Showing 20 of 21592 articles • Page 40 of 1080
ಮಳೆಗಾಲದ ಎರಡು ತಿಂಗಳ ಮೀನುಗಾರಿಕೆ ರಜೆ ಪೂರ್ಣಗೊಂಡಿದ್ದು, ಪಶ್ಚಿಮ ಕರಾವಳಿಯಲ್ಲಿ ಆಳ ಸಮುದ್ರ ಮೀನುಗಾರಿಕೆ ಚುರುಕುಗೊಂಡಿದೆ.
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಇನ್ನಂಜೆ ಎಸ್.ವಿ.ಎಚ್ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಕಾಪು ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಬಾಲಕ–ಬಾಲಕಿಯರ ತ್ರೋಬಾಲ್ ಪಂದ್ಯಾಟಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
ಮನೆಮನೆಗೆ ಪೈಪ್ಲೈನ್ ಮೂಲಕ ಅಡುಗೆ ಅನಿಲ ಪೂರೈಸುವ ಯೋಜನೆಯಡಿ ನವೆಂಬರ್ ಮೊದಲ ವಾರದಲ್ಲಿ ಉಡುಪಿ ನಗರದಲ್ಲಿ ಗ್ಯಾಸ್ ವಿತರಣೆ ಆರಂಭಿಸುವುದಾಗಿ ಅದಾನಿ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
ಆಹಾರ ವಸ್ತುಗಳಲ್ಲಿ ಕಲಬೆರಕೆ ಹಾಗೂ ರಾಸಾಯನಿಕ ಬಳಕೆಯ ಆರೋಪಗಳ ಹಿನ್ನೆಲೆಯಲ್ಲಿ ಬೆದ್ರ ವಾರದ ಸಂತೆಯಲ್ಲಿ ಆರೋಗ್ಯ ಇಲಾಖೆ, ಪುರಸಭೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಿವಿಧ ಆಹಾರ ವಸ್ತುಗಳ ಸ್ಯಾಂಪಲ್ ಸಂಗ್ರಹಿಸಿದರು.
ಪುತ್ತೂರು ದರ್ಬೆಯ ಜೆರಾಕ್ಸ್ ಅಂಗಡಿಯಲ್ಲಿ ಹಲ್ಲೆ ಪ್ರಕರಣ ನಡೆದಿದ್ದು, ಜೆರಾಕ್ಸ್ ಅಂಗಡಿಯಲ್ಲಿ ದಾಖಲೆ ಸುಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೇವಲ 300 ರೂಪಾಯಿಗಾಗಿ ನಡೆದ ವಾಗ್ವಾದ , ಹಲ್ಲೆ ಕೋಮು ವೈಷಮ್ಯ ಕ್ಕೆ ತಿರುಗಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಹಿಂದು ಜಾಗರಣಾ ವೇದಿಕೆ ತಲಪಾಡಿ ವಲಯ ಬಜಿಲಕೇರಿ ಟೈಗರ್ಸ್ ಊದು ಪೂಜೆ ನಡೆಯಿತು.
ಪುತ್ತೂರಿನಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಸ್ವಾಭಿಮಾನಿ ಹಿಂದೂ ಸಮಾಜದ ಜಾಗೃತಿಗಾಗಿ ವಿಶ್ವ ಹಿಂದೂ ಪರಿಷತ್ – ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಆ.31ರಂದು ಪುತ್ತೂರು ಚಲೋ- ಜನಜಾಗೃತಿ ಆಂದೋಲನವನ್ನು ಆಯೋಜಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಪ್ರಚಾರ ಪ್ರಸಾರ ಸಹ ಪ್ರಮುಖ್ ಪ್ರದೀಪ್ ಸರಿಪಲ್ಲ ತಿಳಿಸಿದ್ದಾರೆ.
ಏಳುಪಟ್ಟ ಮೊಗವೀರ ಸಂಯುಕ್ತ ಸಭಾ (ಕದ್ರಿ) ಇದರ ವತಿಯಿಂದ ಸಾಮೂಹಿಕ ಸಮುದ್ರ ಪೂಜೆಯು ಆಗಸ್ಟ್ ತಾರೀಕು 23 ರಂದು ಶುಕ್ರವಾರ ತಣ್ಣೀರುಬಾವಿ ಕಡಲ ಕಿನಾರೆಯಲ್ಲಿ ನೆರವೇರಿತು.
ತನ್ನ ಮೇಲೆ ದೌರ್ಜನ್ಯವೆಸಗಿದವನ ವಿರುದ್ಧ ಯುವತಿಯೊಬ್ಬಳು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಇದೇ ಕಾರಣಕ್ಕೆ ಆರೋಪಿ ಆಕೆಗೆ ಕೊಲೆ ಬೆದರಿಕೆ ಹಾಕಿದ್ದಾನೆ.
ಸೆಂಟರ್ ಫಾರ್ ಎಥಿಕ್ಸ್ ಮತ್ತು ಫೋರೆನ್ಸಿಕ್ ಅಂಥರೊಪೊಲೊಜಿ ಯೂನಿಟ್, ಡಿಪಾರ್ಟ್ಮೆಂಟ್ ಆಫ್ ಫೋರೆನ್ಸಿಕ್ ಮೆಡಿಸಿನ್ ಅಂಡ್ ಟಾಕ್ಸಿಕಾಳೋಜಿ, ಯೆನೆಪೊಯ ವಿಶ್ವವಿದ್ಯಾಲಯದ ಆಗಸ್ಟ್ 29, 2026 ರಂದು ವಿಶ್ವ ಮಾನವೀಯ ದಿನಾಚರಣೆ 2026 ರ ಭಾಗವಾಗಿ “ವಿಪತ್ತುಗಳ ಸಮಯದಲ್ಲಿ ಮಾನವೀಯ ಕ್ರಮ ಮತ್ತು ಮೃತ ದೇಹಗಳನ್ನು ಒಳಗೊಂಡ ಸಂಶೋಧನಾ ಚೌಕಟ್ಟು” ಎಂಬ ಹೈಬ್ರಿಡ್ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಆಯೋಜಿಸುತ್ತಿದೆ.
ನಗರದಲ್ಲಿ ಬುಧವಾರ ಮುಂಜಾನೆ ಸುರಿದ ಭಾರೀ ಗಾಳಿ-ಮಳೆಗೆ ಕೊಟ್ಟಾರ ಚೌಕಿ ಸಮೀಪ ಬೃಹತ್ ಗಾತ್ರದ ಮರ ಹಾಗೂ ವಿದ್ಯುತ್ ಕಂಬವೊಂದು ಗ್ಯಾರೇಜ್ ಮೇಲೆ ಮುರಿದು ಬಿದ್ದ ಪರಿಣಾಮ ಮೂರು ಚತುಷ್ಚಕ್ರ ವಾಹನಗಳು ಜಖಂಗೊಂಡಿದ್ದು, ಕಟ್ಟಡಕ್ಕೂ ಅಪಾರ ಹಾನಿಯಾಗಿದೆ.
ಶ್ರೀ ನಾರಾಯಣ ಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಆಶ್ರಯದಲ್ಲಿ ‘ಗುರು ಸಂದೇಶ ಸಾಮರಸ್ಯ ಜಾಥಾ’ ಹಾಗೂ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಆ.30ರಂದು ಬನ್ನಂಜೆ ಬಿಲ್ಲವರ ಸೇವಾ ಸಂಘದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ತಿಳಿಸಿದರು.
ಉಡುಪಿ: ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿರುವ ಉಡುಪಿ ನಗರ ಠಾಣೆ ಪೊಲೀಸರು, ₹23.56 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು, ವಿದೇಶಿ ಕರೆನ್ಸಿ ಸೇರಿದಂತೆ ವಿವಿಧ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪೆರಂಪಳ್ಳಿ ಸಂತೋಷನಗರದ ಅರುಣ್ ಎಸ್.ವಿ. (43) ಹಾಗೂ ತೆಂಕನಿಡಿಯೂರು ಗ್ರಾಮದ ಕೌಶೀಕ್ (19) ಬಂಧಿತರು. ಪುತ್ತೂರು ಗ್ರಾಮದ ಭಗವತಿ ಲೇಔಟ್ನ ಸನಂ ಅವರು ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದುಬೈಯಲ್ಲಿದ್ದ ಅವರು ಊರಿಗೆ ಬಂದ […]
ದುಬೈನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನೊಬ್ಬ ತನ್ನ ಬಾಯಲ್ಲಿ ಅಡಗಿಸಿಕೊಂಡು ತಂದಿದ್ದ ಸುಮಾರು 82 ಗ್ರಾಂ ತೂಕದ ಎರಡು ಚಿನ್ನದ ಕ್ಯಾಪ್ಸೂಲ್ಗಳನ್ನು ಬೆಂಗಳೂರು ಏರ್ಪೋರ್ಟ್ನಲ್ಲಿ CISF ಸಿಬ್ಬಂದಿ ಪತ್ತೆಹಚ್ಚಿದ್ದಾರೆ. ಪ್ರಯಾಣಿಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಗೌರವಪೂರ್ವಕವಾಗಿ ಭೇಟಿ ಮಾಡಿದ್ದಾರೆ.
ನೇಪಾಳದ ರುಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಪ್ರವಾಹದಲ್ಲಿ, ಕನಿಷ್ಠ 300 ಭಾರತೀಯ ಪ್ರಜೆಗಳು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್ ಖನಾಲ್ ಮಾಹಿತಿ ನೀಡಿದ್ದಾರೆ.
ಟಾಲಿವುಡ್ ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ನಟನೆಯಲ್ಲಿ ಮೂಡಿಬರುತ್ತಿರುವ ‘ರಣಬಾಲಿ’ ಸಿನಿಮಾವು 2026ರ ಅಕ್ಟೋಬರ್ 16ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ ಎಂದು ಚಿತ್ರತಂಡ ತಿಳಿಸಿದೆ.
ಟಿಬೆಟ್-ನೇಪಾಳ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಭಾರೀ ಅನಾಹುತ ಸಂಭವಿಸಿದೆ.
ಅಮೆರಿಕದ ಟ್ರಂಪ್ ಆಡಳಿತವು ಜಾಗತಿಕವಾಗಿ ಈಗಾಗಲೇ ಸಲ್ಲಿಕೆಯಾಗಿರುವ ವಲಸಿಗರ ವೀಸಾ ಅರ್ಜಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಮಂಗಳೂರಿನ ವಾಮಂಜೂರಿನಲ್ಲಿರುವ ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ವತಿಯಿಂದ 2026ನೇ ಸಾಲಿನ ಪದವೀಧರರ 21ನೇ ಪದವಿ ಪ್ರದಾನ ಸಮಾರಂಭವು ಆಗಸ್ಟ್ 29, 2026ರ ಶನಿವಾರದಂದು ಕಾಲೇಜಿನ ಕಲಾಂ ಆಡಿಟೋರಿಯಂನಲ್ಲಿ ನಡೆಯಲಿದೆ.