Showing 20 of 21592 articles • Page 27 of 1080
ಬಂಟರ ಯಾನೆ ನಾಡವರ ಮಾತೃಸಂಘ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳು, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯ
ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳು ನಿಷೇಧಿತ ಮೊಬೈಲ್ ಫೋನ್ಗಳನ್ನು ಬಳಕೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸೆ.7ರ ತಡರಾತ್ರಿ ಪೊಲೀಸರು ದಾಳಿ ನಡೆಸಿದ್ದು ಒಂಬತ್ತು ಮಂದಿ ನಟೋರಿಯಸ್ ಆರೋಪಿಗಳು ಹತ್ತು ಮೊಬೈಲ್ ಫೋನ್ ಬಳಸಿಕೊಂಡಿದ್ದನ್ನು ಪತ್ತೆ ಮಾಡಿದ್ದಾರೆ.
ಗಡಿ ದಾಟಿದರೂ ನಾಡಿನ ಸಂಸ್ಕೃತಿ, ಭಾಷೆ ಮತ್ತು ಬಾಂಧವ್ಯವನ್ನು ಜೀವಂತವಾಗಿರಿಸುವ ಉದ್ದೇಶದೊಂದಿಗೆ ಕರ್ನಾಟಕ ಸಂಘ ದುಬೈ (KSD) ದುಬೈನ ಮಂಖೂಲ್ನಲ್ಲಿರುವ ಬಿ-ಟೌನ್ ಸಭಾಂಗಣದಲ್ಲಿ ಸೆಪ್ಟೆಂಬರ್ 6 ರಂದು ‘ಡಾರ್ಟ್ಸ್ ಟೂರ್ನಮೆಂಟ್-2026’ ಅನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಿತು.
ಕಿಲ್ಪಾಡಿ ಶ್ರೀ ಕೋರ್ದಬ್ಬು ದೈವಸ್ಥಾನದಲ್ಲಿ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂಲ್ಕಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ನ್ಯಾಯಾಲಯಕ್ಕೆ ಹಾಜರಾಗದೆ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಸಂಬಂಧಿ, ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ಮಂಜುನಾಥ್ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬುಧವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ಲಭ್ಯವಾಗಿರುವ ಮಾಹಿತಿಯಲ್ಲಿ ತಿಳಿಸಲಾಗಿದೆ.
ಅಪ್ರಾಪ್ತ ವಯಸ್ಸಿನ ಬಾಲಕನೋರ್ವನ ಮೇಲೆ ಸತತ 7 ತಿಂಗಳುಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ಗುರುವಾಯನಕೆರೆಯ ಸರ್ಕಾರಿ ಪ್ರೌಢಶಾಲಾ ಮೈದಾನದ ಬಳಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ ಪೊಲೀಸರು, ಅವರಿಂದ ಗಾಂಜಾ ಮತ್ತು ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನ ಗಾಂಧಿನಗರದಲ್ಲಿ ಡಿಆರ್ಐ (DRI) ಅಧಿಕಾರಿಗಳು ವ್ಯಕ್ತಿಯೊಬ್ಬರನ್ನು ತಡೆದು, ‘ಆಪರೇಷನ್ ಕೂರ್ಮ’ದ ಭಾಗವಾಗಿ 180 ಜೀವಂತ ಭಾರತೀಯ ಸ್ಟಾರ್ ಆಮೆಗಳನ್ನು ವಶಪಡಿಸಿಕೊಂಡರು.
ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದ್ದು, ತನ್ನ ಮಗನಿಗೋಸ್ಕರ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ನ ಹಿರಿಯ ಶಾಸಕರಿಗೆ ಸಚಿವ ಸ್ಥಾನ ತಪ್ಪಿಸಿದ್ದಾರೆ ಎಂದು ಮಾಜಿ ಎಂಎಲ್ʼಸಿ ಎಚ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.
ಹೊಸ ವ್ಯವಸ್ಥೆಯು ಆಂಬ್ಯುಲೆನ್ಸ್ ಚಾಲಕರ ಮೇಲೆ ಕಟ್ಟುನಿಟ್ಟಿನ ಕ್ರಮ ಹಾಗೂ ಸಮಯದ ಗುರಿಗಳನ್ನು ಸಹ ವಿಧಿಸುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ 10 ನಿಮಿಷಗಳಲ್ಲಿ ಮತ್ತು ನಗರ ಪ್ರದೇಶಗಳಲ್ಲಿ 15 ರಿಂದ 20 ನಿಮಿಷಗಳಲ್ಲಿ ಆಂಬ್ಯುಲೆನ್ಸ್ಗಳು ಆಸ್ಪತ್ರೆಗಳನ್ನು ತಲುಪಬೇಕು
ಬೆವರು ಸುರಿಸಿ ದುಡಿಯುವ ಜನಸಾಮಾನ್ಯರ ತೆರಿಗೆ ಹಣದಿಂದಲೇ ಬೆಂಗಳೂರು ಮತ್ತು ದೆಹಲಿಯ ಖಜಾನೆ ತುಂಬುತ್ತಿದೆ. ಅದು ಸಮಾಜದ ಕಟ್ಟಕಡೆಯ ವ್ಯಕ್ತಿಯ ಏಳಿಗೆಗೂ ಸಮಾನವಾಗಿ ಹಂಚಿಕೆಯಾಗಬೇಕು.
ಹೆಚ್ಚಿನವರು ವೈದ್ಯಕೀಯ ಪದವಿಗಳನ್ನು ಹೊಂದಿರಲಿಲ್ಲ. ಹಲವರು ಈ ಹಿಂದೆ ವಿವಿಧ ಆಸ್ಪತ್ರೆಗಳಲ್ಲಿ ನರ್ಸ್, ವಾರ್ಡ್ ಬಾಯ್ ಅಥವಾ ಕಾಂಪೌಂಡರ್ ಆಗಿ ಕೆಲಸ ಮಾಡಿದವರಾಗಿದ್ದಾರೆ.
ಮೈಸೂರು ದಸರಾ ವೇಳೆ ಪ್ರಸ್ತಾವಿತ ಕಂಬಳ ಆಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ಹಲವು ಸಂಘಟನೆಗಳ ಸದಸ್ಯರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಧ್ಯಪ್ರವೇಶಿಸಿ ಈ ಪ್ರಸ್ತಾವನೆಯನ್ನು ವಿರೋಧಿಸಬೇಕು ಎಂದು ಆಗ್ರಹಿಸಿದ್ದಾರೆ. ನೀರಿನ ಕೊರತೆ, ಬರ ಪರಿಸ್ಥಿತಿ ಮತ್ತು ಪರಿಸರ ಹಾನಿಯ ಆತಂಕಗಳನ್ನು ಅವರು ಕಾರಣವಾಗಿ ನೀಡಿದ್ದಾರೆ.
ದೇವಸ್ಥಾನದ ಖಾತೆಯಿಂದ ₹3,00,248 ರೂ.ಗಳನ್ನು ಸ್ವಯಂ-ಚೆಕ್ ಮೂಲಕ ತೆಗೆಯಲಾಗಿದ್ದು, ಇದು ಸರ್ಕಾರಿ ನಿಯಮಗಳಿಗೆ ವಿರುದ್ಧವಾಗಿದೆ. ಜನವರಿ 2025 ರಿಂದ ಮೇ 2026 ರ ನಡುವೆ ಸಣ್ಣ ಖರ್ಚು, ದುರಸ್ತಿ ಹೆಸರಿನಲ್ಲಿ ₹40.03 ಲಕ್ಷಕ್ಕೂ ಅಧಿಕ ಹಣವನ್ನು ಇಲಾಖೆ ಅನುಮೋದನೆ ಇಲ್ಲದೆ ತೆಗೆಯಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ದೇಣಿಗೆ ಕಳ್ಳತನ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ರಾಮ ಮಂದಿರ ನಿರ್ವಹಣೆಯ ಹೊಣೆ ಹೊತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್, ಹೊಸ ಹೊಸ ಕ್ರಮಗಳನ್ನು ಜಾರಿಗೆ ತರಲು ಮುಂದಾಗುತ್ತಿದೆ.
ಶಿವರಾಜ್ ಕುಮಾರ್ ಹಾಗೂ ತಮಿಳು ಯುವ ನಟ ಅಭಿಶನ್ ಜೀವಿಂತ್ ಅವರ ನಟನೆಯಲ್ಲಿ ‘ಪಿಕಾಸೊ’ ಸಿನಿಮಾ ಮೂಡಿಬರುತ್ತಿದೆ.
ವೇಗವಾಗಿ ಬಂದ ಟ್ರಕ್ ಹಾಗೂ ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಗೋಂದಿಯಾ ಜಿಲ್ಲೆಯಲ್ಲಿ ನಡೆದಿದೆ.
ಶ್ರೀ ದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (SDIT), ಮಂಗಳೂರಿನ ಏರೋನಾಟಿಕಲ್ ಎಂಜಿನಿಯರಿಂಗ್ ವಿಭಾಗವು ICARUS, IIC ಮತ್ತು IQAC ಸಹಯೋಗದಲ್ಲಿ ಹಾಗೂ ZenVed ಸಂಸ್ಥೆಯ ಸಹಕಾರದೊಂದಿಗೆ “ಡ್ರೋನ್ ಉದ್ಯಮಕ್ಕೆ ಬೇಕಾಗುವ ಕೌಶಲ್ಯಗಳು ಮತ್ತು ಸಿದ್ದತೆ” ಎಂಬ ಕಾರ್ಯಾಗಾರವನ್ನು 8ನೇ ಸೆಪ್ಟೆಂಬರ್ 2026ರಂದು ಆಯೋಜಿಸಿತು.
ಇಂಡೋನೇಷ್ಯಾದ ಪ್ರಸಿದ್ಧ ‘ಅನಾಕ್ ಕ್ರಾಕಟೋವ್’ ಅಗ್ನಿಪರ್ವತ ಭಾನುವಾರ ಭೀಕರವಾಗಿ ಸ್ಫೋಟಗೊಂಡಿದೆ.