Showing 20 of 21592 articles • Page 32 of 1080
ನಗರದ ಶ್ರೀರಾಂಪುರ ಬಡಾವಣೆಯಲ್ಲಿರುವ ಶ್ರೀ ಶನೇಶ್ವರ ಸ್ವಾಮಿ ದೇವಾಲಯದಲ್ಲಿ ಕೊನೆಯ ಶ್ರಾವಣ ಶನಿವಾರದ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಶ್ರಾವಣ ಮಾಸದ 60ನೇ ವರ್ಷದ ಆರಾಧನಾ ಮಹೋತ್ಸವವನ್ನು ಶ್ರದ್ಧಾ-ಭಕ್ತಿ ಹಾಗೂ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ತಾಲ್ಲೂಕಿನ ಚಿನ್ನದಗುಡಿ ಹುಂಡಿ ಗ್ರಾಮದ ಶ್ರೀ ಶನೇಶ್ವರ ಸ್ವಾಮಿ ದೇವಾಲಯದಲ್ಲಿ ಕೊನೆಯ ಶ್ರಾವಣ ಶನಿವಾರದ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಶ್ರಾವಣ ಮಾಸದ ಜಾತ್ರಾ ಮಹೋತ್ಸವವನ್ನು ಸಡಗರ, ಸಂಭ್ರಮ ಹಾಗೂ ಶ್ರದ್ಧಾ-ಭಕ್ತಿಯಿಂದ ಅದ್ದೂರಿಯಾಗಿ ಆಚರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಲಕ್ಷಪ್ಪ ಕೋಡಿ ನಿವಾಸಿ ನರಸಿಂಹ ಶೆಟ್ಟಿ ಯಾನೆ ‘ಮಾಣಿ ನರಸಿಂಹ’ (ತಂದೆ: ದಿವಂಗತ ನಾರಾಯಣ ಶೆಟ್ಟಿ) ಅವರಿಗೆ ಜಿಲ್ಲೆಯಿಂದ ಗಡಿಪಾರು (Externment) ಮಾಡುವ ಕುರಿತು ಕಾರಣ ಕೇಳಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಸೂಚನಾ ಪತ್ರ (ನೋಟಿಸ್) ಜಾರಿಗೊಳಿಸಿದೆ.
ಶ್ರೀನಾಥ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಅಷ್ಟಮಿ ಪ್ರಯುಕ್ತ ಊರಿಗೆ ಆಗಮಿಸಿದ್ದರು. ಸ್ಥಳೀಯ ಸಂಘಟನೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದರು ಎಂದು ತಿಳಿದುಬಂದಿದೆ.
ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ಆಡಳಿತಾತ್ಮಕವಾಗಿ ಬೇರ್ಪಡಿಸಿರುವುದನ್ನು ಸ್ವಾಗತಿಸುತ್ತೇವೆ. ಆದರೆ ಮಂಗಳೂರಿಗೆ ಸಿಗಬೇಕಿದ್ದ ಪ್ರತ್ಯೇಕ ರೈಲ್ವೇ ವಿಭಾಗವನ್ನು ಮೈಸೂರಿಗೆ ನೀಡಿರುವುದನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಪಿ.ವಿ. ಮೋಹನ್ ಹೇಳಿದರು.
ಗೇರುಕಟ್ಟೆ ಬಳಿಯ ಸಂಬೋಳ್ಯದ 15 ವರ್ಷದ ಬಾಲಕ ಸುಮಂತ್ ನಿಗೂಢ ಸಾವಿಗೆ ಸಂಬಂಧಿಸಿದಂತೆ ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ನಡೆಯುತ್ತಿದ್ದು, ಆತನ ಸಹೋದರ ಮತ್ತು ಇಬ್ಬರು ಚಿಕ್ಕಪ್ಪನ ವೈಜ್ಞಾನಿಕ ಪರೀಕ್ಷೆಗಳು ಈಗ ಪೂರ್ಣಗೊಂಡಿವೆ.
ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡು ಮೂಲದ ಅಂತಾರಾಜ್ಯ ಕಳ್ಳನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಚೇಸ್ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಮೊಹಮದ್ ಮುಶಾಮೀರ್, ಅಬ್ದುಲ್ ಶಪ್ಪನ್, ಮೊಹ್ಮದ್ ರಿಜ್ವಾನ್, ನಿಯಾಜ್, ಕಲಂದರ್ ವಿರುದ್ಧ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ತಮ್ಮ ಮೇಲೆ ನಡೆದ ಮಾರಣಾಂತಿಕ ಹಲ್ಲೆಯ ಕುರಿತು ಮಂಜುನಾಥ್ ಹವೇಲಿ ಅವರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರ್ಗಳ ಡೀಸೆಲ್ ಟ್ಯಾಂಕ್ನಿಂದ ಡೀಸೆಲ್ ಕಳವು ಮಾಡಲು ಸಿದ್ಧತೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು, ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಪಿಕಪ್ ವಾಹನ ಸಹಿತ ಡೀಸೆಲ್ ಹಾಗೂ ಇತರ ಪರಿಕರಗಳನ್ನು ಸ್ವಾಧೀನಪಡಿಸಿಕೊಂಡ ಘಟನೆ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಬಳಿ ನಡೆದಿದೆ.
ಬಿಜೆಪಿ ಮತ್ತು ಹಿಂದುತ್ವ ಸಂಘಟನೆಗಳು ಮೊನ್ನೆ ಪುತ್ತೂರಿನಲ್ಲಿ ಆಯೋಜಿಸಿದ ಮೆರವಣಿಗೆ ಯಲ್ಲಿ ಮುಸ್ಲಿಮರ ವಿರುದ್ಧ ನಿಂದನಾತ್ಮಕ ಘೋಷಣೆ ಕೂಗಲಾಗಿದ್ದು, ಕಾರ್ಯಕ್ರಮದ ಆಯೋಜಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಸ್ಲಿಂ ಲೀಗ್ ದ.ಕ.ಜಿಲ್ಲಾ ಸಮಿತಿಯ ನಿಯೋಗವು ದ.ಕ. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.
ಶಾಲಾ ಶಿಕ್ಷಣ ಇಲಾಖೆಯಿಂದ ನೀಡಲಾಗುವ 2026ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ವಿವಿಧ ತಾಲೂಕುಗಳ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 16ಶಿಕ್ಷಕರು ಆಯ್ಕೆಯಾಗಿದ್ದಾರೆ.
ಪುಟ್ಟ ಮಕ್ಕಳ ಕೃಷ್ಣವೇಷ, ಅವರ ಮುಗ್ಧ ನಗು, ತುಂಟಾಟ ಮತ್ತು ಹೆಜ್ಜೆಗಳಿಗೆ ಸಾಕ್ಷಿಯಾದ ಜೂನಿಯರ್ ಮುದ್ದುಕೃಷ್ಣ ಸ್ಪರ್ಧೆ ಉಡುಪಿ ಶ್ರೀಕೃಷ್ಣ ಮಠದ ಅನ್ನಬ್ರಹ್ಮ ಛತ್ರದಲ್ಲಿ ಶುಕ್ರವಾರ ವಿಶೇಷ ಸಂಭ್ರಮ ಮೂಡಿಸಿತು.
ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸುಮಾರು 10 ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮಣಿಪಾಲದಲ್ಲಿ ನಡೆದಿದೆ. ಅತ್ತೂರು ಪದವು ಗ್ರಾಮದ ಐಶ್ವರ್ಯ ಆಚಾರ್ಯ (28) ಮೃತಪಟ್ಟವರು.
ಈ ಬಾರಿ ಉಡುಪಿ ನಗರದಲ್ಲಿ 40ಕ್ಕೂ ಅಧಿಕ ಹುಲಿವೇಷ ತಂಡಗಳು ಅಷ್ಟಮಿ ಉತ್ಸವದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಂಪ್ರದಾಯಿಕ ಹುಲಿವೇಷಗಳ ಜತೆಗೆ ಮಹಿಳೆಯರ ಹುಲಿವೇಷ ತಂಡಗಳು ಸಾರ್ವಜನಿಕರ ಗಮನ ಸೆಳೆಯುತ್ತಿವೆ.
ಕಳೆದ ಹದಿನಾಲ್ಕು ವರ್ಷಗಳಿಂದ ಕೃಷ್ಣಾಷ್ಟಮಿ ಸಂದರ್ಭದಲ್ಲಿ ವಿಭಿನ್ನ ಮತ್ತು ವಿಶಿಷ್ಟ ವೇಷಗಳನ್ನು ಧರಿಸಿ ಸಾರ್ವಜನಿಕರಿಂದ ನೆರವು ಸಂಗ್ರಹಿಸಿ ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗೆ ನೆರವಾಗುತ್ತಿರುವ ರವಿ ಕಟಪಾಡಿ ಅವರು ಈ ಬಾರಿ ಕಾಲ್ಪನಿಕ ಸಮುದ್ರ ಜೀವಿಯ ರೂಪವಾದ ‘ಮರ್ಮೇನ್’ (Merman) ವೇಷದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಉಡುಪಿ ನಗರದ ಪ್ರಸಿದ್ಧ ವಿಟ್ಲಪಿಂಡಿ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಾಪಾಡಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.
ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಅವರು, ಒಂದು ವರ್ಷದ ಹಿಂದೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಮುಂಬರುವ ನವೆಂಬರ್ನಲ್ಲಿ ಅವರ ವಿವಾಹ ನಡೆಯಬೇಕಿತ್ತು ಎಂದು ಮೂಲಗಳು ತಿಳಿಸಿವೆ.
ಶ್ರೀಕೃಷ್ಣನ ಜನ್ಮದಿನವಾದ ಕೃಷ್ಣಜನ್ಮಾಷ್ಟಮಿಯ ಸಂಭ್ರಮಕ್ಕೆ ಉಡುಪಿ ಸಜ್ಜಾಗಿದ್ದು, ಇಂದು ಹಾಗೂ ನಾಳೆ ಮಠದಲ್ಲಿ ಮತ್ತು ನಗರದಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಇಲ್ಲಿನ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಸರಗಳ್ಳರ ಕೈಚಳಕಕ್ಕೆ ಸರ್ಕಾರಿ ಉದ್ಯೋಗಿಯೊಬ್ಬರು ಚಿನ್ನಾಭರಣ ಕಳೆದುಕೊಂಡಿದ್ದಾರೆ. ಪೆಂಡೆಂಟ್ ಸಮೇತ 2.30 ಲಕ್ಷಮೌಲ್ಯದ ಚಿನ್ನದ ಸರ ಕಳ್ಳರ ಪಾಲಾಗಿದೆ.
ಕೃಷ್ಣರಾಜಪುರ ಗ್ರಾಮದ ರೈತರ ಜಮೀನುಗಳಿಗೆ ವಿದ್ಯುತ್ ಸಮಸ್ಯೆ ತೀವ್ರವಾಗಿ ಕಾಡುತ್ತಿದ್ದು, ಪಂಪ್ಸೆಟ್ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಪರಿಣಾಮ ಬೆಳೆಗಳಿಗೆ ನೀರುಣಿಸಲು ಸಾಧ್ಯವಾಗದೆ ಸುಮಾರು 15ರಿಂದ 20 ಎಕರೆ ಪ್ರದೇಶದಲ್ಲಿ ಬೆಳೆದಿರುವ ಕಬ್ಬು ಬೆಳೆ ಒಣಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.