Showing 20 of 21592 articles • Page 46 of 1080
ಒಂಬತ್ತನೇ ಕ್ಲಾಸ್ ಕಲಿಯುತ್ತಿರುವ 14 ವರ್ಷದ ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಹೆತ್ತವರನ್ನು ಕೊಲ್ಲುತ್ತೇನೆಂದು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಆಟೋ ರಿಕ್ಷಾ ಚಾಲಕ ಜಮಾಲುದ್ದೀನ್ ಎಂಬಾತನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.
ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2020ರಲ್ಲಿ ದಾಖಲಾಗಿದ್ದ ಅಪ್ರಾಪ್ತ ವಯಸ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 5 ವರ್ಷ ಜೈಲು, ₹35,000 ದಂಡ ವಿಧಿಸಿದ ಕೋರ್ಟ್ ಆದೇಶ ಹೊರಡಿಸಿದೆ.
ಬೆಳ್ತಂಗಡಿ ತಾಲ್ಲೂಕಿನ ಕುವೆಟ್ಟು ಗ್ರಾಮದ ಗೇರುಕಟ್ಟೆ ಸಮೀಪದ ಸಂಭೋಳ್ಯದ ಬಾಲಕ ಸುಮಂತ್(15) ಅವರ ಸಂಶಯಾಸ್ಪದ ಸಾವಿನ ಪ್ರಕರಣದ ನಿಗೂಢತೆ ಹಾಗೂ ಸತ್ಯಾಸತ್ಯತೆ ಪತ್ತೆಹಚ್ಚುವ ನಿಟ್ಟಿನಲ್ಲಿ ನ್ಯಾಯಾಲಯದ ಪೂರ್ವಾನುಮತಿ ಪಡೆದು ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (ಎಫ್ಎಸ್ಎಲ್) ಬ್ರೈನ್ ಮ್ಯಾಪಿಂಗ್ ಹಾಗೂ ಮಂಪರು ಪರೀಕ್ಷೆ ಪ್ರಕ್ರಿಯೆ ಆರಂಭಿಸಲಾಗಿದೆ.
ಕೂಳೂರು ಜಂಕ್ಷನ್ನಿಂದ ಬೈಕಂಪಾಡಿ ಹಾಗೂ ಸುರತ್ಕಲ್ವರೆಗಿನ ರಸ್ತೆ ಅವ್ಯವಸ್ಥೆ ಮತ್ತು ನಿರಂತರ ಟ್ರಾಫಿಕ್ ಜಾಮ್ನಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ರಾಜಕೇಸರಿ ಸೇವಾ ಟ್ರಸ್ಟ್ನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂತೋಷ್ ಕೊಲ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಾವಣಗೆರೆಯ ಕಾಂಪೋಸಿಟ್ ರೀಜನಲ್ ಸೆಂಟರ್ ವತಿಯಿಂದ ‘NIEPID ದಿಶಾ ಪಠ್ಯಕ್ರಮ’ ಕುರಿತ ಮೂರು ದಿನಗಳ ಆರ್ಸಿಐ ಸಿಆರ್ಇ ತರಬೇತಿ ಕಾರ್ಯಕ್ರಮ ಮಂಗಳೂರಿನ ಸಾನಿಧ್ಯ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನಲ್ಲಿ ಆರಂಭಗೊಂಡಿತು.
ಗುಂಡಿಬೈಲಿನ ಪೆಟ್ರೋಲ್ ಬಂಕ್ ಸಮೀಪ ಅಂಬಾಗಿಲು–ಕಲ್ಸಂಕ ಸಂಪರ್ಕ ಮುಖ್ಯ ರಸ್ತೆಯ ಮಧ್ಯಭಾಗದಲ್ಲಿ ಏಕಾಏಕಿ ಬೃಹತ್ ಕಂದಕವೊಂದು ಬಾಯ್ತೆರೆದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಅಂಗಡಿಗಳಿಂದ ಹಣ ಸಂಗ್ರಹಿಸಿ ಬೈಕ್ನಲ್ಲಿ ತೆರಳುತ್ತಿದ್ದ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟ ಸಂಸ್ಥೆಯ ಉದ್ಯೋಗಿಗೆ ತಲವಾರು ತೋರಿಸಿ ₹8.52 ಲಕ್ಷ ನಗದು ಸುಲಿಗೆ ಮಾಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಣಿನಾಲ್ಕೂರು ಮುಲ್ಕಾಜೆ ಮಾಡದಲ್ಲಿ ನಡೆದಿದೆ.
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದಲ್ಲಿ ಭಕ್ತರ ಭಕ್ತಿಭಾವ ಮತ್ತೊಮ್ಮೆ ಸಾಬೀತಾಗಿದೆ. ಕೇವಲ 28 ದಿನಗಳಲ್ಲಿ ಭಕ್ತರು ಅರ್ಪಿಸಿದ ಕಾಣಿಕೆ ಬರೋಬ್ಬರಿ 99.04 ಲಕ್ಷ ತಲುಪಿದೆ.
ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ, ರಾಜೋಚಿತವಾಗಿ ಬೀಳ್ಕೊಡುಗೆ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಮನವಿ ಮಾಡಿದ್ದಾರೆ.
ಕಾಪು ತಾಲ್ಲೂಕಿನ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರ್ಎಸ್ಎಸ್ ಕಟ್ಟಾಳು ಕೇಶವರಾಯ ಪ್ರಭು ನಿಧನ: ಶೋಭಾ ಕರಂದ್ಲಾಜೆ ಸಂತಾಪ
ಆಹಾರ ಸುರಕ್ಷತಾ ಇಲಾಖೆಯಿಂದ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ರೈಲಿನ ಆಹಾರ ಪೂರೈಕೆ ಮತ್ತು ಕ್ಯಾಟರಿಂಗ್ ವ್ಯವಸ್ಥೆಯ ಪರಿಶೀಲನೆ ನಡೆಸಲಾಯಿತು.
ಸೆಪ್ಟೆಂಬರ್ 4ರಂದು ಆರಂಭವಾಗಬೇಕಿದ್ದ ಇಂಡಿಯನ್ ಸೂಪರ್ ಲೀಗ್ (ಐಎಸ್ಎಲ್) ಫುಟ್ಬಾಲ್ ಟೂರ್ನಿಯನ್ನು ಮುಂದೂಡಲಾಗಿದೆ. ಅಕ್ಟೋಬರ್ 6ರ ನಂತರ ಆರಂಭವಾಗುವ ಸಾಧ್ಯತೆ ಇದೆ.
ನೆಲ್ಲಿಕಾಯಿ ವಿಟಮಿನ್ ಸಿಯ ಅಗಾಧ ಮೂಲವಾಗಿದ್ದು, ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
: ಗುರುವಾರ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭಾರಿ ಜಿಗಿತ ಕಂಡುಬಂದಿದೆ.
ಹವಾಯಿಪುರ ನಿಲ್ದಾಣದ ಸಮೀಪದಲ್ಲಿ ಆನೆಗಳ ಹಿಂಡೊಂದು ರೈಲು ಹಳಿಗಳನ್ನು ದಾಟುತ್ತಿತ್ತು. ರಾಜಧಾನಿ ಎಕ್ಸ್ಪ್ರೆಸ್ ರೈಲನ್ನು 167/8ನೇ ಕಿಲೋಮೀಟರ್ ಗುರುತಿನ ಬಳಿ ನಿಲ್ಲಿಸಬೇಕಾಯಿತು.
ಕೂಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯ ಅವ್ಯವಸ್ಥೆ ವಿರುದ್ಧ ಸ್ಥಳೀಯ ವಾಹನ ಸವಾರರು ಹಾಗೂ ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಬ್ಬರು ಹತ್ತನೇ ತರಗತಿ ವಿದ್ಯಾರ್ಥಿಗಳು ತಮ್ಮ ಶಾಲೆಯ ಪ್ರಾಂಶುಪಾಲೆಯನ್ನೇ ಚಾಕುವಿನಿಂದ 27 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ನಡೆದಿದೆ.
ಖಾಸಗಿ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಆಕಸ್ಮಿಕವಾಗಿ ಭಾರಿ ಬೆಂಕಿ ಕಾಣಿಸಿಕೊಂಡು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ.
ಸೀಮೆಯ ಬೆಳ್ಳಾಯರು ಕೋಲ್ನಾಡು ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ಮಂಗಳವಾರ ಮಧ್ಯರಾತ್ರಿ ವೇಳೆಗೆ ಯುವಕನೊಬ್ಬ ಕಳ್ಳತನಕ್ಕೆ ಯತ್ನಿಸಿದ್ದು , ಸಿಸಿ ಕ್ಯಾಮೆರಾ ಸಹಾಯದಿಂದ ಆರೋಪಿ ಕಳ್ಳನನ್ನು ಮುಲ್ಕಿ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಬಂಧಿಸಿದ್ದಾರೆ.