Showing 20 of 21653 articles • Page 261 of 1083
ಕುಂಬಳೆ ಅರಿಕ್ಕಾಡಿಯಲ್ಲಿ ಟೋಲ್ ಸಂಗ್ರಹ ಆರಂಭವಾದ ಹಿನ್ನೆಲೆಯಲ್ಲಿ ಕಾಸರಗೋಡು-ಮಂಗಳೂರು ನಡುವೆ ಸಂಚರಿಸುವ ಕರ್ನಾಟಕ ಸಾರಿಗೆ (KSRTC) ಬಸ್ ದರವನ್ನು ಹೆಚ್ಚಿಸಲಾಗಿದ್ದು, ಪ್ರಯಾಣಿಕರಿಗೆ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ.
ಭಾರತೀಯ ವೈದ್ಯ ಪದ್ಧತಿಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಆದ್ಯತೆ ನೀಡಲಾಗಿದೆ, ಶಾಸ್ತ್ರೀಯ ಹಾಗೂ ವೈಜ್ಞಾನಿಕ ಆಯುಷ್ ಪದ್ಧತಿಗಳ ಉನ್ನತ ಮೌಲ್ಯಗಳ ಸಂಗಮ ಆಯುಷ್ ಹಬ್ಬದಲ್ಲಿ ಮೂಡಿಬರಲಿದೆ.
2025 ರ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೊದಲ ಗೆಲುವಿಗೆ ಭಾರತದ ಮಾಜಿ ನಾಯಕ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಾರೆ ಎಂಎಸ್ ಧೋನಿ ಅವರ ಬಹುನಿರೀಕ್ಷಿತ ಪ್ರತಿಕ್ರಿಯೆ , ವಿಶೇಷವಾಗಿ ಅವರ ವಿಶಿಷ್ಟ ಚಾತುರ್ಯದಿಂದ ನನ್ನ ಭಾವನೆಗಳು ಭಾವುಕವಾದವು.
ಪುತ್ತೂರಿನಲ್ಲಿ ಬೆಳಕಿಗೆ ಬಂದಿರುವ ‘ಲವ್–ಸೆಕ್ಸ್–ಧೋಖಾ’ ಪ್ರಕರಣದಲ್ಲಿ ಸಂಧಾನಕ್ಕೆ ಕೊನೆಯ ದಿನಾಂಕ ನಿಗದಿಯಾಗಿದ್ದು, ಜನವರಿ 31ರೊಳಗೆ ಮದುವೆ ನಡೆಯದಿದ್ದರೆ ಫೆಬ್ರವರಿ 7ರಂದು ನಾಮಕರಣ ಕಾರ್ಯಕ್ರಮ ನಡೆಯಲಿದ್ದು ನಂತರ ಯಾವುದೇ ಸಂಧಾನ ಇಲ್ಲ ಎಂದು ಹಿಂದುಳಿದ ವರ್ಗಗಳ ಅಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ.
ಮಂಗಳೂರು ಪತ್ರಿಕಾಗೋಷ್ಠಿಯಲ್ಲಿ ಸಂಘಟಕರಾದ ವಸಂತ್ ಕುಮಾರ್ ಶೆಟ್ಟಿ ಮಾತನಾಡಿ , ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರ ಸಂಘ(ನೋಂ) ಹಾಗೂ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟ (ನೋಂ) ಸಂಘಟನೆಗಳ ಮುಖ್ಯಸ್ಥರು ಬುದ್ಧಿಮಾಂದ್ಯತೆ, ಆಟಿಸಂ, ಮೆದುಳಿನ ಪಾತ್ರ ಬಹುವಿಧ ನ್ಯೂನತೆ, ನಿರ್ದಿಷ್ಟ ಕಲಿಕೆಯ ಸಮಸ್ಯೆ, ಪ್ರವಣ ದೋಷ ಹಾಗೂ ದೃಷ್ಟಿ ಮಾಂದ್ಯತೆ ಇರುವ ಮಕ್ಕಳಿಗಾಗಿ ವಿಶೇಷ ಶಾಲೆಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ.
ನಮ್ಮ ಯುಪಿಎ ಸರಕಾರ 2005ರಲ್ಲಿ ಜಾರಿಗೆ ತಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯ ಮೂಲ ಸ್ವರೂಪವನ್ನು ಬದಲಾಯಿಸುವ ಹಾಗೂ ಯೋಜನೆಯಿಂದ ಮಹಾತ್ಮಗಾಂಧಿ ಹೆಸರನ್ನು ತೆಗೆಯುವ ಸಂಚನ್ನು ಕೇಂದ್ರ ಸರಕಾರ ರೂಪಿಸುತಿದ್ದು, ದೇಶದ ಬಡ ಕಾರ್ಮಿಕರ ಹೊಟ್ಟೆಗೆ ಹೊಡೆಯುತ್ತಿದೆ.
ಮಂಗಳೂರು: ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆ ಎಫ್ಐಆರ್ ದಾಖಲಾಗಿದೆ. ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಆರೋಪದಡಿ ಪುತ್ತೂರಿನಲ್ಲಿ ಕೇಸ್ ದಾಖಲಾಗಿದೆ. ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಹಾಗೂ ಹಿಂಸೆಗೆ ಪ್ರಚೋದನೆ ನೀಡಿದ ಆರೋಪದಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ನಿವಾಸಿ ಕಾಂಗ್ರೆಸ್ ಮುಖಂಡ ಅಮಳ ರಾಮಚಂದ್ರ ದೂರು ನೀಡಿದ್ದರು. ಮಾನವ ಬಂಧುತ್ವ ವೇದಿಕೆ ನೇತೃತ್ವದಲ್ಲಿ ದೂರು ನೀಡಲಾಗಿತ್ತು. ಭಾಷಣ ಪ್ರಸಾರ ಮಾಡಿದ ‘ವಿಕಸನ ಟಿವಿ’ ಯೂಟ್ಯೂಬ್ […]
ಸಿಗ್ನಲ್ ಜಂಪಿಂಗ್, ಒನ್ ವೇನಲ್ಲಿ ಗಾಡಿ ನುಗ್ಗಿಸುವುದು, ವೇಗವಾಗಿ ಚಾಲನೆಯಂತಹ ಘಟನೆಗಳ ವಿರುದ್ಧ ದೂರು ದಾಖಲಾಗುತ್ತಲೇ ಇದೆ.
ವಿಧಾನಮಂಡಲ ಅಧಿವೇಶನ ಇತಿಹಾಸದಲ್ಲೇ ಮೊದಲ ಬಾರಿಗೆ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಕೇವಲ 2 ಸಾಲಿನಲ್ಲಿ ಭಾಷಣ ಮುಗಿಸಿದ್ದಾರೆ.
ಎಸ್.ಎಸ್.ವಿ.ಪಿ. ಎಂದು ಜನಪ್ರಿಯವಾಗಿರುವ ಅಂತರಾಷ್ಟ್ರೀಯ ಸೇವಾ ಸಂಸ್ಥೆ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿ, ಮಂಗಳೂರು ಕ್ಯಾಥೊಲಿಕ್ ಧರ್ಮಸಭೆಯಲ್ಲಿ ತನ್ನ ಅಸ್ತಿತ್ವದ ನೂರು ವರ್ಷಗಳ ಸಂಭ್ರಮವನ್ನು ಆಚರಿಸುತ್ತಿದೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿನಿ ಜಿ. ಸುನಿಧಿ ಪ್ರಭು ಅವರು ದಿ ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ಸಂಸ್ಥೆ ನಡೆಸಿದ ಕಂಪೆನಿ ಸೆಕ್ರೆಟರಿ ಎಕ್ಸಿಕ್ಯೂಟಿವ್ ಎಂಟ್ರಾನ್ಸ್ ಟೆಸ್ಟ್ (ಸಿಎಸ್ಇಇಟಿ) ನಲ್ಲಿ ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾಗಿದ್ದಾರೆ.
ನಿಯಂತ್ರಣ ತಪ್ಪಿದ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದ ಘಟನೆ ಮಂಗಳೂರಿನ ಅಡ್ಯಾರ್ ಕಟ್ಟೆ ಬಳಿ ಮಂಗಳವಾರ ನಡೆದಿದೆ.
ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ಭಕ್ತ ಚಿರತೆ ದಾಳಿಗೆ ಬಲಿಯಾಗಿದ್ದಾನೆ. ಜೊತೆಯಲ್ಲಿ ಬಂದಿದ್ದ ಸ್ನೇಹಿತರು ಭಯದಿಂದ ಓಡಿ ತಪ್ಪಿಸಿಕೊಂಡಿದ್ದಾರೆ.
ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿದ ವಂಚಕರು ನಿವೃತ್ತ ಅಧಿಕಾರಿಯೊಬ್ಬರಿಗೆ 45.98 ಲಕ್ಷ ವಂಚಿಸಿರುವ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ವಿಡಿಯೋ ವೈರಲ್ ಆದ ಬಳಿಕ, ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಡಿಯೋ ಹಂಚಿಕೊಂಡಿದ್ದ ಮಹಿಳೆಯನ್ನು ಬುಧವಾರ ಕೇರಳದ ಕೋಝಿಕ್ಕೋಡ್ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಭದ್ರಾವತಿಯಲ್ಲಿ ವೃದ್ಧ ದೊಡ್ಡಪ್ಪ ಹಾಗೂ ದೊಡ್ಡಮ್ಮನನ್ನು ವೈದ್ಯನೊಬ್ಬ ಹೆಚ್ಚಿನ ಅನಸ್ತೇಶಿಯಾನೀಡಿ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಹತ್ಯೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಹೊರವಲಯದ ಟಿಬಿ ಡ್ಯಾಂ ಚೆಕ್ ಪೋಸ್ಟ್ನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಮಂಗಳವಾರ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಮರಳು, ಮಣ್ಣು (ಗ್ರಾವೆಲ್) ಹಾಗೂ ಬಿಳಿ ಕಲ್ಲುಗಳನ್ನು ಸಾಗಿಸುತ್ತಿದ್ದ 7 ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.
ತನ್ನ ಇಷ್ಟದ ಬಂಗುಡೆ ಮೀನು ಹಿಡಿದು ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಕುಣಿದು ಕುಪ್ಪಳಿಸಿದರು.
ಬಿಗ್ಬಾಸ್ ಸೀಸನ್ 12ರ ರನ್ನರ್ ಅಪ್ ಪ್ರಶಸ್ತಿ ಗೆದ್ದು ಹುಟ್ಟೂರಿಗೆ ಆಗಮಿಸಿದ ರಕ್ಷಿತಾ ಶೆಟ್ಟಿಗೆ ಅದ್ಧೂರಿ ಸ್ವಾಗತ ಕೋರಿದರು. ಉಡುಪಿ ಜಿಲ್ಲೆಯ ಹೆಜಮಾಡಿ ಟೋಲ್ ಗೇಟ್ ಬಳಿ ರಕ್ಷಿತಾಳನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್ ನಡೆಯಲಿವೆ ಎಂದು KSCA ಅಧಿಕೃತವಾಗಿ ಘೋಷಿಸಿದೆ.