Showing 20 of 21600 articles • Page 52 of 1080
ಚಿವ ಜಮೀರ್ ಅಹ್ಮದ್ ಖಾನ್ ಅವರು ಧ್ವಜಾರೋಹಣದ ಜವಾಬ್ದಾರಿ ನಿರಾಕರಿಸಿದ್ದಾರೆ ಎಂಬ ಬಿಜೆಪಿ ಟೀಕೆಗೆ ಆಹಾರ ಸಚಿವ ರಿಜ್ವಾನ್ ಅರ್ಷದ್ ತಿರುಗೇಟು ನೀಡಿದ್ದು, ಈ ವಿಚಾರದಲ್ಲಿ ಬಿಜೆಪಿಗೆ ಟೀಕಿಸುವ ನೈತಿಕತೆ ಇಲ್ಲ ಎಂದು ಹೇಳಿದ್ದಾರೆ.
ಬಿಪಿಎಲ್ ಪಡಿತರ ಚೀಟಿಗಳ ರದ್ದತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಸೂಕ್ತ ಪರಿಶೀಲನೆ ನಡೆಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.
ಸ್ವಾತಂತ್ರ್ಯಕ್ಕಾಗಿ ಹಿಂದಿನ ಪೀಳಿಗೆ ತಮ್ಮ ಜೀವನವನ್ನೇ ತ್ಯಾಗ ಮಾಡಿ ಇತಿಹಾಸ ಸೃಷ್ಟಿಸಿದೆ.
ಸಚಿವ ಜಮೀರ್ ಅಹಮದ್ ಖಾನ್ ಅವರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿರುವ ವಿಚಾರವನ್ನು ರಾಜಕೀಯಗೊಳಿಸುವುದು ಸರಿಯಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಹಾಗೂ ವಕ್ಫ್ ಖಾತೆ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಭಿಪ್ರಾಯಪಟ್ಟಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಮಯದ ಕೊರತೆಯಿಂದಾಗಿ ಹಾಜರಾಗಲು ಸಾಧ್ಯವಿಲ್ಲ ಎಂದು ಸಚಿವ ಜಮೀರ್ ಅಹಮದ್ ಖಾನ್ ಅವರು ನೀಡಿರುವ ಹೇಳಿಕೆ ಸಂವಿಧಾನಕ್ಕೆ ಹಾಗೂ ದೇಶದ ಸ್ವಾತಂತ್ರ್ಯ ಹೋರಾಟದ ಗೌರವಕ್ಕೆ ಅಪಚಾರವಾಗಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಟುವಾಗಿ ಖಂಡಿಸಿದ್ದಾರೆ.
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ನಂಜನಗೂಡು ತಾಲ್ಲೂಕು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ನಂಜನಗೂಡಿನ ತಾಲೂಕು ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಉಡುಪಿ ಜಿಲ್ಲಾ ನಾಗರಿಕ ಸಮಿತಿ ಹಾಗೂ ಮಿತ್ರ ಸ್ಕೂಲ್ ಆಫ್ ನರ್ಸಿಂಗ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಝ್ವಾನ್ ಅರ್ಷದ್ ಧ್ವಜಾರೋಹಣ ನೆರವೇರಿಸಿದರು.
ಉತ್ತರಾಖಂಡದ ಹಲ್ದವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆಯನ್ನು ಗಂಗಾಜಲ ಸಿಂಪಡಿಸಿ, ಹೋಮ ನಡೆಸಿ ‘ಶುದ್ಧೀಕರಣ’ ಮಾಡಿರುವ ಘಟನೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶುಕ್ರವಾರ ಬ್ರಹ್ಮಗಿರಿ ಸರ್ಕಲ್ ಬಳಿ ಪ್ರತಿಭಟನೆ ನಡೆಯಿತು.
ಕರಾವಳಿಯಲ್ಲಿ ಮಳೆಗಾಲದ 61 ದಿನಗಳ ಕಾಲಾವಧಿಯ ಆಳಸಮುದ್ರ ಮೀನುಗಾರಿಕಾ ನಿಷೇಧ (ರಜಾ ಅವಧಿ) ಮುಕ್ತಾಯಗೊಂಡ ಬೆನ್ನಲ್ಲೇ, ಮಂಗಳೂರಿನ ಹಳೆ ಬಂದರಿನಲ್ಲಿ (ದಕ್ಕೆ) ಮೀನುಗಾರಿಕಾ ಚಟುವಟಿಕೆಗಳು ಮತ್ತೆ ಕಳೆಗಟ್ಟಿವೆ. ಆಳ ಸಮುದ್ರಕ್ಕೆ ಇಳಿದಿದ್ದ ಟ್ರಾಲ್ಬೋಟ್ಗಳು ಅಪಾರ ಪ್ರಮಾಣದ ವೈವಿಧ್ಯಮಯ ಮೀನುಗಳ ರಾಶಿಯೊಂದಿಗೆ ಬಂದರಿಗೆ ಮರಳುತ್ತಿದ್ದು, ಮೀನು ವ್ಯಾಪಾರಿಗಳು, ಕಾರ್ಮಿಕರು ಹಾಗೂ ಗ್ರಾಹಕರಿಂದ ದಕ್ಕೆ ಪ್ರದೇಶ ಜನಜಂಗುಳಿಯಿಂದ ಗಿಜಿಗುಡುತ್ತಿದೆ.
ಬ್ರಹ್ಮರಕೂಟ್ಲುವಿನಲ್ಲಿ ಕಾರ್ಯಾಚರಿಸುತ್ತಿರುವ ಅಕ್ರಮ ಟೋಲ್ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಎಸ್ಡಿಪಿಐ ವತಿಯಿಂದ ಆ.18ರಂದು ‘ಡಿಸಿ ಕಚೇರಿ ಚಲೋ’ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ತಿಳಿಸಿದ್ದಾರೆ.
1997ರಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ವೈದ್ಯಕೀಯ ಶಿಕ್ಷಣ ಕಾಲೇಜಾಗಿ ಆರಂಭವಾದ ತುಂಬೆ ಗ್ರೂಪ್ ಇದೀಗ ತನ್ನ 30ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು ಒಂದು ಬೃಹತ್, ವೈವಿಧ್ಯಮಯ ಶೈಕ್ಷಣಿಕ ಆರೋಗ್ಯ ರಕ್ಷಣಾ ಸಮೂಹವಾಗಿ ಬೆಳೆದಿದೆ.
ಭಾರತದ ಶ್ರೀಮಂತ ಸಂಸ್ಕೃತಿ, ಪರಂಪರೆ ಮತ್ತು ಕಥೆಗಳನ್ನು ಪ್ರವಾಸಿಗರಿಗೆ ಹತ್ತಿರವಾಗಿಸುವ ಉದ್ದೇಶದಿಂದ, ಪ್ರಸಿದ್ಧ ಟ್ರಾವೆಲ್ ಪ್ಲಾಟ್ಫಾರ್ಮ್ ಮೇಕ್ ಮೈ ಟ್ರಿಪ್ ಇದೀಗ ಕೇಂದ್ರ ಪ್ರವಾಸೋದ್ಯಮ ಸಚಿವಾಲಯದೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ.
80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಜವಾಬ್ದಾರಿಯಿಂದ ತಮಗೆ ವಿನಾಯಿತಿ ನೀಡುವಂತೆ ಕೋರಿ ಸಚಿವ ಜಮೀರ್ ಅಹ್ಮದ್ ಖಾನ್ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದಾರೆ.
ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡಿದರು.
ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಿಂದ ಆಚರಿಸಲಾಗುತ್ತಿದೆ.
ಕಳೆದ ವಾರ ಪುಕೆಟ್ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ 300 ಅಡಿ ಎತ್ತರದಿಂದ ಹಠಾತ್ ಕೆಳಗಿಳಿದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್ಪ್ರೆಸ್ನ ಎಲ್ಲಾ ಪೈಲಟ್ಗಳು ಸೈಕೋಆಕ್ಟಿವ್ ಸಬ್ಸ್ಟ್ಯಾನ್ಸ್ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಸಲೀಂ ಅಹಮದ್ ಅವರನ್ನ ಆಯ್ಕೆ ಮಾಡಲಾಯಿತು.
ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಮುಂಬರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಇರಾನ್ ಮೂಲಗಳು ಶುಕ್ರವಾರ ತಿಳಿಸಿವೆ.