Showing 20 of 20643 articles • Page 454 of 1033
ವಿಶ್ವ ಹಿಂದೂ ಪರಿಷತ್ ಭಜರಂಗದಳದಿಂದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಹಿನ್ನಲೆ ಜನಾಗ್ರಹ ಸಭೆ ನಡೆಸಲಾಯಿತು. 25.05.2025 ರಂದು ಬಜ್ಪೆಯ ಶಾರದಾ ಮಂಟಪದಲ್ಲಿ ಶ್ರದಾಂಜಲಿ ಸಭೆ ನಡೆಯಲಿದೆ.
ಪೌರ ಕಾರ್ಮಿಕ ಕುಟುಂಬ ಸರ್ಕಾರಿ ಕರಾಬು ಜಾಗವೆಂದು ಶೆಡ್ ನಿರ್ಮಾಣ ಮಾಡಿದ್ದು ಇದಕ್ಕೆ ಜಮೀನಿನ ಮಾಲೀಕರು ತೀರ್ವ ವಿರೋಧ ವ್ಯಕ್ತಪಡಿಸಿ ಕೂಡಲೇ ತೆರವುಗೊಳಿಸುವಂತೆ ತಾಕೀತು ಮಾಡಿದರು.
ಕೇರಳದಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ಮತ್ತೆ ಏರಿಕೆ ಕಾಣುತ್ತಿದ್ದು ಮೇ ತಿಂಗಳಲ್ಲಿ ಇದುವರೆಗೆ ರಾಜ್ಯಾದ್ಯಂತ 182 ಸೋಂಕುಗಳು ವರದಿಯಾಗಿವೆ.
ಗ್ರಾಮದಲ್ಲಿ ಅಕ್ರಮ, ಅನೈತಿಕ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಗ್ರಾಮಸ್ಥರು ಮುಂದಾಗಿದ್ದಾರೆ. ಗ್ರಾಮದಲ್ಲಿ ಅಕ್ರಮ ಚಟುವಟಿಕೆ ತಡೆಯಲು ಕಟ್ಟಾಜ್ಞೆಯನ್ನು ಯಜಮಾನರು ಹೊರಡಿಸಿದ್ದಾರೆ.
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಯತೀಂದ್ರ ಚಾಲನೆ ನೀಡಿದರು. ವರುಣ ಕ್ಷೇತ್ರ ವ್ಯಾಪ್ತಿಯ ಯಡದೊರೆ, ಕುರಿಸಿದ್ದನಹುಂಡಿ ಗ್ರಾಮದಲ್ಲಿ ಕಾರ್ಯಕ್ರಮ ನಡೆಯಿತು.
ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಕೊಡ್ಯಕಲ್ ಬಳಿ ನಡೆದಿದೆ.
ಕಾಮಿಡಿ ಕಿಲಾಡಿ ಶೋ ಮೂಲಕ ಮಿಂಚಿದ್ದ ಕಿರುತೆರೆ ನಟ ಮಡೆನೂರು ಮನು ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಇದೀಗ ಪೊಲೀಸರು ಆರೋಪಿ ನಟನನ್ನು ಬಂಧಿಸಿದ್ದಾರೆ.
ನ್ನಡದ ಪ್ರಸಿದ್ಧ ಲೇಖಕಿ ಬಾನು ಮುಸ್ತಾಕ್ ಅವರ ಕೃತಿಗೆ ಅತ್ಯುನ್ನತ ಬೂಕರ್ ಪ್ರಶಸ್ತಿ ಬಂದಿದೆ. ಮಹಿಳೆಯ ಬಗೆಗಿನ ಕಾಳಜಿಯ ಬರಹ ವಿಶ್ವ ಪ್ರಸಿದ್ಧವಾಗಲಿ. ಕನ್ನಡ ಸಾರಸ್ವತ ಲೋಕಕ್ಕೆ ಅತ್ಯಂತ ಸಂಭ್ರಮ
ಗದ್ದುಗೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೆಮ್ಮಣ್ಣು ಕಡು ನೀಲಾವರ ಇವರ ಪ್ರಥಮ ವರ್ಷದ ಭಜನಾ ಉತ್ಸವ ವಿಜೃಂಭಣೆಯಿಂದ ನಡೆಯಿತು.
ಕೇರಳ ಸಮಾಜಮ್ ಉಡುಪಿ ಇದರ ಉದ್ಘಾಟನಾ ಸಮಾರಂಭವು ಉಡುಪಿ ಕುಂಜಿಬೆಟ್ಟುವಿನ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಿತು.
ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ನೀಡದೆ ಮೊಗವೀರ ಸಮಾಜದ ಕಡೆಗಣನೆ ಮಾಡಲಾಗಿದೆ ಎಂದು ದ.ಕ. ಮೊಗವೀರ ಮಹಾಜನ ಸಂಘದಿಂದ ಖಂಡಿಸಿದೆ.
ಕುಂದಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಂಜಪ್ಪ ಎನ್. (59) ಅವರು ಅನಾರೋಗ್ಯದಿಂದ ನಿಧನ ಹೊಂದಿದರು. ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ನಂಜಪ್ಪ ಅವರು, ಕಳೆದ ಆಗಸ್ಟ್ ತಿಂಗಳಿನಿಂದ ಕುಂದಾಪುರ ಪೊಲೀಸ್ ಠಾಣೆ
ದೆಹಲಿಯ NSD ವಿದ್ಯಾರ್ಥಿಗಳಿಗೆ ಗುರು ಬನ್ನಂಜೆ ಸಂಜೀವ ಸುವರ್ಣ ರಿಂದ ಯಕ್ಷಗಾನ ತರಬೇತಿ ಶಿಬಿರ ಆರಂಭವಾಗಿದೆ. ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ತಿಂಗಳೆಯಲ್ಲಿ ತಿಂಗಳೆ ಪ್ರತಿಷ್ಠಾನದ ಸಹಯೋಗದೊಂದಿಗೆ ಈ 11 ದಿನಗಳ ಶಿಬಿರ ನಡೆಯಲಿದೆ.
ಉಡುಪಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮೀನುಗಾರರಿಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಆಳಸಮುದ್ರಕ್ಕೆ ಹೋಗಿದ್ದ ಭಾರಿ ಗಾತ್ರದ ಬೊಟುಗಳು ಸಾಲು ಸಾಲಾಗಿ ವಾಪಸು ಬರುತ್ತಿವೆ.
ಆಲಿಕಲ್ಲು ಹೊಡೆತಕ್ಕೆ ವಿಮಾನದ ಮುಂಭಾಗ ತೀವ್ರ ಹಾನಿಯಾಗಿದ್ದು, ಕೂದಲೆಳೆ ಅಂತರದಲ್ಲಿ 227 ಪ್ರಯಾಣಿಕರು ಪಾರಾಗಿರುವ ಘಟನೆ ದೆಹಲಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ 6E2142 ವಿಮಾನವು
ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಕರಳಪುರ ಗ್ರಾಮದಲ್ಲಿ ನಡೆದಿದೆ.
ರಸ್ತೆಗಾಗಿ ಕಂದಾಯ ಇಲಾಖೆ ಅಧಿಕಾರಿಗಳಿಂದ ಬೆಳೆ ನಾಶ ಆರೋಪ ಕೇಳಿಬಂದಿದ್ದು, ರಸ್ತೆಗೆ ಜಾಗ ಬಿಡಿಸುವ ನೆಪದಲ್ಲಿ ರೈತರ ಶುಂಠಿ, ಜೋಳ, ತೆಂಗು ಬೆಳೆ ಹಾನಿಯಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವತಿಯಿಂದ ಮಾಂಗಲ್ಯ ಭಾಗ್ಯ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ
ಸಿಎಂ ನಿವೇಶನದ ರಸ್ತೆ ಅಗಲೀಕರಣಕ್ಕಾಗಿ ಮೀಸಲಿರಿಸಿದ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿರುವುದನ್ನ ಮುಡಾ ವಲಯ ಅಧಿಕಾರಿಗಳು ಪತ್ತೆ ಹಚ್ಚಿದ್ದು ತುರ್ತಾಗಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪಾಲಿಕೆಗೆ ಪತ್ರ ಬರೆದಿದ್ದಾರೆ.
ಚುಟುಪುಟು ಯುದ್ಧ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ ಪ್ರತಾಪ ಸಿಂಹ ಪ್ರತಿಕ್ರಿಯೆ ನೀಡಿದರು. ಖರ್ಗೆ ಅವರ ಬಾಯಲ್ಲಿ ಅಪರೇಷನ್ ಸಿಂದೂರ್ ಬಗ್ಗೆ ಬಹಳ ಹಗುರವಾದ ಮಾತು ಬಂದಿರುವುದು ಆಶ್ಚರ್ಯ ತಂದಿದೆ.