Showing 20 of 21592 articles • Page 30 of 1080
ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಮೆಜೆಸ್ಟಿಕ್) ರೈಲು ನಿಲ್ದಾಣದಲ್ಲಿ ಭಾನುವಾರ ತಡರಾತ್ರಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಪ್ಲಾಟ್ಫಾರ್ಮ್ ನಂ. 1 ರಲ್ಲಿ ನಿಲ್ಲಿಸಲಾಗಿದ್ದ ರೈಲಿನ ಖಾಲಿ ಬೋಗಿಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಬೀಗರ ಔತಣ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಚಾಮನಹಳ್ಳಿ ಹುಂಡಿ ಬಳಿ ನಡೆದಿದೆ.
ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ ಉಡುಪಿಯಲ್ಲಿ ಕೇರಳದ ಓಣಂ ಹಬ್ಬದ ವೈಭವವೂ ಕಳೆಗಟ್ಟಿತು
ಬೆಂಗಳೂರು: ಕೇಂದ್ರ ಸರ್ಕಾರದ ಏಳನೇ ಕರಡು ಅಧಿಸೂಚನೆ ಆಧಾರಿತ ಡಾ. ಕೆ. ಕಸ್ತೂರಿ ರಂಗನ್ ಸಮಿತಿ ವರದಿ ಮತ್ತು ರಾಜ್ಯದಲ್ಲಿ ಆವರಿಸಿರುವ ಬರ ಪರಿಸ್ಥಿತಿ ಕುರಿತು ಚರ್ಚಿಸಲು ಸೆಪ್ಟೆಂಬರ್ 21 ರಿಂದ 23 ರವರೆಗೆ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲು ಸಚಿವ ಸಂಪುಟ ನಿರ್ಧರಿಸಿದೆ. ಇದರ ಜೊತೆಗೆ, ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಬಗ್ಗೆ ಚರ್ಚಿಸಿ, ಕೇಂದ್ರಕ್ಕೆ ಆರ್ಥಿಕ ನೆರವು ಕೋರಿ ಪ್ರಸ್ತಾವನೆ ಕಳುಹಿಸುವ ಬಗ್ಗೆಯೂ ಚರ್ಚಿಸಲಾಗುವುದು. “ಹಿಂದಿನ ಅಧಿವೇಶನದಲ್ಲಿ ರೈತರು […]
ಕಿರುತೆರೆಯ ಜನಪ್ರಿಯ ನಟಿ ಆಸಿಯಾ ಫಿರ್ದೋಸ್ ತಮ್ಮ ಮನದಾಳದ ಪಾತ್ರ ಶ್ರಾವಣಿಗೆ ಭಾವುಕ ವಿದಾಯ ಹೇಳಿದ್ದಾರೆ. ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ತನ್ನ ಟಿವಿ ಪಯಣವನ್ನು ಮುಗಿಸಿದ ಬೆನ್ನಲ್ಲೇ ನಟಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹೃದಯಸ್ಪರ್ಶಿ ಬರಹವೊಂದನ್ನು ಹಂಚಿಕೊಂಡಿದ್ದಾರೆ.
ಪೆರುವಾಜೆ ಗ್ರಾಮದ ಕಾನಾವು ಸಮೀಪದ ಅನವುಗುಂಡಿಯಲ್ಲಿ ಪತ್ನಿ ಹಾಗೂ ಅತ್ತೆಗೆ ಚೂರಿಯಿಂದ ಇರಿದ ಘಟನೆ ರವಿವಾರ ಮಧ್ಯಾಹ್ನ ನಡೆದಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಧ್ಯರಾತ್ರಿ ಮನೆ ಬಿಟ್ಟ ರವಿ ಕುಡಿದ ಮತ್ತಿನಲ್ಲಿ ಉದ್ಯಾನವನದ ಬೇಲಿ ಹಾರಲು ಮುಂದಾಗಿದ್ದಾನೆ. ಈ ವೇಳೆ ಮೊನಚಾದ ಕಬ್ಬಿಣದ ರಾಡು ತೊಡೆ ಭಾಗಕ್ಕೆ ಚುಚ್ಚಿ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಡ್ಯದ ಹೊರವಲಯದ ಇಂಡುವಾಳು ಗ್ರಾಮದ ಬಳಿ ನಡೆದಿದೆ. ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ವೇ ನಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಭಾನುವಾರ ಪಡೀಲ್ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರತೀಯೊಂದು ಬರ ಪೀಡಿತ ಪ್ರದೇಶಗಳನ್ನು ಭೇಟಿ ನೀಡಿ ತಪಾಸಣೆ ಮಾಡುವುದರ ಬದಲಾಗಿ, ವೈಮಾನಿಕ ಸಮೀಕ್ಷೆಯು ಬರ ಪೀಡಿತ ಪ್ರದೇಶ ಮತ್ತು ಉಂಟಾದ ಹಾನಿಯ ಸಂಪೂರ್ಣ ಚಿತ್ರಣವನ್ನು ಕ್ಷಣ ಮಾತ್ರದಲ್ಲಿ ನೀಡುತ್ತದೆ. ಇದು ಚಿಕ್ಕ ಮಗುವಿಗೂ ಅರ್ಥವಾಗುವಂತಹ ವಿಷಯ” ಎಂದು ಅವರು ಹೇಳಿದರು.
ದಕ್ಷಿಣ ಕನ್ನಡ ಮತ್ತು ವಿಶಾಲ ಕರಾವಳಿ ಪ್ರದೇಶಕ್ಕೆ ಸಂಬಂಧಿಸಿದ ಬೇಡಿಕೆಗಳು ಮತ್ತು ಅಭಿವೃದ್ಧಿ ಪ್ರಸ್ತಾವನೆಗಳ ಸಮಗ್ರ ಪಟ್ಟಿಯನ್ನು ತಯಾರಿಸಲು ಸ್ಥಳೀಯ ಶಾಸಕರು ಮತ್ತು ಇತರ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಸಚಿವರು ಹೇಳಿದರು.
ರಥೋತ್ಸವದ ಬಳಿಕ ಕೃಷ್ಣನ ಮಣ್ಣಿನ ಮೂರ್ತಿಯನ್ನು ರಥದಿಂದ ಇಳಿಸಿ, ಮಧ್ವ ಸರೋವರದಲ್ಲಿ ವಿಸರ್ಜನೆಗೆ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಸ್ವಾಮೀಜಿಗಳ ಕೈಯಿಂದ ಕೃಷ್ಣನ ಮೂರ್ತಿ ಆಕಸ್ಮಿಕವಾಗಿ ಜಾರಿ ಬಿದ್ದು ಕೃಷ್ಣನ ಮೂರ್ತಿ ಭಗ್ನವಾಗಿದೆ.
ಅಮೆರಿಕದ ಕ್ಯಾಲಿಫೋರ್ನಿಯಾದ ಫ್ರೆಸ್ನೋ ನಗರದಲ್ಲಿ ಸಣ್ಣ ವಿಮಾನವೊಂದು ಪತನಗೊಂಡ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಉಡುಪಿ ಜಿಲ್ಲೆಯಾದ್ಯಂತ ಶನಿವಾರ ಮೋಡ ಕವಿದ ವಾತಾವರಣದ ನಡುವೆ ಕೆಲವೆಡೆ ಬಿಸಿಲು ಕಂಡುಬಂತು.
ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಮೀನು ತುಂಬಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ರಸ್ತೆ ಬದಿಯ ಟೆಂಟ್ಗಳಲ್ಲಿ ವಾಸಿಸುತ್ತಿದ್ದ ವಲಸೆ ಕಾರ್ಮಿಕರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಂಕ್ಷನ್ ಸಮೀಪ ಶನಿವಾರ ಸಂಭವಿಸಿದೆ.
ಇಂಡಿಯನ್ ಸೂಪರ್ ಲೀಗ್ (ಐಎಸ್ಎಲ್) ಫುಟ್ಬಾಲ್ ಟೂರ್ನಿಯು ಅಕ್ಟೋಬರ್ 10ರಂದು ಆರಂಭವಾಗಿ 2027ರ ಮೇ ವರೆಗೆ ನಡೆಯಲಿದೆ.
ರಸ್ತೆ ಕಾಮಗಾರಿ ವೇಳೆ ಗ್ಯಾಸ್ ಪೈಪ್ಗೆ ಹಾನಿಯಾದ ಪರಿಣಾಮ ಅನಿಲ ಸೋರಿಕೆಯಾಗಿ ಆತಂಕದ ವಾತಾವರಣ ನಿರ್ಮಾಣವಾಗಿರುವ ಘಟನೆ ಎಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಶ್ರೀಕೃಷ್ಣ ಮಠದಲ್ಲಿ ನಡೆದ ವಿಟ್ಲಪಿಂಡಿ ಉತ್ಸವದ ವೇಳೆ ಅವಘಡವೊಂದು ನಡೆದಿದೆ.
ಬಹುನಿರೀಕ್ಷಿತ ಯಶವಂತಪುರ – ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ನ ಪೂರ್ಣ ಮಾರ್ಗದ ಪರೀಕ್ಷಾರ್ಥ 16 ಬೋಗಿಗಳ ರೈಲು ಯಶವಂತಪುರದಿಂದ ಬೆಳಗ್ಗೆ 6.30ಕ್ಕೆ ಹೊರಟು ಸಂಜೆ 4.30ರ ಸುಮಾರಿಗೆ ಮಂಗಳೂರು ಸೆಂಟ್ರಲ್ ತಲುಪಿತು.
ಗೋಮಾತೆಯ ರಕ್ಷಣೆ ಹಾಗೂ ಸೇವೆಯ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗಿರುವ ‘ಗೋ ಸಮ್ಮಾನ್ ಆಹ್ವಾನ ಅಭಿಯಾನ’ದ ಮಂಗಳೂರು–ಉಡುಪಿ ಜಿಲ್ಲೆಗಳ 3ನೇ ಹಂತದ ಸಹಿ ಸಂಗ್ರಹ ಅಭಿಯಾನಕ್ಕೆ ಕದ್ರಿಯ ಶ್ರೀ ಯೋಗೇಶ್ವರ ಮಠದಲ್ಲಿ ಪೂಜ್ಯ ಸಂತರ ಸಾನ್ನಿಧ್ಯದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಸಂತರು ಗೋ ಗ್ರಾಸವನ್ನು ಗೋವು ಮತ್ತು ಕರುವಿಗೆ ಅರ್ಪಿಸುವ ಮೂಲಕ ಉದ್ಘಾಟಿಸಿದರು.