Showing 20 of 21592 articles • Page 34 of 1080
ಕೃಷ್ಣನ ಹುಟ್ಟುಹಬ್ಬದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕೃಷ್ಣನ ನಾಡು ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ವೈಭವಕ್ಕೆ ಸಜ್ಜಾಗುತ್ತಿದೆ.
ಪಡಿತರ ಅಕ್ಕಿ ಚೀಲಗಳನ್ನು ಮನೆಯ ಅಂಗಳದಲ್ಲಿ ದಾಸ್ತಾನು ಮಾಡಿರುವುದಾಗಿ ಆರೋಪಿಸಿ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಗೂ ಸುಲಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು ಮೈಸೂರು ನಗರದಲ್ಲಿ ಬಂಧಿಸಿದ್ದಾರೆ.
ಥೈಲ್ಯಾಂಡ್ನಲ್ಲಿ ನಡೆದ ‘ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್–2026’ ಅಂತಾರಾಷ್ಟ್ರೀಯ ಮಟ್ಟದ ಫ್ಯಾಷನ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಪ್ರಥಮ ಪ್ರಶಸ್ತಿ ಹಾಗೂ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ಅರಬ್ಬಿ ಸಮುದ್ರದ ಅಬ್ಬರದಿಂದ ಉಡುಪಿ ಕರಾವಳಿಯ ಹಲವು ಪ್ರದೇಶಗಳಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ತೀರ ಪ್ರದೇಶದ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.
ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವೇಳೆ ಚುನಾವಣಾ ಪ್ರಕ್ರಿಯೆಯಲ್ಲಿನ ಗಂಭೀರ ಲೋಪವೊಂದು ಬೆಳಕಿಗೆ ಬಂದಿದೆ.
SIR ಪ್ರಕ್ರಿಯೆಯಲ್ಲಿ ನೋಟಿಸ್ ಪಡೆದಿರುವ ವಿದೇಶದಲ್ಲಿರುವ ಅನಿವಾಸಿ ಮತದಾರರು ಖುದ್ದಾಗಿ ERO ಮುಂದೆ ಹಾಜರಾಗಬೇಕು ಎಂಬ ಚುನಾವಣಾ ಆಯೋಗದ ನಿರ್ದೇಶನವು SIR ಹೆಸರಿನಲ್ಲಿ ಚುನಾವಣಾ ಆಯೋಗ ಮತದಾನದ ಹಕ್ಕಿಗೆ ಅಡ್ಡಿಪಡಿಸುವ ಯತ್ನವಾಗಿದೆ ಎಂದು SDPI ಮಂಗಳೂರು ನಗರ ಜಿಲ್ಲಾಧ್ಯಕ್ಷರಾದ ಅಶ್ರಫ್ ಅಡ್ಡೂರುರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪುತ್ತೂರು ಶಾಸಕ ಅಶೋಕ್ ರೈ ಅವರು ಬಜರಂಗದಳದ ಕಾರ್ಯಕರ್ತರೊಂದಿಗೆ ಓಡಾಡುತ್ತಾರೆ,
ತಾಲೂಕಿನ ಆಲೆಟ್ಟಿ ಗ್ರಾಮದ ಗಡಿ ಪ್ರದೇಶವಾದ ಕಲ್ಲಪಳ್ಳಿಯಲ್ಲಿ ಚಿರತೆಯೊಂದು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಕಡೆಪಾಲ ಬಳಿ ನಿಗೂಢವಾಗಿ ಹತ್ಯೆಯಾಗಿದ್ದ ಫಾತಿಮಾ ನಿಶಾನ ಹತ್ಯೆ ಆರೋಪಿಗಳಿಗೆ ಪುತ್ತೂರು ಐದನೇ ಹೆಚ್ಚುವರಿ ಸತ್ರ ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪೆರ್ನೆ ಸಮೀಪ ಮಹಿಳೆಯೊಬ್ಬರು ಮನೆಯೊಳಗೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.
ಮೀನುಗಾರಿಕೆಗೆ ತೆರಳಿದ್ದ ಬೋಟ್ವೊಂದು ಸಮುದ್ರದ ಅಲೆಗೆ ಸಿಲುಕಿ ಮುಳುಗಿದ ಘಟನೆ ಉಳ್ಳಾಲ ಅಳಿವೆಬಾಗಿಲು ಬಳಿ ಸಂಭವಿಸಿದೆ.ಶರೀಫ್ ಎಂಬವರಿಗೆ ಸೇರಿದ ಬೋಟ್ನಲ್ಲಿ ಮಂಗಳವಾರ ಸಂಜೆ ಐದು ಮಂದಿ ಮೀನುಗಾರಿಕೆಗೆ ತೆರಳಿದ್ದರು.
ಮಹಿಳೆಯರಲ್ಲಿ ಜಾಗೃತಿ ಮೂಡಿಸಿ, ನಾಯಕತ್ವ ಸಾಮರ್ಥ್ಯ ಬೆಳೆಸುವ ಉದ್ದೇಶದಿಂದ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಸೆ.5ರಂದು ಮಂಗಳೂರಿನ ಪುರಭವನದಲ್ಲಿ ‘ರೈಸ್ ಆ್ಯಂಡ್ ರೆಕ್ಲೈಮ್’ ಧ್ಯೇಯವಾಕ್ಯದಡಿ ಮಹಿಳಾ ಸಮ್ಮೇಳನ ಆಯೋಜಿಸಲಾಗಿದೆ ಎಂದು ಎಸ್ಡಿಪಿಐ ರಾಜ್ಯ ಸದಸ್ಯೆ ಮಿಸ್ರಿಯಾ ಕಣ್ಣೂರು ತಿಳಿಸಿದರು.
ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಬೀದಿಬದಿ ವ್ಯಾಪಾರ ತೆರವುಗೊಳಿಸಲು ಮನಪಾ ಆಯುಕ್ತರು ಸೂಚನೆ ನೀಡಿದ್ದಾರೆ.
ಮಂಗಳೂರಿನ 61 ವರ್ಷದ ನಿವಾಸಿ ಡೊನಾಲ್ಡ್ ಜೋಸೆಫ್ ರೇಗೊ ಅವರನ್ನು ಚುನಾವಣಾ ಆಯೋಗದ ದಾಖಲೆಗಳಲ್ಲಿ ತಪ್ಪಾಗಿ ‘ಮೃತ’ ಎಂದು ಗುರುತಿಸಲಾಗಿದೆ.
ನಂಜನಗೂಡು: ಮನೆ ಮುಂದೆ ನಿಲ್ಲಿಸಿದ್ದ ಸುಮಾರು ಎರಡು ಲಕ್ಷ ರೂ. ಮೌಲ್ಯದ ಬುಲೆಟ್ ಬೈಕ್ ಅನ್ನು ಕಳ್ಳತನ ಮಾಡಿ, ಬಳಿಕ ಅದನ್ನು ನಾಲೆಗೆ ಎಸೆದಿರುವ ವಿಚಿತ್ರ ಘಟನೆ ನಂಜನಗೂಡು ತಾಲ್ಲೂಕಿನ ಹರತಲೆ ಗ್ರಾಮದಲ್ಲಿ ನಡೆದಿದೆ. ಹರತಲೆ ಗ್ರಾಮದ ಕುಮಾರ್ ಎಂಬುವರಿಗೆ ಸೇರಿದ ಬುಲೆಟ್ ಬೈಕ್ ಅನ್ನು ಎಂದಿನಂತೆ ಮನೆಯ ಮುಂಭಾಗದಲ್ಲಿ ನಿಲ್ಲಿಸಲಾಗಿತ್ತು. ಆದರೆ ಮಧ್ಯರಾತ್ರಿ ವೇಳೆ ಖದೀಮರು ಬೈಕ್ ಅನ್ನು ಕದ್ದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಬೆಳಿಗ್ಗೆ ಎದ್ದು ನೋಡಿದಾಗ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಾಣೆಯಾಗಿರುವುದು ಕುಮಾರ್ […]
ಉಡುಪಿ: ಗಂಗೊಳ್ಳಿಯ ಅಳಿವೆ ಬಾಗಿಲಿನಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್ವೊಂದು ನೀರಿನ ಸುಳಿಗೆ ಸಿಲುಕಿ ಮುಳುಗಡೆಯಾದ ಘಟನೆ ಬುಧವಾರ ಸಂಭವಿಸಿದೆ. ಬೋಟಿನಲ್ಲಿದ್ದ ಸುಮಾರು ಆರು ಮಂದಿ ಮೀನುಗಾರರನ್ನು ತಕ್ಷಣವೇ ರಕ್ಷಿಸಲಾಗಿದ್ದು, ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಕಳೆದ ವಾರವಷ್ಟೇ ಇದೇ ಗಂಗೊಳ್ಳಿ ಅಳಿವೆ ಬಾಗಿಲಿನಲ್ಲಿ ಭಾರಿ ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ಬೋಟ್ವೊಂದು ಸಂಪೂರ್ಣ ಮುಳುಗಡೆಯಾಗಿತ್ತು. ಆ ವೇಳೆ ಕ್ಷಿಪ್ರ ರಕ್ಷಣಾ ಕಾರ್ಯಾಚರಣೆ ನಡೆಸಿ ಬೋಟಿನಲ್ಲಿದ್ದ ಎಲ್ಲ 27 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿತ್ತು. ಆ ಘಟನೆ ಮಾಸುವ […]
ಉಡುಪಿ: ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಆಲ್ಟೋ ಕಾರಿಗೆ ಡಿಕ್ಕಿ ಹೊಡೆದು ಮಗುಚಿಬಿದ್ದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಸಮೀಪ ನಡೆದಿದೆ. ಅಪಘಾತದ ರಭಸಕ್ಕೆ ಲಾರಿ ಬಸ್ಟ್ಯಾಂಡ್ ಮುಂಭಾಗದಲ್ಲಿ ಮಗುಚಿಬಿದ್ದಿದ್ದು, ಅದರಲ್ಲಿದ್ದ ಅಪಾರ ಪ್ರಮಾಣದ ಕಲ್ಲಂಗಡಿ ಹಣ್ಣುಗಳು ರಸ್ತೆಯ ಬದಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದವು. ಇದರ ಪರಿಣಾಮ ಕೆಲಕಾಲ ಸ್ಥಳದಲ್ಲಿ ಸಂಚಾರಕ್ಕೂ ಅಡಚಣೆ ಉಂಟಾಯಿತು. ಡಿಕ್ಕಿಯ ತೀವ್ರತೆಗೆ ಆಲ್ಟೋ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದವರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಮಾಹಿತಿ ತಿಳಿದು […]
ಪ್ರಕರಣಗಳ ತನಿಖೆಯಲ್ಲಿ ವೈಜ್ಞಾನಿಕ ಸಾಕ್ಷ್ಯಗಳನ್ನು ಸಮರ್ಪಕವಾಗಿ ಸಂಗ್ರಹಿಸಿ, ಅವುಗಳನ್ನು ಪ್ರಕರಣದೊಂದಿಗೆ ಜೋಡಿಸಿ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವುದು ಅತ್ಯಂತ ಮುಖ್ಯ. ಇದರಿಂದ ಆರೋಪಿಗೆ ಶಿಕ್ಷೆ ಕೊಡಿಸುವುದರ ಜತೆಗೆ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತದೆ.
ಬೀದಿಬದಿ ವ್ಯಾಪಾರಿಗಳ ಮೇಲಿನ ಧಾಳಿ, ದಬ್ಬಾಳಿಕೆ ಕಾನೂನು ಬಾಹಿರವಾದದ್ದು ಶ್ರೀಮಂತರ ಅತಿಕ್ರಮಣವನ್ನು ನಿಯಂತ್ರಿಸಲಾಗದ ಸರಕಾರ ಬಡವರ ಹೊಟ್ಟೆಯ ಮೇಲೆ ಸವಾರಿ ಮಾಡುತ್ತಿದೆ. ಬೀದಿ ವ್ಯಾಪಾರಿಗಳ ಬದುಕುವ ಹಕ್ಕು ಮತ್ತು ಪಾದಚಾರಿಗಳ ನಡೆದಾಡುವ ಹಕ್ಕುಗಳು ಎರಡೂ ಸಂವಿಧಾನದಿಂದ ರಕ್ಷಿಸಲ್ಪಟ್ಟಿದೆ ಎಂದು ವಕೀಲರು, ಸಿಐಟಿಯು ರಾಜ್ಯ ಉಪಾಧ್ಯಕ್ಷರಾದ ಪ್ರತಾಪಸಿಂಹ ಬೆಂಗಳೂರು ಹೇಳಿದರು.
ಕೇರಳ-ಕರ್ನಾಟಕ ಗಡಿಯ ಬಳಿ ವಯನಾಡಿನಲ್ಲಿ ವಾಹನ ತಪಾಸಣೆ ವೇಳೆ ಭಾರಿ ಪ್ರಮಾಣದ ನಗದು ವಶಪಡಿಸಿಕೊಳ್ಳಲಾಗಿದೆ. ಚಾಲಕನ ಸೀಟಿನ ಕೆಳಗೆ ಅಡಗಿಸಿಟ್ಟಿದ್ದ 1.44 ಕೋಟಿ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.