Showing 20 of 19289 articles • Page 523 of 965
ಐಡಿಯಲ್ ಜಾವಾ ರೋಟರಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಎಂ.ಎಲ್.ಅಜಯ್ ಪೃಥ್ವಿರಾಜ್ ಇತ್ತೀಚೆಗೆ ಬೆಂಗಳೂರಿನಲ್ಲಿ ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಒಲಿಂಪಿಕ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಆಯೋಜಿಸಿದ್ದ ರಾಜ್ಯ ಮಿನಿ ಒಲಿಂಪಿಕ್ಸ್ ನಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.
ನಕ್ಸಲ್ ವಿಕ್ರಂ ಗೌಡನನ್ನು ನಕಲಿ ಎನ್ಕೌಂಟರ್ನಲ್ಲಿ ಹತ್ಯೆ ಮಾಡಿಲ್ಲ, ಇದು ಆರೋಪ ಸುಳ್ಳು. ನಕ್ಸಲರು ಮತ್ತು ಎಎನ್ಎಫ್ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ವಿಕ್ರಂ ಗೌಡ ಮೃತಪಟ್ಟಿದ್ದಾರೆ ಎಂದು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ ತಿಳಿಸಿದ್ದಾರೆ.
ನಗರಕ್ಕೆ ಪ್ರವೇಶ ಪಡೆಯುವ ಪಂಪ್ ವೆಲ್ – ಪಡೀಲ್ ಮುಖ್ಯ ರಸ್ತೆ ಕಾಂಕ್ರೀಟ್ ಕಾಮಗಾರಿ ಸುಮಾರು ಮೂರು ವರ್ಷಗಳ ಹಿಂದೆ ಆರಂಭ ಗೊಂಡಿದ್ದು, ಇನ್ನೂ ಅಪೂರ್ಣ ಸ್ಥಿತಿಯಲ್ಲಿದೆ. ಅರೆ ಬರೆ ಕಾಮಗಾರಿಯ ಪರಿಣಾಮ ಈ ರಸ್ತೆಯಲ್ಲಿ ವಾಹನ ಸವಾರರಿಗೆ ನಿತ್ಯ ಟ್ರಾಫಿಕ್ ಜಾಮ್ ಬಿಸಿ ತಪ್ಪುತ್ತಿಲ್ಲ.
ಹೆಬ್ರಿಯ ಕಾಡಿನಲ್ಲಿ ನಕ್ಸಲ್ ನಿಗ್ರಹ ಪಡೆ ಪೊಲೀಸರ ಎನ್ಕೌಂಟರ್ನಲ್ಲಿ ಮೃತಪಟ್ಟ ನಕ್ಸಲ್ ನಾಯಕ ವಿಕ್ರಂ ಗೌಡನ ಅಂತ್ಯ ಸಂಸ್ಕಾರ ಹುಟ್ಟೂರು ಕೂಡ್ಲುವಿನಲ್ಲಿ ನೆರವೇರಿತು.
ರಿವರ್ಸ್ ಬರುತ್ತಿದ್ದ ಇನ್ನೋವಾ ಕಾರಿಗೆ ವೇಗವಾಗಿ ಬಂದ ಇನ್ಸುಲೇಟರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರ್ನಲ್ಲಿದ್ದ ಏಳು ಜನರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕುಂಭಾಸಿ ಸಮೀಪದ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಎದುರುಗಡೆ ನಡೆದಿದೆ.
ಬೆಳ್ಳಂ ಬೆಳಗ್ಗೆ ಮಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ 5ನೆ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ, ಸಮ್ಮೇಳನ ಯಶಸ್ವಿ ಆಗಲಿ ಎಂದು ಶುಭ ಹಾರೈಸಿದರು.
ಮಂಗಳೂರು ಪ್ರೆಸ್ಕ್ಲಬ್ ದಿನಾಚರಣೆ ಸಂದರ್ಭದಲ್ಲಿ ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಿಗೆ ಮಂಗಳೂರು ಪ್ರೆಸ್ ಕ್ಲಬ್ ನ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರಸ್ತೆ ಕಾಮಗಾರಿಗೆ ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಹರಿದು ರೈತರೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಭಾರತೀನಗರ ಸಮೀಪದ ಕರಡ ಕೆರೆ ಗ್ರಾಮದಲ್ಲಿ ನಡೆದಿದೆ.
ಕೃಷಿಗಾಗಿ ಸಾಲ ಮಾಡಿ ನಷ್ಟ ಹೊಂದಿದ್ದ ರೈತರು ಸಾಲ ಮರುಪಾವತಿ ಮಾಡುವಂತೆ ಬಂದಿದ್ದ ನೋಟೀಸ್ ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೆ.ಆರ್.ನಗರ ತಾಲೂಕು ಕಸಬಾ ಹೋಬಳಿ ಕನುಗನಹಳ್ಳಿಯಲ್ಲಿ ನಡೆದಿದೆ.
ಶಾಲಾ ಪಠ್ಯ ಪುಸ್ತಕದಲ್ಲಿ ಸಹಕಾರಿ ಕ್ಷೇತ್ರದ ವಿಷಯವನ್ನು ಸೇರಿಸುವ ಬಗ್ಗೆ ಸಹಕಾರಿ ಸಚಿವರ ಜೊತೆ ಸಮಾಲೋಚನೆ ನಡೆಸಿ ತೀರ್ಮಾನಿಸಲಾಗಿದೆ.
ನಕ್ಸಲ್ ನಿಗ್ರಹ ಪಡೆ ಎನ್ಕೌಂಟರ್ನಲ್ಲಿ ಸಾವನ್ನಪ್ಪಿದ್ದ ನಕ್ಸಲ್ ವಿಕ್ರಂ ಗೌಡ ಶವ ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಡಿಗೆ ಬಿದ್ದ ಘಟನೆ ಇಂದು ಹೆಬ್ರಿ ಕೂಡ್ಲು ರಸ್ತೆಯಲ್ಲಿ ಮಧ್ಯಾಹ್ನ ವೇಳೆ ನಡೆದಿದೆ.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಅವರು ಮಂಗಳವಾರ ರಾತ್ರಿ 12.30ರ ಸುಮಾರಿಗೆ ಪಂಪ್ ಹೌಸ್ ಗಳಿಗೆ ದಿಢೀರ್ ಭೇಟಿ ನೀಡಿದರು.
ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ಅಮೃತ ಮಹೋತ್ಸವ ಸಮಾರಂಭವು ನ. 29, 30 ಹಾಗೂ ಡಿಸೆಂಬರ್ 1 ರಂದು ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ತಿಳಿಸಿದರು.
ಉಡುಪಿ ನೇತ್ರ ತಜ್ಞರ ಸಂಘ, ಐ ಬೀಚ್ ಫಿಲ್ಮ್ ಫೆಸ್ಟಿವಲ್ ಹಾಗೂ ಮಾಹೆ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ನೇತ್ರ ತಜ್ಞರ ಸಂಘದ 43ನೇ ವಾರ್ಷಿಕ ಸಮ್ಮೇಳನ “KOSCON-2024” ಕೋಟೇಶ್ವರದ ಯುವ ಮೆರಿಡಿಯನ್ ಕನ್ ವೆನ್ಷನ್ ಸೆಂಟರ್ ನಲ್ಲಿ ಇದೇ ನ. 22ರಿಂದ 24ರವರೆಗೆ ನಡೆಯಲಿದೆ ಎಂದು ಪ್ರಸಾದ್ ನೇತ್ರಾಲಯ ಸಮೂಹ ನೇತ್ರ ಸಂಸ್ಥೆಗಳ ವೈದ್ಯಕೀಯ ನಿರ್ದೇಶಕ ಹಾಗೂ ಕರ್ನಾಟಕ ನೇತ್ರ ತಜ್ಞರ ಸಂಘದ ಅಧ್ಯಕ್ಷ ಡಾ. ಕೃಷ್ಣ ಪ್ರಸಾದ್ ಕೂಡ್ಲು ತಿಳಿಸಿದರು.
ಹೆಬ್ರಿ ತಾಲೂಕಿನ ಕೂಡ್ಲು ಮನೆಯಲ್ಲಿ ವಿಕ್ರಂ ಗೌಡ ಅಂತ್ಯಸಂಸ್ಕಾರ ನಡೆಯಲಿದೆ.
ಆಂತರಿಕ ಭದ್ರತಾ ಡಿಐಜಿ ರೂಪಾ ಮುದ್ಗಿಲ್ ಹೇಳಿಕೆ ನೀಡಿದ್ದು, ವಿಕ್ರಂ ಗೌಡ ಅಲಿಯಾಸ್ ಶ್ರೀಕಾಂತ್ ಕರ್ನಾಟಕ ದ ಮೋಸ್ಟ್ ವಾಂಟೆಡ್ ನಕ್ಸಲ್ ನಾಗಿದ್ದು, ಎಎನ್ ಎಫ್ ನಕ್ಸಲ್ ಚಕಮಕಿ ನಡೆದಿದೆ.
ಅರಬ್ ಸಂಯುಕ್ತ ಸಂಸ್ಥಾನದ ರಾಸ್ ಅಲ್ ಖೈಮಾ ಏಮಿರೇಟ್ಸ್ ನಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಯೋನ್ಮುಖವಾಗಿರುವ ರಾಕ್ ಕರ್ನಾಟಕ ಸಂಘ ರಾಸ್ ಅಲ್ ಖೈಮಾ ದ ಅಶ್ರಯದಲ್ಲಿ 2024 ನವೆಂಬರ್ 16ನೇ ತಾರೀಕಿನಂದು ರಾಸ್ ಅಲ್ ಖೈಮಾ ಇಂಡಿಯನ್ ಅಸೊಸಿಯೇಶನ್ ಸಭಾಂಗಣದಲ್ಲಿ 69ನೇ ಕರ್ನಾಟಕ ರಾಜ್ಯೋತ್ಸವ ಮತ್ತು ಗಲ್ಫ್ ಕರ್ನಾಟಕ ಸೇವಾ ಸಾಧಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಅದ್ಧೂರಿಯಾಗಿ ನಡೆಯಿತು.
ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ “ಮುಂದಿನ ಪೀಳಿಗೆಯ ಶಕ್ತಿ ಸಂಗ್ರಹ: ಸುಧಾರಿತ ಎಲೆಕ್ಟ್ರಾನಿಕ್ಸ್ ಮತ್ತು ಸಂವೇದಕ ತಂತ್ರಜ್ಞಾನಗಳ ಸಂಯೋಜನೆ” ವಿಷಯದ ಕುರಿತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಪ್ರಾಯೋಜಿತ ಆರು ದಿನಗಳ ಅಟಲ್ ಎಫ್.ಡಿ.ಪಿ. ಕಾರ್ಯಾಗಾರ ಮತ್ತು ತರಬೇತಿ ಶಿಬಿರ ಕಾರ್ಯಕ್ರಮದ ಉದ್ಘಾಟನೆಯನ್ನು ಆಯೋಜಿಸಲಾಯಿತು.
ಮಂಗಳೂರಿನ ಎಮ್ಮೆಕೆರೆ ಈಜುಕೊಳದಲ್ಲಿ ಇತ್ತೀಚೆಗೆ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಈಜು ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಕಾಲೇಜು ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ.