Showing 20 of 21592 articles • Page 31 of 1080
ಕರಾವಳಿ ಕರ್ನಾಟಕದ ಉದ್ಯಮಿಗಳು, ಕೈಗಾರಿಕೋದ್ಯಮಿಗಳು, ಎಂಎಸ್ಎಂಇಗಳು, ವ್ಯಾಪಾರಿಗಳು ಹಾಗೂ ಪ್ರವಾಸೋದ್ಯಮ ಕ್ಷೇತ್ರದ ವಿವಿಧ ಭಾಗೀದಾರರಿಗೆ ಪ್ರಮುಖ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಪ್ರಸ್ತಾಪಿಸಲಾದ ಏಳು ದಿನಗಳ ಕರಾವಳಿ ಕರ್ನಾಟಕ ವಾಣಿಜ್ಯ, ಕೈಗಾರಿಕೆ, ಉದ್ಯಮಶೀಲತೆ ಮತ್ತು ಪ್ರವಾಸೋದ್ಯಮ ಪ್ರದರ್ಶನಕ್ಕೆ ಕರ್ನಾಟಕದ ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಕೆ. ಜೆ. ಜಾರ್ಜ್ ಅವರು ಉತ್ತೇಜನಕಾರಿ ಪ್ರತಿಕ್ರಿಯೆ ನೀಡಿದ್ದಾರೆ.
KCF ಅಲ್ ಕಸೀಮ್ ಝೋನ್ ವತಿಯಿಂದ LEGACY NIGHT -2026 ಫ್ಯಾಮಿಲಿ ಮೀಟ್ ಕಾರ್ಯಕ್ರಮ ಬುರೈದ ರೆಸಾರ್ಟ್ ನಲ್ಲಿ ಗುರುವಾರ ನಡೆಯಿತು.
ಮೊಸರು ಕುಡಿಕೆಯ ಮಡಿಕೆ ಹೊಡೆಯುವಾಗ ಭಾರೀ ಅನಾಹುತ ತಪ್ಪಿದ ಘಟನೆ ಮಂಗಳೂರು ಬಜಿಲಕೇರಿಯಲ್ಲಿ ನಡೆದಿದೆ.
ದೇಶದ ವಿವಿಧ ರಾಜ್ಯಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಈಶಾನ್ಯ ಹಾಗೂ ಉತ್ತರ ಭಾರತದ ಹಲವು ಭಾಗಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮಾದಕ ವಸ್ತು ಸೇವನೆ ಮಾಡಿದ ಆರೋಪದಲ್ಲಿ ಬಂದರು ಮತ್ತು ಉಳ್ಳಾಲ ಠಾಣೆಯ ಪೊಲೀಸರು ನಗರದ ಕಂಡತ್ಪಳ್ಳಿ ನಿವಾಸಿ ಸೈಫುಲ್ಲಾ (23) ಮತ್ತು ಕೋಟೆಕಾರು ಕುಂಪಲ ನಿವಾಸಿ ಸಂದೇಶ್ (34) ಎಂಬವರನ್ನು ಬಂಧಿಸಿದ್ದಾರೆ.
ಕಾರಿನಲ್ಲಿ ಪುನುಗು ಬೆಕ್ಕನ್ನು ಅಕ್ರಮವಾಗಿ ಸಾಗಿಸಿ ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಮೂವರನ್ನು ತುಮಕೂರಿನ ತಿಪಟೂರು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಕೆಎಸ್ ಆರ್ ಟಿಸಿ ಬಸ್ ಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಎರ್ಮೈಲ್ ಬಳಿ ನಡೆದಿದೆ.
ಜಗತ್ತಿನ ಅತ್ಯಂತ ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆಗಳಲ್ಲಿ ಒಂದಾದ 73ನೇ ಆವೃತ್ತಿಯ ‘ಮಿಸ್ ವರ್ಲ್ಡ್ 2026 ಕಿರೀಟವನ್ನು ಡೊಮಿನಿಕನ್ ರಿಪಬ್ಲಿಕ್ನ ಜೊಹೈರಿ ಮೋಲಾ ಡೊಮಿಂಗುಯೆಜ್ ತಮ್ಮದಾಗಿಸಿಕೊಂಡಿದ್ದಾರೆ.
ಹಜ್ ಯಾತ್ರೆಗೆ ಆಯ್ಕೆಯಾಗಿರುವ ಯಾತ್ರಿಕರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯವು ಮಹತ್ವದ ಸೂಚನೆ ನೀಡಿದೆ.
ಜಾರ್ಖಂಡ್ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಮತ್ತು ನಗರಾಭಿವೃದ್ಧಿ ಸಚಿವ ಸುದಿವ್ಯ ಕುಮಾರ್ ಸೋನು ಹೃದಯಾಘಾತದಿಂದ ನಿಧನರಾಗಿದ್ದಾರೆ.
ವಿಷಪೂರಿತ ಮದ್ಯ ಸೇವಿಸಿ 9 ಜನ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ.
ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ , ಕೂಳೂರು ಕ್ಯಾಂಪಸ್ನ ವೈ.ಎಂ.ಕೆ. ಸಭಾಂಗಣದಲ್ಲಿ ಇದೇ ಬರುವ ಸೆಪ್ಟೆಂಬರ್ 07ರ ಸೋಮವಾರದಂದು ಬೆಳಗ್ಗೆ 9.30ಕ್ಕೆ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ‘ನವ್ಯಾರಂಭ-2026’ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ.
ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸೆಪ್ಟೆಂಬರ್ 04 ಮತ್ತು 05 ರಂದು ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಲಕ್ಷ ತುಳಸಿ ಅರ್ಚನೆ ಕಾರ್ಯಕ್ರಮ ಸಂಪನ್ನಗೊಂಡಿತು
ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನಲ್ಲಿ (ಎಸ್ಜೆಇಸಿ) ಶಿಕ್ಷಕರ ದಿನಾಚರಣೆ 2026ನ್ನು ಸೆಪ್ಟೆಂಬರ್ 5ರಂದು ಮಧ್ಯಾಹ್ನ 2 ಗಂಟೆಗೆ ಕಲಾಂ ಸಭಾಂಗಣದಲ್ಲಿ ವಿಶೇಷ ಕಾರ್ಯಕ್ರಮದೊಂದಿಗೆ ಆಚರಿಸಲಾಯಿತು.
ನರ್ಸ್ ವೇಷಧಾರಿ ಒಂದು ಕೈಯಲ್ಲಿ ಇಂಜೆಕ್ಷನ್ ಹಿಡಿದುಕೊಂಡಿದ್ದರೆ, ಇನ್ನೊಂದು ಕೈಯಲ್ಲಿ ಮಲೇರಿಯಾ ರೋಗದ ಮುಂಜಾಗ್ರತಾ ಕ್ರಮಗಳು ಹಾಗೂ ನಿಯಂತ್ರಣದ ಕುರಿತು ಮಾಹಿತಿ ನೀಡುವ ಫಲಕವನ್ನು ಹಿಡಿದಿದ್ದರು.
ಕೃಷ್ಣಮಠದ ಬಲಪಾರ್ಶ್ವದಲ್ಲಿ ಇದಕ್ಕಾಗಿ ಅಂಗಣ ಸಿದ್ಧಗೊಳಿಸಲಾಗಿತ್ತು.ವಿಟ್ಲಪಿಂಡಿ ಉತ್ಸವ ಸಂದರ್ಭ ಸಾವಿರಾರು ಭಕ್ತರು ಮಲ್ಲಯುದ್ಧವನ್ನು ಕಣ್ತುಂಬಿಕೊಂಡು ರೋಮಾಂಚನಗೊಂಡರು.
ವಿಟ್ಲಪಿಂಡಿ ವೈಭವದ ವೈವಿಧ್ಯಮಯ ವೇಷಗಳ ನಡುವೆ ‘ವಿಜಯ್’ ಆಗಮನವೂ ಈ ಬಾರಿಯ ಉತ್ಸವದ ವಿಶೇಷ ಆಕರ್ಷಣೆಯಾಗಿ ಜನಮನ ಸೆಳೆಯಿತು.
ಹುಲಿವೇಷ ಧರಿಸಿದ್ದ ತಂಡದ ಸದಸ್ಯರು ಮಗುವನ್ನು ಕೈಯಲ್ಲಿ ಎತ್ತಿಕೊಂಡು ಕುಣಿದು ಸಂಭ್ರಮಿಸಿದ್ದಾರೆ. ಪುಟ್ಟ ಮಗುವಿಗೂ ಹುಲಿವೇಷ ಹಾಕಿರುವ ದೃಶ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮದ ಪ್ರಮುಖ ಧಾರ್ಮಿಕ ವಿಧಿಯಾದ ಅರ್ಘ್ಯ ಪ್ರದಾನವು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ತಡರಾತ್ರಿ ಭಕ್ತಿಪೂರ್ವಕವಾಗಿ ನೆರವೇರಿತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ಧಾರ್ಮಿಕ ವಿಧಿ ಮಠದ ಪರಿಸರದಲ್ಲಿ ವಿಶೇಷ ಭಕ್ತಿಯ ವಾತಾವರಣ ಸೃಷ್ಟಿಸಿತು. ಪರ್ಯಾಯ ಶ್ರೀ ಶೀರೂರು ಮಠದ ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಹಾಗೂ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಶ್ರೀಕೃಷ್ಣನಿಗೆ ವಿಶೇಷವಾಗಿ ಅರ್ಘ್ಯ ಪ್ರದಾನ ಮಾಡಿದರು. ಬಳಿಕ ನೂರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಕೃಷ್ಣನಿಗೆ ಅರ್ಘ್ಯ […]
ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಪ್ರಜಾ ಸೇವಾ ಆಂದೋಲನಕ್ಕೆ ನಂಜನಗೂಡು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.