Showing 20 of 21592 articles • Page 41 of 1080
ಅರಂತೋಡಿನ ದೇವರಕೊಲ್ಲಿ ಬಳಿ ಬುಧವಾರ ಸಂಜೆ ಲಾರಿಯೊಂದು ನಿಯಂತ್ರಣ ತಪ್ಪಿ ನಿಂತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ಮೇಲೆ ಉರುಳಿ ಬಿದ್ದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಅರಂತೋಡಿನ ದೇವರಕೊಲ್ಲಿ ಬಳಿ ಬುಧವಾರ ಸಂಜೆ ನಡೆದಿದೆ.
ಉತ್ತರ ಪ್ರದೇಶದ ಕಾನ್ಪುರದ ಗಂಗಾ ಬ್ಯಾರೇಜ್ ಬಳಿ ತರಬೇತಿ ವಿಮಾನವೊಂದು ಪತನಗೊಂಡಿದ್ದು, ಕರ್ನಾಟಕ ಮೂಲದ ಪೈಲಟ್ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಆಯುಕ್ತ ರಘುವೀರ್ ಲಾಲ್ ದೃಢಪಡಿಸಿದ್ದಾರೆ.
ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಇಂದಿನಿಂದ ಚಾಲನೆ ದೊರೆಯಲಿದೆ.
ರಾಜ್ಯಾದ್ಯಂತ ಹೋಟೆಲ್ ಹಾಗೂ ಉಪಹಾರ ಗೃಹಗಳಲ್ಲಿ ಬಳಸಲಾಗುವ ಅಡುಗೆ ಎಣ್ಣೆಯ ಕಲಬೆರಕೆಗೆ ಕಡಿವಾಣ ಹಾಕಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾರಿ ಕಾರ್ಯಾಚರಣೆಗೆ ಮುಂದಾಗಿದೆ.
ಆಪಲ್ ಕಂಪನಿಯು ಐಫೋನ್ನ ಮುಂಬರುವ 18ರ ಸರಣಿಯನ್ನು ಬಿಡುಗಡೆ ಮಾಡುವ ಬಗ್ಗೆ ಇದೀಗ ಅಧಿಕೃತ ಮಾಹಿತಿ ಹಂಚಿಕೊಂಡಿದೆ.
ನಗರವನ್ನು ಗಾಂಜಾ ಹಾಗೂ ಮಾದಕ ವಸ್ತುಗಳ ಮುಕ್ತ ನಗರವನ್ನಾಗಿ ರೂಪಿಸುವ ಉದ್ದೇಶದಿಂದ ಬಿಜೆಪಿ ಯುವ ಮೋರ್ಚಾ ವತಿಯಿಂದ “ಗಾಂಜಾ ಮುಕ್ತ, ಸ್ವಚ್ಛ ನಂಜನಗೂಡು” ಎಂಬ ಘೋಷವಾಕ್ಯದೊಂದಿಗೆ ಮಾಜಿ ಶಾಸಕ ಬಿ. ಹರ್ಷವರ್ಧನ್ ನೇತೃತ್ವದಲ್ಲಿ ಗುರುವಾರ ಬೃಹತ್ ಬೈಕ್ ರ್ಯಾಲಿ ನಡೆಸಿ ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಲಾಯಿತು.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಓಮ್ನಿ ಕಾರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಂತರ್ ರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.
ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ ಸೇರ್ಪಡೆ ಮಾಡಿರುವ ಹಿನ್ನೆಲೆಯಲ್ಲಿ ಶೀಘ್ರವೇ ಸಂಭ್ರಮ ಆಚರಣೆಯ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ದ. ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು.
ಗಂಗೊಳ್ಳಿ ಧಕ್ಕೆಯಿಂದ ಮಧ್ಯಾಹ್ನ ಬಳಿಕ ಮೀನುಗಾರಿಕೆಗೆ ತೆರಳಿದ ಶ್ರೀ ಬಾಲಾಂಜನೇಯ ಹೆಸರಿನ ಪರ್ಶಿನ್ ಮೀನುಗಾರಿಕಾ ಬೋಟೊಂದು ಧಕ್ಕೆಯ ಅನತಿ ದೂರದಲ್ಲಿ ಅಳಿವೆಯ ಸಮೀಪವೇ ಮುಳುಗಡೆಯಾಗಿದೆ.
1912ರಲ್ಲಿ ಸ್ಥಾಪನೆಯಾಗಿ 114 ವರ್ಷಗಳ ಸಮರ್ಪಿತ ಸೇವೆಯನ್ನು ಪೂರೈಸಿರುವ MCC ಬ್ಯಾಂಕ್ ತನ್ನ ಕಾರ್ಕಳ ಶಾಖೆಯನ್ನು ಬುಧವಾರ, ಆಗಸ್ಟ್ 26, 2026ರಂದು ಸಾಲ್ಮರ ರಸ್ತೆಯ ಫಾರ್ಚೂನ್ ಆರ್ಕಿಡ್ನ ನೆಲ ಮಹಡಿಯಲ್ಲಿರುವ ನೂತನ ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಿದೆ.
ದಸರಾ ಮಹೋತ್ಸವ-2026 ಕ್ಕೆ ಆನೆಗಳ ಮೊದಲ ತಂಡ ಮೈಸೂರಿಗೆ ಎಂಟ್ರಿ ಕೊಟ್ಟಿದೆ. ಗಜಪಯಣದ ಮೂಲಕ ಗಜಪಡೆ ಕಾಡಿನಿಂದ ನಾಡಿಗೆ ಬಂದಿದೆ.
ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಆರಂಭಗೊಂಡಿದ್ದು, ಸಾಂಪ್ರದಾಯಿಕವಾಗಿ ಗಜಪಡೆ ಪೂಜೆ ನೆರವೇರಿಸುವ ಮೂಲಕ ದಸರಾ ಆಚರಣೆಗೆ ಚಾಲನೆ ನೀಡಲಾಗಿದೆ.
ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ನಿವಾಸಿ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ.
ಟಿಬೆಟ್ ಗಡಿಗೆ ಹೊಂದಿಕೊಂಡಂತಿರುವ ನೇಪಾಳದ ಉತ್ತರ ರಸುವಾ ಜಿಲ್ಲೆಯಲ್ಲಿ ಬುಧವಾರ ಭೋಟೆ ಕೋಶಿ ನದಿಯಲ್ಲಿ ಉಂಟಾದ ಭಾರಿ ಹಠಾತ್ ಪ್ರವಾಹಕ್ಕೆ (Flash Flood) ಕನಿಷ್ಠ 16 ಜನರು ಸಾವನ್ನಪ್ಪಿದ್ದು, ಮನೆಗಳು, ವಾಹನಗಳು, ಸೇತುವೆಗಳು ಹಾಗೂ ಮೂಲಸೌಕರ್ಯ ಯೋಜನೆಗಳು ನೀರಿನಲ್ಲಿ ಕೊಚ್ಚಿಹೋಗಿವೆ.
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಕಲ್ಲಂಗಡಿ ಸುಮಾರು 92% ನೀರನ್ನು ಹೊಂದಿರುತ್ತದೆ, ಇದು ನಂಬಲಾಗದಷ್ಟು ಹೈಡ್ರೇಟಿಂಗ್ ಮಾಡುತ್ತದೆ, ಇದು ಕಡಿಮೆ ಕ್ಯಾಲೋರಿಗಳು ಮತ್ತು ಕೊಬ್ಬು ರಹಿತವಾಗಿದೆ.
ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಂಡಿಗೋ ಸಂಸ್ಥೆಯ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರವೊಂದು ಪತ್ತೆಯಾಗಿದ್ದು, ಕೆಲಕಾಲ ಪ್ರಯಾಣಿಕರು ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿಯಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಉತ್ತರ ನೇಪಾಳದಲ್ಲಿ ಬುಧವಾರ ಮುಂಜಾನೆ ದಿಢೀರ್ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ಗಡಿ ಭಾಗದ ಗ್ರಾಮಗಳು ಜಲಾವೃತಗೊಂಡಿದ್ದು, ಎಂಟು ಮಂದಿ ಸಾವನಪ್ಪಿದ್ದಾರೆ.
ಉತ್ತರಾಖಂಡದಲ್ಲಿ ಹಂದಿಜ್ವರದ ಸೋಂಕು ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆಯಲ್ಲಿ ಆತಂಕ ಮೂಡಿಸಿದೆ. ಆಗಸ್ಟ್ 1ರಿಂದ ಈವರೆಗೆ ರಾಜ್ಯದಲ್ಲಿ 49 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಮೃತಪಟ್ಟಿದ್ದಾರೆ.
ಉತ್ತರ ಪ್ರದೇಶದ ಸಂತ ಕಬೀರ್ ನಗರದ ಮೆಹದಾವಲ್ನಲ್ಲಿರುವ ‘ಬೆಂಗಾಲಿ ಸ್ವೀಟ್ ಹೌಸ್’ನಲ್ಲಿ ಆಹಾರ ಸುರಕ್ಷತಾ ಇಲಾಖೆಯು ಪರಿಶೀಲನೆ ನಡೆಸಿತು.