Showing 20 of 21657 articles • Page 264 of 1083
ಸಂತ ಅಲೋಶಿಯಸ್ ಪ್ರೌಢಶಾಲಾ ಮೈದಾನದಲ್ಲಿ ಜನವರಿ 12, 2026 ರಂದು ನಡೆದ ವಾರ್ಷಿಕ ಅಲೋಶಿಯಸ್ ಹಳೆಯ ವಿದ್ಯಾರ್ಥಿಗಳ ಪುನರ್ಮಿಲನವು ಮೋಜಿನ ಸಂಗೀತ, ಹಾಡುಗಾರಿಕೆ, ನೃತ್ಯ ಮತ್ತು ಆಟಗಳೊಂದಿಗೆ ಭವ್ಯವಾದ ಸಂಭ್ರಮವಾಗಿ ಹೊರಹೊಮ್ಮಿತು. ಇದು ನೆನಪುಗಳನ್ನು ನವೀಕರಿಸುವ ಮತ್ತು ಹಳೆಯ ವಿದ್ಯಾರ್ಥಿ ದಿನಗಳನ್ನು ಮೆಲುಕು ಹಾಕುವ ಸಂಜೆಯಾಗಿ ಹೊರಹೊಮ್ಮಿತು.
ಕೊಂಕಣಿ ಲೇಖಕ್ ಸಂಘ್ ಕರ್ನಾಟಕ, ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಿ ಬೆಳೆಸುವ ಉದ್ದೇಶದಿಂದ 2018ರಲ್ಲಿ ಆರಂಭಗೊಂಡಿತು. 2022ರಲ್ಲಿ ಕೊಂಕಣಿ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ ಲೇಖಕರನ್ನು ಆಯ್ಕೆ ಮಾಡಿ ಗೌರವಿಸಲು ಕೊಂಕಣಿ ಲೇಖಕ್ ಸಂಘ್ ನಿರ್ಧರಿಸಿತು.
ಪಿಯು ಶಿಕ್ಷಣದ ಎರಡು ವರ್ಷ ವ್ಯಕ್ತಿಯ ಬದುಕಿನ ಬಹುಮುಖ್ಯ ಭಾಗ.
ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀಡಿನಗುಡ್ಡೆಯಲ್ಲಿ ನಡೆದಿದೆ.
ಉಡುಪಿಯ ಪ್ರತಿಷ್ಠಿತ ಪರಿವಾರ್ ಬೇಕರಿ ಗ್ರೂಫ್ಸ್ನ ಸ್ಥಾಪಕರು, ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಮಾಜಿ ಅಧ್ಯಕ್ಷ, ಕಿನ್ನಿಮುಲ್ಕಿ ನಿವಾಸಿ ಕೆ. ಗೋಪಾಲ (86) ಅನಾರೋಗ್ಯದಿಂದ ಜ.19ರಂದು ನಿಧನ ಹೊಂದಿದರು.
ಮುಲ್ಕಿ ತಾಲೂಕಿಮ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ ನಡೆದ ಜೋಡಿಕೊಲೆ ಪ್ರಕರಣದ ಆರೋಪಿ ಅಲ್ಲೋನ್ಸ್ ಸಲ್ದಾನ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ.
ಕನ್ನಡ ಭವನ ರಜತ ಸಂಭ್ರಮದ ಭವ್ಯವೇದಿಕೆಯಲ್ಲಿ ಚಿತ್ರ ಕಲಾವಿದ ಆಶಿಶ್ ಎಂ ರಾವ್ ಗೆ ಅಂತರ ರಾಜ್ಯ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ ಅನ್ನು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ಹೊಸ ವರ್ಷದ ಹಾಗೂ ಸಂಕ್ರಾಂತಿ ಹಬ್ಬದ ಅಂಗವಾಗಿ 20ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮವನ್ನು ಜನವರಿ 18ರ ಭಾನುವಾರದಂದು ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಸಲಾಯಿತು.
ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ಅವರದ್ದು ಎನ್ನಲಾದ ರಾಸಲೀಲೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನವೆಂಬರ್ 2025ರಲ್ಲಿ ಕರ್ನಾಟಕ ಸರ್ಕಾರದಿಂದ ಹೊಯ್ಸಳ ಶೌರ್ಯ ಪ್ರಶಸ್ತಿ ಪಡೆದ ಮಾಸ್ಟರ್ ದೀಪೇಶ್ ದೀಪಕ್ ಶೆಣೈ , ಮಾರ್ಚ್–ಏಪ್ರಿಲ್ 2026ರ SSLC ಪರೀಕ್ಷೆಗೆ ತಯಾರಾಗುತ್ತಿರುವ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಹಿತದೃಷ್ಟಿಯಿಂದ ನಿರಂತರ ವಿದ್ಯುತ್ ಸರಬರಾಜು ಒದಗಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಅಂಡರ್ ಪಾಸ್ ಆಗಬೇಕೆಂಬುದು ಸಾರ್ವಜನಿಕರ ಬಹುದಿನಗಳ ಬೇಡಿಕೆ.
ಪುತ್ತಿಗೆ ಮಠದ ಪರ್ಯಾಯದ ಕೊನೆಯ ದಿನವಾದ ಶನಿವಾರ ಸಂಪ್ರದಾಯದಂತೆ ಪಾಕಶಾಲೆಯಲ್ಲಿ ಉಳಿಕೆಯಾದ ಆಹಾರ ಪದಾರ್ಥಗಳನ್ನು ಭಕ್ತರು ಸೂರೆ ಮಾಡಲು (ಕೊಂಡೊಯ್ಯಲು) ಅವಕಾಶ ನೀಡಲಾಯಿತು.
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಮೊದಲ ಮಹಾಪೂಜೆ ನಡೆಸಿದರು.
ಪ್ರಥಮ ಬಾರಿಗೆ ಕೃಷ್ಣಪೂಜಾ ದೀಕ್ಷೆ ಪಡೆದು ಪರ್ಯಾಯ ಸ್ವೀಕರಿಸಿದ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಭಾನುವಾರ ಸರ್ವಜ್ಞಪೀಠಾರೋಹಣ ಮಾಡಿದರು.
ನಿರ್ದಿಗಂತ ವತಿಯಿಂದ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ಮಕ್ಕಳ ನಾಟಕೋತ್ಸವಕ್ಕೆ ಭಾನುವಾರ ಚಾಲನೆ ನೀಡಲಾಯಿತು.
ಸ್ವಾಮಿ ವಿವೇಕಾನಂದರ ಜನ್ಮ ದಿನದ ಸಂದರ್ಭದಲ್ಲಿ ಆಚರಿಸಲಾದ ರಾಷ್ಟ್ರೀಯ ಯುವ ದಿನ 2026 ಅನ್ನು ಅನುಸಂಧಾನಿಸಿ, ಯೆನೆಪೋಯ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆ (YNYSCH) ಯ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕವು ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಾಗಾರವನ್ನು ಆಯೋಜಿಸಿತು.
ರೋಸ್ ಕಾರ್ಯಕ್ರಮಕ್ಕೆ ತೆರಳಿದ್ದ ಕಾಂಗ್ರೆಸ್ ಕಾರ್ಯಕರ್ತೆಯೂ ಆಗಿರುವ ಮಹಿಳೆಗೆ ವ್ಯಕ್ತಿಯೊಬ್ಬ ಬೀಯರ್ ಬಾಟಲಿಯಲ್ಲಿ ಹಲ್ಲೆಗೈದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಪಜೀರಿನಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದ್ದರೂ ಆರೋಪಿ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾನೆ.
ಕಳೆದ ಅಕ್ಟೋಬರ್ನಿಂದ ಎಂಸಿಎಫ್ ಕಾರ್ಖಾನೆಯ ಹೆಸರು ಮಾಯವಾಗಿದೆ. ‘ಎಂಸಿಎಫ್’ ಎಂಬ ಐತಿಹಾಸಿಕ ಹೆಸರನ್ನು ಯಾವುದೇ ಕಾರಣಕ್ಕೂ ಬದಲಿಸಬಾರದು.
ಕಣಿಪುರ ಶ್ರೀಗೋಪಾಲಕೃಷ್ಣ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಶನಿವಾರ ರಾತ್ರಿ ನಡೆದ ಬೆಡಿ ಮಹೋತ್ಸವದ ಹಿನ್ನೆಲೆಯಲ್ಲಿ ಬೆಡಿ ಉತ್ಸವ ಸಮಿತಿ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿದ್ದಾರೆ.
ಸೋಮವಾರ ವಾಯುವ್ಯ ಕಾಶ್ಮೀರದ ಲಡಾಖ್ ಪ್ರದೇಶದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.