Showing 20 of 20590 articles • Page 409 of 1030
ತಾನು ಸಿಬಿಐ ಅಧಿಕಾರಿ ನಿಮ್ಮನ್ನು ಅರೆಸ್ಟ್ ಮಾಡ್ತೀವಿ ಎಂದು ಬೆದರಿಸಿ ಮೈಸೂರಿನ ವೃದ್ದರೊಬ್ಬರಿಗೆ 7 ಲಕ್ಷ ಪೀಕಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊನೆಗೂ ಹುಲ್ಲಹಳ್ಳಿ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಬೀದಿನಾಯಿಗಳ ಹಾವಳಿ ನಿಯಂತ್ರಣಕ್ಕೆ ಮುಂದಾಗಿದ್ದಾರೆ.
ಚಾಮುಂಡಿ ಬೆಟ್ಟಕ್ಕೆ ಹ್ಯಾಟ್ರಿಕ್ ಹೀರೋ ಶಿವಣ್ಣ ಭೇಟಿ ನೀಡಿದರು. ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದರು. ಆಷಾಢ ಹಿನ್ನಲೆ ವಿಶೇಷ ಪೂಜೆ ಸಲ್ಲಿಸಿದರು.
ಕಿಡಿಗೇಡಿಗಳು ಕೆಂಪೇಗೌಡ ಭಾವಚಿತ್ರ ಮುರಿದು ಹಾಕಿದ ಘಟನೆ ಮೈಸೂರಿನ ಹೊರ ವಲಯದ ಹಂಚ್ಯಾ ಗ್ರಾಮದಲ್ಲಿ ನಡೆಯಿತು. ಕೆಂಪೇಗೌಡರ ಭಾವಚಿತ್ರ ಕೆಂಪೇಗೌಡ ವೃತ್ತದಲ್ಲಿ ಹಾಕಲಾಗಿತ್ತು.
ಅಕ್ರಮವಾಗಿ ಸಾಗಿಸುತ್ತಿದ್ದ 72.25 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿಯನ್ನ ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ನಂಜನಗೂಡು ಪಟ್ಟಣ ಪೊಲೀಸರು ಎರಡು ವಾಹನಗಳ ಸಮೇತ ಪಡಿತರವನ್ನ ವಶಪಡಿಸಿಕೊಂಡಿದ್ದಾರೆ.
ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸುವ ಮೂಲಕ ಕಂದಾಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ಸುರತ್ಕಲ್ ಮದ್ಯ ವಾಲ್ಮೀಕಿ ಶಾಲೆ ಬಳಿ ಬಸ್ಗಳೆರಡರ ಮಧ್ಯೆ ಅಪಘಾತ ಸಂಭವಿಸಿದೆ. ಪ್ರಯಾಣಿಕರಿಗೆ ಅಲ್ಪ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ.
ತಾಲೂಕಿನ ಕಂದೇಗಾಲ ಪಾರ್ವತಿ ಬೆಟ್ಟದ ಸಮೀಪ ಕೋತಿಗಳನ್ನ ವಿಷವಿಕ್ಕಿ ಕೊಂದು ಬೀಸಾಡಲಾಗಿತ್ತು ಮೂಕಪ್ರಾಣಿಗಳನ್ನ ಕೊಂದು ಕೇಕೆ ಹಾಕಿ ಹೋಗಿರುವ ದುರುಳರ ವಿರುದ್ದ ಗಡಿನಾಡ ರಕ್ಷಣಾ ಸೇನೆ ಸಂಘಟನೆ ಸದಸ್ಯರು ತೀವ್ರವಾಗಿ ಖಂಡಿಸಿದ್ದಾರೆ.
ಪ್ರೀತಿಸಿದಾಕೆ ಕೈಕೊಟ್ಟಳು ಎಂಬ ಕಾರಣಕ್ಕೆ ಮನನೊಂದ ಯುವಕನೋರ್ವ ನೇಣಿಗೆ ಶರಣಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರ ಗ್ರಾಮದಲ್ಲಿ ನಡೆದಿದೆ.
ಬೆಳ್ಳಂ ಬೆಳಗ್ಗೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಜೆಸಿಬಿ ಘರ್ಜನೆಯಾಗಿ ಸರ್ಕಾರಿ ಸ್ಥಳದಲ್ಲಿ ನಿರ್ಮಾಣವಾಗಿರುವ ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯ ನಡೆದಿದೆ.
ಚಾಮರಾಜನಗರ ಜಿಲ್ಲೆ ಮಾದಪ್ಪನ ಸನ್ನಿಧಿಯಲ್ಲಿ ಐದು ಹುಲಿಗಳಿಗೆ ವಿಷವಿತ್ತ ಪ್ರಕರಣ ಮಾಸುವ ಮುನ್ನವೇ 25 ಕ್ಕೂ ಹೆಚ್ಚು ಕೋತಿಗಳಿಗೆ ವಿಷವಿಟ್ಟು ದಾರುಣವಾಗಿ ಹತ್ಯೆ
ತಾಲೂಕಿನ ಬೊಮ್ಮಲಾಪುರ ಗ್ರಾಮಪಂಚಾಯತಿ ವ್ಯಾಪ್ತಿಯ ಅಂಕಹಳ್ಳಿ ಗ್ರಾಮದಲ್ಲಿ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಹಮ್ಮಿಕೊಂಡಿದ್ದ ಕಾಮಗಾರಿ ಅರ್ಧಕ್ಕೆ ಮೊಟಕುಗೊಂಡಿದ್ದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.
ಕೊಂಕಣಿ ಭಾಷೆಯ ಸಾಂಸ್ಕೃತಿಕ ವೆಭವವನ್ನು ಸಾರುವ ಕಾರ್ಯಕ್ರಮ ವಾದ 40ನೇ ಪೊಯೆಟಿಕಾ ಕವಿಗೋಷ್ಠಿಯು ಕ್ಯಾಥೋಲಿಕ್ ಸಭಾ ಮಂಗಳೂರು
ಅವಾಚ್ಯ ಶಬ್ದ ಬಳಕೆ ವಿಚಾರದಲ್ಲಿ ರಸ್ತೆ ಮಧ್ಯೆ ಬೈಕ್ ಸವಾರರು ಸಾರ್ವಜನಿಕರ ಮುಂದೆ ಹೊಡೆದಾಡಿಕೊಂಡ ಘಟನೆ ನಗರದ ಮಹಾಕಾಳಿಪಡ್ಪು ರೈಲ್ವೆ ಗೇಟ್ ಬಳಿ ನಡೆದಿದೆ.
ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜೂನ್ 30ರಂದು ಬಂಧಿಸಿದ ಪೊಲೀಸರು ,ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ.
ಬ್ರಹ್ಮಾವರದಲ್ಲಿ ಗೋವಿನ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸುವ ಕೆಲಸ ಮಾಡಿದ್ದಾರೆ.
2020ರಲ್ಲಿ ಮುಲ್ಕಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ನಿಂದ ಜಾಮೀನು ರದ್ದಾಗಿದ್ದರೂ ನಕಲಿ ಪಾಸ್ ಪೋರ್ಟ್ ಬಳಸಿ ವಿದೇಶ
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕೈಪಿಡಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬೆಂಗಳೂರು ವಾರ್ತಾಭವನ ದಲ್ಲಿ ಬಿಡುಗಡೆಗೊಳಿಸಿದರು.
ಹೆಜಮಾಡಿ ಟೋಲ್ ಪ್ಲಾಜಾದ ಬಳಿ ಪಾರ್ಕ್ ಮಾಡಲಾದ ಲಾರಿಯೊಂದರ ಹಿಂಬದಿಗೆ ಇನೋವಾ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಬೆಳಗ್ಗಿನ ಜಾವ ನಾಲ್ಕು ಗಂಟೆಯ ಸುಮಾರಿಗೆ ಸಂಭವಿಸಿದೆ.