Showing 20 of 21671 articles • Page 281 of 1084
ಮೊಬೈಲ್, ಚಲನಚಿತ್ರ ಇತ್ಯಾದಿಗಳನ್ನು ಸಾಕಷ್ಟು ತಲ್ಲೀನರಾಗಿ, ಕುತೂಹಲ ಆಸಕ್ತಿಯಿಂದ ಉತ್ಸಾಹಭರಿತವಾಗಿ ವೀಕ್ಷಿಸುತ್ತೇವೆ.
ಹೆಜಮಾಡಿ ಕಡಲ ತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು ಬಂದಿದ್ದು, ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ತೀರ ಪ್ರದೇಶಕ್ಕೆ ಲಕ್ಷಾಂತರ ಮೀನು ಬಂದಿದೆ.
ನವದೆಹಲಿ : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಲ್ಲೆ, ಭಾರತದ ಈಶಾನ್ಯ ರಾಜ್ಯಗಳ ಕುರಿತು ಬಾಂಗ್ಲಾ ಪ್ರಧಾನಿ ಯೂನಸ್ ಖಾನ್ ಕೊಟ್ಟ ಹೇಳಿಕೆಗಳು ಪರಿಸ್ಥಿತಿ ಬಿಗಡಾಯಿಸುವಂತೆ ಮಾಡಿದೆ. ಈ ಮಧ್ಯೆ ಬಾಂಗ್ಲಾ ಕ್ರಿಕೆಟ್ ಮಂಡಳಿ ಮಾತ್ರ 2026ರ ತನ್ನ ಕ್ರಿಕೆಟ್ ಕ್ಯಾಲೆಂಡರ್ ಬಿಡುಗಡೆ ಮಾಡಿದೆ. ಈ ಕ್ಯಾಲೆಂಡರ್ ನಲ್ಲಿ ಭಾರತ ಹಾಗೂ ಬಾಂಗ್ಲಾ ನಡುವಿನ ಮೂರು ಏಕದಿನ ಪಂದ್ಯಗಳು ಮತ್ತು 2026ರ ಆಗಸ್ಟ್-ಸೆಪ್ಟೆಂಬರ್’ನಲ್ಲಿ T20I ಪಂದ್ಯಗಳನ್ನು ಉಲ್ಲೇಖಿಸಲಾಗಿದೆ. ಭಾರತದಲ್ಲಿ ಈಗಾಗಲೇ ಬಾಂಗ್ಲಾದೇಶದ ವಿರುದ್ಧ ಅಸಹನೆ ಹೆಚ್ಚಾಗಿದೆ. ಬಾಂಗ್ಲಾ ಆಟಗಾರ […]
ತಿರುಮಲ ತಿರುಪತಿಯ ಶ್ರೀ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ ಮದ್ಯಪಾನ ಮಾಡಿದ ವ್ಯಕ್ತಿಯೊಬ್ಬನು ಮಂಗಳವಾರ ತಡರಾತ್ರಿ ದೇವಸ್ಥಾನದ ಗೋಪುರವನ್ನು ಏರಿ, ಕಲಶಗಳಿಗೆ ಹಾನಿ ಮಾಡಿ, ಕೆಳಗಿಳಿಯಲು ಮದ್ಯ ನೀಡಬೇಕು ಎಂದು ಪಟ್ಟು ಹಿಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾತ್ರಿ ಸುಮಾರು 10 ಗಂಟೆಗೆ, ಏಕಾಂತ ಸೇವೆಯ ಬಳಿಕ ಈ ಘಟನೆ ನಡೆದಿದ್ದು, ಆ ವ್ಯಕ್ತಿ ಭದ್ರತಾ ಸಿಬ್ಬಂದಿಯನ್ನು ಕಣ್ತಪ್ಪಿಸೆ ದೇವಸ್ಥಾನದ ಕಾಂಪೌಂಡ್ ಅನ್ನು ಹಾರಿದ್ದಾನೆ . ಬಳಿಕ ಮಹಾದ್ವಾರದ ಬಳಿ ಇರುವ ಗೋಪುರವನ್ನು ಏರಿ, ಎರಡು ಕಲಶಗಳನ್ನು […]
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮಾಲಕರಿಗೆ ಹಣಕ್ಕಾಗಿ ಪೀಡಿಸಿ, ಹಲ್ಲೆಗೆ ಯತ್ನಿಸಿದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಾರಗುಡ್ಡೆ ಎಂಬಲ್ಲಿ ನಡೆದಿದೆ.
ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿದ ಪೊಲೀಸರು, 17 ಬೋಟ್ ಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಲ್ಲಡ್ಕ ಪ್ರಭಾಕರ್ ಭಟ್ ಭಾಷಣ ಮಾಡ್ತಾರೆ, ಮಕ್ಕಳು ಮಾಡಿ ಮಕ್ಕಳು ಮಾಡಿ, ಮುಸ್ಲಿಮರಂತೆ ತುಂಬಾ ಮಕ್ಕಳು ಮಾಡಿ ಅಂತಾರೆ, ಮದುವೆ ಆದಮೇಲೆ ಮಕ್ಕಳು ಮಾಡಿ ಅಂತ ಹೇಳಲಿಲ್ಲ, ಕೃಷ್ಣ ಜೆ ರಾವ್ ಅವರದ್ದೇ ಶಿಷ್ಯ ಅದನ್ನ ಅವನು ಪಾಲನೆ ಮಾಡಿದ್ದಾನೆ ಎಂದು ಪ್ರತಿಭಾ ಕುಳಾಯಿ ಹೇಳಿದರು.
ದುಷ್ಕರ್ಮಿಗಳು ಡೀಸೆಲ್ ಹಾಗೂ ಪೆಟ್ರೋಲ್ ಸುರಿದು ಗದ್ದೆಗೆ ಬೆಂಕಿ ಹಚ್ಚಿದ ಪರಿಣಾಮ ಸುಮಾರು 60 ಲಕ್ಷ ಮೌಲ್ಯದ ಮೆಕ್ಕೆಜೋಳ ಸುಟ್ಟು ಭಸ್ಮವಾದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರು: ವೃತ್ತಿಪರ ಕೋರ್ಸ್ಗಳಿಗೆ ನಡೆಯುವ CET 2026ರ ವೇಳಾಪಟ್ಟಿ ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಮತ್ತು ವೈದ್ಯಕೀಯ ಸಚಿವ ಶರಣು ಪ್ರಕಾಶ್ ಪಾಟೀಲ್ ಅವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿಯಲ್ಲಿ ವೇಳಾಪಟ್ಟಿ ಪ್ರಕಟಿಸಿದರು. ಏ.22 ರಿಂದ 24ರವೆಗೆ ಪರೀಕ್ಷೆಗಳು ನಡೆಯಲಿದ್ದು, ಜನವರಿ 17ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ ಆಗಲಿದೆ. ಇದೇ ವೇಳೆ ಸಿಇಟಿ ವೇಳಾಪಟ್ಟಿ ಜೊತೆಗೆ ಪಿಜಿಸಿಇಟಿ, ಕೆಸೆಟ್ ಪರೀಕ್ಷೆಗಳಿಗೂ ವೇಳಾಪಟ್ಟಿ ಪ್ರಕಟ ಮಾಡಿದರು. ಇದೇ ವೇಳೆ ಅರ್ಜಿ ಸಲ್ಲಿಕೆಗೆ ವಿದ್ಯಾರ್ಥಿಗಳಿಗೆ […]
ಇಂದೋರ್ನಲ್ಲಿ ನೀರು ಇರಲಿಲ್ಲ ಹಾಗಾಗಿ ಕುಡಿಯೋಕೆ ವಿಷ ಹಂಚಲಾಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಪುತ್ತೂರು ಯುವತಿಗೆ ವಂಚನೆ ಪ್ರಕರಣದಲ್ಲಿ ಪೂಜಾಳನ್ನು ವಿವಾಹವಾಗಿ ಮನೆ ಅಳಿಯನಾದರೆ ನಾನೇ ಅವರಿಗೆ 50 ಲಕ್ಷ ರೂ. ಕೊಡುತ್ತೇನೆ ಎಂದು ಪ್ರತಿಭಾ ಕುಳಾಯಿ ಸವಾಲು ಹಾಕಿದರು
ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಇದೇ ಜನವರಿ 7ನೇ ತಾರೀಕಿನಿಂದ ಸಂಜೆ 5.00 ರಿಂದ 6.30 ರ ವರೆಗೆ ಯೋಗಾಸನ ಶಿಬಿರ ನಡೆಯಲಿದೆ.
ಉಡುಪಿ: ತುಳುಕೂಟ ಉಡುಪಿ ವತಿಯಿಂದ 24ನೇ ವರ್ಷದ ಕೆಮ್ತೂರು ದೊಡ್ಡಣ್ಣ ಶೆಟ್ಟಿ ನೆನಪಿನ ತುಳುನಾಟಕ ಸ್ಪರ್ಧೆ ಇದೇ ಜ. 5ರಿಂದ 11 ರವರೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿದೆ ಎಂದು ತುಳುಕೂಟದ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳು ಹವ್ಯಾಸಿ ನಾಟಕ ತಂಡಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು, ಈ ಬಾರಿ 7 ಪ್ರಸಿದ್ಧ ತಂಡಗಳಿಗೆ ಅವಕಾಶ ನೀಡಲಾಗಿದೆ ಎಂದರು. ಜ. 5ರಂದು ಸಂಜೆ 5 […]
ನಾನು ತಪ್ಪು ಮಾಡಿದ್ದೇನೆ. ಹೇಗೂ ತಪ್ಪಾಗಿ ಹೋಗಿದೆ. ಈಗ ಮಗುವಿನ ತಂದೆ ಯಾರು ಎಂದು ಯಾರಾದರೂ ಕೇಳಿದರೆ ನಾನು ಏನೆಂದು ಹೇಳಲಿ,
ಉಡುಪಿ: ಉಡುಪಿ-ಮಣಿಪಾಲದ ಹೆಜ್ಜೆ-ಗೆಜ್ಜೆ ಫೌಂಡೇಷನ್ನ ಸಹ ನಿರ್ದೇಶಕಿಯಾಗಿರುವ ವಿದುಷಿ ದೀಕ್ಷಾ ರಾಮಕೃಷ್ಣ ಇವರಿಂದ ಇದೇ ಜ.3ರ ಶನಿವಾರದಂದು ಶ್ರೀಪುರಂದರ ದಾಸರ ರಚನೆಗಳಿಗೆ ಏಕವ್ಯಕ್ತಿ ಗಾನ-ನೃತ್ಯಾರ್ಪಣೆ ಕಾರ್ಯಕ್ರಮ ಆರು ಗಂಟೆಗಳ ಕಾಲ ನಡೆಯಲಿದೆ. ಈ ಪ್ರಯತ್ನದ ಮೂಲಕ ದೀಕ್ಷಾ ರಾಮಕೃಷ್ಣ ಅವರು ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ನಲ್ಲಿ ಸೇರ್ಪಡೆಗೊಳ್ಳಲು ಪ್ರಯತ್ನಿಸಲಿದ್ದಾರೆ ಎಂದು ಹೆಜ್ಜೆ-ಗೆಜ್ಜೆಯ ಕಾರ್ಯದರ್ಶಿ ರಾಮಕೃಷ್ಣ ಹೆಗಡೆ ತಿಳಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ […]
ರಿವರ್ಸ್ ತೆಗೆಯುವ ವೇಳೆ ಚಾಲಕ ನಿಯಂತ್ರಣದ ತಪ್ಪಿದ ಕಾರೊಂದು ದ್ವಿಚಕ್ರ ವಾಹನ ಮತ್ತು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಅಂಗಡಿಯೊಂದಕ್ಕೆ ನುಗ್ಗಿದ ಘಟನೆ ಉಡುಪಿ ಜಾಮೀಯಾ ಮಸೀದಿ ಸಮೀಪದ ಐರೋಡಿ ಬಿಲ್ಡಿಂಗ್ ಬಳಿ ಸಂಭವಿಸಿದೆ.
ಮಂಗಳೂರು ಮೂಲದ ದುಬೈನಲ್ಲಿ ನೆಲೆಸಿರುವ ಕುಟುಂಬದ ಕುಡಿ, 11ರ ಹರೆಯದ ಪೋರ ಪರ್ವತಾರೋಹಣದಲ್ಲಿ ಜಗತ್ತಿನ ಗಮನ ಸೆಳೆದಿದ್ದಾನೆ. ತನ್ನ ಎಂಟನೇ ವಯಸ್ಸಿನಲ್ಲಿ ಆಫ್ರಿಕಾದ ಅತಿ ಎತ್ತರದ ಪರ್ವತ ತಾಂಜಾನಿಯಾದ ಕಿಲಿಮಂಜಾರೋ ಹತ್ತಿ ದಾಖಲೆ ಮಾಡಿದ್ದ ಅಯಾನ್ ಮೆಂಡನ್, ಇದೀಗ ಜಗತ್ತಿನ ಮೂರನೇ ಅತಿ ಎತ್ತರದ ಕೆನ್ಯಾದಲ್ಲಿರುವ ಮೌಂಟ್ ಕೆನ್ಯಾ ಪರ್ವತವನ್ನು ಏರುವ ಮೂಲಕ ಸಾಧನೆ ಮಾಡಿದ್ದಾನೆ.
ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆ್ಯಪ್ ಆಧಾರಿತ ಟ್ಯಾಕ್ಸಿ ಚಾಲಕರಿಗೆ ಆಗುವ ಅನ್ಯಾಯ, ದೌರ್ಜನ್ಯ ಮತ್ತು ಇತರ ಸಮಸ್ಯೆಗಳ ಬಗ್ಗೆ ಸಂಘಟಕರಾದ ಇಮ್ತಿಯಾಜ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನ ನೀಡಿದರು.
ಕಳೆದ 13 ವರ್ಷಗಳಿಂದ ರಾಜಕೇಸರಿ ಸೇವಾ ಟ್ರಸ್ಟ್ ಸಾಮಾಜಿಕ, ಆರೋಗ್ಯ, ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಅನೇಕ ಸಮಾಜಮುಖ ಕಾರ್ಯಗಳನ್ನು ನಡೆಸಿಕೊಂಡು ಬಂದಿದ್ದು ಬಡ ಅಶಕ್ತರಿಗೆ ಮನೆ ನಿರ್ಮಾಣ, ಅನಾರೋಗ್ಯ ಪೀಡಿತರಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು ಹಾಗೂ ಇನ್ನಿತರ ಸರಿಸುಮಾರು 585 ಸೇವಾ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ಸಮಾಜದ ಹಲವಾರು ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುತ್ತಾ ಬಂದಿದೆ.
ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ದ.ಕ. ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ.) ಮಂಗಳೂರು