Showing 20 of 21693 articles • Page 335 of 1085
ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಪಲ್ಟಿಯಾಗಿ 11 ವಿದ್ಯಾರ್ಥಿಗಳಿಗೆ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಾವಡಿ ಬಳಿ ಘಟನೆ ನಡೆದಿದೆ.
ಕಬ್ಬಿಗೆ 3,500 ದರ ನಿಗದಿ ಮಾಡುವಂತೆ ಆಗ್ರಹಿಸಿ ರೈತರ ರಾಜ್ಯಾದ್ಯಂತ ತೀವ್ರ ಹೋರಾಟ ಮಾಡಿದ ಬಳಿಕ, ನಿನ್ನೆಯಷ್ಟೇ ರಾಜ್ಯ ಸರ್ಕಾರವು ರೈತರ ಹೋರಾಟಕ್ಕೆ ಮಣಿದು 3300 ಪ್ರತಿ ಟನ್ ಗೆ ದರ ನಿಗದಿ ಮಾಡಿರುವ ಬಗ್ಗೆ ಘೋಷಣೆ ಮಾಡಿತ್ತು.
ಕಾಫಿ ಎಸ್ಟೇಟ್ ಒಂದರಲ್ಲಿ ಮಾಂಸಕ್ಕಾಗಿ ಕಾಡುಕೋಣವನ್ನು ಶಿಕಾರಿ ಮಾಡಿದ್ದ ಆರೋಪದ ಮೇಲೆ ಎಸ್ಟೇಟ್ ಮ್ಯಾನೇಜರ್ ಸೇರಿ ಆರು ಮಂದಿಯನ್ನು ಬಂಧಿಸಲಾಗಿದೆ.
ರೋಹಿಣಿಯಲ್ಲಿನ ರಿಥಾಲ ಮೆಟ್ರೊ ನಿಲ್ದಾಣದ ಬಳಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಈ ಘಟನೆಯಲ್ಲಿ ಸುಮಾರು 500 ಗುಡಿಸಲುಗಳು ಬೆಂಕಿಗಾಹುತಿಯಾಗಿವೆ ಎಂದು ಅಗ್ನಿಶಾಮಕ ದಳ ತಿಳಿಸಿದೆ.
ಕೊಕ್ಕಡದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲಾ ಶ್ರೀ ಕನಕದಾಸ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಶ್ರೀ ಕನಕದಾಸರ 538ನೇ ಜಯಂತಿ ಮಹೋತ್ಸವ ಹಾಗೂ 351 ಕುಂಭ ಕಲಶ ಮೆರವಣಿಗೆ ಶನಿವಾರ ವೈಭವದಿಂದ ನಡೆಯಿತು.
ಕಡಬ ಪೊಲೀಸ್ ಠಾಣೆ ವ್ಯಾಪ್ತಿಯ ರೆಂಜಿಲಾಡಿಯಲ್ಲಿ ನವೆಂಬರ್ 6 ರಂದು 9 ನೇ ತರಗತಿಯ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸೋಣಂಗೇರಿ ಬಸ್ ತಂಗುದಾನದ ಬಳಿ ಇರುವ ಬಾವಿಗೆ ಬಿದ್ದ ಕರುವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ನಡೆದಿದೆ.
ಜಿಲ್ಲೆ ಮತ್ತು ನಗರದ ಆಟೋ ರಿಕ್ಷಾ ಮತ್ತು ಆಟೋ ನಿಲ್ದಾಣಗಳಿಗೆ ಸಂಬಂಧಿಸಿದಂತೆ ಅ.1ರಂದು ಜಿಲ್ಲಾಧಿಕಾರಿಗಳು ಹೊರಡಿಸಿರುವ ಹೊಸ ನಡವಳಿಯಲ್ಲಿ ಕೆಲವು ಬದಲಾವಣೆ ಮಾಡಬೇಕು ಎಂದು ಆಶ್ರಯ ಆಟೋ ಯೂನಿಯನ್ ಆಗ್ರಹಿಸಿದೆ.
ಕರಾವಳಿ ಕೊಂಕಣಿಗರ ನಡುವೆ ಯಶಸ್ವೀ ಉದ್ಯಮಿಗಳು ತಮ್ಮ ಗಳಿಕೆಯ ಒಂದಂಶವನ್ನು ‘ಕೆರೆಯ ನೀರನು ಕೆರೆಗೆ ಚೆಲ್ಲಿ’ ಯೆಂಬಂತೆ ಸಮಾಜ ಸೇವೆಗೆ ಮರಳಿಸಲು ಮರೆಯಲಾರರು,
ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಸಮೀಪದಿಂದ ಕಿನ್ನಿಮೂಲ್ಕಿಗೆ ಹೋಗುವ ರಸ್ತೆಯಲ್ಲಿ ನಡುರಾತ್ರಿ ಅಪಘಾತ ಸಂಭವಿಸಿದೆ. ಇಲ್ಲಿ ಫೈ ಓವರ್ ಕಾಮಗಾರಿ ನಡೆಯುತ್ತಿದ್ದು, ಸರ್ವಿಸ್ ರೋಡ್ ಮೂಲಕವೇ ಬೃಹತ್ ಗಾತ್ರದ ಲಾರಿಗಳು ಓಡಾಟ ನಡೆಸುತ್ತವೆ.
ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ ಶಾಸಕರ ಭವನದ ಆವರಣ
ಶಾರೀರಿಕ, ಮಾನಸಿಕ ಹಾಗೂ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಆಟೋಟ, ವ್ಯಾಯಾಮ ಹಾಗೂ ಶಾರೀರಿಕ ಚಟುವಟಿಕೆಗಳು ಅತ್ಯಂತ ಅಗತ್ಯ. ಸ್ವಸ್ಥ ಶರೀರ
ಉಡುಪಿ ಪರ್ಯಾಯ ಅಂದರೆ ಮಠದ ಪರ್ಯಾಯ ಅಲ್ಲ, ಅದು ನಮ್ಮೆಲ್ಲರ ಪರ್ಯಾಯ. ಭಾವೀ ಶೀರೂರು ಪರ್ಯಾಯ ಮಠಾಧೀಶರು ಅತ್ಯಂತ ಕಿರಿಯರು ಆಗಿರುವುದರಿಂದ ಅವರಿಗೆ ಎಲ್ಲರೂ ಸಹಕಾರ ಕೊಡುವುದು ಕರ್ತವ್ಯ
ಮಚ್ಚಿನಿಂದ ಕೊಚ್ಚಿ ವ್ಯಕ್ತಿ ಬರ್ಬರ ಹತ್ಯೆ ಮಾಡಿರುವ ಘಟನೆ ಹುಣಸೂರು ಪಟ್ಟಣದ ಶಬ್ಬೀರ್ ನಗರದಲ್ಲಿ ನಡೆದಿದೆ. ಕಿದರ್ ಪಾಷ (55) ಹತ್ಯೆಯಾದ ವ್ಯಕ್ತಿ. ಕೆ.ಆರ್.ನಗರ ತಾಲೂಕಿನ ಹೊನ್ನೆನಹಳ್ಳಿ ನಿವಾಸಿಯಾಗಿದ್ದು,
ಉಡುಪಿಯ ತೆಂಕಪೇಟೆಯಲ್ಲಿರುವ ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನದಲ್ಲಿ ವೈಭವದ ವಾರ್ಷಿಕ ದೀಪೋತ್ಸವ ನಡೆಯಿತು. ದೇವಸ್ಥಾನದ ಆವರಣ ಮಾತ್ರವಲ್ಲದೆ ತೆಂಕಪೇಟೆಯ ಉದ್ದಕ್ಕೂ ಸಾಲು ಸಾಲು ದೀಪಗಳನ್ನು ಬೆಳಗಲಾಯಿತು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರೆಸಿಡೆನ್ಸಿ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ವಾರದ ಕಾಲ ನಾಡಹಬ್ಬವನ್ನು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಡಗರದಿಂದ ಆಚರಿಸಲಾಯಿತು.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಕೇರನ್ ಸೆಕ್ಟರ್ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.
ಮತ್ತೊಬ್ಬ ವ್ಯಕ್ತಿಗೆ ಜಾಮೀನು ನೀಡಲು ನಕಲಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸರಗೂರು ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಗ್ಗೂಡಿಲು ಗ್ರಾಮಕ್ಕೆ ಶಾಸಕ ಅನಿಲ್ ಚಿಕ್ಕಮಾದು ಭೇಟಿ ಕೊಟ್ಟರು.