ್ಲ್ಯೂ ಪಿಲ್ ಟ್ರೋಫಿ ಮುಡಿಗೇರಿಸಿಕೊಂಡಿದೆ.
ನಗರದಲ್ಲಿ ಹೆಲಿಕಾಪ್ಟರ್ಗಳಿಗೆ ಶಾಶ್ವತ ಹೆಲಿಪ್ಯಾಡ್ ನಿರ್ಮಿಸುವ ಆವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ಜಾಗ ನಿಗದಿಪಡಿಸುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿದಿದೆ ಎಂದು ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್ವಿ ಹೇಳಿದ್ದಾರೆ.
ಮುರುಡೇಶ್ವರದಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲೊಂದು ಯುವಕನಿಗೆ ಢಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಭಟ್ಕಳ ರೈಲು ನಿಲ್ದಾಣದ ಸಮೀಪದ ರೈಲ್ವೆ ಸೇತುವೆ ಕೆಳಭಾಗದಲ್ಲಿ ಬುಧವಾರ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಮಜಾಲ್ತಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದ್ದು ಘಟನೆಯಲ್ಲಿ ಜೈಷ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿಂದು ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ರೊಚ್ಚಿಗೆದ್ದು, ಬಿಜೆಪಿಯರನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ವಿಪಕ್ಷಗಳ ವಿರುದ್ಧ ಅಬ್ಬರಿಸಿದ ಶಿವಲಿಂಗೇಗೌಡ ಬಿಜೆಪಿ ಸದಸ್ಯ ಶರಣು ಸಲಗಾರ್ ಸೇರಿದಂತೆ ಇತರರ ವಿರುದ್ಧ ವಾಗ್ದಾಳಿ ನಡೆಸಿದರು.
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಹುಡುಗಿಯ ಮೇಲೆ ಗೂಳಿಯೊಂದು ಇದ್ದಕ್ಕಿದ್ದಂತೆ ದಾಳಿ ಮಾಡಿದ ಆಘಾತಕಾರಿ ಘಟನೆ ಲಕ್ನೋದ ಚೌಪಟ್ಟಿ ಪ್ರದೇಶದಲ್ಲಿ ನಡೆದಿದೆ.
ಬೆಂಗಳೂರು ಮತ್ತು ಹೊಸೂರು ನಡುವಿನ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಅತ್ತಿಬೆಲೆ ಬಳಿ ಬುಧವಾರ ಭಾರೀ ಪ್ರಮಾಣದಲ್ಲಿ ರಸ್ತೆ ಕುಸಿದಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಫಾದರ್ ಮುಲ್ಲರ್ ಹೋಮಿಯೋಪಥಿಕ್ ವೈದ್ಯಕೀಯ ಮಹಾವಿದ್ಯಾಲಯ (FMHMC), ದೇರಳಕಟ್ಟೆ ಇದರ ಫಾರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕಾಲಜಿ ವಿಭಾಗವು 2026ರ ಫೆಬ್ರವರಿ 8ರಂದು ಫಾದರ್ ಮ್ಯುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಆಡಿಟೋರಿಯಂ, ದೇರಳಕಟ್ಟೆಯಲ್ಲಿ “QUEST 2026” ಎಂಬ ಏಕದಿನ ರಾಷ್ಟ್ರೀಯ ಸೆಮಿನಾರ್ ಅನ್ನು ಆಯೋಜಿಸಲಾಗಿದೆ.
ತುಳುನಾಡಿನ ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಗುರುತಿಸಿದ ಕಂಬಳ ಕೂಟಕ್ಕೂ ಚಿನ್ನದ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕಂಬಳ ಸಂಘಟಕರಿಗೆ ಚಿನ್ನದ ಬೆಲೆ ಏರಿಕೆ ಹೊರೆಯಾಗುತ್ತಿದೆ. ಪ್ರತಿ ಕಂಬಳ ಕೂಟದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ಬಹುಮಾನ ನೀಡಲಾಗುತ್ತದೆ. ಚಿನ್ನದ ಬೆಲೆ ಏರಿಕೆ ಆಗುತ್ತಿರುವುದರಿಂದ ಕರಾವಳಿಯ ಕಂಬಳ ಕೂಟದಲ್ಲಿ ಇನ್ನೂ ಚಿನ್ನ ನೀಡುತ್ತಾರಾ..? ಇಲ್ಲವಾ..? ಎಂಬುದರ ಬಗ್ಗೆ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಕಂಬಳ ಸಮಿತಿಯ ರಾಜ್ಯಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಸ್ಪಷ್ಟಣೆ ನೀಡಿದ್ದಾರೆ.
ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ಜಾಗಕ್ಕೆ ನುಗ್ಗಿದ ಕಾವೇರಿ ನರ್ಸಿಂಗ್ ಕಾಲೇಜು ಸಿಬ್ಬಂದಿಗಳು ಹಾಗೂ ಸಹಚರರು ರಕ್ಷಣಾ ಗೋಡೆಯನ್ನ ಕಿತ್ತು ದಾಂಧಲೆ ನಡೆಸಿ ಬೆದರಿಕೆ ಹಾಕಿರುವ ಪ್ರಕರಣ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಾವೇರಿ ನದಿಗೆ ಬಿದ್ದು ವೃದ್ದೆ ಆತ್ಮಹತ್ಯೆಗೆ ಯತ್ನಿಸಿದ ಘಟನರ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಬಳಿ ನಡೆದಿದೆ.
ಮೈಸೂರು: ಡಿಸೈನಿಂಗ್ ಬೋಟಿಕ್ ತರಬೇತಿ ಕೊಡುವುದಾಗಿ ಆಮಿಷ ತೋರಿಸಿ 8 ಮಹಿಳೆಯರಿಗೆ 12.80 ಲಕ್ಷ ವಂಚಿಸಿರುವ ಪ್ರಕರಣ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಮುಸ್ಲಿಂ ಸಮುದಾಯದ ಶಬ್ ಎ ಬರಾತ್ ಹಬ್ಬದ ಹಿನ್ನಲೆ ಮೈಸೂರು ನಗರ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.
ಕಳೆದ 14 ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಮುಕ್ಕಚೇರಿ ಉಳ್ಳಾಲದ ಮಹಮ್ಮದ್ ಸಂಶೀರ್ ಎಂದು ಗುರುತಿಸಲಾಗಿದೆ.
ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಸರಗೂರು ತಾಲ್ಲೂಕಿನ ಹಂಚಿಪುರ ಗ್ರಾಮದಲ್ಲಿ ಬೆಳ್ಳಂ ಬೆಳಿಗ್ಗೆ ಕಾಡಿನಿಂದ ನಾಡಿಗೆ ಎಂಟ್ರಿಕೊಟ್ಟ ಗಜರಾಜ ಆತಂಕ ಸೃಷ್ಟಿಸಿದ್ದಾನೆ. ಗ್ರಾಮಸ್ಥರ ಕೂಗಾಟ, ಕಿರುಚಾಟಕ್ಕೆ ಗ್ರಾಮದ ಹೊರವಲಯದಲ್ಲೆ ಆನೆಗಳು ಓಡಾಡಿವೆ. ಅರಣ್ಯ ಇಲಾಖೆಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
ನಡುರಸ್ತೆಯಲ್ಲಿ ಕುಣಿದು, ಪಟಾಕಿ ಸಿಡಿಸಿ ನಡುರಸ್ತೆಯಲ್ಲಿಯೇ ಹುಚ್ಚಾಟ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ.
ರಾಜಕೀಯದಲ್ಲಿ ಹೆಣ್ಣುಮಕ್ಕಳು ಗ್ಲಾಮರಸ್ ಆಗಿರ್ಬೇಕು ಅನ್ನೊದು ಹೆಚ್ಚಾಗಿದೆ ಎಂದು ಮಂಗಳೂರಿನಲ್ಲಿ ಮಾಜಿ ಸಚಿವೆ ಕಾಂಗ್ರೆಸ್ ನಾಯಕಿ ಮೋಟಮ್ಮ ಹೇಳಿಕೆ ನೀಡಿದರು.
ಸುಮಾರು 20 ಮಕ್ಕಳ ಪ್ರಾಣ ಉಳಿಸಲು ಅಂಗನವಾಡಿ ಅಡುಗೆಯವರೊಬ್ಬರು ತಮ್ಮ ಪ್ರಾಣವನ್ನೇ ಬಲಿ ಕೊಟ್ಟಿರುವ ಘಟನೆ ಮಧ್ಯಪ್ರದೇಶದ ನೀಮುಚ್ ಜಿಲ್ಲೆಯ ರಣಪುರ ಗ್ರಾಮದಲ್ಲಿ ನಡೆದಿದೆ.