Showing 20 of 21592 articles • Page 33 of 1080
ಐತಿಹಾಸಿಕ ಮೈಸೂರು ಜಂಬೂಸವಾರಿಯಲ್ಲಿ ಸತತ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಗಜಪಡೆ ನಾಯಕ ಅಭಿಮನ್ಯು ಮುಂಬರುವ 2026ರ ದಸರಾ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಭಾಗವಹಿಸಲು ಸರ್ಕಾರ ಅನುಮತಿ ನೀಡಿದೆ.
ನಗರದ ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ 2024-25ನೇ ಸಾಲಿನಲ್ಲಿ ಸುಮಾರು 4 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಆರೋಪಿಸಿದರು.
ಶ್ರೀ ಕೃಷ್ಣಾಷ್ಟಮಿ ಅಂಗವಾಗಿ ನಗರದ ಹಂಪನಕಟ್ಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಫಟ್ಪಾತ್ಗಳಲ್ಲಿ ಹೂವಿನ ಮಾರಾಟ ನಡೆಸುವ ದೂರದ ಊರುಗಳ ವ್ಯಾಪಾರಿಗಳಿಗೆ ಮನಪಾದ ಕಟ್ಟುನಿಟ್ಟಿನ ನಿಯಮದಿಂದಾಗಿ ಸಮಸ್ಯೆ ಉಂಟಾಗಿದೆ.
ಗೌರಿ-ಗಣೇಶ ಹಬ್ಬ ಹಾಗೂ ವಾರಾಂತ್ಯದ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಸೆಪ್ಟೆಂಬರ್ 11ರಿಂದ 13ರವರೆಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಪ್ರದೇಶಗಳಿಗೆ ಒಟ್ಟು 2,400 ಹೆಚ್ಚುವರಿ ಬಸ್ಗಳನ್ನು ಕಾರ್ಯಾಚರಣೆಗೆ ತರಲಾಗುತ್ತಿದೆ.
ನಗರದ ಪಣಂಬೂರು ಎಂಸಿಎಫ್ ಬಳಿ ಕಾರ್ಕಳ–ಮೂಲ್ಕಿ–ಮಂಗಳೂರು ಮಾರ್ಗದ ಎಕ್ಸ್ಪ್ರೆಸ್ ಬಸ್ ರಸ್ತೆಗೆ ಉರುಳಿ ಬಿದ್ದ ಘಟನೆ ನಡೆದಿದೆ.
ಕೃಷ್ಣನೂರಿನ ಅಷ್ಟಮಿ ವೈಭವದಲ್ಲಿ ಹುಲಿವೇಷದ ಗರ್ಜನೆ ಕೇಳಲು ಜನರು ಕಾತರದಿಂದ ಕಾಯುತ್ತಿದ್ದು, ಎರಡು ದಿನಗಳ ಕಾಲ ಉಡುಪಿ ನಗರ ಹಬ್ಬದ ಸಂಭ್ರಮದಲ್ಲಿ ಮುಳುಗಲಿದೆ.
ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಯನ್ನು ತಡೆಗಟ್ಟುವ ಉದ್ದೇಶ ಹೊಂದಿರುವ ‘ಬೇಡಾ ಬ್ರೋ’ ಮತ್ತು ‘ರೈಸ್’ ಅಭಿಯಾನಗಳ ಭಾಗವಾಗಿ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಇಲ್ಲಿನ ಶಿಕ್ಷಣ ಸಂಸ್ಥೆಗಳ ಸುತ್ತಲೂ ತಪಾಸಣೆ ತೀವ್ರಗೊಳಿಸಿದ್ದಾರೆ.
ಈ ನಿಯಮವು ಭವಿಷ್ಯದಲ್ಲಿ ಬೆಂಗಳೂರಿನ ಬಹುತೇಕ ಉದ್ಯಾನವನಗಳಲ್ಲಿನ ಹಚ್ಚ ಹಸಿರನ್ನೇ ಕಸಿದುಕೊಳ್ಳುವ ಭೀತಿಯಿದೆ ಎಂದು ಇತ್ತೀಚಿನ ದಿನಗಳಲ್ಲಿ ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿ ಬೀದಿಗಿಳಿದಿದ್ದರು.
ಮಂಗಳೂರು: ಗ್ರಾಹಕರೊಬ್ಬರು ಆನ್ ಲೈನ್ ಮುಖಾಂತರ ಖರೀದಿಸಿದ ಮೊಟ್ಟೆಯನ್ನು ಮನೆಯಲ್ಲಿ ಒಡೆದು ನೋಡಿದಾಗ ಅದರಲ್ಲಿ ಹುಳ ಇರುವುದನ್ನು ಗಮನಿಸಿ ಕೂಡಲೇ ವಿಷಯವನ್ನು ಆರೋಗ್ಯ ಸಚಿವ ಯು.ಟಿ.ಖಾದರ್ ಅವರ ಗಮನಕ್ಕೆ ತಂದಿದ್ದರಿಂದ ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮಕೈಗೊಂಡಿರುವ ಘಟನೆ ಗುರುವಾರ ನಗರದ ಫಲ್ನೀರ್ ನಲ್ಲಿ ನಡೆದಿದೆ. ಘಟನೆ ಸಂಬಂಧ ಇಲ್ಲಿನ ಫಲ್ನೀರ್ ಸ್ಕ್ವೇರ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಬ್ಲಿಂಕ್ ಇಟ್ ಆನ್ಲೈಲ್ ಮಾರಾಟ ಸಂಸ್ಥೆಯ ವಿರುದ್ಧ ದೂರು ದಾಖಲಿಸಿಕೊಂಡ ಆರೋಗ್ಯಾಧಿಕಾರಿಗಳು ಗೋದಾಮು ಪರಿಶೀಲಿಸಿ ಒಡೆದಿರುವ […]
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ರಿಲಯನ್ಸ್ ಪೆಟ್ರೋಲ್ ಪಂಪ್ ಬಳಿ ಮಂಗಳವಾರ ಮಧ್ಯಾಹ್ನ ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ಕೈ ತುಂಡಾಗಿದ್ದು, ಸ್ಥಳೀಯರು ಪ್ರಯಾಣಿಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹೃದಯಾಘಾತದಿಂದ ಸರ್ಕಾರಿ ಶಾಲಾ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ನಡೆದಿದೆ. ಎಸ್.ಸಿ.ಎಂ.ಎಂ ಫ್ರೌಡಶಾಲೆಯ 9 ನೇ ತರಗತಿಯ ವೀರಮಣಿ (14) ಸಾವಿಗೀಡಾದ ವಿದ್ಯಾರ್ಥಿ.
ತಾಲ್ಲೂಕಿನ ಮಲ್ಲೂಪುರ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ನಡೆದ 2026-27ನೇ ಸಾಲಿನ ದೊಡ್ಡಕವಲಂದೆ ಹೋಬಳಿ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢಶಾಲೆ ಹೆಡತಲೆ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಮಲೆ ಮಹದೇಶ್ವರ ವನ್ಯಜೀವಿಧಾಮದ ಬಫರ್ ವಲಯಕ್ಕೆ ಸೇರಿದ ಉಡುತೊರೆಹಳ್ಳ ಜಲಾಶಯದ ಹಿನ್ನೀರಿನ ಅರಣ್ಯ ಪ್ರದೇಶದಲ್ಲಿ ಕಡವೆಯನ್ನು ಬೇಟೆಯಾಡಿ, ಅದರ ಮಾಂಸವನ್ನು ಸಾಗಿಸುತ್ತಿದ್ದ ನಾಲ್ವರು ಆರೋಪಿಗಳು ಅರಣ್ಯ ಸಿಬ್ಬಂದಿಯನ್ನು ಕಂಡು ಪರಾರಿಯಾದ ಘಟನೆ ನಡೆದಿದೆ.
ಕೃಷ್ಣಭಕ್ತಿ ಮತ್ತು ಜಾನಪದ ಕಲೆಯ ಅಪೂರ್ವ ಸಂಗಮಕ್ಕೆ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವ ಮತ್ತೊಮ್ಮೆ ಸಾಕ್ಷಿಯಾಗಲಿದೆ.
ರಾಜ್ಯದ ಜನರಿಗೆ ಗುಣಮಟ್ಟದ, ಶುದ್ಧ ಹಾಗೂ ಆರೋಗ್ಯಪೂರ್ಣ ಆಹಾರ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಆಹಾರ ಸುರಕ್ಷತಾ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸುವ ಹೋಟೆಲ್, ಕ್ಯಾಟರಿಂಗ್ ಹಾಗೂ ಪಿ.ಜಿ.ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಲಕ್ಷಾಂತರ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಉಪವಿಭಾಗದ ಅಪರಾಧ ಪತ್ತೆ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾರುಪಡಿಸಿದೆ.
ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸೆಪ್ಟೆಂಬರ್ 4 ಮತ್ತು 5ರಂದು ಉಡುಪಿಯಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಕೃಷ್ಣನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆಗಳು ನಡೆಯುತ್ತಿವೆ.
ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ (SCEM) ನ ಕೇಂದ್ರ ಗ್ರಂಥಾಲಯವು, ಕಾಲೇಜಿನ ನೆಲಮಹಡಿಯಲ್ಲಿರುವ ಸೆಮಿನಾರ್ ಸಭಾಂಗಣದಲ್ಲಿ ‘ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ’ ಹಾಗೂ ‘ಅತ್ಯುತ್ತಮ ಗ್ರಂಥಾಲಯ ಬಳಕೆದಾರರ ಸನ್ಮಾನ ಮತ್ತು ಬಹುಮಾನ ವಿತರಣಾ ಸಮಾರಂಭ’ವನ್ನು ಆಯೋಜಿಸಲಾಯಿತು.
ಸುಮಾರು ಐದು ದಶಕಗಳಿಗೂ ಅಧಿಕ ಇತಿಹಾಸ ಹೊಂದಿರುವ ಸುಲ್ಕೇರಿ ಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ., ಶಿರ್ಲಾಲು ಸಂಸ್ಥೆಯಲ್ಲಿ ಹಣಕಾಸು ವ್ಯವಹಾರಗಳು, ಸಾಲ ವಿತರಣೆ, ಠೇವಣಿ ಖಾತೆಗಳು, ಚಿನ್ನಾಭರಣ ಸಾಲಗಳು, ಮೃತ ಸದಸ್ಯರ ಖಾತೆಗಳು ಹಾಗೂ ಸಂಘದ ದಾಖಲೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ದೊಡ್ಡ ಮಟ್ಟದ ಅವ್ಯವಹಾರ ನಡೆದಿರಬಹುದೆಂಬ ಗಂಭೀರ ಆರೋಪಗಳು ಮತ್ತು ಅನುಮಾನಗಳು ಸದಸ್ಯರು ಹಾಗೂ ಠೇವಣಿದಾರರಿಂದ ವ್ಯಕ್ತವಾಗಿವೆ.
ಹಳೆಯ ಲ್ಯಾಪ್ ಟಾಪ್ ಅಥವಾ ಡೆಸ್ಕ್ ಟಾಪ್ ನಿಧಾನವಾಗಿದ್ದರೆ, ತಕ್ಷಣ ಹೊಸದನ್ನು ಖರೀದಿಸುವ ಅಗತ್ಯವಿಲ್ಲ. ರಿಲಯನ್ಸ್ ಜಿಯೋಪಿಸಿ (JioPC) ನಿಮ್ಮ ಹಳೆಯ ಕಂಪ್ಯೂಟರ್ ಅನ್ನು ಕ್ಲೌಡ್ನ ಶಕ್ತಿಯೊಂದಿಗೆ ಹೆಚ್ಚು ಶಕ್ತಿಯುತವಾಗಿಸುತ್ತದೆ