Showing 20 of 21592 articles • Page 25 of 1080
ದಕ್ಷಿಣ ಕನ್ನಡದಲ್ಲಿ ಪ್ರವಾಸೋದ್ಯಮ ಹಾಗೂ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು.
ಆರ್ಎಸ್ಎಸ್ ನೋಂದಣಿ ವಿಚಾರವನ್ನು ಮುಂದಿಟ್ಟುಕೊಂಡು, ಸರ್ಕಾರಿ ನೌಕರರು ಹಾಗೂ ಇತರರಿಗೆ ಬೆಂಬಲವಾಗಿ ‘ನಾನೂ ಗಣಪತಿ’ ಎಂಬ ಚಳವಳಿ ಆರಂಭಿಸುವ ಆಲೋಚನೆ ಹೊಂದಿರುವುದಾಗಿ ಅನುಪಮಾ ಶೆಣೈ ತಿಳಿಸಿದರು.
: ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ದಕ್ಷಿಣ ಕನ್ನಡ, ಕರಾವಳಿ ಜಿಲ್ಲೆ ಸಾಮರಸ್ಯದ ನೆಲೆಯಾಗಿತ್ತು.
ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ 19ನೇ ವಾರ್ಷಿಕೋತ್ಸವದ ಅಂಗವಾಗಿ ‘ಸ್ವರ ಕುಡ್ಲ–ಸೀಸನ್ 8’ರ ಗ್ರ್ಯಾಂಡ್ ಫಿನಾಲೆ, ವಾರ್ಷಿಕೋತ್ಸವ ಸಮಾರಂಭ, ಪ್ರಶಸ್ತಿ ಪ್ರದಾನ, ಅಭಿನಂದನಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ಸೆ.26ರಂದು ಮಧ್ಯಾಹ್ನ 2 ಗಂಟೆಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ ಧನುರಾಜ್ ಅತ್ತಾವರ ತಿಳಿಸಿದ್ದಾರೆ.
ಪುದುವೆಟ್ಟು ಗ್ರಾಮದ ಮಿಯಾರು ನಿವಾಸಿ ಯುವತಿಯೊಬ್ಬಳು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಸೆ. 9ರಂದು ಸಂಜೆಯ ವೇಳೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಪದ್ಮರಾಜ್ ಪೂಜಾರಿಗೆ ಯೂಥ್ ಕಾಂಗ್ರೆಸ್ ಪದಾಧಿಕಾರಿಗಳು ಕಾಂಗ್ರೆಸ್ ಕಛೇರಿ ಎದುರು ಆತ್ಮೀಯವಾಗಿ ಸ್ವಾಗತಿಸಿದರು.
ಪದ್ಮರಾಜ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆದ ಬಳಿಕ ಮೊದಲ ಪತ್ರಿಕಾಗೋಷ್ಠಿ ನಡೆಸಿ, ನನ್ನ ನಿರೀಕ್ಷೆಕಿಂತ ಜಾಸ್ತಿ ಬಿಜೆಪಿ ಯವರು ಕರೆ ಮಾಡಿ ಅಭಿನಂದಿಸಿದ್ದಾರೆ ಎಂದರು.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಬಿಜೆಪಿ ಕಾರ್ಯಕರ್ತರು ಸ್ವಚ್ಛಗೊಳಿಸುವ ಮೂಲಕ ಹಿರಿಯ ರಾಷ್ಟ್ರೀಯ ನಾಯಕನಿಗೆ ಅಪಮಾನ ಮಾಡಿದ್ದಾರೆ
ಅಪಘಾತಕ್ಕೀಡಾದ ವಾಹನವನ್ನು ಹೆದ್ದಾರಿಯಿಂದ ಮೇಲೆತ್ತುವ ಕಾರ್ಯಾಚರಣೆ ವೇಳೆ ನಿಯಂತ್ರಣ ತಪ್ಪಿದ ಸರಕು ಸಾಗಣೆ ಲಾರಿಯೊಂದು ಹೈವೇ ಪೆಟ್ರೋಲ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕೆನರಾ ಕಾಲೇಜು (ಸ್ವಾಯತ್ತ), ಮಂಗಳೂರು – ಸೆಂಟರ್ ಫಾರ್ ಪಿಜಿ ಸ್ಟಡೀಸ್ ಇನ್ ಕಾಮರ್ಸ್ ವತಿಯಿಂದ ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿ ಹಾಗೂ ವೃತ್ತಿಪರ ಸಾಮರ್ಥ್ಯವರ್ಧನೆಯ ಉದ್ದೇಶದಿಂದ ವಿವಿಧ ಸ್ಕಿಲ್ ಡೆವಲಪ್ಮೆಂಟ್ ಕ್ಲಬ್ಗಳ ಉದ್ಘಾಟನಾ ಕಾರ್ಯಕ್ರಮವನ್ನು ಸೆಪ್ಟಂಬರ್ ೦9, 2026 ರ೦ದು ಆಯೋಜಿಸಲಾಯಿತು.
ಕೆನರಾ ಕಾಲೇಜು (ಸ್ವಾಯತ್ತ) ಮಂಗಳೂರು, ಇಲ್ಲಿನ, ವಾಣಿಜ್ಯ ಸ್ನಾತಕೋತ್ತರ ವಿಭಾಗದ ವತಿಯಿಂದ 2026–27ನೇ ಶೈಕ್ಷಣಿಕ ಸಾಲಿನ ಹೆಚ್ಚುವರಿ ಕೋರ್ಸ್ಗಳ ಉದ್ಘಾಟನಾ ಕಾರ್ಯಕ್ರಮವನ್ನು 8ನೇ ಸೆಪ್ಟೆಂಬರ್ 2026 ರಂದು ಆಯೋಜಿಸಲಾಯಿತು. MS Excel for Employability Skills ಹಾಗೂ Applied Tally Prime in Commerce ಎಂಬ ಎರಡು ಹೆಚ್ಚುವರಿ ಕೋರ್ಸ್ಗಳನ್ನು ಪರಿಚಯಿಸಲಾಯಿತು.
ಅಡಿಕೆ ಮಾರುಕಟ್ಟೆಯಲ್ಲಿನ ಏರಿಳಿತ ಹಾಗೂ ಕೊಕ್ಕೊ ವಲಯದಲ್ಲಿನ ಸವಾಲಿನ ಪರಿಸ್ಥಿತಿಗಳ ನಡುವೆಯೂ, ಪ್ರತಿಷ್ಠಿತ ಬಹುರಾಜ್ಯ ಸಹಕಾರಿ,‘ದ ಸೆಂಟ್ರಲ್ ಅರೆಕಾನಟ್ ಅಂಡ್ ಕೊಕ್ಕೊ ಮಾರ್ಕೆಟಿಂಗ್ ಅಂಡ್ ಪ್ರೊಸೆಸ್ಸಿಂಗ್ ಕೊಅಪರೇಟಿವ್ ಲಿಮಿಟೆಡ್ (ದ ಕ್ಯಾಂಪ್ಕೊ ಲಿ.)’ ಸಂಸ್ಥೆಯು 2025-26ನೇ ಸಾಲಿನಲ್ಲಿ ₹3,735 ಕೋಟಿ ಒಟ್ಟು ವ್ಯವಹಾರ ವಹಿವಾಟು ಮತ್ತು ₹49.62 ಕೋಟಿ ತೆರಿಗೆಪೂರ್ವ ಲಾಭ ದಾಖಲಿಸಿ ಒಟ್ಟಾರೆ ಸದೃಢ ಸಾಧನೆ ತೋರಿದೆ.
ಇಂದು ಮಣಿಪಾಲದ ಜಿಲ್ಲಾಧಿಕಾರಿಗಳ ಅಟಲ್ ಬಿಹಾರಿ ಹಾಲಲ್ಲಿ ಜನಸಾಮಾನ್ಯರಿಗೆ ಆಗುವ ಕಷ್ಟಗಳನ್ನು ಮಾನ್ಯ ಜಿಲ್ಲಾ ಉಸ್ತುವಾರಿಗಳಾದ ಸಚಿವ ಶ್ರೀ ರಿಜ್ವಾನ್ ಅಹ್ಮದ್ ಅವರ ಅಹವಾಲಿಗೆ ಉಡುಪಿ ಯುವ ಉದ್ಯಮಿ ಹಾಗೂ ಫೆಡರೇಷನ್ ಆಫ್ ಕರ್ನಾಟಕ ಮತ್ತು ಬಾಂಬೆ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ಸದಸ್ಯ ಆಗಿರುವ ಶ್ರೀ ಸುಶಾಂತ್ ಬ್ರಹ್ಮವರ ನೇರವಾಗಿ ಉಡುಪಿ ಎಪಿಎಂಸಿ ಉಪ ಗುತ್ತಿಗೆ ಒಪ್ಪಂದ ನಿಲ್ಲಿಸಿ ಬಿಡ್ಡರ್ಸ್ ಅವ್ರಿಗೆ ನೇರ ಅಂಗಡಿ ಸಿಗ್ಬೇಕು ನೆರವಾಗಿ ಸರ್ಕಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
‘ವಿಕಸಿತ ಭಾರತ–2047’ ಅಭಿಯಾನದಲ್ಲಿ ಯುವಜನರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ‘ವಿಕಸಿತ್ ಭಾರತ್ ಯಂಗ್ ಲೀಡರ್ಸ್ ಡೈಲಾಗ್ (VBYLD)–2027’ ಕಾರ್ಯಕ್ರಮವನ್ನು ಆಯೋಜಿಸಿದೆ.
ನಿತ್ಯ ನಾಲ್ಕು ಗೋಡೆಗಳ ನಡುವೆ ಕುಳಿತು ಪಾಠ ಕೇಳುವ ವಿದ್ಯಾರ್ಥಿಗಳು, ತರಗತಿಯಾಚೆಗೆ ಬದುಕಿನ ಪಾಠ ಕಲಿಯುವ ಅವಕಾಶ ಪಡೆದರು. ಟೆಂಟ್ ನಿರ್ಮಿಸುವುದರಿಂದ ಹಿಡಿದು ಅಡುಗೆ ತಯಾರಿಸುವವರೆಗೆ ತಮ್ಮ ಅಗತ್ಯಗಳನ್ನು ತಾವೇ ಪೂರೈಸಿಕೊಂಡು ಸ್ವಾವಲಂಬನೆಯ ಅನುಭವ ಪಡೆದರು.
ಕಳವು ಪ್ರಕರಣಕ್ಕೆ ಸಂಬಂಧಿಸಿ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆಕಾಶ ಭವನದ ಆನಂದ ನಗರ ನಿವಾಸಿ ಲತಾ ಮಾರಿಯಾ (44) ಎಂಬಾಕೆಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
2028ಕ್ಕೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂದು ನಂಜನಗೂಡಿನಲ್ಲಿ ಮಾಜಿ ಶಾಸಕ ಬಿ.ಹರ್ಷವರ್ಧನ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರು – ಮಂಗಳೂರು ವಂದೇಭಾರತ್ ರೈಲು ಪರೀಕ್ಷಾರ್ಥವಾಗಿ ಸೆ. 10ರಂದು ಮತ್ತೂಮ್ಮೆ ಸಂಚಾರ ನಡೆಸಲಿದೆ.
ಗಣೇಶ ಚತುರ್ಥಿಗೆ ದಿನಗಣನೆ ಆರಂಭವಾಗುತ್ತಿದ್ದಂತೆ ವಿಘ್ನವಿನಾಶಕ ಗಣಪನ ಮೂರ್ತಿಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಆದರೆ ಗಣಪನಿಗೆ ರೂಪ ನೀಡುವ ಕುಶಲಕರ್ಮಿಗಳಿಗೆ ಮಾತ್ರ ಅಗತ್ಯವಾದ ಮಣ್ಣಿನ ಕೊರತೆ ಎದುರಾಗಿದೆ.
ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಲಾಗಿದ್ದು, ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೊಸಕಡಜೆಟ್ಟಿ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕೊಲೆ ಶಂಕೆ ವ್ಯಕ್ತವಾಗಿದ್ದು, ಪ್ರಕರಣವನ್ನು ರಾಜಿ ಮೂಲಕ ಮುಚ್ಚಿಹಾಕಲು ಯತ್ನಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.