Showing 20 of 21592 articles • Page 4 of 1080
ವಿಮಾನ ಇಂಧನ ಬೆಲೆಯಲ್ಲಿ ಸತತವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ವಿಮಾನಯಾನ ಸಂಸ್ಥೆಯಾದ ಇಂಡಿಗೊ ತನ್ನ ‘ಇಂಧನ ಸರ್ಚಾರ್ಜ್’ ದರವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ. ಈ ದರ ಏರಿಕೆಯಿಂದಾಗಿ ದೇಶೀಯ ಹಾಗೂ ವಿದೇಶಿ ವಿಮಾನ ಪ್ರಯಾಣದ ಟಿಕೆಟ್ ದರಗಳು ದುಬಾರಿಯಾಗಲಿವೆ.
ತಾಲ್ಲೂಕಿನ ದಾಸನೂರು ಗ್ರಾಮದಲ್ಲಿ 22.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಅವರು ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.
ವರುಣಾ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ದಾಸನೂರು ಗ್ರಾಮದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭ ನಡೆಯಿತು.
ಮಂಗಳೂರಿನಲ್ಲಿ 5ನೇ ವರ್ಷದ “ಪಿಲಿ ಅಜನೆ” ಹುಲಿ ಕುಣಿತ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕುದ್ರೋಳಿ ಶ್ರೀ ಭಗವತಿ ದೇವಾಲಯದಲ್ಲಿ ಬಿಡುಗಡೆಗೊಳಿಸಲಾಯಿತು.
ನಗರದ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ಹೊಸಹಳ್ಳಿ ಗೇಟ್ ಬಳಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿ
ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದೆ.ಮಹಿಳೆ ವಿಚಾರದಲ್ಲಿ ಕೃತ್ಯ ನಡೆದ ಶಂಕೆ ವ್ಯಕ್ತವಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಕಾರ್ಕಳ ವತಿಯಿಂದ ಕಾರ್ಕಳ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಿತು.
ಸಾಮರಸ್ಯದ ಬದುಕು ಮತ್ತು ಒಗ್ಗಟ್ಟಿನ ಸಮಾಜವೇ ನಮ್ಮ ದೊಡ್ಡ ಶಕ್ತಿ ಹಾಗೂ ಗೌರವದ ಸಂಕೇತ. ಇಂದಿನ ಸಂದರ್ಭದಲ್ಲಿ ಸಾಮರಸ್ಯದ ಸಮಾಜ ನಿರ್ಮಾಣ ಅತ್ಯಂತ ಅಗತ್ಯವಾಗಿದ್ದು,
ಜೈಲು ವಾರ್ಡನ್ಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ ಹಾಗೂ ₹40 ಸಾವಿರ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಡೆದಿದೆ.
ಏಷ್ಯನ್ ಗೇಮ್ಸ್ನಲ್ಲಿ ಮೈಸೂರಿನ ಪ್ರಣವಿ ಶರತ್ ಉರ್ಸ್ಗೆ ಚಿನ್ನದ ಕಿರೀಟ ಸಿಕ್ಕಿದ್ದು, ಸಂಸದ ಯದುವೀರ್ ಒಡೆಯರ್ ಶುಭ ಹಾರೈಸಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಕ್ಯಾಪ್ಟನ್ ಅಭಿಮನ್ಯು ಅರಮನೆ ಆವರಣಕ್ಕೆ ಆಗಮಿಸಿದ್ದು, ದಸರಾ ಸಂಭ್ರಮ ಮತ್ತಷ್ಟು ಕಳೆಗಟ್ಟಿದೆ.
ಜಗತ್ಪ್ರಸಿದ್ಧ ಮೈಸೂರು ದಸರಾ ಮಹೋತ್ಸವ ನಡೆಯಲಿದ್ದು, ದಸರಾ ನವರಾತ್ರಿಗೆ ರಾಜ ವೈಭವದ ಮುನ್ನುಡಿ ಸಿಗಲಿದೆ.
ದ.ಕ ಜಿಲ್ಲೆಯಲ್ಲಿ ಭಾರೀ ಗುಡುಗು ಮಿಂಚು ಸಹಿತ ಮಳೆಯಾಗಿದೆ.
ಎಂಆರ್ಪಿಎಲ್ ಘಟಕದಲ್ಲಿ ಸೆಪ್ಟೆಂಬರ್ 30 ರಂದು ಸಂಭವಿಸಿದ ದುರಂತದಲ್ಲಿ ಮೃತ ಪಟ್ಟ ಹಳೆಯಂಗಡಿಯ ನಿವಾಸಿ ಮನೀಶ್ ಕರ್ಕಡ ಅವರ ಕುಟುಂಬಕ್ಕೆ ಗರಿಷ್ಟ 1.20 ಕೋಟಿ ರೂಪಾಯಿ ಪರಿಹಾರವನ್ನು ಮಂಜೂರು ಮಾಡಲಾಗಿದೆ
ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಬಣಕಲ್ ಸಮೀಪ ವಿರುದ್ಧ ದಿಕ್ಕಿನಿಂದ ಬಂದ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಶಿಶಿಲ ಗ್ರಾಮದ ಮಂತಾಜೆ ನಿವಾಸಿ ದೀಪೇಶ್ (27) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಟೀಮ್ ಸತ್ಯಜಿತ್ ಸುರತ್ಕಲ್ ವತಿಯಿಂದ 2ನೇ ವರ್ಷದ ರಕ್ತದಾನ ಶಿಬಿರ, ಉಚಿತ ಕಣ್ಣಿನ ತಪಾಸಣೆ, ದಂತ ಚಿಕಿತ್ಸಾ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಮಂಗಳೂರಿನ ಕಂಕನಾಡಿ ಸಮೀಪದ ಖಾಸಗಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯ ಅಡಕೆ ಹಾಗೂ ಇತರ ಬೆಳೆಗಾರರಿಗೆ ಸಿಗಬೇಕಾದ ಬೆಳೆ ವಿಮೆ ಪರಿಹಾರದಲ್ಲಿ ಭಾರೀ ಕಡಿತ ಮಾಡಿ ರಾಜ್ಯ. ಕಾಂಗ್ರೆಸ್ ಸರ್ಕಾರ ರೈತರಿಗೆ ಅನ್ಯಾಯ ಎಸಗಿದೆ.
ಇಮ್ಯಾಕುಲೇಟ್ ಹಾರ್ಟ್ ಆಫ್ ಮೇರಿ ಚರ್ಚ್ ಕಥೊಲಿಕ್ ಸಭಾ ಮಂಗಳೂರು ಪ್ರದೇಶ(ರಿ)ಕುಪ್ಪೆಪದವು ಘಟಕ.