Showing 20 of 20636 articles • Page 438 of 1032
ದಕ್ಷಿಣ ಕನ್ನಡದಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವವರ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಎಂಎಲ್ಸಿ ಬಿ.ಕೆ. ಹರಿಪ್ರಸಾದ್ ಕರೆ ನೀಡಿದ್ದಾರೆ.
ಬಕ್ರೀದ್ ಹಬ್ಬಕ್ಕೂ ಮುನ್ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆಡಳಿತಗಳು ಅಕ್ರಮ ಜಾನುವಾರು ಸಾಗಣೆ ಮತ್ತು ಹತ್ಯೆಯನ್ನು ತಡೆಗಟ್ಟಲು ಭದ್ರತಾ ಕ್ರಮಗಳನ್ನು ತೀವ್ರಗೊಳಿಸಿವೆ.
ಖಚಿತ ಮಾಹಿತಿ ಮೇರೆಗೆ ಮಣಿಪಾಲದ ದಶರಥನಗರದಲ್ಲಿರುವ ಡಿ . ಕ್ಲಾಸಿಕೊ ಲಾಡ್ಜ್ ಮೇಲೆ ದಾಳಿ ನಡೆಸಿದ ಪೊಲೀಸರು, ಕೊಠಡಿ ಸಂಖ್ಯೆ 104 ರಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದುದನ್ನು ಪತ್ತೆಹಚ್ಚಿದ್ದಾರೆ .
ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ನೀಡಲು 20 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಬ್ರಹ್ಮಾವರ ಮೆಸ್ಕಾಂ ಅಸಿಸ್ಟೆಂಟ್ ಇಂಜಿನಿಯರ್ ಅಶೋಕ್ ಪೂಜಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಸರ್ಕಾರದ ಕ್ರಮದ ಬಗ್ಗೆ ನಾನು ಟೀಕೆ ಟಿಪ್ಪಣಿ ಮಾಡಲ್ಲ. ಆಗಬಾರದ್ದು ಆಗಿದೆ, ಸರ್ಕಾರದ್ದು ಕ್ಯಾಬಿನೆಟ್ ನಿರ್ಧಾರ. ಜವಾಬ್ದಾರಿ ಸ್ಥಾನದಲ್ಲಿ ಇರೋರು ಮಾಡಿದ ಕಾರ್ಯಕ್ರಮ ಅದು.
ದಕ್ಷಿಣ ಕನ್ನಡ ಜಿಲ್ಲೆಗೆ ಕೆಪಿಸಿಸಿ ನಿಯೋಗ ಜಿಲ್ಲೆಯಲ್ಲಿ ನಡೆದ ಹತ್ಯೆಗಳ ಸತ್ಯಾಸತ್ಯತೆ ಹಾಗೂ ನೈಜತೆಯನ್ನು ತಿಳಿದುಕೊಳ್ಳಲು ಭೇಟಿ ನೀಡಿತು.
ಕೋಮು ಹತ್ಯೆ ವರದಿ ನೀಡಲು ಕೆಪಿಸಿಸಿ ನಿಯೋಗ ಭೇಟಿ ವಿಚಾರವಾಗಿ ಮಂಗಳೂರಿನಲ್ಲಿ ನಿಯೋಗದ ಸದಸ್ಯ ಜಯಪ್ರಕಾಶ್ ಹೆಗ್ಡೆ ಹೇಳಿಕೆ ನೀಡಿದ್ದಾರೆ. ಜನಪ್ರತಿನಿಧಿಗಳು ಅಭಿವೃದ್ಧಿ ಚರ್ಚೆ ಮಾಡಬೇಕು,
ಕೋಮು ಹತ್ಯೆ ವರದಿ ನೀಡಲು ಕೆಪಿಸಿಸಿ ನಿಯೋಗ ಭೇಟಿ ವಿಚಾರವಾಗಿ ಮಂಗಳೂರಿನಲ್ಲಿ ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್ ಹೇಳಿಕೆ ನೀಡಿದ್ದಾರೆ. ನಾವು ಎಲ್ಲರ ಜೊತೆಗೆ ಸಮಾಲೋಚನೆ ಮಾಡಿದ್ದೇವೆ.
ಕಾರು ಹಾಗೂ ಮಲೇಮಹದೇಶ್ವರ ಪ್ರಾಧಿಕಾರದ ಬಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಕಾರು ಚಾಲಕ ಮೃತಪಟ್ಟಿದ್ದು, ಇಬ್ಬರಿಗೆ ತೀವ್ರ ಪೆಟ್ಟಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಧನಗೆರೆ ಸಮೀಪ ನಡೆದಿದೆ.
ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಣಿಪಾಲ ದಶರಥನಗರದ ಡಿ.ಕ್ಲಾಸಿಕೋ ಲಾಡ್ಜ್ ಮೇಲೆ ದಾಳಿ ನಡೆಸಿದ ಪೊಲೀಸರು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಜಾರ್ಖಂಡ್ ಮೂಲದವರಾದ ಸೀಮಂತ್ ಕುಮಾರ್ ಸಿಂಗ್ 1996ರ ಬ್ಯಾಚ್ ನ ಐಪಿಎಸ್ ಅಧಿಕಾರಿ.
ಉಡುಪಿ ತಾಲೂಕಿನ ಉದ್ಯಾವರ ಕಿಯಾ ಶೋರೂಮ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ಮುಂಜಾನೆ ನಡೆದ ಕಾರು ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಆರ್ ಸಿಬಿಯ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಉಳಿದವರು ನಾಪತ್ತೆಯಾಗಿದ್ದಾರೆ.
ನಗರ ಕೇಂದ್ರ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸುವುದು ಹಾಗೂ ಎಲೆಕ್ಟ್ರಿಕ್ ಬಸ್ಗಳ ಸಂಚಾರವನ್ನು ಪ್ರಾರಂಭಿಸುವ ಕುರಿತು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ
ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಕಟಪಾಡಿ ಸಮೀಪದ ಸುಭಾಷ್ ನಗರ ನಿವಾಸಿ ಮುದಾಸ್ಸಿರ್ (23) ಹಾಗೂ ಉಡುಪಿ ತಾಲೂಕಿನ ಉದ್ಯಾವರ ನಿವಾಸಿ ಅಡೆನ್ ಲೋಬೋ(18) ಬಂಧಿತ ಆರೋಪಿಗಳು.
ಮಹಾನಗರಪಾಲಿಕಾ ವ್ಯಾಪ್ತಿಯಲ್ಲಿ ಅಮೃತ್ ಮಿತ್ರ 2.0 ಯೋಜನೆಯಡಿಯಲ್ಲಿ ತಾಯಿಯ ಹೆಸರಿನಲ್ಲಿ ಒಂದು ಗಿಡ- ಕಾರ್ಯಕ್ರಮಕ್ಕೆ ಜೂ. 05 ರಂದು ವಿಶ್ವ ಪರಸರ ದಿನ
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಮೇಲೇರಿ ಕ್ರಾಶ್ ಗಾರ್ಡ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಪ್ರಯಾಣಿಕರು ಗಾಯಗೊಂಡ ಘಟನೆ ಶುಕ್ರವಾರ ಮುಂಜಾನೆ ರಾ.ಹೆ. 66ರ ಉದ್ಯಾವರದ ಕಿಯಾ ಶೋರೂಮ್ ಬಳಿ ಸಂಭವಿಸಿದೆ.
ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್, ಮೊಬೈಲ್, ಶರ್ಟ್ ಮತ್ತು ಚಪ್ಪಲಿ ಅನಾಥವಾಗಿ ಸಿಕ್ಕಿದ್ದು, ಪುತ್ತೂರು ಮೂಲದ ವ್ಯಕ್ತಿಯಾದಾಗಿದೆ ಎಂದು ಹೇಳಲಾಗಿದೆ. ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ
ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ನಡೆದಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ದುರ್ಘಟನೆ ವಿಷಯದಲ್ಲಿ ರಾಜಕಾರಣ ನಡೆಸುವುದು ಸರಿಯಲ್ಲ
ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಮೂರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಭಟ್ಕಳದ ನಿವಾಸಿ ಅಬ್ರಾರುಲ್ ಹಾಕ್ ಮೋಮಿನ್ (30), ಮೊಹಮ್ಮದ್ ಹಾಗೂ ಮೊಹಮ್ಮದ್ ಆರೀಫ್ ಬಂಧಿತ ಆರೋಪಿಗಳು.